Connect with us

ಮಂಗಳೂರು

ಮಂಗಳೂರು : ಮಸಾಜ್‌ ಪಾರ್ಲರ್‌ ಇಟ್ಟುಕೊಂಡಿದ್ದ ನಟಿಯ ತಾಯಿಗೆ ಪೊಲೀಸ್‌ ಸೋಗಿನಲ್ಲಿ ಮೋಸ – ವೇಶ್ಯಾವಾಟಿಕೆ ನಡೆಸುವುದಾಗಿ ಆರೋಪಿಸಿ ದುಡ್ಡು ವಸೂಲು

Published

on

Ad Widget

Ad Widget

Ad Widget

Ad Widget

massage parlour ಮಂಗಳೂರು: ನಟಿಯೋರ್ವಳ ತಾಯಿ ಬಳಿಯಿಂದ ಪೊಲೀಸ್‌ ಸೋಗಿನಲ್ಲಿ ಬಂದ ವ್ಯಕ್ತಿಯೊರ್ವ  ಸಾವಿರಾರು ರೂಪಾಯಿ  ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪಾಂಡೇಶ್ವರ ಮಹಿಳಾ  ಠಾಣೆಯ ಪೊಲೀಸ್‌ ಎಂದು ಪರಿಚಯಿಸಿಕೊಂಡ ನಕಲಿ ಪೊಲೀಸ್‌ ಈ ಕತ್ಯ ಎಸಗಿದ್ದಾನೆ. ನಟಿಯ ತಾಯಿಯ ಬಳಿಯಿಂದ ಒಟ್ಟು 38 ಸಾವಿರ ರೂಪಾಯಿ ಈ ಖದೀಮ ವಸೂಲಿ ಮಾಡಿದ್ದ.

Ad Widget

Ad Widget

Ad Widget

Ad Widget

 ಮಸಾಜ್‌ ಪಾರ್ಲರ್‌ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಅದನ್ನು ಮುಚ್ಚಿದ್ದರು. ಅವರ ಮನೆಗೆ ಪೊಲೀಸ್‌ ಸಮವಸ್ತ್ರದ ವೇಷದಲ್ಲಿ ಬಂದ ವ್ಯಕ್ತಿ ತಾನು ಪಾಂಡೇಶ್ವರ ಠಾಣೆಯ ಪೊಲೀಸ್‌ ಎಂದು ಪರಿಚಯಿಸಿಕೊಂಡಿದ್ದಾನೆ.  “ನೀವು ವೇಶ್ಯಾವಾಟಿಕೆ ನಡೆಸುತ್ತಿದ್ದೀರಿ. ದಂಧೆ ನಡೆಸುತ್ತಿರುವುದು ಸಾಹೇಬರಿಗೆ ಗೊತ್ತಾಗಿದೆ. ಸಾಹೇಬರ ಜತೆ ಸಹಕರಿಸಿದರೆ ದಂಧೆಗೆ ತೊಂದರೆ ಆಗುವುದಿಲ್ಲ. ಗೂಗಲ್‌ ಪೇ ಮಾಡಿದರೆ ರೈಡ್‌ ಮಾಡುವುದಿಲ್ಲ” ಎಂದು ಬೆದರಿಕೆ ಹಾಕಿ ಹೋಗಿದ್ದ.

Ad Widget

Ad Widget alt="Ad Widget"/>

Ad Widget

ಇದರಿಂದ ಹೆದರಿದ ಮಹಿಳೆ ಹತ್ತಿರದ ಮೊಬೈಲ್‌ ಶಾಪ್‌​ಗೆ ಹೋಗಿ ಗೂಗಲ್‌ ಪೇ ಮೂಲಕ 18 ಸಾವಿರ ರೂ. ವರ್ಗಾಯಿಸಿದ್ದಾರೆ.ಮತ್ತೆ ಕರೆ ಮಾಡಿದ ಅದೇ ವ್ಯಕ್ತಿ, ಫೈಲ್‌ ಪೊಲೀಸ್‌ ಆಯುಕ್ತರ ಕಚೇರಿಗೂ ಹೋಗಿದೆ, ಪ್ರಕರಣವನ್ನು ಮುಚ್ಚಿ ಹಾಕಲು ಹಣ ನೀಡಬೇಕು. ಇಲ್ಲವಾದರೆ ಆಯುಕ್ತರು ಮಾಧ್ಯಮದವರೊಂದಿಗೆ ಮನೆಗೆ ಬರುತ್ತಾರೆ ಎಂದು ಬೆದರಿಕೆ ಹಾಕಿದ್ದಾನೆ.

