ದಕ್ಷಿಣ ಕನ್ನಡ
ಪುತ್ತೂರಿನಲ್ಲೂ ಸೋನಿಯಾ, ರಾಹುಲ್ ಕೈಯಲ್ಲಿ ಚುನಾವಣೆ ಪ್ರಚಾರ ಮಾಡಿಸಿ ಬಿಜೆಪಿ ಗೆಲುವನ್ನು ಸುಲಭ ಮಾಡಿ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವ್ಯಂಗ್ಯ
ಪುತ್ತೂರು: ಸೋನಿಯಾ ಗಾಂಧಿ ಹಾಗೂ ರಾಹುಲ್ ನಾಯಕತ್ವದ ಕಾಂಗ್ರೆಸ್ ಈಶಾನ್ಯ ರಾಜ್ಯಗಳ ಹಾಗೂ ಉತ್ತರ ಪ್ರದೇಶ ಚುನಾವಣೆಯಲ್ಲಿ ಸೋಲು ಕಂಡಿದ್ದು, ಅವರಿಬ್ಬರನ್ನು, ಇಲ್ಲಿನ ಕಾಂಗ್ರೆಸ್ ಪಕ್ಷ ಪುತ್ತೂರು ವಿಧಾನಸಭಾ ಚುನಾವಣಾ ಪ್ರಚಾರಕ್ಕೂ ಕರೆಸುವ ಮೂಲಕ ಇಲ್ಲಿ ಬಿಜೆಪಿ ಅಭೂತಪೂರ್ವ ವಿಜಯಗಳಿಸಲು ಸಹಕರಿಸಲಿ ಎಂದು ಮಾಜಿ ಸಚಿವ ಹಾಗೂ ಹಿರಿಯ ಬಿಜೆಪಿ ಮುಖಂಡ ಕೆ.ಎಸ್ . ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ನಗರ ಶಾಸಕ ಕೆ. ಎಸ್. ಈಶ್ವರಪ್ಪ ಹೇಳಿದರು
ಪುತ್ತೂರು ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಸಮೀಪದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡಕ್ಕೆ ಬಂದರೆ ರಾಷ್ಟ್ರೀಯ ಪ್ರೇರಣೆ ಸಿಕ್ಕಂತಾಗುತ್ತದೆ ಎಂದು ಹೇಳಿದರು.
ಹಿಂದೆ ವಿಶ್ವದಲ್ಲಿ ಭಾರತ ಒಬ್ಬಂಟಿಯಾಗಿದ್ದು, ಪಾಕಿಸ್ತಾನಕ್ಕೆ ಉಳಿದೆಲ್ಲಾ ದೇಶಗಳು ಬೆಂಬಲ ನೀಡುತ್ತಿದ್ದವು. ಆದರೇ, ಮೋದಿ ಪ್ರಧಾನಿಯಾದ ಬಳಿಕ ಭಾರತಕ್ಕೆ ಆಮೇರಿಕಾ ಸಹಿತ ಎಲ್ಲ ದೇಶಗಳು ಗೌರವ ನೀಡುತ್ತಿದ್ದು, ಪಾಕಿಸ್ತಾನ ಏಕಾಂಗಿಯಾಗಿದೆ. ಇಂತಹ ಮೋದಿಯನ್ನು ಈಗ ಪಾಕಿಸ್ತಾನ ಬಿಟ್ರೆ ಸಿದ್ದರಾಮಯ್ಯ ಮಾತ್ರ ದ್ವೇಷಿಸುತ್ತಾರೆ ಎಂದು ಅವರು ಕಟಕಿಯಾಡಿದರು.
ಹಿಂದೂತ್ವ, ಭಾರತೀಯ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯನ್ನು ಉಳಿಸುವ ನಿಟ್ಟಿನಲ್ಲಿ ಬಿ.ಜೆ.ಪಿ ಸರಕಾರ ಕೆಲಸ ಮಾಡಿದೆ. ಈ ಹಿಂದೆ ಭಾರತ ಮಾಡಿದ ವಿಶ್ವದ ಎಲ್ಲ ರಾಷ್ಟ್ರಗಳ ಸಾಲವನ್ನು ಮೋದಿ ಸರಕಾರ ತೀರಿಸಿದ್ದು, ಈಗ ವಿಶ್ವದ ಇತರ ರಾಷ್ಟ್ರಗಳಿಗೆ ಸಾಲ ನೀಡುವಷ್ಟು, ಸಮರ್ಥವಾಗಿ ಬೆಳೆದಿದೆ. ವಿದೇಶದ ಶಸ್ತ್ರಾಸ್ತ್ರ ವನ್ನು ಹಿಡಿಯುತ್ತಿದ್ದ ಭಾರತದ ಸೈನಿಕರ ಕೈಗಳು 2014ರ ಬಳಿಕ ನಮ್ಮ ದೇಶ ಉತ್ಪಾದಿಸಿದ ಶಸ್ತ್ರಾಸ್ತ್ರ ಗಳನ್ನು ಹಿಡಿಯುತ್ತಿದೆ ಮಾತ್ರವಲ್ಲದೇ, ವಿದೇಶಗಳಿಗೆ ಶಸ್ತ್ರಾಸ್ತ್ರಗಳ ಸರಬರಜು ಮಾಡುವಷ್ಟು ಶಕ್ತಿಯುತವಾಗಿದೆ ಎಂದರು.

ಮೋದಿಯವರನ್ನು ನರಹಂತಕ, ದೇಶದ್ರೋಹಿ ಎಂದು ಸಿದ್ದರಾಮಯ್ಯ ಇನ್ನೊಂದು ಬಾರಿ ಹೇಳಿದರೆ, ಅವರ ನಾಲಿಗೆಯನ್ನು ಕಿತ್ತು ಬಿಸಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅವರು ಕಾಂಗ್ರೆಸ್ ರಾಜ್ಯ ಸರಕಾರದ ಮೇಲೆ ಮಾಡುತ್ತಿರುವ 40% ಕಮೀಷನ್ ಆರೋಪಕ್ಕೆ ಇಲ್ಲಿಯವರೆಗೆ ಒಂದೇ ಒಂದು ಸಾಕ್ಷಿ ನೀಡಿಲ್ಲ ಎಂದರು.

ಕಾಂಗ್ರೆಸ್ ಜಾತಿವಾದಿಯಾಗಿದ್ದು ಅದರ ನಾಯಕರು ಅವರವರ ಜಾತಿಯನ್ನು ಮುಂದಿಟ್ಟು ಮತಯಾಚಿಸುತ್ತಿದ್ದಾರೆ. ಆದರೇ ಬಿಜೆಪಿ ರಾಷ್ಟ್ರೀಯವಾದಿಯಾಗಿದೆ. ದೇಶವನ್ನು ರಕ್ಷಣೆ ಮಾಡುವುದು, ದೇಶದ ಸಂಸ್ಕೃತಿಯನ್ನು ಉಳಿಸುವುದು ಸಣ್ಣ ಕೆಲಸವಲ್ಲ. ದೇಶವನ್ನು, ಧರ್ಮವನ್ನು ಉಳಿಸುವವರನ್ನು ನೋಡಿ ಜನರು ಮತ ಹಾಕುತ್ತಾರೆಯೇ ಹೊರತು ಹೆಂಡ, ಜಾತಿ, ಹಣ ನೋಡಿ ಮತ ಹಾಕುವುದಿಲ್ಲ ಎಂದರು.
ಸೂ… ಮಗ- ಮಹಿಳಾ ನಾಯಕರ ಮುಂದೆಯೇ ವೇದಿಕೆಯಲ್ಲಿ ಅವಾಚ್ಯ ಪದ ಪ್ರಯೋಗ ಮಾಡಿದ ಈಶ್ವರಪ್ಪ
ಮುಖ್ಯಮಂತ್ರಿ ಎಂದು ಅಹಂಕಾರದಿಂದ ಚುನಾವಣೆಗೆ ಹೋದರೆ , ಜನರು ಎಲ್ಲಿ ಕೂರಿಸಬೇಕೆಂದು ತೀರ್ಮಾನಿಸುತ್ತಾರೆ ಎನ್ನುವುದಕ್ಕೆ ಸಿದ್ದರಾಮಯ್ಯ ಸೋತ ಚಾಮುಂಡೇಶ್ವರಿ ಚುನಾವಣೆ ಸಾಕ್ಷಿ. ಅವರು ಸೋತದ್ದಲ್ಲ. ಅವರನ್ನು ಇನ್ನೊರ್ವ ಕಾಂಗ್ರೆಸ್ಸಿನ ಹಿರಿಯ ಮುಖಂಡ ಪರಮೇಶ್ವರ್ ಸೋಲಿಸಿದ್ದು. ಅದಕ್ಕೂ ಹಿಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯನವರು, ಪರಮೇಶ್ವರನ್ನು ಸೋಲಿಸಿದರು. ಅದರ ಹಗೆಯನ್ನು ಚಾಮುಂಡೇಶ್ವರಿಯಲ್ಲಿ ಪರಮೇಶ್ವರ್ ತೀರಿಸಿದ್ದಾರೆ.
ಇದನ್ನು ಸ್ವತ: ಸಿದ್ದರಾಮಯ್ಯನವರು ವಿಧಾನಸಭೆ ಅಧಿವೇಶನದ ಸಂದರ್ಭ ನನ್ನಲ್ಲಿ ಖಾಸಗಿಯಾಗಿ ಹೇಳಿದ್ದು, ಆ ಸೂ… ಮಗ ನನ್ನನ್ನು ಸೋಲಿಸಿ ಬಿಟ್ಟ ಅಂದ್ರು ಎಂದು ಈಶ್ವರಪ್ಪ ನವರು ಮಹಿಳೆಯರು ಇದ್ದ ವೇದಿಕೆಯಲ್ಲಿ ಅವಾಚ್ಯ ಪದ ಬಳಕೆ ಮಾಡಿದ್ರು. ಇದನ್ನೆಲ್ಲ ಪತ್ರಕರ್ತರು ಬರೆಯಬಾರದು ಎಂದ ಅವರು ಬರಕೊಳ್ಳುವುದಿದ್ದರೇ ಬರಕೊಳ್ಳಿ ನನಗೇನು ಹೆದರಿಕೆಯಿಲ್ಲ ಎಂದರು.
ದೇಶದ್ರೋಹಿ ಪಿಎಫೈಯನ್ನು ಬಗ್ಗು ಬಡಿದ ಸರಕಾರ

ಕನ್ನಡ ಮತ್ತು ಸಂಸ್ಕೃತಿ ಮತ್ತು ಕರ್ನಾಟಕ ಇಂಧನ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಮಾತನಾಡಿ ” 18 ಹಿಂದೂ ಕಾರ್ಯಕರ್ತರ ಸಾವಿಗೆ ಕಾರಣರಾದ ಸಿದ್ದರಾಮಯ್ಯ ಸರಕಾರ ಬೇಕಾ? ಇಲ್ಲ ದೇಶದ್ರೋಹಿ ಪಿಎಫೈಯನ್ನು ಬಗ್ಗು ಬಡಿದ ಬಿಜೆಪಿ ಸರಕಾರ ಬೇಕಾ ? ಪಕ್ಷದ ಒಳಗಿನ ಸಣ್ಣಪುಟ್ಟ ಗೊಂದಲಗಳನ್ನು ದೂರ ಮಾಡಿ ಡಬ್ಬಲ್ ಇಂಜಿನ್ ಸರ್ಕಾರವನ್ನು ಬೆಂಬಲಿಸುವ ಕಾರ್ಯ ಮಾಡಬೇಕು ಎಂದರು.

