ಸುಳ್ಯ
Nikhara News Poltical Exclusive : ಈ ಬಾರಿ ಸುಳ್ಯದಲ್ಲಿ ಅಂಗಾರರಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ – ಕಲ್ಲಡ್ಕ ಶಿಷ್ಯನಿಗೆ ಟಿಕೆಟ್..?
ಕರ್ನಾಟಕದಲ್ಲಿ ಚುನಾವಣೆಯ ಕಾವು ಏರತೊಡಗಿದೆ. ರಾಜ್ಯದ ಮೂರು ಪ್ರಮುಖ ರಾಜಕೀಯ ಪಕ್ಷಗಳು ಚುನಾವಣಾ ಸಿದ್ದತೆಯಲ್ಲಿ ಭರ್ಜರಿಯಾಗಿ ತೊಡಗಿಸಿಕೊಂಡಿದ್ದು, ಸಮಾವೇಶ, ರೋಡ್ ಶೋ, ಕ್ರೀಡಾಕೂಟ, ಬೀಚ್ ಫೆಸ್ಟ್ ಹೀಗೆ ನಾನಾ ಕಸರತ್ತುಗಳ ಮೂಲಕ ಜನರ ಗಮನ ಸೆಳೆಯುವ ಪ್ರಕ್ರಿಯೆಯಲ್ಲಿ ನಿರತರಾಗಿವೆ. ಜೆಡಿಎಸ್ ಈಗಾಗಲೇ ಮೊದಲ ಹಂತದ ಸ್ಪರ್ಧಿಗಳ ಲಿಸ್ಟನ್ನು ಪ್ರಕಟಿಸಿದೆ. ಆದರೇ ಬಿಜೆಪಿ ಹಾಗೂ ಕಾಂಗ್ರೆಸ್ ಇನ್ನು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಮೀನಾ ಮೇಷ ಎಣಿಸುತ್ತಿದೆ. ಕಾಂಗ್ರೆಸ್ ಈಗಾಗಲೇ 120 ಕ್ಷೇತ್ರಗಳ ಪಟ್ಟಿಯನ್ನು ಸಿದ್ದಪಡಿಸಿದ್ದು, ಉಳಿದ 104 ಸ್ಥಾನಗಳ ಆಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದೆ ಎನ್ನಲಾಗುತ್ತಿದೆ.
ಏತನ್ಮಧ್ಯೆ ರಾಜ್ಯ ಬಿಜೆಪಿಯ ಎರಡು ಹಿರಿಯ ನಾಯಕರುಗಳು ಕಳೆದೆರಡು ದಿನಗಳಿಂದ ನೀಡುತ್ತಿರುವ ಟಿಕೆಟ್ ಕುರಿತ ಹೇಳಿಕೆಗಳು ಆ ಪಕ್ಷದಲ್ಲಿ ಸಂಚಲನ ಮೂಡಿಸಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಈ ಚುನಾವಣೆಯ ಕೇಂದ್ರ ಬಿಂದು ಬಿ.ಎಸ್ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಲವು ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೈ ತಪ್ಪಲಿದೆ ಎಂದು ನೀಡಿರುವ ಹೇಳಿಕೆ, ಹಾಲಿ ಶಾಸಕರುಗಳ ನಿದ್ದೆಗೆಡಿಸಿದೆ. ಏತನ್ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ದಿಢೀರ್ ದೆಹಲಿ ಭೇಟಿ, ಅಲ್ಲಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಜತೆ ನಡೆಸಿದ ರಹಸ್ಯ ಮಾತುಕತೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ. ಬಿಜೆಪಿಯ ಮೂಲಗಳ ಪ್ರಕಾರ ದಕ್ಷಿಣ ಕನ್ನಡಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ಪಲ್ಲಟವಾಗುವ ಸಾಧ್ಯತೆಯಿದೆ. ಈ ಕುರಿತ ಚರ್ಚೆಗೆಂದೆ ನಳಿನ್ ದೆಹಲಿಗೆ ತೆರಳಿದ್ದಾರೆ.
ಟಿಕಟ್ ಬದಲಾವಣೆಗೆ ಕಾರಣ
ಸದ್ಯದ ರಾಜಕೀಯ ಟ್ರೆಂಡ್ ಗಮನಿಸಿದಾಗ ರಾಜ್ಯದಲ್ಲಿ ಪೂರ್ಣ ಬಹುಮತ ಪಡೆಯುವಲ್ಲಿ ಬಿಜೆಪಿ ಈ ಬಾರಿಯೂ ಮುಗ್ಗರಿಸುವ ಸಾಧ್ಯತೆ ಅಧಿಕ. ಹಲವು ಸಮೀಕ್ಷಾ ತಂಡಗಳು ರಾಜ್ಯದಲ್ಲಿ ಸರ್ವೆಗಳನ್ನು ನಡೆಸಿ ವರದಿ ನೀಡಿದ್ದು, ಅವುಗಳ ಪ್ರಕಾರ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಬಹುಮತ ಪಡೆಯಲು ತೀವ್ರ ಪೈಪೊಟಿಯಿದೆ. ಹಲವು ಸಮೀಕ್ಷಾ ವರದಿಗಳ ಪ್ರಕಾರ ಕಾಂಗ್ರೆಸ್ ಪಕ್ಷವು ಬಿಜೆಪಿಗಿಂತ ಕನಿಷ್ಟ ಹತ್ತು ಸೀಟು ಹೆಚ್ಚು ಗೆಲ್ಲಲಿದೆ. ಕಲ್ಯಾಣ ಕರ್ನಾಟಕ ಹಾಗೂ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಲಿದ್ದು, ಬೆಂಗಳೂರು ನಗರದಲ್ಲಿ ಕಳೆದ ಬಾರಿಗಿಂತ ಕಡಿಮೆ ಸೀಟು ಪಡೆಯಲಿದೆ. ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದಲ್ಲಿ ಎಂದಿನಂತೆ ಬಿಜೆಪಿ ಪರ ಒಲವು ಇದೆ. ಆದರೇ ಇದೇ ವೇಳೆ ಈ ಭಾಗದಲ್ಲಿ ಹಾಲಿ ಶಾಸಕರ ಆಡಳಿತ ವೈಖರಿಯ ಕುರಿತು ಕಾರ್ಯಕರ್ತರಲ್ಲಿ ಹಾಗೂ ಬಿಜೆಪಿ ಒಲವು ಇರುವ ಮತದಾರರಲ್ಲಿ ಅಸಮಾಧನವಿದೆ. ರಾಜ್ಯದಲ್ಲಿ ಬಹುಮತ ಗಳಿಸಬೇಕಾದರೇ ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದಲ್ಲಿ ಬಹುತೇಕ ಎಲ್ಲ ಸ್ಥಾನಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿರುವ ಬಿಜೆಪಿ ಯಾವುದೇ ರಿಸ್ಕ್ ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಆಡಳಿತ ವಿರೋಧಿ ಅಲೆ ಅಧಿಕ ಇರುವೆಡೆ ಶಾಸಕರನ್ನು ಬದಲಿಸಲು ಪಕ್ಷ ಮನಸ್ಸು ಮಾಡಿದೆ ಎಂದು ತಿಳಿದು ಬಂದಿದೆ.
ಅಂಗಾರರಿಗೆ ಈ ಬಾರಿ ಖೋಕ್
