ಮಂಗಳೂರು
ಬಿಜೆಪಿ-ಕಾಂಗ್ರೇಸ್ ಎರಡೂ ಪಕ್ಷಗಳು ಮುಸ್ಲಿಂರ ಕುರಿತು ಅಹಂಕಾರ ಭಾವ ಹೊಂದಿದೆ – ಈ ಎರಡು ನಿಲುವಿಗೆ ವಿರುದ್ದವಾಗಿ ಕೆಲಸ ಮಾಡಿದ್ದೇನೆ : ಚರ್ಚೆಗೆ ಕಾರಣವಾದ ಮುಸ್ಲಿಂರ ಸಭೆಯಲ್ಲಿ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ನೀಡಿದ ಅಚ್ಚರಿಯ ಹೇಳಿಕೆ
ಮೂಡಬಿದಿರೆ ಶಾಸಕ, ಬಿಜೆಪಿ ಮುಖಂಡ ಉಮಾನಾಥ ಕೋಟ್ಯಾನ್ ರವರು ಮುಸ್ಲಿಂ ಸಮುದಾಯ ಆಯೋಜಿಸಿದ ಸಮಾರಂಭದಲ್ಲಿ ಮಾತನಾಡಿದ ವಿಡಿಯೋವೊಂದು, ಕಾರ್ಯಕ್ರಮ ನಡೆದ ಹಲವು ದಿನಗಳ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆ ಭಾಷಣದಲ್ಲಿ ಅವರು ದೇಶದ ಎರಡು ರಾಜಕೀಯ ಪಕ್ಷಗಳು ಮುಸ್ಲಿಂ ಮತದಾರರನ್ನು ನೋಡುವ ದೃಷ್ಟಿಕೋನವನ್ನು ವಿಶ್ಲೇಷಿಸಿದ್ದು, ಇದು ಸ್ವಪಕ್ಷ ಹಾಗೂ ವಿಪಕ್ಷಗಳಲ್ಲಿ ಅಚ್ಚರಿಗೆ ಕಾರಣವಾಗಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ.
ಮುಸಲ್ಮಾನರು ಮತ್ತು ಕ್ರೈಸ್ತರು ನಮಗೆ ವೋಟ್ ನೀಡದೇ ಇನ್ಯಾರಿಗೆ ನೀಡ್ತಾರೆ? ಅನ್ನೋ ಅಹಂಕಾರ ಕಾಂಗ್ರೆಸ್ ಪಕ್ಷ ಹೊಂದಿದೆ. ಆ ಪಕ್ಷವು ಅಲ್ಪಸಂಖ್ಯಾತರನ್ನು ಕೂಲಿಯಾಳುಗಳಂತೆ ನೋಡುತ್ತಿದೆ ಎಂದ ಅವರು, ನಮ್ಮವರಿಗೆ (ಬಿಜೆಪಿ ಪಕ್ಷದವರಿಗೆ) ನಮಗೆ ವೋಟ್ ನೀಡದ ಮುಸ್ಲಿಂರ ಕೆಲಸ ಯಾಕೆ ಮಾಡಬೇಕು ಅನ್ನೋ ಅಹಂಕಾರವಿದೆ. ಹೀಗೆ ಎರಡೂ ಪಕ್ಷಗಳು ಕ್ರೈಸ್ತರು ಹಾಗೂ ಮುಸಲ್ಮಾನರ ಕುರಿತು ಅಹಂಕಾರ ಭಾವ ಹೊಂದಿದೆ. ಈ ಎರಡು ಭಾವನೆಗಳನ್ನು ವಿರೋಧಿಸಿ ನಾನು ಕೆಲಸ ಮಾಡಿದ್ದೇನೆ. ಎಂದರು.
“ನೀವು ಯಾವುದೇ ಪಕ್ಷದ ಬೆಂಬಲಿಗರಾಗಿರಿ. ಆದರೆ ಕೆಲಸ ಮಾಡುವವರನ್ನು ಜಾತಿ ಮತ ಪಕ್ಷ ಮರೆತು ಬೆಂಬಲಿಸಿ. ನನ್ನ ಐದು ವರ್ಷದ ಅವಧಿಯಲ್ಲಿ ನನ್ನ ಕ್ಷೇತ್ರದಲ್ಲಿ ಯಾವುದೇ ಕೋಮು ಗಲಭೆ ನಡೆದದ್ದು, ಕೋಮು ಪ್ರಚೋಧನೆ ನೀಡಿದ್ದು, ಕೋಮು ಭಾಷಣ ಮಾಡಿದ್ದು , ಅಥಾವ ಮುಸ್ಲಿಂ ಗೆ. ಕ್ರೈಸ್ತರಿಗೆ ಕೆಲಸ ಕೊಡಬಾರದೆಂದು ಹೇಳಿದ್ದು ಇದೇಯೇ ? ಎಂದು ಅವರು ಪ್ರಶ್ನಿಸಿದರು.
. ಆಡಳಿತದಲ್ಲಿ ಯಾವತ್ತೂ ಭೇದ ಮಾಡದೇ ಸಮಾನವಾಗಿ ಕೆಲಸ ಮಾಡಿದ್ದೇನೆ. ಮಸೀದಿ, ಚರ್ಚ್ ದೇವಸ್ಥಾನ, ಜೈನ ಬಸದಿಯೆಂದು ಯಾವುದೇ ತಾರತಮ್ಯ ಮಾಡದೇ ಎಲ್ಲ ಧಾರ್ಮಿಕ ಕ್ಷೇತ್ರಗಳ ಅಭಿವೃದ್ದಿಗೆ ಫಂಡ್ ನೀಡಿದ್ದೇನೆ. ಮಸೀದಿಗೆ ಇಂಟರ್ ಲಾಕ್, ರಸ್ತೆ ಮಾಡಿಕೊಟ್ಟಿದ್ದೇನೆ.
ಅಂದು ಮುಖ್ಯಮಂತ್ರಿಯಾಗಿದ್ದ ಬಿ. ಎಸ್ ಯಡಿಯೂರಪ್ಪನವರು 20 ಲ.ರೂ ಅನುದಾನ ನೀಡಿದ ಕಾರಣಕ್ಕೆ ಈಗ ನಾವು ಮಾತನಾಡುತ್ತಿರುವ ಈ ಅಲ್ಪ ಸಂಖ್ಯಾತ ಸಮುದಾಯ ಭವನ ನಿರ್ಮಾಣಗೊಂಡಿದೆ.,ಇತ್ತೀಚೆಗಷ್ಟೆ ಅಲ್ಪ ಸಂಖ್ಯಾತರ ಮಸೀದಿ ಚರ್ಚ್ ಗಳಿಗೆ 5 ಕೋಟಿ ಅನುದಾನ ನೀಡಬೇಕು ಎಂದು ಕೇಳಿದ್ದೆ. 2 ಕೋ ರೂ ನೀಡುವುದಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಅದನ್ನು ಅದಷ್ಟು ಬೇಗ ತರಲು ನಾನು ಪ್ರಯತ್ನಿಸುತ್ತಿದ್ದೇನೆ ಎಂದರು.
ಇಲ್ಲಿನ ತೋಡಾರ್ ಮಸೀದಿಯ ತಡೆಗೋಡೆಗೆ 25 ಲ.ರೂ ಅನುದಾನ ನೀಡಿದ್ದೇನೆ. ಇತ್ತೀಚೆಗೆ ಅಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಆಯಿತು. ಅದು ಮುಸ್ಲಿಂ ಬಾಹುಳ್ಯದ ಪ್ರದೇಶ, ಅಲ್ಲಿ ಹಿಂದೂ ಮತದಾರರು ಸರಿ ಸುಮಾರು 25 % ಇದ್ದರೇ, ಮುಸ್ಲಿಂ ಸಮುದಾಯದವರು 75 % ಇದ್ದಾರೆ. ಚುನಾವಣೆಗೆ ಮುಂಚೆ ಕರೆ ಮಾಡಿದ ಉದ್ಯಮಿಯೊಬ್ಬರು ಈ ಬಾರಿ ಪಂಚಾಯತ್ ನ ಎಲ್ಲ ಸೀಟುಗಳು ಬಿಜೆಪಿ ಗೆಲ್ಲಲಿದೆ . ಆ ಭಾಗದ ಎಲ್ಲ ರಸ್ತೆಗಳನ್ನು ನೀವು ಮಾಡಿದ್ದೀರಿ. ಹಾಗಾಗಿ ಅಲ್ಲಿನ ಜನ ಕೊಟ್ಯಾನ್ ರಿಗೆ ಮತ ಹಾಕುತ್ತೇನೆ ಎನ್ನುತ್ತಿದ್ದಾರೆ, ಬಿಜೆಪಿಗಲ್ಲ ಕೋಟ್ಯಾನ್ ರಿಗೆ ಮತ ಹಾಕುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದರು . ಚುನಾವಣೆಯಲ್ಲಿ ತೋಡಾರ್ ನ ಎಂಟು ಸ್ಥಾನಗಳ ಪೈಕಿ 7 ಸ್ಥಾನ ಬಿಜೆಪಿ ಗೆದ್ದಿತ್ತು. ಒಂದು ಸ್ಥಾನ ಎಸ್ಡಿಪಿಐ ಗೆದ್ದಿದೆ. ಹೀಗಾಗಿ ಬಿಜೆಪಿಗೆ ಮುಸಲ್ಮಾನರು ಓಟು ಹಾಕುವುದಿಲ್ಲ ಎನ್ನುವುದು ಸುಳ್ಳು. ಒಳ್ಳೆ ಕೆಲಸ ಮಾಡುವವನಿಗೆ ಖಂಡಿತ ಓಟು ಹಾಕುತ್ತಾರೆ ಎಂದರು
ನಾನು ರಂಗ ಭೂಮಿ ಕಲಾವಿದ. ಆದರೇ ನನಗೆ ಜೀವನದಲ್ಲಿ ನಾಟಕ ಮಾಡಲು ಬರುವುದಿಲ್ಲ. ಹಾಗಾಗಿ ನೇರ ಮಾತನಾಡುತ್ತೇನೆ. ನನಗೆ ನೀವು ( ಮುಸ್ಲಿಂರು) ಮತ್ತು ಮತ್ತೊಬ್ಬರು ಬೇಧವಿಲ್ಲ. ನಾನು ಅಧಿಕಾರದಲ್ಲಿದಷ್ಟು ಸಮಯ ನೀವು ನನ್ನ ಅಲ್ಲಿಗೆ ಬರಬಹುದು. ದುಡಿದವನಿಗೆ ಸಂಬಳ ಕೊಡುವುದು ನಮ್ಮ ಜವಾಬ್ದಾರಿ, ಹಾಗಾಗಿ ನನ್ನ ಐದು ವರ್ಷದ ದುಡಿಮೆಗೆ ಧೈರ್ಯದಿಂದ ಸಂಬಳ ಕೊಡಿ ಎಂದು ಕೇಳುತ್ತಿದ್ದೇನೆ. ನಾನು ದುಡಿದಿದ್ದರೇ ನೀವು ನನಗೆ ವೋಟು ಹಾಕಿ ಪಕ್ಷ ನೋಡಬೇಡಿ ”ಎಂದು ಅವರು ಹೇಳಿದರು.
ಇದೀಗ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಅಪರಾಧ
Mangalore-ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.
ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ.
2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಬಜಪೆ ಪೊಲೀಸರಿಗೆ ಒಪ್ಪಿಸಿದ್ದರು.
ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 419, 420, 468 ಹಾಗೂ 34 ಮತ್ತು ಪಾಸ್‌ಪೋರ್ಟ್ ಕಾಯ್ದೆ-1967ರ ಕಲಂ 12(1)(b), (d), (e) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ಆರೋಪಿಗೆ ಒಂದು ವರ್ಷ ಆರು ತಿಂಗಳ ಶಿಕ್ಷೆ ವಿಧಿಸಿತ್ತು.
ಇದನ್ನು ಪ್ರಶ್ನಿಸಿ ವೇಲಾಯುಧನ್ ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಂಖ್ಯೆ 104/2021 ಸಲ್ಲಿಸಿದ್ದ. ಆದರೆ ಹೈಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗದೆ ವೇಲಾಯುಧನ್ ತಲೆಮರೆಸಿಕೊಂಡಿದ್ದ.
ಸುಮಾರು ಆರು ವರ್ಷಗಳಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆತನನ್ನು ಅಕ್ಟೋಬರ್ 8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಬಳಿಕ ಮುಂದಿನ ಕಾನೂನು ಕ್ರಮಕ್ಕಾಗಿ ಆತನನ್ನು ಬಜಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
-
Uncategorized19 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized21 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ23 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
Uncategorized7 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್24 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಸ್ಥಳೀಯ23 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
-
Uncategorized6 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ6 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ


















