ದಕ್ಷಿಣ ಕನ್ನಡ
Kambala: ಉಪ್ಪಿನಂಗಡಿ : ವೈಭವೋಪೇತವಾಗಿ ಜರುಗಿದ ಅಶೋಕ್ ಕುಮಾರ್ ರೈ ಸಾರಥ್ಯದ 37ನೇ ವರ್ಷದ ವಿಜಯ – ವಿಕ್ರಮ ಜೋಡುಕರೆ ಕಂಬಳ
ಉಪ್ಪಿನಂಗಡಿ: ಎರಡು ದಿನಗಳ ಕಾಲ ವೈಭವೋಪೇತವಾಗಿ ಜರುಗಿದ 37ನೇ ವರ್ಷದ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಳವು ಮಾ 12 ರಂದು ಮಧ್ಯಾಹ್ನ ಯಶಸ್ವಿಯಾಗಿ ಮುಕ್ತಾಯಗೊಂಡಿತ್ತು. ರಾಷ್ಟ್ರೀಯ ಹೆದ್ದಾರಿ ಪಕ್ಕ ಹಳೆಗೇಟು ಬಳಿ ನೇತ್ರಾವತಿ ನದಿ ಕಿನಾರೆಯಲ್ಲಿ ಅಹರ್ನಿಶಿಯಾಗಿ ಜರುಗಿದ ಈ ಕಂಬಳ ಕೂಟದಲ್ಲಿ 134 ಕೋಣಗಳು ಭಾಗವಹಿಸಿದ್ದವು.
ಮಾ.11 ರಂದು ಕಂಬಳ ಕರೆಯ ಮುಂಭಾಗದ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಇದರಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪರಿಷತ್ ಡಾ| ಮಂಜುನಾಥ ಭಂಡಾರಿಯವರು ಮಾತನಾಡಿ ” ಕಂಬಳ ತುಳುನಾಡಿನ ಸಂಸ್ಕೃತಿಯ ಭಾಗವಾಗಿದ್ದು, ಇದಕ್ಕೆ ಮತ್ತಷ್ಟೂ ಶಕ್ತಿ ತುಂಬುವ ಉದ್ದೇಶದಿಂದ ಅದನ್ನು ನಾಡ ಕ್ರೀಡೆಯಾಗಿ ಘೋಷಿಸಬೇಕು ಎಂದು ಸದನದಲ್ಲಿ ಪ್ರಸ್ತಾಪಿಸೆದ್ದೇನೆ. ಈ ಕುರಿತಾಗಿ ಅಧ್ಯಯನ ಪೀಠ ಆರಂಭಿಸುವುದಾಗಿ ಸರಕಾರ ಪ್ರತಿಕ್ರಿಯಿಸಿದ್ದು, ಮುಂದಿನ ಒಂದೆರಡು ವರ್ಷದಲ್ಲಿ ಕಂಬಳ ಖಂಡಿತವಾಗಿಯೂ ನಾಡ ಕ್ರೀಡೆಯಾಗಲಿದೆ ಎಂಬ ವಿಶ್ವಾಸ ಅವರು ವ್ಯಕ್ತಪಡಿಸಿದರು.
ಕಂಬಳ ಕೂಟಗಳ ಆಯೋಜನೆಗಾಗಿ, ವಾರ್ಷಿಕವಾಗಿ ಎರಡು ಕೋ. ರೂ. ಸರಕಾರ ಮೀಸಲಿಡಬೇಕೇಂದು ಸರಕಾರವನ್ನು ಒತ್ತಾಯಿಸಿದೆ. ಆದರೇ ಈ ಕುರಿತು ಕಂಬಳ ಸಮಿತಿಗಳು ಮುಂದೆ ಬಾರದ ಕಾರಣ ಈ ಪ್ರಸ್ತಾವನೆ ನೆನೆಗುದಿಗೆ ಬಿದ್ದಿದೆ ಎಂದರು.

ಉದ್ಯಮಿ ವೇಣುಗೋಪಾಲ ಶೆಟ್ಟಿ ಮಾತನಾಡಿ, ಕರಾವಳಿ ಪ್ರದೇಶಕ್ಕೆ ಸೀಮಿತವಾಗಿದ್ದ ಕಂಬಳವು ಇತ್ತೀಚೆಗೆ ತೆರೆಕಂಡ ಕಾಂತಾರ ಸಿನಿಮಾದಿಂದಾಗಿ ರಾಷ್ಟ್ರ
ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಯಿತು. ತುಳುವರ ಈ ಜಾನಪದ ಕ್ರೀಡೆಯನ್ನು ಮುಂದಿನ ತಲೆ ಮಾರಿಗೆ ಉಳಿಸುವ ಕೆಲಸವಾಗಬೇಕಿದೆ ಎಂದರು.

ವಿಜಯ- ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ,
ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಮಾತನಾಡಿ,
ಪ್ರಾಣಿ ಹಿಂಸೆ ಮಾಡಲಾಗುತ್ತಿದೆಯೆಂದು ಪ್ರಾಣಿ ದಯಾ ಸಂಘ ಪೇಟಾದವರು ನಿರಂತರವಾಗಿ
ಕಂಬಳಕ್ಕೆ ತೊಂದರೆ ಉಂಟು ಮಾಡಿದ್ದಾರೆ. ಈಗಲೂ ಮಾಡುತ್ತಿದ್ದಾರೆ. ಆದರೇ ಇದರಿಂದ ಕಂಬಳಕ್ಕೆ ಯಾವುದೇ ಹಿನ್ನಡೆಯಾಗಿಲ್ಲ. ರಾಜ ವೈಭವದಿಂದ ಅದು ನಡೆಯುತ್ತಿದೆ ಎಂದರು.

ಕಂಬಳಕ್ಕೆ ಕೇಂದ್ರ ಹಾಗೂ ರಾಜ್ಯ
ಸರಕಾರಗಳು ಸುಗ್ರೀವಾಜ್ಞೆ ಮೂಲಕ ಮಸೂದೆ ತಂದರೂ,
ಪೇಟಾದವರು ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಅದರ ವಿಚಾರಣೆ ನಡೆದು ತೀರ್ಪು ಕಾಯ್ದಿರಿಸಲಾಗಿದೆ. ತೀರ್ಪು ಬಂದರೂ ಕಂಬಳದಲ್ಲಿ ಅಲ್ಪ ಸ್ವಲ್ಪ ಬದಲಾವಣೆಗಳು
ಆಗಬಹುದೇ ಹೊರತು ಕಂಬಳ ಮಾತ್ರ ನಿಲ್ಲಲು ಸಾಧ್ಯವಿಲ್ಲ ಎಂಬ ವಿಶ್ವಾಸವಿದೆ. ಜಲ್ಲಿಕಟ್ಟನಂತಹ ಕ್ರೀಡೆಯ ನಿಷೇಧಕ್ಕೆ ಪೇಟಾದವರು ಕಾನೂನು ಮೊರೆ ಹೋದಾಗ ಜಲ್ಲಿಕಟ್ಟೆ ಕ್ರೀಡೆಯ ಉಳಿವಿಗಾಗಿ ತಮಿಳುನಾಡಿನ ಸುಮಾರು
7೦೦ರಷ್ಟು ಜನ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎಂದರು.
ಆದರೆ ಇಲ್ಲಿ ಅಂತಹ ಹೋರಾಟದ ಕಿಚ್ಚು ಇಲ್ಲ. ಕಂಬಳದ ವಿರುದ್ಧಪೇಟಾದವರು ಸುಪ್ರೀಂಕೋರ್ಟ್‌ನ ಕದ ತಟ್ಟಿದಾಗ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಂಬಳದ ಪರ ವಕೀಲರನ್ನು ನೇಮಿಸುವುದಕಷ್ಟೆ ಸೀಮಿತವಾದರು.
ಆದರೇ ಕಂಬಳದ ಉಳಿವಿಗಾಗಿ ಕಟಿಬದ್ದವಾಗಿ ನ್ಯಾಯಾಲಯ ಸೇರಿದಂತೆ ಎಲ್ಲ ವೇದಿಕೆಯಲ್ಲೂ, ಹೋರಾಟ ಮಾಡಿರುವುದು ಉಪ್ಪಿನಂಗಡಿ ಕಂಬಳ ಸಮಿತಿ ಮಾತ್ರ. ಇನ್ನು ಮುಂದೆಯೂ ಕಂಬಳಕ್ಕೆ ಸಮಸ್ಯೆಯಾದರೆ ಯಾವುದೇ ತರಹದ ಕಾನೂನು ಹೋರಾಟಕ್ಕೆ ಸಿದ್ದನಿದ್ದೇನೆ. ರೈತಾಪಿ ವರ್ಗದವರ ಹಕ್ಕಾದ ಇದರ ಉಳಿವಿಗಾಗಿ ಪ್ರತಿಯೋರ್ವರು ಧ್ವನಿಯೆತ್ತಬೇಕು ಎಂದರು.


ಕಂಬಳದಲ್ಲಿ ರಾಜಕೀಯ, ಜಾತಿ -ಧರ್ಮದ ಭೇದವಿಲ್ಲ. ಎಲ್ಲರೂ ಇಲ್ಲಿ ಒಂದೇ ತಾಯಿಯ ಮಕ್ಕಳೆಂಬಂತೆ ಭಾಗವಹಿಸುತ್ತಾರೆ. ಬಡ ಜನರ ಸೇವೆ, ಬ್ರಹ್ಮಕಲಶ ಹಾಗೂ ಕಂಬಳದಲ್ಲಿ ರಾಜಕೀಯ ಮಾಡುವ ಮನೋಸ್ಥಿತಿ ನನ್ನದಲ್ಲ. ಇದು ನಾನು ಇಷ್ಟಪಟ್ಟು ಮಾಡುವ ಕಾರ್ಯಗಳಾಗಿದ್ದು,
ಮುಂದೆಯೂ ಇದನ್ನು ಮುಂದುವರಿಸಲಿದ್ದೇನೆ ಎಂದರು.
ಇದನ್ನೆಲ್ಲಾ ಸಹಿಸದ ಕೆಲವರು ಟೀಕೆಗಳನ್ನು ಮಾಡಬಹುದು. ಆದರೆ ಅಂತವರಿಗೆ ಉತ್ತರ ಕೊಡುವ ಅಗತ್ಯವಿಲ್ಲ. ಕಂಬಳ ಸಮಿತಿಗೆ ಪಿಲಿಕುಳದಲ್ಲಿ ಎರಡು ಎಕ್ರೆ ಜಾಗವನ್ನು ಮೀಸಲಿಡಬೇಕು. ಅಲ್ಲೊಂದು ಕಂಬಳ ಭವನದ ನಿರ್ಮಾಣವಾಗಬೇಕು ಎಂದರು.
ಸನ್ಮಾನ:

ಕಂಬಳ ಕೋಣಗಳ ಯಜಮಾನ ಅಮ್ಮೂರು ಗ್ರಾಮದ ಕೃಷ್ಣಾಪುರ ನಡುಮನೆ ಪರಮೇಶ್ವರ ಸಾಲ್ಯಾನ್, ದ.ಕ. ಜಿಲ್ಲಾ ಕೇಂದ್ರ ಸಹ ಬ್ಯಾಂಕ್‌ನ ಅಧ್ಯಕ್ಷ ಡಾ|ಎಂ.ಎನ್. ರಾಜೇಂದ್ರ ಕುಮಾರ್, ಉದ್ಯಮಿಗಳಾದ ವೇಣುಗೋಪಾಲ ಶೆಟ್ಟಿ ಹಾಗೂ ನಟೇಶ್ ಪೂಜಾರಿಯವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ವಿದ್ಯಾಧರ ಜೈನ್, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು, ದಿವ್ಯಪ್ರಭಾ ಚಿಲ್ತಡ್ಕ, ಕಂಬಳ ಸಮಿತಿಯ ಗೌರವಾಧ್ಯಕ್ಷ ನಂದಾವರ ಉಮೇಶ್ ಶೆಣೈ,
ಪ್ರಮುಖರಾದ ಎಂ.ಎಸ್. ಮುಹಮ್ಮದ್, ಜಗಜೀವನ್‌ದಾಸ್ ರೈ, ಮಾರ್ಷಲ್ ವೇಗಸ್, ಸತೀಶ್ ಕುಮಾರ್ ಕೆಡೆಂಜಿ, ರಾಜಾರಾಮ್ ಶೆಟ್ಟಿ ಕೋಲ್ಪೆಗುತ್ತು, ಜಯಂತ ನಡುಬೈಲು, ಗಂಗಾಧರ ರೈ,
ನವೀನ್‌ಚಂದ್ರ ಆಳ್ವ ತಿರುವೈಲುಗುತ್ತು ಡಾ.ನಿರಂಜನ್ ರೈ,
ಸುದೇಶ್ ಶೆಟ್ಟಿ ಶಾಂತಿನಗರ, ಸುಬ್ರಹ್ಮಣ್ಯ ರೈ ಕೊಡಿಪ್ಪಾಡಿ,
ಪ್ರೀತಮ್ ಶೆಟ್ಟಿ, ರಿತೇಶ್ ಶೆಟ್ಟಿ, ರಾಕೇಶ್ ಶೆಟ್ಟಿ ಕೆಮ್ಮಾರ, ದಾಸಪ್ಪ ಗೌಡ, ಶಿವರಾಮ್ ಪ್ರಸಾದ್, ಲೋಕೇಶ್ ಶೆಟ್ಟಿ ಕಬಕ, ನವೀನ್ ಶೆಣೈ, ವಿಶ್ವಾಸ್ ಶೆಣೈ, ರೋಶನ್ ರೈ ಬನ್ನೂರು, ಉಲ್ಲಾಸ್
ಕೋಟ್ಯಾನ್ ಪಲ್ಲತ್ತಾರು, ಅರುಣ್ ಕುಮಾರ್ ರೈ ಆನಾಜೆ,
ರಮೇಶ್ ರೈ, ಸುದೇಶ್ ಶೆಟ್ಟಿ, ರಾಮಣ್ಣ ಪಿಲಿಂಜ, ಅಶೋಕ್
ಪೂಜಾರಿ, ಅಸ್ಮಾ ಉಮ್ಮರ್, ಮಾಧವ ಗೌಡ ಕಾಮಧೇನು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಕೈಪ,
ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ತು ಕಾರ್ಯಾಧ್ಯಕ್ಷ
ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಉಪಾಧ್ಯಕ್ಷರಾದ
ರಾಮಚಂದ್ರ ಮಣಿಯಾಣಿ, ವಿದ್ಯಾಧರ ಜೈನ್, ಶಿವಪ್ರಸಾದ್ ರೈ
ಮಠಂತಬೆಟ್ಟು, ಜಯಂತ ಪೊರೋಳಿ, ದಾಸಪ್ಪ ಗೌಡ, ವಿಠಲ ಶೆಟ್ಟಿ
ಕೊಲ್ಲೊಟ್ಟು, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಜೊತೆ
ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಕಂಗೈ, ಸಂಘಟನಾ
ಕಾರ್ಯದರ್ಶಿಗಳಾದ ಯೋಗೀಶ್ ಸಾಮಾನಿ ಸಂಪಿಗೆದಡಿ
ಮಠಂತಬೆಟ್ಟು, ಕೃಷ್ಣಪ್ರಸಾದ್ ಬೊಳ್ಳಾವು, ವಿಜಯ ಪೂಜಾರಿ ಚೀಮುಳ್ಳು, ದಿಲೀಪ್ ಶೆಟ್ಟಿ ಕರಾಯ, ಸಹ ಸಂಚಾಲಕರಾದ
ಜಯಪ್ರಕಾಶ್ ಬದಿನಾರು, ಶಿವರಾಮ ಶೆಟ್ಟಿ ಗೋಳ್ತಮಜಲು,
ಸಮಿತಿಯ ನಿಹಾಲ್ ಪಿ. ಶೆಟ್ಟಿ, ಸತೀಶ್ ಶೆಟ್ಟಿ ಹೆನ್ನಾಳ, ಜಗದೀಶ್
ಪರಕಜೆ, ಜಯಾನಂದ ಗೌಡ, ಕೃಷ್ಣಪ್ಪ ಪೂಜಾರಿ, ಜತೀಂದ್ರ ಶೆಟ್ಟಿ ಅಲಿಮಾರ್, ಹರಿಪ್ರಸಾದ್ ಶೆಟ್ಟಿ ಬೊಳ್ಳಾವು, ಪ್ರಕಾಶ್ ರೈ ಕೊಲ ಬಡಗನ್ನೂರು,ಮತ್ತಿತರರು ಉಪಸ್ಥಿತರಿದ್ದರು

ಕಂಬಳ ಸಮಿತಿಯ ಗೌರವ ಸಲಹೆಗಾರ
ನಿರಂಜನ್ ರೈ ಮಠಂತಬೆಟ್ಟು ಸ್ವಾಗತಿಸಿ, ಕಾರ್ಯಕ್ರಮ
ನಿರೂಪಿಸಿದರು.

ಫಲಿತಾಂಶ:
37 ನೇ ವಿಜಯ ವಿಕ್ರಮ ಕಂಬಳದ ಫಲಿತಾಂಶ
ಈ ಕಂಬಳ ಕೂಟದಲ್ಲಿ ಈ ಬಾರಿ ಒಟ್ಟು 134 ಜೊತೆ
ಕೋಣಗಳು ಭಾಗವಹಿಸಿದ್ದು, ಕನೆ ಹಲಗೆ ವಿಭಾಗದಲ್ಲಿ 3
ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 14 ಜೊತೆ, ಹಗ್ಗ ಕಿರಿಯ
ವಿಭಾಗದಲ್ಲಿ 16 ಜೊತೆ, ಅಡ್ಡ ಹಲಗೆ ವಿಭಾಗದಲ್ಲಿ 7 ಜೊತೆ,
ನೇಗಿಲು ಕಿರಿಯ ವಿಭಾಗದಲ್ಲಿ 26 ಜೊತೆ, ನೇಗಿಲು ವಿಭಾಗದಲ್ಲಿ 68 ಜೊತೆ ಕೋಣಗಳು ಭಾಗವಹಿಸಿದವು.
ಕನಹಲಗೆ:
ಬೋಳಾರ ತ್ರಿಶಾಲ್ ಕೆ. ಪೂಜಾರಿ (ಕೋಣಗಳನ್ನು ಓಡಿಸಿದವರು:
ಬೈಂದೂರು ಮಹೇಶ್ ಪೂಜಾರಿ) ಪ್ರಥಮ (ನೀರು ನೋಡಿ
ಬಹುಮಾನ). ವಾಮಂಜೂರು ತಿರುವೈಲುಗುತ್ತು ನವೀನ್‌ಚಂದ್ರ
ಆಳ್ವ (ಕೋಣಗಳನ್ನು ಓಡಿಸಿದವರು ಬೈಂದೂರು ಭಾಸ್ಕರ
ದೇವಾಡಿಗ) ದ್ವಿತೀಯ.
ಹಗ್ಗ ಹಿರಿಯ ವಿಭಾಗ:
ಎರ್ಮಾಳ್ ರೋಹಿತ್ ಹೆಗ್ಡೆ – (ಕೋಣಗಳನ್ನು ಓಡಿಸಿದವರು:
ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ) ಪ್ರಥಮ, ಕೂಳೂರು
ಪೊಯ್ಯಲು ಪಿ.ಆರ್.ಶೆಟ್ಟಿ (ಬಿ) (ಕೋಣಗಳನ್ನು ಓಡಿಸಿದವರು:
ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ) ದ್ವಿತೀಯ.
ಹಗ್ಗ ಕಿರಿಯ ವಿಭಾಗ:
ಕೊಳಕ್ಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್
(ಕೋಣಗಳನ್ನು ಓಡಿಸಿದವರು: ಕೊಳಕ್ಕೆ ಇರ್ವತ್ತೂರು ಆನಂದ)
ಪ್ರಥಮ, ಶ್ರೀ ವಿಷ್ಣುಮೂರ್ತಿ ದೇವತ ಬಿಳಿಯೂರು ಮೇಗಿನಮನೆ
ಐತಪ್ಪ ಗಣಪ ಭಂಡಾರಿ (ಕೋಣಗಳನ್ನು ಓಡಿಸಿದವರು:
ಬೈಂದೂರು ವಿಶ್ವನಾಥ ದೇವಾಡಿಗ) ದ್ವಿತೀಯ.
ಅಡ್ಡ ಹಲಗೆ:
ಬೋಳಾರ್ ತ್ರಿಶಾಲ್ ಕೆ. ಪೂಜಾರಿ (ಕೋಣಗಳನ್ನು ಓಡಿಸಿದವರು:
ಸಾವ್ಯ ಗಂಗಯ್ಯ ಪೂಜಾರಿ) ಪ್ರಥಮ. ಮೂಡಬಿದ್ರೆ ಅಲಂಗಾರು
ಕಾನ ಫ್ರಾನ್ಸಿಸ್ ಐವನ್ ಡಿಸೋಜ (ಕೋಣಗಳನ್ನು ಓಡಿಸಿದವರು:
ಉಲ್ಲೂರು ಕಂದಾವರ ಗಣೇಶ್) ದ್ವಿತೀಯ
ನೇಗಿಲು ಹಿರಿಯ:
ಬೆಳುವಾಯಿ ಖಂಡಿಗ ರತ್ನಾಕರ ಶೆಟ್ಟಿ (ಬಿ) (ಕೋಣಗಳನ್ನು
ಓಡಿಸಿದವರು: ಬೈಂದೂರು ಮಂಜುನಾಥ ಗೌಡ) ಪ್ರಥಮ.,
ಬೋಳದಗುತ್ತು ಸತೀಶ್ ಶೆಟ್ಟಿ (ಬಿ) (ಕೋಣಗಳನ್ನು ಓಡಿಸಿದವರು:
ಕೊಳಕೆ ಇರ್ವತ್ತೂರು ಆನಂದ) ದ್ವಿತೀಯ.
ನೇಗಿಲು ಕಿರಿಯ:
ಅಲ್ಲಿಪಾದೆ ದೇವಶ್ಯ ಪಡೂರು ವಿಜಯ ವಿ. ಕೋಟ್ಯಾನ್
(ಕೋಣಗಳನ್ನು ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ
ಗೌಡ), ಮರೋಡಿ ಕೆಳಗಿನ ಮನೆ ಕೃತೀಶ್ ಅಣ್ಣು ಪೂಜಾರಿ
(ಕೋಣಗಳನ್ನು ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ
ಸುರೇಶ್ ಎಂ. ಶೆಟ್ಟಿ) ದ್ವಿತೀಯ ಬಹುಮಾನಗಳನ್ನು
ಪಡೆದುಕೊಂಡಿದ್ದಾರೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಮಂಗಳೂರು9 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ13 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ15 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್15 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್7 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು8 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ10 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಅಪರಾಧ15 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು


















