ಅಪರಾಧ
ಹಳೇ ನೋಟು ಬದಲಿಸಿ ಕೊಡಲು ಕಮೀಷನ್ ಆಮೀಷ – ನೋಟಿನ ಬದಲು ಕಾಗದದ ತುಂಡು ನೀಡಿ ಉಜಿರೆಯ ಮಹಿಳೆಗೆ ಲಕ್ಷಾಂತರ ರೂ. ವಂಚನೆ | ಪುತ್ತೂರು ನಿವಾಸಿ ಸಹಿತ ಐವರ ಬಂಧಿಸಿದ ಕಡೂರು ಪೊಲೀಸರು
ಕಡೂರು, ನ.22: ದೇಗುಲದ ಹುಂಡಿಯಲ್ಲಿ ಸಿಕ್ಕಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಹಳೇ ನೋಟುಗಳನ್ನು ಬದಲಾಯಿಸಿ ಹೊಸ ನೋಟು ಕೊಟ್ಟರೆ ಕಮೀಷನ್ ನೀಡುವುದಾಗಿ ಆಮೀಷವೊಡ್ಡಿ ಉಜಿರೆಯ ಮಹಿಳೆಯೊಬ್ಬರಿಗೆ 10 ಲಕ್ಷ ರೂ. ವಂಚಿಸಿದ್ದ ಪ್ರಕರಣ ನಡೆದಿದ್ದು, ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪೊಲೀಸರು ದೂರು ನೀಡಿದ 48 ಗಂಟೆಯೊಳಗೆ ಬಂಧಿಸಿದ್ದಾರೆ.
ಪುತ್ತೂರಿನ ನಿವಾಸಿ ಸಹಿತ ಒಟ್ಟು ಐವರನ್ನು ಕೃತ್ಯ ಎಸಗಿದ ಆರೋಪದ ಮೇರೆಗೆ ಬಂಧಿಸಲಾಗಿದೆ. ಕಡೂರು ನಿವಾಸಿ ಮಹೇಶ್(40), ಪುತ್ತೂರಿನ ಅರಂತನಡ್ಕ ನಿವಾಸಿ ನಾರಾಯಣ ರೈ(53), ಚಿಕ್ಕಮಗಳೂರು ಇಲಿಯಾಜ್(49), ತುಮಕೂರಿನ ಗಂಗಾಧರ (33) ಮತ್ತು ವಿನಯ್ ಕುಮಾರ್ ಬಂಧಿತ ಆರೋಪಿಗಳು .
ಪುತ್ತೂರು ತಾಲೂಕಿನ ತಿಂಗಳಾಡಿ ನಿವಾಸಿ ಕೊರಗಪ್ಪ ವಂಚನೆಯ ಬಗ್ಗೆ ದೂರು ನೀಡಿದವರು. ವಂಚನೆಗೊಳಗಾದ ಮಹಿಳೆ ಕೃಪಾರಿಗೆ ಕೊರಗಪ್ಪನವರು ಪರಿಚಿತರಾಗಿದ್ದು , ಕೊರಗಪ್ಪನವರೇ ಆಕೆಗೆ ನೋಟು ಬದಲಾವಣೆ ತಂಡದ ಪರಿಚಯ ಮಾಡಿಸಿಕೊಟ್ಟಿದ್ದರು ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅವರೇ ವಂಚನೆಯ ಕೃತ್ಯದ ಬಗ್ಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ
ಏನಿದು ಪ್ರಕರಣ ?
ಬಂಧಿತ ಆರೋಪಿಗಳ ಪೈಕಿ ಕೆಲವರು ಕೊರಗಪ್ಪನವರಿಗೆ ಪರಿಚಿತರಾಗಿದ್ದರು. “ ತಮ್ಮ ಬಳಿ ದೇವಸ್ಥಾನಗಳ ಹುಂಡಿಯಲ್ಲಿ ಭಕ್ತರು ಹಾಕಿದ್ದ 100 ರೂ.ಮುಖ ಬೆಲೆಯ 10 ಲಕ್ಷ ರೂ. ನೋಟುಗಳಿದ್ದು, ಆವುಗಳನ್ನು ವಿಲೇವಾರಿ ಮಾಡಲು ತೊಂದರೆ ಆಗಿದೆ. ಈ ನೋಟುಗಳನ್ನು ಪಡೆದು 500, 2000 ರೂ. ಮುಖಬೆಲೆಯ ನೊಟುಗಳನ್ನು ಕೊಡುವವರಿಗೆ ಶೇ.30ರಷ್ಟು ಕಮಿಶನ್ ನೀಡುವುದಾಗಿ” ಆರೋಪಿಗಳು ಕೊರಗಪ್ಪನವರಲ್ಲಿ ತಿಳಿಸಿದ್ದರು.
ಇದನ್ನು ನಂಬಿದ್ದ ಕೊರಗಪ್ಪನವರು ಈ ವಿಚಾರವನ್ನು ತಮ್ಮ ಪರಿಚಯದ ಕೆಲವರಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ . ಅವರ ಪೈಕಿ ಉಜಿರೆಯ ಕೃಪಾ ಕೂಡ ಒಬ್ಬರು. ಕಮಿಶನ್‍ನ ಆಸಗೆ ಬಲಿಯಾದ ಕೃಪಾ ಅವರು 10 ಲಕ್ಷ ರೂಪಾಯಿಗಳ ಹೊಸ ನೋಟುಗಳನ್ನು ನೀಡಲು ಒಪ್ಪಿದ್ದಾರೆ. ಈ ಬಗ್ಗೆ ಆರೋಪಿಗಳು ಹಾಗೂ ಕೃಪಾ ಅವರ ನಡುವೆ ವ್ಯವಹಾರ ಮಾತುಕತೆ ನಡೆದಿತ್ತು. ಅದರಲ್ಲಿ ಕಡೂರಿನ ಕೋಟೆ ಭಾಗದ ಚಂದ್ರಮೌಳೇಶ್ವರ ದೇವಸ್ಥಾನದ ಆವರಣದಲ್ಲಿ ಹಣವನ್ನು ಹಸ್ತಾಂತರಿಸಿಕೊಳ್ಳುವುದು ಎಂದು ನಿಗದಿಯಾಗಿತ್ತು ಎನ್ನಲಾಗಿದೆ.
ಅದರಂತೆ ನ. 20 ರಂದು ಕೃಪಾ ಅವರು ತಮ್ಮ ತಮ್ಮ ಸ್ನೇಹಿತರಾದ ಭುವನೇಂದ್ರ ಮತ್ತು ಜನಾರ್ಧನ ಎಂಬರೊಂದಿಗೆ ನಿಗದಿತ ಸ್ಥಳಕ್ಕೆ ತಲುಪಿದ್ದಾರೆ. ಈ ವೇಳೆ ಆರೋಪಿಗಳ ಪೈಕಿ ಕೆಲವರು ಕೃಪಾ ಅವರಿಗೆ ಹಣದ ಬ್ಯಾಗ್‍ವೊಂದನ್ನು ನೀಡಿ, ಇದರಲ್ಲಿ 13 ಲಕ್ಷ ರೂ. ಇದ್ದು, ಇದನ್ನು ನಂತರ ಎಣಿಸಿಕೊಳ್ಳಿ ಎಂದು ಹೇಳಿ ಕೃಪಾ ಅವರ ಬಳಿಯಿದ್ದ 10 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಈ ಸಂದರ್ಭ ಇಲ್ಲಿ ಹಣ ಎಣಿಸುವುದು ಸೇಫ್ ಅಲ್ಲ ಎಂದು ನಂಬಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.

ನೋಟಿನ ಬದಲು ಕಾಗದದ ತುಂಡು
ಸ್ವಲ್ಪ ದೂರ ಬಂದು ಕೃಪಾ ಮತ್ತು ಅವರ ಸ್ನೇಹಿತರು ಹಣದ ಬ್ಯಾಗ್ ಅನ್ನು ತೆರೆದು ನೋಡಿದಾಗ ಅದರಲ್ಲಿ ಸಿನಿಮೀಯ ಶೈಲಿಯಲ್ಲಿ ಬಿಳಿ ಹಾಳೆಗಳ ಕಟ್ಟಿನ ಮೇಲೆ ತಲಾ 1ರಂತೆ 100 ರೂ. ಮುಖ ಬೆಲೆಯ ನೋಟ್‍ಗಳನಿಟ್ಟು ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಕೃಪಾ ಅವರು ಆರೋಪಿಗಳಿಗೆ ಕರೆ ಮಾಡಿದ್ದು, ಈ ವೇಳೆ ಮೊಬೈಲ್‍ಗಳು ಸ್ವಿಚ್ ಆಫ್ ಆಗಿತ್ತು.