ಪಕ್ಷದ ಹುಟ್ಟಿನ ಸಂದರ್ಭದಲ್ಲಿ ವ್ಯಕ್ತಪಡಿಸಿದ ಆಶಯದಂತೆ ಹಿಂದುತ್ವ ಹಾಗೂ ಅಭಿವೃದ್ಧಿಯನ್ನು ಕಣ್ಣ ಮುಂದೆ ಇಟ್ಟುಕೊಂಡು ಬಿಜೆಪಿ ಆಡಳಿತವನ್ನು ನಡೆಸಿದೆ. ಚುನಾವಣೆ ಬಂದಾಗ ಚಪ್ಪಾಳೆ ಗಿಟ್ಟಿಸಿಕೊಳ್ಳುವ ಭಾಷಣವನ್ನು ಯಾವತ್ತೂ ಬಿಜೆಪಿ ಮಾಡಿಲ್ಲ. ರಾಜ್ಯ ಮತ್ತು ಕೇಂದ್ರ ಸರಕಾರಗಳೆರಡು ರೈತರಿಗೆ, ಗ್ರಾಮೀಣ ಜನರಿಗೆ ವಿವಿಧ ಸವಲತ್ತುಗಳನ್ನು ಒದಗಿಸಿದೆ. ಡಬಲ್ ಇಂಜೀನ್ ಸರಕಾರ ಅಭಿವೃದ್ದಿ ಪರ್ವ ಮಾಡಿದೆ ಎಂದು ತಿಳಿಸಿದರು.
ರಸ್ತೆ, ದೀಪದಂತಹ ವಿಚಾರ ಬದಿಗಿಡಿ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದರೆ ಮಾತನಾಡಿ ” ರಸ್ತೆ, ದೀಪದಂತಹ ವಿಚಾರಗಳನ್ನು ಬದಿಗಿಟ್ಟು, ನಮ್ಮ ಸಂಸ್ಕೃತಿ ಪರಂಪರೆಯನ್ನು ರಕ್ಷಿಸುವ ಬಿಜೆಪಿಯನ್ನು ಬೆಂಬಲಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.
ಲವ್ ಜಿಹಾದ್ ನಿಂದ ರಕ್ಷಣೆಗೆ ಬಿಜೆಪಿಗೆ ಮತ : ಮಠಂದೂರು

ಪ್ರಾಸ್ತವಿಕವಾಗಿ ಮಾತನಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಕ್ಷೇತ್ರದಲ್ಲಿ ತಾನು ಮಾಡಿದ ಅಭಿವೃದ್ದಿ ಕಾರ್ಯಗಳನ್ನು ವಿವರಿಸಿದರು. ಜತೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಮಾಹಿತಿಯನ್ನು ನೀಡಿದ ಅವರು ” ಲವ್ ಜಿಹಾದ್ ನಿಂದ ಹಿಂದೂಗಳ ರಕ್ಷಣೆಯಾಗಬೇಕಾದರೆ ಬಿಜೆಪಿ ಸರಕಾರ ಬೇಕು ಎನ್ನುವುದನ್ನು ಮತ ಚಲಾಯಿಸುವ ವೇಳೆ ಗಮನದಲ್ಲಿಟ್ಟುಕೊಳ್ಳಿ ಎಂದರು.
ಮೆರವಣಿಗೆ
ಪುತ್ತೂರು ಗಾಂಧಿ ಕಟ್ಟೆಯ ಬಳಿಯಿಂದ ವಿಜಯ ಸಂಕಲ್ಪ ಯಾತ್ರೆಯ ಭವ್ಯ ಮೆರವಣಿಗೆ ಕಾರ್ಯಕ್ರಮ ನಡೆಯುವ ಮೈದಾನಕ್ಕೆ ಆಗಮಿಸಿತು. ಆಗಮಿಸಿದ ನಾಯಕರುಗಳನ್ನು ಪುಷ್ಪ ವರ್ಷ ಸುರಿಸುವ ಮೂಲಕ ಕಾರ್ಯಕರ್ತರು ಸ್ವಾಗತಿಸಿದರು.

ಸ್ವಾಗತ
ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಆಗಮಿಸಿದ ಯಾತ್ರೆಯ ರಥವನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಕಾವಿನ ಅಂಚಿನಡ್ಕದಲ್ಲಿ ಸ್ವಾಗತಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ವಿಜಯ ಸಂಕಲ್ಪ ಯಾತ್ರೆ ಕರ್ನಾಟಕ ಸಹ ಸಂಚಾಲಕರಾದ ಎಸ್. ದತ್ತಾತ್ರಿ, ಕಿಶೋರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚಣಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ ಕುಂದಾಪುರ, ಮಂಡಲ ಪ್ರಭಾರಿ ರಾಮದಾಸ ಬಂಟ್ವಾಳ, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜಿಲ್ಲಾ ಸಂಚಾಲಕ ದೇವದಾಸ್ ಶೆಟ್ಟಿ, ಕಸ್ತೂರಿ ಪಂಜ, ಬುಡಿಯಾರ್ ರಾಧಾಕೃಷ್ಣ ರೈ, ಜಯಂತಿ ನಾಯ್ಕ, ಆರ್.ಸಿ. ನಾರಾಯಣ, ವಿದ್ಯಾ ಗೌರಿ, ಸುನಿಲ್ ಕುಮಾರ್ ದಡ್ಡು ಉಪಸ್ಥಿತರಿದ್ದರು.
ಗೌರಿ ಬನ್ನೂರು, ಉಷಾ ಚಂದ್ರ ಮುಳಿಯ ಜೋತಿ ನಾಯಕ್ ಪ್ರಾರ್ಥಿಸಿದರು. ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸ್ವಾಗತಿಸಿದರು. ಪುತ್ತೂರು ಶಾಸಕ ಸಂಜೀವ ಮಠಂದೂರು ಪ್ರಸ್ತಾವನೆಗೈದರು. ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ್ ರಾವ್ ವಂದಿಸಿದರು. ರಾಜೇಶ್ ಬನ್ನೂರು, ಚಂದ್ರಶೇಖರ್ ರಾವ್ ಬಪ್ಪಳಿಗೆ, ರಾಧಾಕೃಷ್ಣ ಬೋರ್ಕರ್ ಕಾರ್ಯಕ್ರಮ ನಿರೂಪಿಸಿದರು.
Photo courtesy : Bhoomi photo world puttur
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.
ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.
2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.
ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ಅಪರಾಧ
Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್ ಅಧಿಕಾರಿ ಸಂದೀಪ್ ರಾವ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್ ಗೋಯಲ್ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ವಾಟ್ಸ್‌ಆ್ಯಪ್ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್ ಪವಾರ್ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್ ಸೀಕ್ರೆಸಿ ಆ್ಯಕ್ಟ್’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.
ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.
ಸೈಬರ್ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.
ಬಿಗ್ ನ್ಯೂಸ್
Reservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ವರ್ಗವಾರು ಮೀಸಲಾತಿ ವಿವರ ಪ್ರಕಟಗೊಂಡಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ.
ಜಿಲ್ಲೆಯ ವಿವಿಧ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ), ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಡಿ ಮೀಸಲಿಡಲಾಗಿದೆ.
