ದಕ್ಷಿಣ ಕನ್ನಡ
ಮಾ.10 ರಿಂದ 12 : ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಯಂಗ್ ಬ್ರಿಗೇಡ್ ಸೇವಾದಳದಿಂದ ರಾಜೀವ್ ಗಾಂಧಿ ಟ್ರೋಫಿ ಕ್ರಿಕೆಟ್ ಪಂದ್ಯಾಟ – ರಕ್ತದಾನ ಶಿಬಿರ |ಉಚಿತ ಪ್ರವೇಶ – 50 ಸಾವಿರ ಪ್ರಥಮ ಬಹುಮಾನ
ಪುತ್ತೂರು: ಕಾಂಗ್ರೆಸ್ನ ಅಂಗ ಘಟಕವಾದ ಯಂಗ್ ಬ್ರಿಗೇಡ್ ಸೇವಾದಳವು ಮಾ.10 ರಿಂದ 12 ರವರೆಗೆ ರಾಜೀವ್ ಗಾಂಧಿ ಟ್ರೋಫಿ ಕ್ರಿಕೆಟ್ ಪಂದ್ಯಾಟ ಆಯೋಜಿಸಿದೆ. ಈ ಕ್ರೀಡಾಕೂಟದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮಗೊಂದರಂತೆ 32 ತಂಡಗಳು ಭಾಗವಹಿಸಲಿವೆ. ಮಾ.10ರಂದು 3 ಗಂಟೆಗೆ ಬೂತ್ ಮಟ್ಟದ ಕಾರ್ಯಕರ್ತರ ಅಟೋ ರಿಕ್ಷಾ ಜಾಥ ನಡೆಯಲಿದೆ ಎಂದು ಯಂಗ್ ಬ್ರಿಗೇಡ್ ಸೇವಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರಿಯಾಜ್ ತಿಳಿಸಿದ್ದಾರೆ.
ಭಾಗವಹಿಸುವ ಪ್ರತಿ ತಂಡವು 6 ಯುನಿಟ್ ರಕ್ತದಾನ ಮಾಡಬೇಕೇಂಬ ಷರತ್ತು ವಿಧಿಸಲಾಗಿದೆ. ಭಾಗವಹಿಸುವ ತಂಡಗಳಿಗೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. ರಕ್ತದಾನ ಶಿಬಿರ ಈಗಾಗಲೇ ಪುರಭವನದಲ್ಲಿ ಆರಂಭಗೊಂಡಿದ್ದು, ತಂಡಗಳ ದಾಖಲಾತಿಯು ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಅಟೋ ರಿಕ್ಷಾ ಜಾಥದಲ್ಲಿ ಸುಮಾರು 150 ರಿಕ್ಷಾಗಳು ಭಾಗವಹಿಸುವ ನಿರೀಕ್ಷೆಯಿದ್ದು, ಅದರ ಉದ್ಘಾಟನೆ ಧರ್ಬೆ ವೃತ್ತದಲ್ಲಿ ನಡೆಯಲಿದೆ. ಜಾಥವು ಮುಖ್ಯ ರಸ್ತೆಯ ಮೂಲಕ ಕಿಲ್ಲೆ ಮೈದಾನಕ್ಕೆ ಆಗಮಿಸಲಿದ್ದು, ಗಾಂಧಿ ಕಟ್ಟೆಯಲ್ಲಿ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡಲಿದ್ದೇವೆ. ಮಾ 11 ರಂದು ಸಂಜೆ ಇದೇ ವೇದಿಕೆಯಲ್ಲಿ ನಡೆಯುವ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಲಕ್ಕಿ ಡ್ರಾ ನಡೆಸಿ, ಜಾಥದಲ್ಲಿ ಭಾಗವಹಿಸಿದ ರಿಕ್ಷಾ ಚಾಲಕರಿಗೆ ಬಹುಮಾನ ವಿತರಿಸಲಾಗುತ್ತದೆ. ಲಕ್ಕಿ ಡ್ರಾದಲ್ಲಿ ವಿಜೇತರಾದ ಚಾಲಕರಿಗೆ ಬಹುಮಾನವಾಗಿ ಎಲ್ಇಡಿ ಟಿವಿ, ಮಿಕ್ಸರ್ ಗ್ರೈಂಡರ್ ಹಾಗೂ ಕುಕ್ಕರ್ ನೀಡಲಾಗುತ್ತದೆ. ಅಲ್ಲದೇ ಭಾಗವಹಿಸಿದ ಹ ಎಲ್ಲ ರಿಕ್ಷಾ ಚಾಲಕರಿಗೆ ಗೌರವಾರ್ಪಣೆಯು ನಡೆಯಲಿದೆ
ಮಾ 10 ರಂದು ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಬಿ.ವಿ. ಶ್ರೀನಿವಾಸ್ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಮಾ.12 ರಂದು ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭ ನಡೆಯಲಿದ್ದು, ಇದರಲ್ಲಿ ಭಾಗವಹಿಸಿದ ಸ್ತ್ರೀಶಕ್ತಿಗೆ ಲಕ್ಕಿ ಕೂಪನ್ ಮೂಲಕ ಬಹುಮಾನ ವಿತರಣೆ ನಡೆಯಲಿದೆ ಎಂದು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.