Ad Widget

Ad Widget <> Ad Widget

ಹೆದರಿಕೊಂಡ ಮಹಿಳೆ ಮೊಬೈಲ್‌ ಶಾಪ್‌​ಗೆ ಹೋಗಿ 20 ಸಾವಿರ ರೂ.ಗಳನ್ನು ಗೂಗಲ್‌ ಪೇ ಮಾಡಿದ್ದಾರೆ. ಹೀಗೆ ಒಟ್ಟು 38 ಸಾವಿರ ರೂ. ಹಣವನ್ನು ನಕಲಿ ಪೊಲೀಸ್‌ ನೀಡಿದ ಸಂಖ್ಯೆಗೆ ವರ್ಗಾಯಿಸಿದ್ದಾರೆ ಎಂದು ತಿಳಿದುಬಂದಿದೆ

ಮಂಗಳೂರು: ನಟಿಯೋರ್ವಳ ತಾಯಿ ಬಳಿಯಿಂದ ಪೊಲೀಸ್‌ ಸೋಗಿನಲ್ಲಿ ಬಂದ ವ್ಯಕ್ತಿಯೊರ್ವ  ಸಾವಿರಾರು ರೂಪಾಯಿ  ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪಾಂಡೇಶ್ವರ ಮಹಿಳಾ  ಠಾಣೆಯ ಪೊಲೀಸ್‌ ಎಂದು ಪರಿಚಯಿಸಿಕೊಂಡ ನಕಲಿ ಪೊಲೀಸ್‌ ಈ ಕತ್ಯ ಎಸಗಿದ್ದಾನೆ. ನಟಿಯ ತಾಯಿಯ ಬಳಿಯಿಂದ ಒಟ್ಟು 38 ಸಾವಿರ ರೂಪಾಯಿ ಈ ಖದೀಮ ವಸೂಲಿ ಮಾಡಿದ್ದ.

Ad Widget

Ad Widget

 ಮಸಾಜ್‌ ಪಾರ್ಲರ್‌ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಅದನ್ನು ಮುಚ್ಚಿದ್ದರು. ಅವರ ಮನೆಗೆ ಪೊಲೀಸ್‌ ಸಮವಸ್ತ್ರದ ವೇಷದಲ್ಲಿ ಬಂದ ವ್ಯಕ್ತಿ ತಾನು ಪಾಂಡೇಶ್ವರ ಠಾಣೆಯ ಪೊಲೀಸ್‌ ಎಂದು ಪರಿಚಯಿಸಿಕೊಂಡಿದ್ದಾನೆ.  “ನೀವು ವೇಶ್ಯಾವಾಟಿಕೆ ನಡೆಸುತ್ತಿದ್ದೀರಿ. ದಂಧೆ ನಡೆಸುತ್ತಿರುವುದು ಸಾಹೇಬರಿಗೆ ಗೊತ್ತಾಗಿದೆ. ಸಾಹೇಬರ ಜತೆ ಸಹಕರಿಸಿದರೆ ದಂಧೆಗೆ ತೊಂದರೆ ಆಗುವುದಿಲ್ಲ. ಗೂಗಲ್‌ ಪೇ ಮಾಡಿದರೆ ರೈಡ್‌ ಮಾಡುವುದಿಲ್ಲ” ಎಂದು ಬೆದರಿಕೆ ಹಾಕಿ ಹೋಗಿದ್ದ.