ತಾಲೂಕು ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪಂಚಾಯಿತಿಗಳಲ್ಲಿ ಒಟ್ಟು 126 ಸ್ಥಾನಗಳಿದ್ದು, 65 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 13 ಸ್ಥಾನಗಳಿದ್ದು, ಈ ಪೈಕಿ 9 ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ 10 ಸ್ಥಾನಗಳಿದ್ದು, 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ಹಿಂದುಳಿದ ವರ್ಗ ‘ಎ’ಗೆ 29 ಸ್ಥಾನಗಳು ಮೀಸಲಾಗಿದ್ದು, 16 ಸ್ಥಾನಗಳು ಮಹಿಳೆಯರಿಗೆ ಮೀಸಲು. ಹಿಂದುಳಿದ ವರ್ಗ ‘ಬಿ’ಗೆ 7 ಸ್ಥಾನಗಳಿದ್ದು, 4 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಸಾಮಾನ್ಯ ವರ್ಗದ 67 ಸ್ಥಾನಗಳ ಪೈಕಿ 27 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ತಾಲೂಕುವಾರು ಗಮನಿಸಿದರೆ ಮೂಲ್ಕಿಯಲ್ಲಿ 7, ಮೂಡುಬಿದಿರೆಯಲ್ಲಿ 9, ಸುಳ್ಯದಲ್ಲಿ 11, ಉಳ್ಳಾಲದಲ್ಲಿ 12, ಪುತ್ತೂರಿನಲ್ಲಿ 12, ಮಂಗಳೂರಿನಲ್ಲಿ 14, ಬೆಳ್ತಂಗಡಿಯಲ್ಲಿ 14, ಕಡಬದಲ್ಲಿ 22 ಹಾಗೂ ಬಂಟ್ವಾಳದಲ್ಲಿ 25 ತಾಲೂಕು ಪಂಚಾಯಿತಿ ಕ್ಷೇತ್ರಗಳಿವೆ. ಬಂಟ್ವಾಳದಲ್ಲಿ ಅತಿ ಹೆಚ್ಚು 25 ಹಾಗೂ ಮೂಲ್ಕಿಯಲ್ಲಿ ಅತಿ ಕಡಿಮೆ 7 ಕ್ಷೇತ್ರಗಳಿವೆ.
ಜಿಲ್ಲಾ ಪಂಚಾಯಿತಿ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 35 ಸ್ಥಾನಗಳಿದ್ದು, 18 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿದೆ. ಪರಿಶಿಷ್ಟ ಜಾತಿಗೆ 3 ಸ್ಥಾನಗಳಿದ್ದು, 2 ಮಹಿಳೆಯರಿಗೆ ಮೀಸಲು. ಪರಿಶಿಷ್ಟ ಪಂಗಡಕ್ಕೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ.
ಹಿಂದುಳಿದ ವರ್ಗ ‘ಎ’ಗೆ 10 ಸ್ಥಾನಗಳಿದ್ದು, 5 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಹಿಂದುಳಿದ ವರ್ಗ ‘ಬಿ’ಗೆ 2 ಸ್ಥಾನಗಳಿದ್ದು, 1 ಸ್ಥಾನ ಮಹಿಳೆಯರಿಗೆ ಮೀಸಲು. ಸಾಮಾನ್ಯ ವರ್ಗದ 18 ಸ್ಥಾನಗಳ ಪೈಕಿ 9 ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ.
ಮೀಸಲಾತಿ ವಿವರ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಲೆಕ್ಕಾಚಾರ ಆರಂಭವಾಗಿದೆ. ಯಾವ ಕ್ಷೇತ್ರದಲ್ಲಿ ಯಾವ ವರ್ಗಕ್ಕೆ ಮೀಸಲಾತಿ ದೊರೆತಿದೆ ಎಂಬುದನ್ನು ಆಧರಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ನಿರೀಕ್ಷೆಯಿದೆ.
-
Uncategorized19 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized22 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ23 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
Uncategorized8 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಸ್ಥಳೀಯ24 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
-
Uncategorized6 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ7 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ6 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು


















