ಸ್ಥಳೀಯ
Rain Alert : ರಾಜ್ಯದಲ್ಲಿ ಇನ್ನು 6 ದಿನ ಹಲವೆಡೆ ಮಳೆ – ಎಲ್ಲಿ ಎಲ್ಲ ಗೊತ್ತೆ?
ಬೆಂಗಳೂರು Bangalore : ಮಾ 14 : ದೇಶದಲ್ಲಿ ಬಿಸಿಲಿನ ಆರ್ಭಟ ಹೆಚ್ಚಾಗಿ, ಜನ ಸಾಮಾನ್ಯರು ಬಳಲಿ ಬೆಂಡಾಗುತ್ತಿರುವ ಸಂದರ್ಭ ಅವರಿಗೆ ತಂಪು ನೀಡುವ ಸುದ್ದಿಯೊಂದನ್ನು ಹವಾಮಾನ ಇಲಾಖೆ ನೀಡಿದೆ.ಮುಂದಿನ 6 ದಿನಗಳಲ್ಲಿ ಕರ್ನಾಟಕ ಸೇರಿದಂತೆ 10ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆ ಬೀಳಲಿದೆಯೆಂದು ಅದು ತಿಳಿಸಿದೆ.
ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ಮಂಗಳವಾರದಿಂದ ಸುಮಾರು ಒಂದು ವಾರ ಅಕಾಲಿಕ ಮಳೆ ಸುರಿಯಲಿದೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.
ಕರ್ನಾಟಕದಲ್ಲಿ ಎಲ್ಲಿ?
ಮಾ. 14 ರಿಂದ 18ರವರೆಗೆ ಉಡುಪಿ ಹಾಗು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಾ. 16 ರಿಂದ 18 ರವರೆಗೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ,ಧಾರವಾಡ, ಗದಗ, ಕಲಬುರಗಿ, ಬಳ್ಳಾರಿ, ಬೀದರ್, ಬಿಜಾಪುರ, ಕೊಪ್ಪಳ,
ಚಾಮರಾಜನಗರ, ಚಿಕ್ಕಮಗಳೂರು,ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯ ಕೆಲವು ಪ್ರದೇಶದಲ್ಲಿ ಮಳೆ ಬೀಳಲಿದೆ.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ನಿಧನ ವಾರ್ತೆ
Accident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.
ಮೂಡುಬಿದಿರೆ, ಅ.8: ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.
ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.
ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.
ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.
ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
-
Uncategorized18 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized20 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು23 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ22 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಬಿಗ್ ನ್ಯೂಸ್23 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
Uncategorized7 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಅಂತರ ರಾಜ್ಯ23 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್24 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















