ಕ್ರೀಡೆ
Kambala | ನಿಷೇಧದ ತೂಗುಗತ್ತಿಯಲ್ಲಿ ಕಂಬಳ..! – ವಿಚಾರಣೆ ಪೂರ್ಣ ಶೀಘ್ರ ತೀರ್ಪು : ಸುಪ್ರೀಂ ಕೋರ್ಟಿನಲ್ಲಿ ಖ್ಯಾತ ವಕೀಲರನ್ನು ನೇಮಿಸಿ ಕಂಬಳ ಉಳಿಸಲು ಕೋಡಿಂಬಾಡಿ ಅಶೋಕ್ ಕುಮಾರ್ ರೈ ಹೋರಾಟ ಹೇಗಿತ್ತು ಗೊತ್ತೇ..?
ಮಾ 11 ಮತ್ತು 12 ರಂದು 37ನೇ ವರ್ಷದ ವಿಜಯ ವಿಕ್ರಮ ಜೋಡುಕರೆ ಕಂಬಳ ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಹರ್ನಿಶಿಯಾಗಿ ನಡೆಯಲಿದ್ದು, ಇದಕ್ಕೆ ಭರದ ಸಿದ್ದತೆ ನಡೆಯುತ್ತಿದೆ. ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರ ಸಾರಾಥ್ಯದಲ್ಲಿ ನಡೆಯುವ ಈ ಕಂಬಳ ಕೂಟವನ್ನು ಲಕ್ಷಾಂತರ ಜನರು ಕಣ್ತುಂಬಿಸಿಕೊಳ್ಳಲಿದ್ದಾರೆ. ತುಳುನಾಡಿನ ಜಾನಪದ ಕ್ರೀಡೆ ಕಂಬಳದ (Kambala) ಸುತ್ತ ನಿಷೇಧದ ತೂಗುಕತ್ತಿ ಸದಾ ಬೀಸುತ್ತಲೆ ಇದೆ. ಹೀಗೆ ನಿಷೇಧದ ಭೀತಿ ಎದುರಾದಾಗ ಸುಪ್ರೀಂ ಕೋರ್ಟಿನಲ್ಲಿ ಖ್ಯಾತ ವಕೀಲರನ್ನು ನೇಮಿಸಿ ಇದರ ವಿರುದ್ದ ನಿರಂತರವಾಗಿ ಹೋರಾಟ ನಡೆಸಿದವರು ಉಪ್ಪಿನಂಗಡಿಯ ಕಂಬಳ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ.
ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ ( ಪೇಟಾ)” ಸಂಘಟನೆಯವರು ಕೇಸ್ ದಾಖಲಿಸಿದ ಪರಿಣಾಮ ದಶಕದ ಹಿಂದೆ ಕಂಬಳ ಆಯೋಜನೆ ನಿಷೇಧವಾಗಿತ್ತು. ಇದರಿಂದಾಗಿ 3 ವರ್ಷಗಳ ಕಾಲ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಬಳ ಕೂಟಗಳು ನಡೆದಿರಲಿಲ್ಲ. ಆಗ ನಿಷೇಧದ ವಿರುದ್ದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಯನ್ನು ಅಯೋಜಿಸುವ ಮೂಲಕ ತುಳುನಾಡಿನ ಜಾನಪದ ಕ್ರೀಡೆಯ ಉಳಿವಿಗೆ ಅಶೋಕ್ ರೈಯವರು ಶ್ರಮಿಸಿದ್ದರು. ಅದಾದ ಬಳಿಕ ನಿಷೇಧದ ವಿರುದ್ದ ಸುಪ್ರೀಂ ಕೋರ್ಟು ಕದ ಕೂಡ ತಟ್ಟಿದರು. ಇವರ ಅವಿರತ ಪ್ರಯತ್ನದ ಬಳಿಕ ಕಂಬಳ ಆಯೋಜನೆಗೆ ಅನುಮತಿ ಸಿಕಿತ್ತು.
ಇದೀಗ ಮತ್ತೆ ಕಂಬಳವನ್ನು ನಿಷೇಧಿಸಬೇಕು ಎಂದು ಪೇಟಾದವರು ಕೇಸು ದಾಖಲಿಸಿದ್ದಾರೆ. ಇದರ ವಿರುದ್ದ ಕೂಡ ಅಶೋಕ್ ರೈಯವರು ಸುಪ್ರೀಂ ಕೋರ್ಟು ನಲ್ಲಿ ನ್ಯಾಯವಾದಿಗಳನ್ನು ನೇಮಿಸಿ ಕಂಬಳ ಉಳಿವಿಗಾಗಿ ವಾದ ಮಂಡಿಸಿದ್ದಾರೆ. ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ತೀರ್ಪು ಸದ್ಯದಲ್ಲೆ ಹೊರಬರಲಿದೆ. ಈ ಕುರಿತು ಸುದೀರ್ಘ ಪೋಸ್ಟ್ ವೊಂದನ್ನು ಪೇಸ್ ಬುಕ್ ನಲ್ಲಿ ಹಂಚಿಕೊಂಡಿರುವ ಅಶೋಕ ರೈಯವರು ತಮ್ಮ ಆತಂಕ, ತಲ್ಲಣಗಳನ್ನು ಹೇಳಿಕೊಂಡಿದ್ದಾರೆ. ನ್ಯಾಯಾಲಯದಲ್ಲಿ ಕಂಬಳದ ವ್ಯತಿರಿಕ್ತವಾಗಿ ತೀರ್ಪು ಬಂದರೇ, ಅದೆಷ್ಟು ಕಷ್ಟವಾದರೂ ಪರವಾಗಿಲ್ಲ… ಕಂಬಳದ ಪರವಾಗಿ ಹೋರಾಡುವ ಭರವಸೆಯನ್ನು ನೀಡುವ ಮೂಲಕ ಕಂಬಳಾಬಿಮಾನಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ . ಇದೀಗ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಉಪ್ಪಿನಂಗಡಿ ಕಂಬಳಕಿನ್ನು ಕೆಲವೇ ದಿನ… ಕಂಬಳ ನಿಷೇಧದ ತೂಗುಕತ್ತಿ ಮತ್ತು ನಮ್ಮ ಹೋರಾಟ…
ನಮ್ಮ ಉಪ್ಪಿನಂಗಡಿಯ ವಿಜಯ ವಿಕ್ರಮ ಕಂಬಳಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಅಂತಿಮ ಹಂತದ ಸಿದ್ಧತೆಗಳು ಭರದಿಂದ ನಡೆಯುತ್ತಿದೆ.
ಈ ಸಂದರ್ಭದಲ್ಲಿ ನನಗೆ ಬಹುವಾಗಿ ಕಾಡುತ್ತಿರುವ ವಿಷಯವೆಂದರೆ ಅದು “ಕಂಬಳ ನಿಷೇಧ” ವೇ… ಯಾಕೆಂದರೆ ಈ ನಿಷೇಧದ ಕತ್ತಿ ನಮ್ಮೂರಿನ ಎಲ್ಲಾ ಕಂಬಳ ಸಂಘಟಕರ ಮೇಲೆ ಇನ್ನೂ ತೂಗುತ್ತಲೇ ಇದೆ… 2014 ರಿಂದ 2017 ರವರೆಗೆ ಕಂಬಳ ನಿಷೇಧವಾಗಿತ್ತಲ್ಲ… ಅದೇ ಪರಿಸ್ಥಿತಿ ಇವತ್ತಿಗೂ ಇದೆ…! ಯಾವತ್ತಿಗೆ ಬೇಕಾದರೂ ಮತ್ತೊಮ್ಮೆ ಕಂಬಳ ನಿಷೇಧ ವಾಗಬಹುದು…!
ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠದಲ್ಲಿ ಈ ಕುರಿತ ಹೊಸ ಪ್ರಕರಣದ ವಿಚಾರಣೆ ಪೂರ್ತಿಯಾಗಿದ್ದರೂ ಕೂಡಾ ತೀರ್ಪನ್ನು ಕಾಯ್ದಿರಿಸಲಾಗಿದೆ. ಸುಪ್ರೀಂ ಕೋರ್ಟು ಯಾವಾಗ ಬೇಕಾದರೂ ತೀರ್ಪು ನೀಡಬಹುದು.. ಈ ತೀರ್ಪು ಕಂಬಳದ ಪರವೂ ಬರಬಹುದು… ಅಥವಾ ಕಂಬಳದ ವಿರುದ್ಧವೂ ಬರಬಹುದು…! ಕರಾವಳಿಯ ನಮ್ಮ ತುಳುನಾಡಿನಾದ್ಯಂತ ಇರುವ ಅಷ್ಟೂ ಕಂಬಳ ಸಮಿತಿಗಳ ಪೈಕಿ ಉಪ್ಪಿನಂಗಡಿಯ ಕಂಬಳ ಸಮಿತಿಯ ಪರವಾಗಿ ಕೇವಲ ನಾನೊಬ್ಬನೇ ಸುಪ್ರೀಂ ಕೋರ್ಟಿನಲ್ಲಿ ಕಂಬಳದ ಪರವಾಗಿ ವಾದ ಮಂಡಿಸಿದವನು.
ಸುಪ್ರೀಂ ಕೋರ್ಟಿನಲ್ಲಿ ಕಂಬಳವನ್ನು ನಿಷೇಧ ಮಾಡಬೇಕು ಅಂತ “ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ ( ಪೇಟಾ)” ಸಂಘಟನೆಯವರು ಮತ್ತೊಮ್ಮೆ ಕೇಸು ದಾಖಲಿಸಿದಾಗ ಕಂಬಳ ಕ್ರೀಡೆಯ ಪರವಾಗಿ ಈ ಕೇಸಿನಲ್ಲಿ ಇಂಪ್ಲೀಡ್ ಆಗಿ ಸುಪ್ರೀಂ ಕೋರ್ಟಿನ ಖ್ಯಾತ ನ್ಯಾಯವಾದಿ ಶ್ರೀ ಸಂಜಯ್ ನುಲಿಯವರನ್ನು ನಮ್ಮ ಪರ ವಾದ ಮಾಡಲು ನೇಮಿಸಿದ್ದು ನಾನು. ಈಗ ಈ ಪ್ರಕರಣದ ವಿಚಾರಣೆಯೆಲ್ಲಾ ಮುಗಿದು ತೀರ್ಪಷ್ಟೇ ಬರಬೇಕಿರುವುದರಿಂದಲೇ ನನಗೆ ಒಂದಿಷ್ಟು ಆತಂಕ, ಕಳವಳಗಳು…!
ಕಂಬಳವನ್ನು ನಿಷೇಧ ಮಾಡಬೇಕು ಅಂತಲೇ ಈ ಪ್ರಾಣಿದಯಾ ಸಂಘಗಳು ಮತ್ತು ಭಾರತ ಸರಕಾರದ ಅನಿಮಲ್ ವೆಲ್ಫೇರ್ ಬೋರ್ಡ್ ಕೋರ್ಟಿಗೆ ಹೋದದ್ದೇನಲ್ಲ.. ನಿಜಕ್ಕಾದರೆ ಈ ಪ್ರಕರಣದಲ್ಲಿ ನಮ್ಮ ತುಳುನಾಡಿನ ಹೆಮ್ಮೆಯ “ಕಂಬಳ” ತೀರಾ ಆಕಸ್ಮಿಕವಾಗಿ ಸಿಕ್ಕಿಹಾಕಿಕೊಂಡಿತು… ಇದೆಲ್ಲಾ ಶುರುವಾದದ್ದು 2007 ರಲ್ಲಿ ಮದರಾಸ್ ಹೈ ಕೋರ್ಟು ತಮಿಳುನಾಡಿನ ಜಲ್ಲಿಕಟ್ಟು ಕ್ರೀಡೆಯನ್ನು ನಿಷೇಧಿಸಿದಾಗ..! 2009 ರಲ್ಲಿ ತಮಿಳುನಾಡು ಜಲ್ಲಿಕಟ್ಟಿಗೆಂದೇ ಪ್ರತ್ಯೇಕ ಕಾನೂನನ್ನು ರೂಪಿಸಿ ಕ್ರೀಡೆ ಯಾವುದೇ ಅಡ್ಡಿಯಿಲ್ಲದೆ ನಡೆಯುವಂತೆ ನೋಡಿಕೊಂಡಿತು.