ಬಿಜೆಪಿ ರಾಜ್ಯಾಧ್ಯಕ್ಷರ ಆಪ್ತ ಮೂಲಗಳ ಪ್ರಕಾರ ಸಚಿವ ಅಂಗಾರರಿಗೆ ಈ ಬಾರಿ ಟಿಕೆಟ್ ಕೈ ತಪ್ಪಲಿದೆ. 1994 ರಿಂದ ಪ್ರತಿ ಚುನಾವಣೆಯಲ್ಲಿ ಜಯಭೇರಿ ಭಾರಿಸುತ್ತಿರುವ ಅವರ ಪರ ಸಹಜವಾಗಿಯೇ ದೊಡ್ಡ ಮಟ್ಟದ ಆಡಳಿತ ವಿರೋಧಿ ಅಲೆಯಿದೆ. ಸರಳ, ಸಚ್ಚಾರಿತ್ರ್ಯವಂತ, ಪ್ರಾಮಾಣಿಕ, ಅಜಾತಶತ್ರು, ಕಳಂಕ ರಹಿತ, ಸಜ್ಜನಿಕೆಯ ವ್ಯಕ್ತಿ ಎಂಬ ಕಾರಣಕ್ಕೆ ಅವರ ಪರ ಈಗಲೂ ಪಕ್ಷದ ಕಾರ್ಯಕರ್ತರಿಗೆ ಒಲವಿದ್ದರು, ಕ್ಷೇತ್ರದಲ್ಲಿ ಬಹಳಷ್ಟು ಕಾರ್ಯಗಳು ಆಗಿಲ್ಲ ಎಂಬ ಬೇಗುದಿಯು ಮನಸ್ಸಿನಲ್ಲಿದೆ. ಅಂಗಾರರು 6 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ ಬಳಿವು ಈಗಲೂ ಅಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಸೇತುವೆ, ವಿದ್ಯುತ್, ಮೊಬೈಲ್ ನೆಟ್ ವರ್ಕ್, ಸಾರಿಗೆ ಹಾಗೂ ಗುಣಮಟ್ಟದ ಆಸ್ಫತ್ರೆಯ ಕೊರತೆಯಿದೆ. ಇದು ಕ್ಷೇತ್ರದ ಜನತೆಯನ್ನು ಕಾಡುತ್ತಿದ್ದು ಬದಲಾವಣೆಯ ಕೂಗು ಎದ್ದಿದೆ
ಕಲ್ಲಡ್ಕ ಮಧ್ಯಸ್ಥಿಕೆಯಲ್ಲಿ ನಿರ್ಧಾರ
ಕಳೆದ ಬಾರಿ ನಡೆದ ಎಸ್ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಸುಳ್ಯದಲ್ಲಿ ಸಹಕಾರ ಭಾರತಿಯ ಬಳಿ ಚುನಾವಣೆ ಗೆಲ್ಲಲು ಬೇಕಾದಷ್ಟು ಮತಗಳಿದ್ದರೂ, ಅಡ್ಡ ಮತದಾನ ನಡೆದು ಅದರ ಅಭ್ಯರ್ಥಿ ಸೋಲು ಅನುಭವಿಸಿ ರಾಜೇಂದ್ರ ಕುಮಾರ್ ಬಣದ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದರು. ಸಹಕಾರಿ ಭಾರತಿಯು ಬಿಜೆಪಿಯದೇ ಅಂಗವಾಗಿದ್ದು, ಅಡ್ಡಮತದಾನದಂತಹ ಅಶಿಸ್ತು ನಡೆದರೂ, ಬಿಜೆಪಿ ತಪ್ಪಿತಸ್ಥರ ವಿರುದ್ದ ಶಿಸ್ತು ಕ್ರಮ ಕೈಗೊಂಡಿಲ್ಲ ಎಂದು ಒಂದು ಬಣ ಪಕ್ಷದ ವಿರುದ್ದ ತಿರುಗಿ ಬಿದ್ದಿತ್ತು. ಅಶಿಸ್ತು ತೋರಿದವರ ವಿರುದ್ದ ಸುಳ್ಯ ಬಿಜೆಪಿ ಕಠಿಣ ಕ್ರಮ ಕೈಗೊಂಡಿಲ್ಲ, ಅಂಗಾರರು ನಿರ್ಲಕ್ಷ್ಯ ವಹಿಸಿದ್ದಾರೆಂದು, ಹೀಗಾಗಿ ಅವರಿಗೆ ಮುಂದಿನ ಬಾರಿ ಎಂಎಲ್ ಎ ಟಿಕೆಟ್ ನೀಡಬಾರದೆಂದು ಈ ಬಣ ಆಗ್ರಹಿಸಿತ್ತು. ಇದಕ್ಕೂ ಪಕ್ಷ ಸೊಪ್ಪು ಹಾಕದಿದ್ದಾಗ, ಬಳಿಕ ನಡೆದ ಗ್ರಾ. ಪಂ ಚುನಾವಣೆಯಲ್ಲಿ ಪಕ್ಷದಿಂದ ಸಿಡಿದು ಪ್ರತ್ಯೇಕವಾಗಿ ಸ್ಪರ್ಧಿಸಿ ಹಲವೆಡೆ ವಿಜಯಿಯಾಗಿ ಒಂದೆರಡು ಪಂಚಾಯತಿನಲ್ಲಿ ಅಧಿಕಾರ ಕೂಡ ಪಡೆದಿತ್ತು.