ಇದರಿಂದ ಹೆದರಿದ ಮಹಿಳೆ ಹತ್ತಿರದ ಮೊಬೈಲ್‌ ಶಾಪ್‌​ಗೆ ಹೋಗಿ ಗೂಗಲ್‌ ಪೇ ಮೂಲಕ 18 ಸಾವಿರ ರೂ. ವರ್ಗಾಯಿಸಿದ್ದಾರೆ.ಮತ್ತೆ ಕರೆ ಮಾಡಿದ ಅದೇ ವ್ಯಕ್ತಿ, ಫೈಲ್‌ ಪೊಲೀಸ್‌ ಆಯುಕ್ತರ ಕಚೇರಿಗೂ ಹೋಗಿದೆ, ಪ್ರಕರಣವನ್ನು ಮುಚ್ಚಿ ಹಾಕಲು ಹಣ ನೀಡಬೇಕು. ಇಲ್ಲವಾದರೆ ಆಯುಕ್ತರು ಮಾಧ್ಯಮದವರೊಂದಿಗೆ ಮನೆಗೆ ಬರುತ್ತಾರೆ ಎಂದು ಬೆದರಿಕೆ ಹಾಕಿದ್ದಾನೆ.

ಹೆದರಿಕೊಂಡ ಮಹಿಳೆ ಮೊಬೈಲ್‌ ಶಾಪ್‌​ಗೆ ಹೋಗಿ 20 ಸಾವಿರ ರೂ.ಗಳನ್ನು ಗೂಗಲ್‌ ಪೇ ಮಾಡಿದ್ದಾರೆ. ಹೀಗೆ ಒಟ್ಟು 38 ಸಾವಿರ ರೂ. ಹಣವನ್ನು ನಕಲಿ ಪೊಲೀಸ್‌ ನೀಡಿದ ಸಂಖ್ಯೆಗೆ ವರ್ಗಾಯಿಸಿದ್ದಾರೆ ಎಂದು ತಿಳಿದುಬಂದಿದೆ.

Ad Widget
Click to comment

Leave a Reply

ಅಪರಾಧ

Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್‌ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.

Ad Widget

Ad Widget <> Ad Widget

ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.

ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಕದ್ರಿ ಪೊಲೀಸ್ ಠಾಣೆಯ ಎದುರಿನಲ್ಲೇ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ, ವಿಡಿಯೋದಲ್ಲಿರುವ ಯುವಕರನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ವಲಯದಿಂದ ಆಗ್ರಹ ವ್ಯಕ್ತವಾಗಿದೆ.

Ad Widget
Continue Reading

ಶಿಕ್ಷಣ

Sahyadri-ಸಹ್ಯಾದ್ರಿಯಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ಪ್ರಾದೇಶಿಕ ತರಬೇತಿ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget

ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್‌ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

Ad Widget

Ad Widget alt="Ad Widget"/>

Ad Widget

ವಿಟಿಯು ಕನ್ಸೋರ್ಟಿಯಂ ಮೂಲಕ ಲಭ್ಯವಿರುವ ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸಲು ಮತ್ತು ಜಾಗೃತಿಯನ್ನು ಹೆಚ್ಚಿಸಲು ಕರ್ನಾಟಕದಾದ್ಯಂತ ಎಂಜಿನಿಯರಿಂಗ್ ಸಂಸ್ಥೆಗಳ ಗ್ರಂಥಪಾಲಕರು, ಅಧ್ಯಾಪಕರು ಮತ್ತು ಶೈಕ್ಷಣಿಕ ವೃತ್ತಿಪರರನ್ನು ಪ್ರಾದೇಶಿಕ ಮಟ್ಟದ ಕಾರ್ಯಕ್ರಮವು ಒಟ್ಟುಗೂಡಿಸಿತು.

Ad Widget

Ad Widget <> Ad Widget

ಉದ್ಘಾಟನಾ ಸಮಾರಂಭವು ಪ್ರಥಮ ವರ್ಷದ ವಿದ್ಯಾರ್ಥಿನಿಯರಾದ ಕುಮಾರಿ ಪೂರ್ವಿ ಶೆಟ್ಟಿ ಪಿ. ಜಿ. ಮತ್ತು ಕುಮಾರಿ ಗೌತಮಿ ಆರ್. ಅವರು ನಡೆಸಿಕೊಟ್ಟ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು.

ನಂತರ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್‌ಸಿಇಎಂ (SCEM) ನ ಸಹಾಯಕ ಗ್ರಂಥಪಾಲಕರಾದ ಡಾ. ಶ್ವೇತಾ ಕುಮಾರಿ ಕೆ. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮಂಗಳೂರಿನ ವಿಟಿಯು (VTU) ವಿಸ್ತರಣಾ ಕೇಂದ್ರದ ವಿಶೇಷ ಅಧಿಕಾರಿ ಡಾ. ದಾಮೋದರ ನಾರಲ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.

Ad Widget

Ad Widget

ಎಸ್‌ಸಿಇಎಂನ ಸಹ ಪ್ರಾಧ್ಯಾಪಕರಾದ ಡಾ. ಚಂದನಾ ಬಿ. ಆರ್. ಅವರು ಮುಖ್ಯ ಅತಿಥಿಗಳಾದ ಎನ್‌ಐಟಿಕೆ (NITK) ಸುರತ್ಕಲ್‌ನ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರನ್ನು ಪರಿಚಯಿಸಿದರು; ಬಳಿಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್‌ಸಿಇಎಂನ ಆಡಳಿತಾಧಿಕಾರಿ ಹಾಗೂ ಟ್ರಸ್ಟಿ ಶ್ರೀ ಕೃಷ್ಣ ಹೆಗಡೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಗ್ರಂಥಪಾಲಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ. ಭಾರತಿ ಕೆ. ಅವರು ವಂದನಾರ್ಪಣೆ ಸಲ್ಲಿಸಿದರು. ತಾಂತ್ರಿಕ ಅವಧಿಗಳಲ್ಲಿ IEEE, PAT ಟೆಕ್ನಾಲಜಿ, GATEtutor, ProQuest, Elsevier ScienceDirect, Taylor & Francis, Emerald Publishing, Cambridge University Press, Pearson, DrillBit ಮತ್ತು Quiklrn ಸೇರಿದಂತೆ ಪ್ರಮುಖ ಶೈಕ್ಷಣಿಕ ಪ್ರಕಾಶಕರು ಮತ್ತು ಡಿಜಿಟಲ್ ಸಂಪನ್ಮೂಲ ಪೂರೈಕೆದಾರರ ಪ್ರತಿನಿಧಿಗಳಿಂದ ಪ್ರಸ್ತುತಿಗಳು ಮತ್ತು ಪ್ರದರ್ಶನಗಳು ನಡೆದವು. ಅವಧಿಗಳಲ್ಲಿ ಎಲ್ಸೆವಿಯರ್ ಅವರ ಸ್ಕೋಪಸ್ ಡೇಟಾಬೇಸ್ ಕುರಿತು ಪ್ರಸ್ತುತಿ ಮತ್ತು MAP ಸಿಸ್ಟಮ್ಸ್ ಅವರ MAP My Access System ನ ಅವಲೋಕನವೂ ಸೇರಿತ್ತು.

ಸಂಪನ್ಮೂಲ ವ್ಯಕ್ತಿಗಳು ವಿದ್ವತ್ಪೂರ್ಣ ಜರ್ನಲ್‌ಗಳು, ಇ-ಪುಸ್ತಕಗಳು, ಸಂಶೋಧನಾ ಡೇಟಾಬೇಸ್‌ಗಳು, ಪರೀಕ್ಷಾ ತಯಾರಿ ಸಂಪನ್ಮೂಲಗಳು, ಕೃತಿಚೌರ್ಯ ಪತ್ತೆ ಪರಿಕರಗಳು ಮತ್ತು ಡಿಜಿಟಲ್ ಕಲಿಕಾ ವೇದಿಕೆಗಳನ್ನು ಪ್ರವೇಶಿಸುವ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿದರು. ಬೋಧನೆ, ಕಲಿಕೆ ಮತ್ತು ಸಂಶೋಧನೆಯಲ್ಲಿ ಈ ಸಂಪನ್ಮೂಲಗಳ ವೈಶಿಷ್ಟ್ಯಗಳು, ಹುಡುಕಾಟ ಸೌಲಭ್ಯಗಳು ಮತ್ತು ಪ್ರಾಯೋಗಿಕ ಅನ್ವಯಿಕೆಗಳನ್ನು ಅರ್ಥಮಾಡಿಕೊಳ್ಳಲು ಭಾಗವಹಿಸುವವರಿಗೆ ಸಂವಾದಾತ್ಮಕ ಅವಧಿಗಳು ಸಹಾಯ ಮಾಡಿದವು.

ಈ ಕಾರ್ಯಕ್ರಮದಲ್ಲಿ ವಿವಿಧ ಎಂಜಿನಿಯರಿಂಗ್ ಸಂಸ್ಥೆಗಳನ್ನು ಪ್ರತಿನಿಧಿಸುವ ಗ್ರಂಥಪಾಲಕರು ಮತ್ತು ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿದ್ದರು. ಇದು ಜ್ಞಾನ ಹಂಚಿಕೆ, ವೃತ್ತಿಪರ ಸಂವಹನ ಮತ್ತು ಡಿಜಿಟಲ್ ಸಂಪನ್ಮೂಲಗಳೊಂದಿಗೆ ಶೈಕ್ಷಣಿಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಿತು.

ಈ ವಿಟಿಯು ಒಕ್ಕೂಟದ ಪ್ರಾದೇಶಿಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಸಹ್ಯಾದ್ರಿ ಕಾಲೇಜು ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸುವುದು, ಸಂಶೋಧನಾ ಸಾಮರ್ಥ್ಯಗಳನ್ನು ಬಲಪಡಿಸುವುದು ಮತ್ತು ಶೈಕ್ಷಣಿಕ ಇ-ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ
ಗುಣಮಟ್ಟದ ಉನ್ನತ ಶಿಕ್ಷಣವನ್ನು ಬೆಂಬಲಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು.
ಈ ಕಾರ್ಯಕ್ರಮವನ್ನು ಸಹ್ಯಾದ್ರಿ ಕಾಲೇಜಿನ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಡಾ. ಭಾರತಿ ಕೆ. ಸಂಯೋಜಿಸಿದರು.

Ad Widget
Continue Reading

ಮಂಗಳೂರು

Girish Mattannavar-ಸೌಜನ್ಯ ಪ್ರಕರಣ: ಎಸ್‌ಐಟಿಗೆ ದಾಖಲೆಗಳ ʼಬ್ಯಾಗ್‌ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!

Published

on

Ad Widget

Ad Widget

Ad Widget

Ad Widget

ಎಸ್‌ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಬ್ಯಾಗ್ ತುಂಬಾ ಕಡತಗಳು ಹಾಗೂ ವಿವಿಧ ಪತ್ರಿಕಾ ವರದಿಗಳನ್ನು ಹೊತ್ತು ಮಂಗಳೂರಿನ ಎಸ್‌ಐಟಿ ಕಚೇರಿಗೆ ಬಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು, ಮಾಹಿತಿ ಹಾಗೂ ಪತ್ರಿಕಾ ವರದಿಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಎಸ್‌ಐಟಿ ಕಚೇರಿಗೆ ದಾಖಲೆಗಳ ಸಮೇತ ಆಗಮಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಎಸ್‌ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಬ್ಯಾಗ್ ತುಂಬಾ ಕಡತಗಳು ಹಾಗೂ ವಿವಿಧ ಪತ್ರಿಕಾ ವರದಿಗಳನ್ನು ಹೊತ್ತು ಕಚೇರಿಗೆ ಬಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು, ಮಾಹಿತಿ ಹಾಗೂ ಪತ್ರಿಕಾ ವರದಿಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.

Ad Widget

Ad Widget <> Ad Widget

ಇದೇ ವೇಳೆ, ಪ್ರಕರಣದ ಮತ್ತೊಬ್ಬ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೂ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಗಿರೀಶ್ ಮಟ್ಟಣ್ಣನವರ್, ನಿರಂತರ ಹೋರಾಟದ ಫಲವಾಗಿ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. 14 ವರ್ಷಗಳ ಬಳಿಕ ಇದೀಗ ಪ್ರಕರಣದ ತನಿಖೆಯನ್ನು ಎಳೆಎಳೆಯಾಗಿ ನಡೆಸಲಾಗುತ್ತಿದೆ. 14 ವರ್ಷಗಳ ಹಿಂದೆಯೇ ಈ ರೀತಿಯ ತನಿಖೆ ನಡೆದಿದ್ದರೆ, ಇಂದು ಇಷ್ಟು ದೊಡ್ಡ ಹೋರಾಟ ಮಾಡುವ ಅಗತ್ಯವೇ ಇರಲಿಲ್ಲ ಎಂದು ಹೇಳಿದರು.

Ad Widget

Ad Widget

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಆರ್. ಅಶೋಕ್ ಅವರು ರಾಜೀನಾಮೆ ನೀಡಬೇಕು ಹಾಗೂ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿದ ಮಟ್ಟಣ್ಣನವರ್, ಸಿಬಿಐ ತನಿಖೆಗೆ ಆದೇಶ ನೀಡಿದ್ದೇವೆ ಎಂದು ಹೇಳುವವರು, ತನಿಖೆಯ ಪ್ರಕ್ರಿಯೆ ವಿಳಂಬವಾಗಿರುವ ಬಗ್ಗೆ ಉತ್ತರಿಸಬೇಕು ಎಂದರು.

ಸಿಬಿಐ ತನಿಖೆಗೆ ಆದೇಶ ನೀಡಿದ್ದು 2013ರ ನವೆಂಬರ್ 6ರಂದು, ಆದರೆ ಎಫ್‌ಐಆರ್ ದಾಖಲಾಗಿದ್ದು 2014ರ ಮಾರ್ಚ್ 6ರಂದು. ಆದೇಶವಾದ ನಾಲ್ಕು ತಿಂಗಳ ಬಳಿಕ ಎಫ್‌ಐಆರ್ ದಾಖಲಿಸಲಾಗಿದೆ. ರಾಜಕೀಯ ಹಸ್ತಕ್ಷೇಪದಿಂದಲೇ ಇಷ್ಟು ವರ್ಷ ತನಿಖೆ ಮುಂದುವರಿದಿದೆ ಎಂಬ ಆರೋಪಕ್ಕೆ ಆರ್. ಅಶೋಕ್ ಅವರು ಪ್ರತಿಕ್ರಿಯೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಎಸ್‌ಐಟಿ ತನಿಖೆ ಕುರಿತು ಮಾತನಾಡಿದ ಅವರು, ತನಿಖಾಧಿಕಾರಿಗಳು ಉತ್ತಮ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಹೈವಿಟ್‌ನೆಸ್‌ ಆಗಿರುವ ಎಂಟು ಮಂದಿಯನ್ನು ತನಿಖೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ನಮಗೆ ತಿಳಿದಿರುವ ಎಲ್ಲಾ ಮಾಹಿತಿ ಹಾಗೂ ದಾಖಲೆಗಳನ್ನು ಎಸ್‌ಐಟಿಗೆ ಒದಗಿಸಿದ್ದೇವೆ ಎಂದು ತಿಳಿಸಿದರು.

ಸೌಜನ್ಯ ಅವರ ತಾಯಿ ಕುಸುಮಾವತಿ ಸೇರಿದಂತೆ ಪ್ರಕರಣದ ಹೋರಾಟಗಾರರು ಎಸ್‌ಐಟಿ ತನಿಖೆಗೆ ಸಮಯಮಿತಿಯ ಒತ್ತಡ ಹೇರುವುದಿಲ್ಲ. ತನಿಖೆಗೆ ಅಗತ್ಯವಿರುವಷ್ಟು ಸಮಯವನ್ನು ಅಧಿಕಾರಿಗಳು ತೆಗೆದುಕೊಳ್ಳಲಿ. 14 ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿದ್ದೇವೆ. ತನಿಖೆ ಸರಿಯಾಗಿ ನಡೆದರೆ ಸಾಕು ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!