ಆದರೆ 2011 ಕೇಂದ್ರ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ಸಚಿವಾಲಯ ಹೋರಿಗಳ ಪ್ರದರ್ಶನ ಮತ್ತು ಅವುಗಳಿಗೆ ನೀಡುತ್ತಿದ್ದ ತರಬೇತಿಯನ್ನು ನಿಷೇಧಿಸಿತು. ಇಲ್ಲಿಯವರೆಗೆ ನಮ್ಮ ‘ಕಂಬಳ’ ಕ್ಕೆ ಯಾವುದೇ ತೊಡಕಿರಲಿಲ್ಲ. ಆದರೆ 2014 ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ತಮಿಳುನಾಡಿನ ಜಲ್ಲಿಕಟ್ಟು, ಮಹಾರಾಷ್ಟ್ರದ ಎತ್ತಿನ ಗಾಡಿಗಳ ಓಟದ ಸ್ಪರ್ಧೆ ಮತ್ತು ಇತರ ರಾಜ್ಯಗಳಲ್ಲಿನ ಅದೇ ರೀತಿಯ ಇತರ ಸ್ಪರ್ಧೆಗಳನ್ನು ನಿಷೇಧಿಸಿತು. ಆದರೆ ಆಗಲೂ “ಕಂಬಳ” ಎಂಬ ಕ್ರೀಡೆಯನ್ನು ನೇರವಾಗಿ ನಿಷೇಧಿಸಬೇಕು ಅಂತ ಹೇಳದೇ ಇದ್ದರೂ ಕಂಬಳ ಕೂಡ ನಿಷೇಧದ ವ್ಯಾಪ್ತಿಗೆ ಬಂತು… ವಿಪರ್ಯಾಸವೆಂದರೆ ಜಲ್ಲಿಕಟ್ಟುವಿನಲ್ಲಿ ಪ್ರತೀ ವರ್ಷವೂ ಕೂಡ ಹಲವಾರು ಎತ್ತುಗಳು ಸಾಯುತ್ತಿದ್ದವು, ನೂರಾರು ಜನ ಗಾಯಗೊಳ್ಳುತ್ತಿದ್ದರು… ಹಲವು ಜನ ಪ್ರಾಣ ಕಳಕೊಂಡ ಘಟನೆಗಳೂ ನಡೆದವು. ಇದರಿಂದಾಗಿ ಯಾವುದೇ ರೀತಿಯ ಅವಘಡಗಳಾಗದ ಕಂಬಳಕ್ಕೂ ನ್ಯಾಯಾಲಯದಲ್ಲಿ ತೊಂದರೆಯುಂಟಾಯಿತು.