ಬಣ ರಾಜಕೀಯ ಅಂತ್ಯ
ಒಂದು ಕಾಲದಲ್ಲಿ ಪಕ್ಷದ ಶಿಸ್ತಿಗೆ, ಸಂಘಟನೆಗೆ ಹೆಸರುವಾಸಿಯಾಗಿದ್ದ ಸುಳ್ಯದಲ್ಲಿ ಈ ಬಾರಿ ಬಣ ರಾಜಕೀಯ ವಿಪರೀತವಾಗಿ. ಪಕ್ಷದ ವರ್ಚಸ್ಸಿಗೆ ಡ್ಯಾಮೇಜ್ ಆಗುತ್ತಿರುವುದನ್ನು ಮನಗಂಡು, ಗೊಂದಲ ಪರಿಹರಿಸಲು ಮಧ್ಯಸ್ಥಿಕೆ ನಡೆಸಿದ ಕಲ್ಲಡ್ಕ ಪ್ರಭಾಕರ ಭಟ್, ಎರಡು ಬಣಗಳ ನಡುವಿನ ಮನಸ್ತಾಪ ಉಪಶಮನಗೊಳಿಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ. ಈ ವೇಳೆ ಅವರು ಒಂದು ಬಣದ ಆಪೇಕ್ಷೆಯಂತೆ, ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಬದಲಿಸುವ ಭರವಸೆ ನೀಡಿದ್ದು ಇದಕ್ಕೆ ರಾಜ್ಯ ಬಿಜೆಪಿ ಹೈಕಮಾಂಡ್ ಕೂಡ ಒಪ್ಪಿಗೆ ಸೂಚಿಸಿತ್ತು ಎಂದು ಹೇಳಲಾಗುತ್ತಿದೆ. ಈ ಒಪ್ಪಂದದೊಂದಿಗೆ ಸುಳ್ಯದಲ್ಲಿ ಬಣ ರಾಜಕೀಯಕ್ಕೆ ಅಂತ್ಯ ಹಾಡಲಾಗಿತ್ತು ಎನ್ನಲಾಗುತ್ತಿದೆ. ಅದರಂತೆ ಈಗ ಅಂಗಾರರನ್ನು ಬದಲಿಸಿ ತನ್ನ ಖಾಸ ಶಿಷ್ಯನನ್ನು ಅಭ್ಯರ್ಥಿಯಾಗಿಸಲು ಭಟ್ ಮುಂದಾಗಿದ್ದು, ಇದಕ್ಕೆ ರಾಜ್ಯಾಧ್ಯಕ್ಷ ಕಟೀಲು ಕೂಡ ಸಮ್ಮತಿಸಿದ್ದರೆಂದು ಮೂಲಗಳಿಂದ ತಿಳಿದು ಬಂದಿದೆ. ಅಭ್ಯರ್ಥಿ ಬದಲಿಸದಿದ್ದರೇ ವಿರೋಧಿ ಬಣದವರು ಗ್ರಾ. ಪಂ ಚುನಾವಣೆ ಮಾದರಿಯಲ್ಲಿ ಪಕ್ಷೇತರ ಅಭ್ಯರ್ಥಿ ಇಳಿಸುವ ಎಚ್ಚರಿಕೆಯನ್ನು ರವಾನಿಸಿದ್ದರು.
ಒಂದೆಡೆ ಸಹಜವಾಗಿ ಇರುವ 6 ಅವಧಿಯ ಅಡಳಿತ ವಿರೋಧಿ ಆಲೆ, ಇನ್ನೊಂದೆಡೆ ಹೊಸ ಅಭ್ಯರ್ಥಿಗೆ ಅವಕಾಶ ನೀಡಿ ಎಂಬ ಕೂಗು, ಮತ್ತೂಂದೆಡೆ ಪಕ್ಷದೊಳಗಿನ ಆತಂರಿಕ ಭಿನ್ನಮತ ಈ ಬಾರಿ ಅಂಗಾರರಿಂದ ಕೈ ಯಿಂದ ಟಿಕೆಟ್ ತಪ್ಪಿಸುವ ಸಾಧ್ಯತೆಯೆ ಅಧಿಕ ಎನ್ನುವುದು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿರುವ ಮಾತು. ಕಳೆದ ಬಾರಿಯೇ ಅಭ್ಯರ್ಥಿ ಬದಲಿಸುವ ಬಗ್ಗೆ ಚಿಂತನೆ ನಡೆಸಲಾಗಿತ್ತಾದರೂ , ಅಂಗಾರರನ್ನು ಸಚಿವರನ್ನಾಗಿಸುವ ಮೂಲಕ ಪಕ್ಷದ ವಿಧೇಯ ನಾಯಕನಿಗೆ ಗೌರವಯುತ ವಿದಾಯ ನೀಡಲು ಪಕ್ಷ ಹೈಕಮಾಂಡ್ ನಿರ್ಧರಿಸಿದ್ದರಿಂದ ಕೊನೆ ಕ್ಷಣದಲ್ಲಿ ಟಿಕೆಟ್ ಲಭಿಸಿತ್ತು ಎನ್ನುವುದು ರಾಜಕೀಯ ಪಂಡಿತರ ಅಂಬೋಣ.
