Connect with us

ಬಂಟ್ವಾಳ

Ramanath Rai | ನಾನು ಶಾಸಕನಾದರೆ ಬಂಟ್ವಾಳ ಕ್ಷೇತ್ರಕ್ಕೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಅಂಡರ್ ಆರ್ಮ್ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡ್ತೇನೆ : ನನ್ನ ಅವಧಿಯ ಬಂಟ್ವಾಳ ಒಳಚರಂಡಿ ಯೋಜನೆ ಇನ್ನೂ ಪೂರ್ತಿಯಾಗಿಲ್ಲ : ರಮಾನಾಥ ರೈ

Published

on

Ad Widget

Ad Widget

Ad Widget

Ad Widget

ವಿಟ್ಲ: ಬಿಜೆಪಿಯ ಭರವಸೆಗಳ ಹಿಂದೆ ಹೋದ ಜನರಿಗೆ ಸರಿಯಾದ ವಿಚಾರ ತಿಳಿಯುತ್ತಿದೆ. ಸಿದ್ಧರಾಮಯ್ಯ ಸರ್ಕಾರ ಇದ್ದ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಕೆಲಸಗಳಾಗಿದೆ. ಕಾಂಗ್ರೆಸ್ ಪಕ್ಷ ನೀಡಿದ ಭರವಸೆ ಶೇ.97ರಷ್ಟನ್ನು ಅಧಿಕಾರಕ್ಕೆ ಬಂದಾಗ ಪೂರೈಸುವ ಕಾರ್ಯವನ್ನು ಮಾಡಿದೆ. ಯಾವುದೇ ತಪ್ಪು ಕೆಲಸವನ್ನು ಮಾಡದ ನನಗೆ ಜನರು ಇನ್ನೊಂದು ಅವಕಾಶವನ್ನು ನೀಡಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ (Ramanath Rai) ಹೇಳಿದರು.

Ad Widget

Ad Widget

Ad Widget

Ad Widget

ಅವರು ಶನಿವಾರ ರಾತ್ರಿ ಕನ್ಯಾನದ ಪೇಟೆಯಲ್ಲಿ ಸಾಲೆತ್ತೂರು, ಕರೋಪಾಡಿ, ಕನ್ಯಾನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಲಿರುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ ಸಮಾರಂಭದಲ್ಲಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget

2017ರಲ್ಲಿ ಬಂಟ್ವಾಳದಲ್ಲಿ ಒಳಚರಂಡಿ ವ್ಯವಸ್ಥೆಗಾಗಿ 56 ಕೋಟಿ ರೂ. ಅನುದಾನ ತಂದಿದ್ದು, ಆ ಕಾಮಗಾರಿಯನ್ನು ಬಿಜೆಪಿ ಸರ್ಕಾರ ಇದುವರೆಗೆ ಮಾಡಿಸಿಲ್ಲ. ಬೆಂಜನಪದವು ಕ್ರೀಡಾಂಗಣ, ಪಂಜೆ ಮಂಗೇಶರಾಯ ಭವನ, ಪಡೀಲು ಜಿಲ್ಲಾಧಿಕಾರಿ ಕಚೇರಿ ಕಾಮಗಾರಿಗಳನ್ನು ಬಿಜೆಪಿ ಪೂರ್ತಿ ಮಾಡಿಲ್ಲ. ಶವ ಸಂಸ್ಕಾರಕ್ಕೆ ಬರುತ್ತಿದ್ದ 5 ಸಾವಿರ ಸಹಾಯ ಧನವನ್ನು ನಿಲ್ಲಿಸಿದ ಧರಿದ್ರ ಸರ್ಕಾರ ಈಗ ಆಡಳಿತ ಮಾಡುತ್ತಿದೆ. ಶಾಸಕನಾಗಿ ಬಂದರೆ ಕನ್ಯಾನ ಪದವಿ ಕಾಲೇಜಿಗೆ ನೂತನ ಕಟ್ಟಡ, ಬೆಂಬನಪದವಿನಲ್ಲಿ ಜಿಲ್ಲಾ ಮಟ್ಟದ ಕ್ರೀಡಾಂಗಣವನ್ನು 100 ಕೋಟಿಯಲ್ಲಿ ನಿರ್ಮಾಣ, ಬಂಟ್ವಾಳ ಕ್ಷೇತ್ರಕ್ಕೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಅಂಡರ್ ಆರ್ಮ್ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡುವ ನಿಶ್ಚಿತ ಎಂದು ತಿಳಿಸಿದರು.

Ad Widget

Ad Widget <> Ad Widget

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ ಪರ ಧರ್ಮವನ್ನು ಗೌರವಿಸುವ ಜತಗೆ ನಮ್ಮ ಧರ್ಮವನ್ನು ಆಚರಿಸುವ ಕೆಲಸವನ್ನು ಮಾಡಬೇಕಾಗಿದೆ. ರಮಾನಾಥ ರೈ ಅವರ ವಿಜಯ ಜಿಲ್ಲೆಯ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನ ವಿಜಯವಾಗಿದೆ. ರಸ್ತೆ ಚರಂಡಿ ಬಗ್ಗೆ ಯೋಚನೆ ಮಾಡಬೇಡಿ ಎನ್ನುವ ಸಂಸದನನ್ನು ಮೂರು ಬಾರಿ ಆಯ್ಕೆ ಮಾಡಿದ ನೀವು ಶತ ಮೂರ್ಖರು ಎಂದು ಹೊರ ರಾಜ್ಯದ ಜನ ಹೇಳುತ್ತಿದ್ದಾರೆ. ರಮಾನಾಥ ರೈ ಸಾಧನೆಯ ಮುಂದೆ ಬಿಜೆಪಿಯವರ ಸಾಧನೆ ಶೂನ್ಯ ಎಂದರು.

ಮಾಣಿ ಗ್ರಾ.ಪಂ.ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ರಮಾನಾಥ ರೈ ಅವಧಿಯಲ್ಲಿ ಕ್ಷೇತ್ರಕ್ಕೆ ತಂದ ೫೦೦೦ ಕೋಟಿ ರೂ.ಗಳ ಅನುದಾನಗಳ ವಿವರ ನೀಡಿದರು. ಬೆಳಗ್ಗೆ ಸಾಲೆತ್ತೂರು ಶಾಲೆಯ ಬಳಿ ಯಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ತಲೆಕ್ಕಿ, ಬೊಳ್ಮಾರು, ಆನೆಕಲ್ಲು, ಮಿತ್ತನಡ್ಕ ಮತ್ತು ಕನ್ಯಾನದಲ್ಲಿ ಪಾದಯಾತ್ರೆ ಸಾಗಿತು.

Ad Widget

Ad Widget

ಯಾತ್ರೆಯ ಸಂಚಾಲಕ ಪಿಯೂಸ್ ಎಲ್.ರಾಡ್ರಿಗಸ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ. ಎಸ್. ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಂಚಾಯತ್‌ರಾಜ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಜಿ ಎ. ಉಸ್ಮಾನ್ ಕರೋಪಾಡಿ, ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಕನ್ಯಾನ ಗ್ರಾ.ಪಂ.ಅಧ್ಯಕ್ಷ ಕೆ.ಪಿ.ಅಬ್ದುಲ್‌ರಹಿಮಾನ್, ಕರೋಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅನ್ವರ್ ಕರೋಪಾಡಿ, ಸಾಲೆತ್ತೂರು ಗ್ರಾ.ಪಂ.ಅಧ್ಯಕ್ಷ ಹಸೈನಾರ್, ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ವಿಟ್ಠಲ ಶೆಟ್ಟಿ, ವಲಯ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್‌ಮಜೀದ್, ಯೂತ್ ಅಧ್ಯಕ್ಷ ಇಬ್ರಾಹಿಂ ನವಾಝ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಕೆಪಿಸಿಸಿ ಮಹಿಳಾ ಕಾರ್ಯದರ್ಶಿ ಮಲ್ಲಿಕಾ ಪಕ್ಕಳ, ಕೊಳ್ನಾಡು ವಲಯಾಧ್ಯಕ್ಷ ಪವಿತ್ರ ಪೂಂಜ, ವಿಟ್ಲಪಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಸಂದೇಶ್ ಶೆಟ್ಟಿ ಬಿಕ್ನಾಜೆ, ಪ್ರಮುಖರಾದ ಐಡಾ ಸುರೇಶ್, ಲೋಲಾಕ್ಷಿ ಶೆಟ್ಟಿ, ಪದ್ಮನಾಭ ರೈ, ಹರ್ಷದ್ ಸರವು, ಚಿತ್ತರಂಜನ್ ಶೆಟ್ಟಿ, ಮೋಹನದಾಸ್, ಬ್ಲಾಕ್ ಕಾರ್ಯದರ್ಶಿ ಪ್ರಶಾಂತ್ ಪಕ್ಕಳ, ಸಿದ್ಧಿಕ್ ಸರವು, ಸಾಲೆತ್ತೂರು, ಕನ್ಯಾನ, ಕರೋಪಾಡಿ ಗ್ರಾ.ಪಂ.ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ವಿಟ್ಲಪಡ್ನೂರು,ಕೊಳ್ನಾಡು, ಮಂಚಿ ಭಾಗದಲ್ಲಿ ಪ್ರಜಾಧ್ವನಿ ಯಾತ್ರೆ:
ಕಡಂಬು ವಿನಲ್ಲಿ ಭಾನುವಾರದ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಾಯಿತು. ಕೊಡುಂಗಾಯಿ, ಪರ್ತಿಪ್ಪಾಡಿ, ಸರವು ಮದಕ, ತಳಿತ್ತನೂಜಿ – ನಾರ್ಶ, ಸೆರ್ಕಳ ಮಾದಕಟ್ಟೆ ಮದಕ, ಕುಡ್ತಮುಗೇರು ಪೇಟೆ ಸಾಲೆತ್ತೂರು ಕಟ್ಟೆ, ಸಾಲೆತ್ತೂರು ವಲಯ ಕಾಂಗ್ರೆಸ್ ಕಛೇರಿ, ಸಾಲೆತ್ತೂರು ಜಂಕ್ಷನ್ ನಲ್ಲಿ ಪ್ರಜಾದ್ವನಿ ಯಾತ್ರೆ ಸಾಗಿತು. ನೂರಾರು ಬೈಕ್, ವಾಹನಗಳು ರಥ ಹಿಂದೆ ಸಾಗುವ ಮೂಲಕ ವಾಹನ ಜಾಥಾ ದಂತೆ ಕಂಗೊಳಿಸಿತು.

Ad Widget
Click to comment

Leave a Reply

ಅಪರಾಧ

Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget alt="Ad Widget"/>

Ad Widget

ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಬ್ಯಾಂಕ್‌ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.

Ad Widget

Ad Widget <> Ad Widget

ನವೆಂಬರ್ 20ರಂದು ಕವಿತಾ ಅವರು ನಾಪತ್ತೆಯಾಗಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದ್ದ ಕವಿತಾ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!