ಆ ಬಳಿಕ ಈ ಪ್ರಕರಣ ಗೋಜಲಾಗುತ್ತಾ ಸಾಗಿತು. 2016 ರಲ್ಲಿ ತಮಿಳುನಾಡು ರಿವ್ಯೂ ಪಿಟಿಷನ್ ಹಾಕಿತು. 2017 ರಲ್ಲಿ ತಮಿಳುನಾಡು ಜಲ್ಲಿಕಟ್ಟಿಗೆ ಅನುಮತಿ ನೀಡುವ ನಿಟ್ಟಿನಲ್ಲಿ ಹೊಸ ಕಾನೂನನ್ನು ಜಾರಿಮಾಡಿತು. ಆದರೆ ವಿಷಯ ಇಷ್ಟಕ್ಕೆ ನಿಲ್ಲಲಿಲ್ಲ… “ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ ( ಪೇಟಾ)” ನಮ್ಮ ಕಂಬಳದಲ್ಲಿ ಪ್ರಾಣಿಹಿಂಸೆ ಆಗುತ್ತಿದೆ ಅನ್ನುವ ವಿಡಿಯೋ ಸಾಕ್ಷಿಯನ್ನು ಸುಪ್ರೀಂ ಕೋರ್ಟಿಗೆ ಸಲ್ಲಿಸಿತು. ಆಗ ಅದು ಸಲ್ಲಿಸಿದ್ದು ಹೊಕ್ಕಾಡಿಗೋಳಿ ಮತ್ತು ಬಂಗ್ರ ಕೂಳೂರಿನ ಕಂಬಳಗಳ ವಿಡಿಯೋಗಳನ್ನು..! ಇದೇ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯ ಕಂಬಳ ಕ್ರೀಡೆಗೆ ನಿಷೇಧ ಹೇರಿತ್ತು ಕೂಡಾ.
ಆಗ ಕೇಂದ್ರ ಸರಕಾರ ಮತ್ತು ಕರ್ನಾಟಕ ಸರಕಾರಗಳು ರಾಷ್ಟ್ರಪತಿಗಳ ಮತ್ತು ರಾಜ್ಯಪಾಲರ ಅಂಕಿತದ ಮೂಲಕ ಸುಗ್ರೀವಾಜ್ಞೆ ತಂದು ಕಂಬಳವನ್ನು ಸುಸೂತ್ರವಾಗಿ ನಡೆಸಲು ಅವಕಾಶ ನೀಡಿತ್ತು. ಆದರೂ ಈ ಪ್ರಕರಣ ಮುಗಿಯಲಿಲ್ಲ… ಪೇಟಾ ಮತ್ತೆ ಸುಪ್ರೀಂ ಕೋರ್ಟಿನಲ್ಲಿ ಕೇಸು ದಾಖಲಿಸಿತು. ಈ ಬಾರಿ ಅದು ನಮ್ಮ ಬಾರಾಡಿಬೀಡು, ಮೂಡಬಿದಿರೆ, ವಾಮಂಜೂರು ತಿರುವೈಲುಗುತ್ತು ಮತ್ತು ಕೂಳೂರಿನ ಕಂಬಳಗಳಲ್ಲಿ ಕೋಣಗಳಿಗೆ ಅಮಾನುಷವಾಗಿ ಹೊಡೆದು ಹಿಂಸಿಸಲಾಗುತ್ತದೆ ಅಂತ ಮತ್ತೆ ವಿಡಿಯೋ ಸಾಕ್ಷಿ ಒದಗಿಸಿತು.
ಇಷ್ಟಾದ ಮೇಲೆ 2018 ರಲ್ಲಿ ಸುಪ್ರೀಂ ಕೋರ್ಟಿನ ವಿಭಾಗೀಯ ಪೀಠ ಈ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತು.
ನಾನು ಕೂಡಾ ಉಪ್ಪಿನಂಗಡಿ ವಿಜಯ ವಿಕ್ರಮ ಎಂಬ ಇತಿಹಾಸ ಪ್ರಸಿದ್ಧ ಕಂಬಳದ ಸಂಘಟಕನಾಗಿ ಸುಪ್ರೀಂ ಕೋರ್ಟಿನಲ್ಲಿ ಕಂಬಳದ ಪರವಾಗಿ ಹಿರಿಯ ನ್ಯಾಯವಾದಿ ಶ್ರೀ ಸಂಜಯ್ ನುಲಿಯವರ ಮೂಲಕ ವಾದ ಮಂಡಿಸಿದೆ… ಈಗ ಈ ಸಾಂವಿಧಾನಿಕ ಪೀಠವೇ ಈ ಕುರಿತ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದೆ… ಹಾಗಾಗಿಯೇ ನನಗೆ ಒಂದಷ್ಟು ಕಳವಳ… ಆದರೆ ಒಂದು ಮಾತ್ರ ನಿಜ.
ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠದ ತೀರ್ಪು ನಮ್ಮ ಪರವಾಗಿ ಅಂದರೆ ಕಂಬಳದ ಪರವಾಗಿ ಬಂದರೆ ಸಂತೋಷ… ಬರದೇ ಇದ್ದರೆ ತಲೆಕೆಡಿಸಿಕೊಳ್ಳುವ ಮಾತೇ ಇಲ್ಲ… ಕಂಬಳದ ವಿಷಯ ಬಂದರೆ ನಾನು ಹೋರಾಡುತ್ತೇನೆ… ಹಾಗಂತ ನನ್ನ ಜನಗಳಿಗೆ ನಾನು ಮಾತು ಕೊಟ್ಟಿದ್ದೇನೆ.. ಅದೆಷ್ಟು ಕಷ್ಟವಾದರೂ ಪರವಾಗಿಲ್ಲ… ಕಂಬಳದ ಪರವಾಗಿ ನನ್ನ ಹೋರಾಟ ನಿಲ್ಲುವುದಿಲ್ಲ…!
ಅಂದ ಹಾಗೆ ಸಧ್ಯಕ್ಕೆ ಈ ಕುರಿತಾದ ಕಳವಳ, ಆತಂಕಗಳನ್ನೆಲ್ಲಾ ಪಕ್ಕಕ್ಕಿಟ್ಟು… ಎಲ್ಲಾ ಭಾರವನ್ನೂ ದೇವರ ಮೇಲೆ ಹಾಕಿ… ನಾವೀಗ ನಮ್ಮೆಲ್ಲಾ ಗಮನವನ್ನು ನಮ್ಮ ಉಪ್ಪಿನಂಗಡಿಯ “ವಿಜಯ ವಿಕ್ರಮ” ಕಂಬಳವನ್ನು ಯಶಸ್ವಿಗೊಳಿಸುವುದರತ್ತ ಹರಿಸಬೇಕಿದೆ… ಇದೇ ಸಂದರ್ಭದಲ್ಲಿ ನಾನು ಎಲ್ಲರನ್ನೂ ಉಪ್ಪಿನಂಗಡಿ ಕಂಬಳಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ… ಎಲ್ಲರೂ ಬನ್ನಿ…. ನಮ್ಮ ಉಪ್ಪಿನಂಗಡಿ ಕಂಬಳವನ್ನು ಯಶಸ್ವಿಗೊಳಿಸೋಣ..!
ಅಶೋಕ್ ಕುಮಾರ್ ರೈ
ರೈ ಎಸ್ಟೇಟ್, ಕೋಡಿಂಬಾಡಿ.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂತರ ರಾಜ್ಯ
Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ
ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.
ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.
ಸ್ಥಳೀಯ
Shrikrishna-ಗ್ವಾಲಿಯರ್‌ನಲ್ಲಿ ಮಿಂಚಿದ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ; ರಾಷ್ಟ್ರಮಟ್ಟದ ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ
ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಪಟ್ಟೆ ಬಡಗನ್ನೂರು: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
17 ವರ್ಷ ವಯೋಮಾನದ ವಿಭಾಗದಲ್ಲಿ ಕರ್ನಾಟಕ ದಕ್ಷಿಣ ಮಧ್ಯ ಕ್ಷೇತ್ರ ತಂಡವನ್ನು ಪ್ರತಿನಿಧಿಸಿದ ಸಾಥ್ವಿ, ತಂಡದೊಂದಿಗೆ ಸ್ಪರ್ಧಿಸಿ ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಹಾಗೂ ಸಾಥ್ವಿ ಅವರನ್ನು ಪಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರು, ಸರ್ವ ಸದಸ್ಯರು, ಶಾಲೆಯ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
-
ಅಪರಾಧ20 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ19 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್18 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ನಿಧನ ವಾರ್ತೆ18 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ17 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ17 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್22 hours agoMuraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
-
ಮಂಗಳೂರು18 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