ಹೊಸ ಅಭ್ಯರ್ಥಿ – ಅಮ್ಟೂರು ಬಹುತೇಕ ನಿಶ್ಚಿತ

ಹೀಗಾಗಿ ಅಂಗಾರರ ಬದಲು ಬಂಟ್ವಾಳ ತಾ.ಪಂ ಮಾಜಿ ಉಪಾಧ್ಯಕ್ಷ, ಬಿಜೆಪಿ ಎಸ್ ಸಿ ಮೋರ್ಚಾದ ಜಿಲ್ಲಾ ಮುಖಂಡ ದಿನೇಶ್ ಅಮ್ಟೂರು ಅವರನ್ನು ಸುಳ್ಯದಿಂದ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದ್ದು, ಅಂಗಾರರಿಗೆ ಟಿಕೆಟ್ ಕೈ ತಪ್ಪಿದರೆ ಇವರಿಗೆ ಟಿಕೆಟ್ ಪಕ್ಕಾ ಪಕ್ಷದ ಮೂಲಗಳು ತಿಳಿಸಿವೆ. ಇವರು ಕಲ್ಲಡ್ಕ ಡಾ| ಪ್ರಭಾಕರ ಭಟ್ ಅವರ ಶಿಷ್ಯನಾಗಿದ್ದು, ಜಿಲ್ಲಾ ಮಟ್ಟದಲ್ಲಿ ಪಕ್ಷದ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಹುದ್ದೆಯನ್ನು ಅವರು ಅಲಂಕರಿಸಿದ್ದರು.
ಕಡು ಬಡತನ ಮಧ್ಯೆಯೂ 9 ನೇ ತರಗತಿಯವರೆಗೆ ವ್ಯಾಸಂಗ ಮಾಡಿರುವ ಅವರು, ಹಿಂದೂ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಹಿಂದೂ ಸೇವಾ ಪ್ರತಿಷ್ಠಾನ ಸಂಚಾಲಕರಾಗಿದ್ದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಟ್ಟಾಳು. ಪ್ರಸ್ತುತ ಎಸ್ಸಿ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ, ಮಂಗಳೂರು ಉಡುಪಿ ಹಾಸನದ ಬಿಜೆಪಿ ಸಹ ಪ್ರಭಾರಿಯಾಗಿ, ಯುವಜನ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಉಳಿದ ಟಿಕೆಟ್ ಆಕಾಂಕ್ಷಿಗಳು
ಜಿ.ಪಂ ಸದಸ್ಯೆಯಾಗಿದ್ದ ಭಾಗೀರಥಿ ಮುರುಳ್ಯ, ಮಾಜಿ ತಾ. ಪಂ ಸದಸ್ಯರಾದ, ಚನಿಯ ಕಲ್ತಡ್ಕ ಹಾಗೂ ಮಂಡೆಕೋಲಿನ ಶಂಕರ ಪೆರಾಜೆ ಅವರ ಅಕಾಂಕ್ಷಿಗಳಾಗಿ ಪಕ್ಷದಲ್ಲಿ ಚಾಲ್ತಿಯಲ್ಲಿದೆ. ಹೊಸ ಮುಖಗಳಿಗೆ ಅದ್ಯತೆ ನೀಡಿದರೆ. ಸಂಘದ ಸಕ್ರಿಯ ಕಾರ್ಯಕರ್ತ 31 ರ ಹರೆಯದ ಎಂ.ಕಾಂ ಪದವೀಧರ ಶಿವ ಪ್ರಸಾದ್ ಪೆರುವಾಜೆ ಅವರ ಹೆಸರನ್ನು ಪರಿಗಣಿಸಬಹುದು ಎಂದು ಹೇಳಲಾಗುತ್ತಿದೆ
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
ದಕ್ಷಿಣ ಕನ್ನಡ16 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
Uncategorized22 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ಸಿನೆಮಾ22 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ23 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ15 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಅಪರಾಧ22 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್21 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು22 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