ಯಂಗ್ ಬ್ರಿಗೇಡ್ ಸೇವಾದಳ ಪುತ್ತೂರು ಅಧ್ಯಕ್ಷ ರಂಜಿತ್ ಬಂಗೇರ ಮಾತನಾಡಿ ಪ್ರತಿ ತಂಡದಿಂದ 6 ಯುನಿಟ್ ನಂತೆ ಒಟ್ಟು 32 ತಂಡದಿಂದ 180 ಕ್ಕೂ ಅಧಿಕ ಯುನಿಟ್ ರಕ್ತ ಸಂಗ್ರಹಿಸುವ ನಿರೀಕ್ಷೆಯಿದೆ. ಸಾರ್ವಜನಿಕರಿಗೂ ರಕ್ತದಾನದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸಲಾಗಿದ್ದು, ಹೀಗಾಗಿ ರಕ್ತ ಸಂಗ್ರಹದ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಕ್ರಿಕೆಟ್ ಪಂದ್ಯಾಟದ ವಿಜೇತ ತಂಡಕ್ಕೆ ಪ್ರಥಮ ಬಹುಮಾನವಾಗಿ ರೂ. 50 ಸಾವಿರ ನಗದು, ಟ್ರೋಫಿ, ದ್ವಿತೀಯ ಬಹುಮಾನವಾಗಿ ರೂ. 30ಸಾವಿರ ನಗದು ಟ್ರೋಫಿ ವಿತರಿಸಲಾಗುವುದು. ಕ್ರೀಡಾಪಟುಗಳು ಕಾಂಗ್ರೆಸ್ ಪಕ್ಷದ ಚಿಹ್ನೆಯ ಜರ್ಸಿ ಧರಿಸಿ ಆಡಲಿದ್ದಾರೆ ಎಂದು ಹೇಳಿದರು.
ಮಂಗಳೂರು
D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.
ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.
ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.
ಸುಳ್ಯ
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ

ನವದೆಹಲಿ: ನಿಷೇಧಿತ ಪ್ರದೇಶವಾದ ಜಂತರ್ ಮಂತರ್ ಪ್ರವೇಶಿಸಿ, ಪೊಲೀಸ್ ಬ್ಯಾರಿಕೇಡ್ ಉಲ್ಲಂಘಿಸಿದ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಾಯಕರು ಮಂಗಳವಾರ ಮುಂಜಾನೆ ಜಂತರ್ ಮಂತರ್ ಬಳಿ ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ಭೇದಿಸಿ ಒಳಪ್ರವೇಶಿಸಿದ ಅವರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿತ್ತು.
ಬಂಧಿತ ನಾಯಕರನ್ನು ಇಂದು (ಬುಧವಾರ) ವಿಶೇಷ ಕಾರ್ಯಕಾರಿ ಮ್ಯಾಜಿಸ್ಟ್ರೇಟ್ (ಎಸ್ಇಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಬಳಿಕ ಅವರನ್ನು ತಿಹಾರ್ ಜೈಲಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸರ ವಿರುದ್ಧ ಸಿಜೆಪಿ ಆರೋಪ:
ಸಿಜೆಪಿ ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಅವರು ‘ಎಕ್ಸ್’ (ಟ್ವಿಟರ್) ಮೂಲಕ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.
“ಜಂತರ್ ಮಂತರ್ ಘಟನೆಗೆ ಸಂಬಂಧಿಸಿದಂತೆ ನಮ್ಮ ನಾಯಕರಾದ ಸೌರವ್ ದಾಸ್, ಅಶುತೋಷ್ ಹಾಗೂ ಅಜಿಂಕ್ಯ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಅವರ ಮೇಲೆ ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ. ತಡರಾತ್ರಿಯವರೆಗೂ ವಕೀಲರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ನೀಡಿರಲಿಲ್ಲ.
ಮುಂಜಾನೆ 3 ಗಂಟೆ ಸುಮಾರಿಗೆ ಖಾಸಗಿ ವ್ಯಾನ್ ಮೂಲಕ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಗೆ ಕರೆತರಲಾಗಿದೆ. ಈ ಎಲ್ಲ ಕಾನೂನುಬಾಹಿರ ಕ್ರಮಗಳ ನಡುವೆಯೂ ನಮ್ಮ ನಾಯಕರ ನೈತಿಕ ಸ್ಥೈರ್ಯ ಕುಗ್ಗಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿನ್ನೆಲೆ ಏನು?
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ ಹಾಗೂ ಇತರ ಕೆಲವು ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆಗಳನ್ನು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಕಳೆದ ಅಕ್ಟೋಬರ್ 11ರಂದು ನೂತನ ಆದೇಶ ಹೊರಡಿಸಿದ್ದ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಅವರು, ಯಾವುದೇ ಧರಣಿ ಮತ್ತು ಪ್ರತಿಭಟನೆಗಳಿಗೆ ಕೇವಲ ರಾಮ್ಲೀಲಾ ಮೈದಾನ, ಬುರಾರಿ ಗ್ರೌಂಡ್ ಹಾಗೂ ಸಿಬಿಡಿ ಗ್ರೌಂಡ್ಗಳನ್ನು ಮಾತ್ರ ನಿಗದಿಪಡಿಸಿದ್ದರು. ಈ ಆದೇಶದ ಅನ್ವಯ ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದ್ದು, ಅಲ್ಲಿ ಜಮಾವಣೆಯನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಪ್ರತಿಭಟನೆ ನಡೆಸಿದ್ದರಿಂದ ಈ ಬಂಧನ ಕಾರ್ಯಾಚರಣೆ ನಡೆದಿದೆ.
-
ನಿಧನ ವಾರ್ತೆ22 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
Uncategorized20 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ21 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಮಂಗಳೂರು21 hours agoRaghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
-
ಬಿಗ್ ನ್ಯೂಸ್22 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ರಾಜಕೀಯ19 hours agoSiddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
-
ನಿಧನ ವಾರ್ತೆ20 hours agoSubramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
-
ಬಿಗ್ ನ್ಯೂಸ್21 hours agoPuttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು


