ಸ್ವಾಮೀಜಿ ವಸ್ತ್ರ ತೊಟ್ಟು ಮೋಸ
ವಂಚನೆ ಸಂಬಂಧ ಪುತ್ತೂರು ತಾಲೂಕಿನ ಕೊರಗಪ್ಪ ಎಂಬವರು ಕಡೂರು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಆರೋಪಿಗಳ ದೂರವಾಣಿ ಸಂಖ್ಯೆ, ವಿಳಾಸ ಆಧರಿಸಿ ನ.20ರಂದು ಕಡೂರು ಪಟ್ಟಣದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕಡೂರು ನಿವಾಸಿ ಮಹೇಶ್(40), ಪುತ್ತೂರಿನ ಅರಂತನಡ್ಕ ನಿವಾಸಿ ನಾರಾಯಣ ರೈ(53) ಎಂಬವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ಈ ವೇಳೆ ಬಂಧಿತ ಆರೋಪಿಗಳಿಂದ ಸ್ವಾಮೀಜಿ ವೇಷ ಧರಿಸಿ ವಂಚಿಸುತ್ತಿದ್ದ ಖಾವಿ ಬಟ್ಟೆ, ರುದ್ರಾಕ್ಷಿ ಸರ, 100 ರೂ. ಮುಖ ಬೆಲೆಯ ಹಳೆಯ ನೋಟ್‍ಗಳಿದ್ದ ಬ್ಯಾಗ್ ಮತ್ತು ಆಕ್ಟೀವಾ ವಶ ಪಡಿಸಿಕೊಂಡಿದ್ದಾರೆ.

ಬಂಧಿತರು ನೀಡಿದ ಮಾಹಿತಿ ಮೇರೆಗೆ ಮೊಲೀಸರು ಚಿಕ್ಕಮಗಳೂರು ನಗರದ ತಮಿಳು ಕಾಲನಿಯ ಲಾರಿ ಸ್ಟ್ಯಾಂಡ್ ಬಳಿ ಬಳಿ ಚಿಕ್ಕಮಗಳೂರು ಇಲಿಯಾಜ್(49), ತುಮಕೂರಿನ ಗಂಗಾಧರ (33) ಮತ್ತು ವಿನಯ್ ಕುಮಾರ್ ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಮಾರುತಿ ಒಮ್ನಿ ಮತ್ತು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳಿಂಧ ಒಟ್ಟು 5,10000 ಸಾವಿರ ರೂ. ವಶಪಡಿಸಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ಭಟ್ಕಳದ ತಯ್ಯುಬ್ ಎಂಬಾತ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಾರ್ಯಾಚರಣೆಯಲ್ಲಿ ಕಡೂರು ಪೊಲೀಸ್ ಠಾಣೆಯ ಪಿಎಸ್ಸೈ ರಮ್ಯಾ, ಪಿಎಸ್ಸೈಗಳಾದ ಆದರ್ಶ್, ನವೀನ್, ಎಎಸ್ಸೈ ವೇದಮೂರ್ತಿ, ಸಿಬ್ಬಂದಿ ಕೃಷ್ಣಮೂರ್ತಿ, ಉಮೇಶ್, ರಾಜಪ್ಪ, ಮಧುಕುಮಾರ್,ಓಂಕಾರ್ ಮತ್ತು ಶಿವರಾಜ್ ಪಾಲ್ಗೊಂಡಿದ್ದರು.
ಅರಂತನಡ್ಕ ನಿವಾಸಿ ನಾರಾಯಣ ರೈ ಅವರನ್ನು ಕಡೂರು ಪೊಲೀಸರು ಬಂಧಿಸಿರುವ ವಿಚಾರ ಅವರ ಮನೆಯವರಿಗೆ ತಿಳಿದಿರಲಿಲ್ಲವಾದ್ದರಿಂದ ನಾರಾಯಣ ರೈ ಅವರು ಮನೆಗೆ ಬಂದಿಲ್ಲ ಎಂದು ಅವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಗ ಕಡೂರು ಪೊಲೀಸರು ನಾರಾಯಣ ರೈ ಅವರನ್ನು ಬಂಧಿಸಿರುವ ವಿಚಾರ ಮನೆಯವರಿಗೆ ಗೊತ್ತಾಗಿದೆ ಎಂದು ಹೇಳಲಾಗುತ್ತಿದೆ.
ಅಂತರ ರಾಜ್ಯ
Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್‌ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.
ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.
ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.
ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್‌ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
-
ಮಂಗಳೂರು19 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ24 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಅಂತರ ರಾಜ್ಯ18 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಸಿನೆಮಾ24 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ಕಾರ್ಯಕ್ರಮಗಳು19 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ13 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ18 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
Uncategorized20 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ















