Connect with us

ಬಿಗ್ ನ್ಯೂಸ್

‘ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೊರಳಪಟ್ಟಿ ಹಿಡಿಯುತ್ತೇನೆ’ ಎಂದ ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ವಿರುದ್ದ ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಪುತ್ತೂರು ನವೆಂಬರ್ 24 : ಪ್ರತಿಭಟನಾ ಸಭೆಯಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇನೆ ಎಂದು ಅಬ್ಬರಿಸಿದ ಹಿಂದೂ ಜಾಗರಣ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ದ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಕಾರಂತ್ ಭಾಷಣ :

Ad Widget

Ad Widget

Ad Widget alt="Ad Widget"/>

Ad Widget

ಕಾರಿಂಜೇಶ್ವರ ಕ್ಷೇತ್ರದ ಸುತ್ತಮುತ್ತ ನಡೆಯುವ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಕಾರಿಂಜದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆದ ರುದ್ರಗಿರಿ ರಣಕಹಳೆ ಎಂಬ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಜಗದೀಶ್ ಕಾರಂತ್ ಕಾರಿಂಜದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸದೇ ಹೋದಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ನುಗ್ಗಿ ಕೊರಳು ಪಟ್ಟಿ ಹಿಡಿಯುವ ಎಚ್ಚರಿಕೆ ನೀಡಿದ್ದರು.

Ad Widget

Ad Widget <> Ad Widget

ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರರಿಂದ ಅವರು ಪೂಂಜಾಲುಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪದ ಮೇಲೆ ಜಗದೀಶ್ ಕಾರಂತ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.



Ad Widget

ಕಾರಂತ್ ಭಾಷಣ:

Ad Widget

Ad Widget

ಕಾರಂತ್ ಹೇಳಿದ್ದೇನು?:
ಅಕ್ರಮ ಗಣಿಗಾರಿಕೆ ನಿಲ್ಲಿಸದಿದ್ದರೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆಯಿಟ್ಟು, ಜಿಲ್ಲಾಧಿಕಾರಿಯ ಕೊರಳ ಪಟ್ಟಿ ಹಿಡಿಯುತ್ತೇವೆ ಎಂದು ಹಿಂದೂ ಜಾಗರಣ ವೇದಿಕೆಯ ಕ್ಷೇತ್ರಿಯಾ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ ಬಹಿರಂಗ ಬೆದರಿಕೆ ಹಾಕಿದ್ದಾರೆ. ಬಂಟ್ವಾಳ ತಾಲೂಕಿನ ಕಾರಿಂಜ ದೇವಸ್ಥಾನದ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ದೇವಸ್ಥಾನದ ಪವಿತ್ರ್ಯತೆಗೆ ದಕ್ಕೆ ಮಾಡುವುದರ ವಿರುದ್ಧ ಜನಜಾಗೃತಿ ಸಭೆಯ ಭಾಷಣದಲ್ಲಿ ಈ ಹೇಳಿಕೆ‌ ನೀಡಿದ್ದಾರೆ. ಅಕ್ರಮ ಗಣಿಗಾರಿಕೆ ನಿಲ್ಲಿಸಲು ಜಿಲ್ಲಾಧಿಕಾರಿಗೆ 30 ದಿನಗಳ ಕಾಲಾವಕಾಶ ನೀಡುತ್ತಿದ್ದೇವೆ. ತಪ್ಪಿದ್ದಲ್ಲಿ ಡಿ.21ರಂದು ಸಾವಿರಾರು ಜನರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆ ಹಾಕಿ ಜಿಲ್ಲಾಧಿಕಾರಿಯ ಕೊರಳು ಪಟ್ಟಿಯನ್ನು ಹಿಡಿಯುತ್ತೇವೆ. ತಾಕತ್ತಿದ್ದರೆ ಗಣಿಗಾರಿಕೆ ನಿಲ್ಲಿಸು. ಇಲ್ಲದಿದ್ದರೆ ವರ್ಗಾವಣೆ ತೆಗೆದು ಹೊರಗೆ ಹೋಗು ಎಂದು ಜಗದೀಶ್ ಕಾರಂತ ಏಕವಚನದಲ್ಲೇ ಜಿಲ್ಲಾಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ. ಅಕ್ರಮ ಗಣಿಗಾರಿಕೆಯನ್ನು 24 ಗಂಟೆಯೊಳಗೆ ನಿಲ್ಲಿಸುವ ಅಧಿಕಾರ ಜಿಲ್ಲಾ ಉಸ್ತುವಾರಿ ಮಂತ್ರಿ ಮತ್ತು ಜಿಲ್ಲಾಧಿಕಾರಿಗೆ ಇದೆ. ಗಣಿಗಾರಿಕೆ ನಿಲ್ಲಿಸಲು ಅಸಾಧ್ಯವಾದರೆ ರಾಜೀನಾಮೆ ನೀಡಿ ಮನೆಗೆ ಹೋಗು ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಶಾಸಕರಿಗೆ ಜಗದೀಶ್ ಕಾರಂತ ತಾಕೀತು ಮಾಡಿದ್ದಾರೆ.

Ad Widget
Click to comment

Leave a Reply

ಮಂಗಳೂರು

Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.

Ad Widget

Ad Widget <> Ad Widget

ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.



Ad Widget

ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು

Ad Widget

Ad Widget
  1. ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
  2. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
  3. ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು

Published

on



Ad Widget

Ad Widget

Ad Widget

Ad Widget

ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.

Ad Widget

Ad Widget <> Ad Widget

ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.



Ad Widget

120 ಎಕರೆ ಸರ್ಕಾರಿ ಜಮೀನಿನತ್ತ ಗಮನ

ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.

Ad Widget

Ad Widget

ಸಮನ್ವಯದ ಚಿಕಿತ್ಸೆಗೆ ಅವಕಾಶ

ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.

ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರಿ ಸ್ವಾಮ್ಯಕ್ಕೆ ಒತ್ತು

ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.

ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.

ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Ad Widget
Continue Reading

ಬಿಗ್ ನ್ಯೂಸ್

Vitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ

Published

on



Ad Widget

Ad Widget

Ad Widget

Ad Widget

ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗಾಯಗೊಂಡವರನ್ನು ವಿಟ್ಲ ಪಡೂರು ಗ್ರಾಮದ ಕಡಂಬು ನಿವಾಸಿ, ಮೇಸ್ತಿ ಕೆಲಸ ಮಾಡುತ್ತಿದ್ದ ರಾಮಣ್ಣ ಮೂಲ್ಯ (45) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ರಾಮಣ್ಣ ಮೂಲ್ಯ ಅವರು ಕುಡ್ತಮುಗೇರು ಕಡೆಯಿಂದ ಕುಳಾಲು ಕಡೆಗೆ ಆಕ್ಟಿವಾದಲ್ಲಿ ತೆರಳುತ್ತಿದ್ದ ವೇಳೆ, ಬೊಲ್ಪಾದೆಯ ಅಪಾಯಕಾರಿ ತಿರುವಿನ ಏರು ರಸ್ತೆಯಲ್ಲಿ ಎದುರಿನಿಂದ ಬಂದ ಮಾರುತಿ ಕಾರು ಆಕ್ಟಿವಾಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.



Ad Widget

ಅಪಘಾತದ ತೀವ್ರತೆಗೆ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು, ರಾಮಣ್ಣ ಮೂಲ್ಯ ಅವರ ಬಲಗೈ ಮೂಳೆ ಮುರಿದಿದೆ. ಡಿಕ್ಕಿಯ ಬಳಿಕ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದಿದೆ.

Ad Widget

Ad Widget

ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳುವನ್ನು ವಿಟ್ಲದ ಬೆನಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading