Connect with us

ಮಂಗಳೂರು

ಮಂಗಳೂರು : ಹತ್ಯೆ,ಹಲ್ಲೆ,ದರೋಡೆ ಪ್ರಕರಣ – ಜಪಾನ್ ಮಂಗ ಸಹಿತ ನಾಲ್ವರ ಬಂಧನ

Published

on



Ad Widget

Ad Widget

Ad Widget

Ad Widget

ಮಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ನಾಲ್ವರು ಕುಖ್ಯಾತ ದುಷ್ಕರ್ಮಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಕುಂಜತ್ತಬೈಲ್ ದೇವಿನಗರ ನಿವಾಸಿ ರಾಜಾ ಅಲಿಯಾಸ್ ಜಪಾನ್ ಮಂಗ, ಬೆಂಗ್ರೆ ನಿವಾಸಿ ಕಬೀರ್, ಸುರತ್ಕಲ್ ಕೃಷ್ಣಾಪುರ ಚೊಕ್ಕಬೆಟ್ಟು 8ನೇ ನಿವಾಸಿ ನಿಸಾರ್ ಹುಸೇನ್, ಕಣ್ಣೂರು ಪಡೀಲ್ ನಿವಾಸಿ ಪ್ರಕಾಶ್ ಶೆಟ್ಟಿ ಬಂಧಿತರು.

Ad Widget

Ad Widget

Ad Widget alt="Ad Widget"/>

Ad Widget

ರಾಜಾ ಅಲಿಯಾಸ್ ಜಪಾನ್ ಮಂಗ ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹತ್ಯೆ, ಹತ್ಯೆ ಯತ್ನ, ಹಲ್ಲೆ ಹಾಗು ದರೋಡೆ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಬಳಿಕ ಜಾಮೀನು ಪಡೆದಿದ ಈತ , 2017 ರಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಇದೀಗ ಸಿಸಿಬಿ ಪೊಲೀಸರು ಅತನನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

Ad Widget

Ad Widget <> Ad Widget

ಈತ ಬೆಂಗಳೂರಿನ ಕೋರಮಂಗಲ ಎಸ್‌ಜಿ ಪಾಳ್ಯದಲ್ಲಿ ತಲೆಮರೆಸಿಕೊಂಡ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಂದಲೇ ಬಂಧಿಸಿದ್ದಾರೆ.



Ad Widget

ಈತನ ವಿರುದ್ಧ 2013ರಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಸ್ ಚಾಲಕ ಪ್ರಸನ್ನ ಕೊಲೆ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣ, ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಕೊಲೆ ಯತ್ನ, ಜೀವ ಬೆದರಿಕೆ ಪ್ರಕರಣಗಳು ದಾಖಲಾಗಿತ್ತು. ಆರೋಪಿಯ ವಿರುದ್ಧ ನ್ಯಾಯಾಲಯದ ಎಲ್‌ಪಿಸಿ ವಾರಂಟ್ ಹೊರಡಿಸಲಾಗಿತ್ತು. ಈತನನ್ನು ಮುಂದಿನ ಕ್ರಮಕ್ಕಾಗಿ ಕದ್ರಿ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Ad Widget

Ad Widget

ಆರೋಪಿ ರಾಜ ಯಾನೆ ಜಪಾನ್ ಮಂಗ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಾಗ ತನ್ನ ಹೆಸರನ್ನು ರೋಹನ್ ರೆಡ್ಡಿ ಎಂಬುದಾಗಿ ನಕಲಿ ದಾಖಲೆ ಸೃಷ್ಟಿಸಿ ಹೆಸರು ಮತ್ತು ವಿಳಾಸವನ್ನು ಆಧಾರ್ ಕಾರ್ಡ್‌ನ್ನು ಪಡೆದು ಈ ಮೂಲಕ ಸಿಮ್ ಕಾರ್ಡ್ ಪಡೆದು ಉಪಯೋಗಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

2022ರಲ್ಲಿ ಬೆಂಗಳೂರಿನ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ್ದ. ಅಲ್ಲದೆ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೂ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಭಾಗಿಯಾದ್ದ ಎಂದು ತಿಳಿದು ಬಂದಿದೆ.

ಇತರ ಮೂವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಕಬೀರ್ ವಿರುದ್ಧ ದಾಖಲಾಗಿರುವ 8 ಪ್ರಕರಣಗಳಲ್ಲಿ ಜಾಮೀನುರಹಿತ ವಾರಂಟ್ ಇತ್ತು. ಇದೀಗ ಆತ ನಗರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ನಿಸಾರ್ ಹುಸೇನ್ ವಿರುದ್ಧ ದ.ಕ.ಜಿಲ್ಲೆ ಹಾಗೂ ಮಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳಿವೆ.‌ ಈತನ ವಿರುದ್ಧವೂ ಜಾಮೀನುರಹಿತ ವಾರಂಟ್ ಇತ್ತು.

ಪ್ರಕಾಶ್​ ಶೆಟ್ಟಿ ವಿರುದ್ಧ ಮಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಆರೋಪಿಯ ಬಂಧನಕ್ಕೆ ವಾರಂಟ್ ಹೊರಡಿಸಲಾಗಿತ್ತು. ಇದೀಗ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Ad Widget
Click to comment

Leave a Reply

ಮಂಗಳೂರು

Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!

Published

on



Ad Widget

Ad Widget

Ad Widget

Ad Widget

“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.

Ad Widget

Ad Widget <> Ad Widget

“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.



Ad Widget
Ad Widget
Continue Reading

ಮಂಗಳೂರು

D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget <> Ad Widget

ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಮಂಗಳೂರು

Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.

Ad Widget

Ad Widget <> Ad Widget

ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



Ad Widget

ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು

Ad Widget

Ad Widget
  1. ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
  2. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
  3. ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading