Connect with us

ವಿಟ್ಲ

ಉಡುಪಿ – ಕಾಸರಗೋಡು 400 ಕೆ. ವಿ. ವಿದ್ಯುತ್ ಪ್ರಸರಣ ಮಾರ್ಗ ಯೋಜನೆಯನ್ನು ತಡೆಯುವ ಕಾರ್ಯ ಮಾಡಲಾಗಿದೆ – ವಿಟ್ಲದಲ್ಲಿ ಶಾಸಕ ಸಂಜೀವ ಮಠಂದೂರು

Published

on



Ad Widget

Ad Widget

Ad Widget

Ad Widget

ವಿಟ್ಲ: ಜಾತಿ ಮತ ನೋಡದೆ ಎಲ್ಲರಿಗೆ ಎಲ್ಲವನ್ನೂ ನೀಡುವ ಕಾರ್ಯವನ್ನು ಮಾಡಲಾಗಿದೆ. ಸರ್ಕಾರದ ಸೌವಲತ್ತಿನಿಂದ ವಂಚಿತನಾಗಬಾರದೆಂದು ಸರ್ಕಾರ ವಿವಿಧ ನಿಯಮಗಳನ್ನು ಜಾರಿಗೆ ತಂದಿದೆ. ಉಡುಪಿ – ಕಾಸರಗೋಡು 400 ಕೆ. ವಿ. ವಿದ್ಯುತ್ ಪ್ರಸರಣ ಮಾರ್ಗ ಯೋಜನೆಯನ್ನು ನಿಲ್ಲಿಸುವ ಕಾರ್ಯ ಮಾಡಲಾಗಿದೆ. ರೈತರಿಗೆ ಅನ್ಯಾಯವಾಗುವ ಕೆಲಸವನ್ನು ತಡೆ ಹಿಡಿಯುವ ಕೆಲಸವನ್ನು ಮಾಡುತ್ತೇವೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

Ad Widget

Ad Widget

Ad Widget

Ad Widget

ಅವರು ಭಾನುವಾರ ಚಂದಳಿಕೆ ಭಾರತ್ ಅಡಿಟೋರಿಯಂನಲ್ಲಿ ವಿಟ್ಲ ಹೋಬಳಿ ನಾಡಕಛೇರಿ ನೂತನ ಕಟ್ಟಡ ಉದ್ಘಾಟನೆ, ಕೃಷಿ ಇಲಾಖೆಯ ವಿಟ್ಲ ಹೋಬಳಿ ರೈತ ಸಂಪರ್ಕ ಕೇಂದ್ರದ ಉದ್ಘಾಟನೆ ಹಾಗೂ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 94ಸಿ. ಸಿ. ಹಕ್ಕು ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ರೈತರಿಗೆ ಸಹಾಯಧನದಲ್ಲಿ ಕೃಷಿ ಉಪಕರಣಗಳ ವಿತರಣೆ ಮಾಡಲಾಯಿತು. ವಿಟ್ಲ ಪಟ್ಟಣ ಪಂಚಾಯಿತಿಯ ಎಸ್. ಎಫ್. ಸಿ. ನಿಧಿಯ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನಡೆಸಲಾಯಿತು.

Ad Widget

Ad Widget <> Ad Widget

ಕಾರ್ಯಕ್ರಮವನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚಣಿಲ ತಿಮ್ಮಪ್ಪ ಶೆಟ್ಟಿ ಉದ್ಘಾಟಿಸಿದರು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ತಹಸೀಲ್ದಾರ ವಿ. ಎಸ್. ಸತೀಶ್, ಗ್ರೇಡ್ 2 ತಹಸೀಲ್ದಾರ ದಯಾನಂದ, ಕೃಷಿ ಇಲಾಖೆಯ ವೀಣಾ, ಗೃಹ ಮಂಡಳಿಯ ಸಿ. ಕೆ. ಮಂಜುಳಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಯಪ್ರಕಾಶ್, ಸರ್ಕಾರಿ ಪದವಿ ಕಾಲೇಜು ಪ್ರಾಂಶುಪಾಲ ಪದ್ಮನಾಭ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗೋಪಾಲ ನಾಯ್ಕ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಪುರುಷೋತ್ತಮ ಮುಂಗ್ಲಿಮನೆ, ಪರಮೇಶ್ವರಿ ಬಲ್ನಾಡು, ಪಟ್ಟಣ ಪಂಚಾಯಿತಿಯ ಸದಸ್ಯರು ಹಾಜರಿದ್ದರು.



Ad Widget

ಪಟ್ಟಣ ಪಂಚಾಯಿತಿಯ ಸದಸ್ಯರಾದ ಅರುಣ್ ವಿಟ್ಲ ಸ್ವಾಗತಿಸಿದರು. ರವಿಪ್ರಕಾಶ್ ವಿಟ್ಲ ವಂದಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

ಬಿಗ್ ನ್ಯೂಸ್

Vitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ

Published

on



Ad Widget

Ad Widget

Ad Widget

Ad Widget

ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗಾಯಗೊಂಡವರನ್ನು ವಿಟ್ಲ ಪಡೂರು ಗ್ರಾಮದ ಕಡಂಬು ನಿವಾಸಿ, ಮೇಸ್ತಿ ಕೆಲಸ ಮಾಡುತ್ತಿದ್ದ ರಾಮಣ್ಣ ಮೂಲ್ಯ (45) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ರಾಮಣ್ಣ ಮೂಲ್ಯ ಅವರು ಕುಡ್ತಮುಗೇರು ಕಡೆಯಿಂದ ಕುಳಾಲು ಕಡೆಗೆ ಆಕ್ಟಿವಾದಲ್ಲಿ ತೆರಳುತ್ತಿದ್ದ ವೇಳೆ, ಬೊಲ್ಪಾದೆಯ ಅಪಾಯಕಾರಿ ತಿರುವಿನ ಏರು ರಸ್ತೆಯಲ್ಲಿ ಎದುರಿನಿಂದ ಬಂದ ಮಾರುತಿ ಕಾರು ಆಕ್ಟಿವಾಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.



Ad Widget

ಅಪಘಾತದ ತೀವ್ರತೆಗೆ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು, ರಾಮಣ್ಣ ಮೂಲ್ಯ ಅವರ ಬಲಗೈ ಮೂಳೆ ಮುರಿದಿದೆ. ಡಿಕ್ಕಿಯ ಬಳಿಕ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದಿದೆ.

Ad Widget

Ad Widget

ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳುವನ್ನು ವಿಟ್ಲದ ಬೆನಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

Ad Widget
Continue Reading

ಕಾರ್ಯಕ್ರಮಗಳು

Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

Ad Widget

Ad Widget

Ad Widget

Ad Widget

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.



Ad Widget

ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.

Ad Widget

Ad Widget

ಈ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು.

ಸಾರ್ವಜನಿಕರು ಹಾಗೂ ಆಸ್ಪತ್ರೆಯಲ್ಲಿರುವವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದೆ.

Ad Widget
Continue Reading

ದಕ್ಷಿಣ ಕನ್ನಡ

ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ

Published

on



Ad Widget

Ad Widget

Ad Widget

Ad Widget

ವಿಟ್ಲ, ಅ.6: ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು ಬಲ್ಯ ನಿವಾಸಿ ಹಿಬ್ಬಾತುಲ್ಲ (52) ಬಂಧಿತ ಆರೋಪಿ. ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ಇಬ್ಬರನ್ನು ನಂಬಿಸಿ ಅವರಿಂದ ಹಣ ಪಡೆದು, ಉದ್ಯೋಗ ಕೊಡಿಸದೇ ಹಣವನ್ನೂ ಹಿಂದಿರುಗಿಸದೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ 2011ರಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

Ad Widget alt="Ad Widget"/>

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಲಂ 420, 465, 468, 471 ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಹಿಬ್ಬಾತುಲ್ಲ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ವಾರೆಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ವಿಟ್ಲ ಠಾಣಾ ಸಿಬ್ಬಂದಿ ಶಿವಾನಂದ ಮಡ್ಡಿ, ಸಿದ್ದಪ್ಪ ಹಾಗೂ ಯಂಕಪ್ಪ ಅವರು ಅ.5ರಂದು ಹಿಬ್ಬಾತುಲ್ಲನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.



Ad Widget

ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading