Connect with us

ಸಿನೆಮಾ

Uri Gowda Nanje Gowda | ಉರಿ ಗೌಡ-ನಂಜೇ ಗೌಡರ ಬಗ್ಗೆ ಸರಿಯಾದ ಐತಿಹ್ಯ ದಾಖಲೆಗಳಿಲ್ಲ – ಚಿತ್ರ ನಿರ್ಮಾಣದಿಂದ ನಮ್ಮ ಸಮಾಜದ ಅಸ್ಮಿತೆಗೆ ಧಕ್ಕೆಯಾಗಲಿದೆ : ಆದಿಚುಂಚನಗಿರಿ ಶ್ರೀ – ಸಿನಿಮಾ ನಿರ್ಮಾಣದಿಂದ ಹಿಂದೆ ಸರಿದ ಸಚಿವ ಮುನಿರತ್ನ

Published

on



Ad Widget

Ad Widget

Ad Widget

Ad Widget

ಕರ್ನಾಟಕದಲ್ಲಿ ಭಾರೀ ಚರ್ಚೆಗೆ ಕಾರಣ ಆಗಿದ್ದ ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣವನ್ನು ಸಚಿವ ಮತ್ತು ನಿರ್ಮಾಪಕ ಮುನಿರತ್ನ ಕೈಬಿಟ್ಟಿದ್ದಾರೆ. ಆದಿ ಚುಂಚನಗಿರಿಯ ನಿರ್ಮಲಾನಂದ ಶ್ರೀಗಳ ವಿರೋಧದಿಂದ ನಾನು ಸಿನಿಮಾ ಮಾಡಲ್ಲ ಎಂದು ಮುನಿರತ್ನ ಹೇಳಿದ್ದಾರೆ. ಸ್ವಾಮೀಜಿಗಳ ಜೊತೆ ಮಾತುಕತೆ ನಡೆಸಿದ ಬಳಿಕ ಮುನಿರತ್ನ ಈ ನಿರ್ಧಾರವನ್ನು ಪ್ರಕಟಿಸಿದ್ದು, ಉರಿಗೌಡ, ನಂಜೇಗೌಡ (Uri Gowda Nanje Gowda) ಚಿತ್ರ ನಿರ್ಮಾಣದಿಂದ ಹಿಂದೆ ಸರಿದಿದ್ದಾರೆ.

Ad Widget

Ad Widget

Ad Widget

Ad Widget

ಮಂಡ್ಯದ ಕೊಮ್ಮೇರನಹಳ್ಳಿಯಲ್ಲಿ ಮಾತನಾಡಿದ ಅವರು, ವೃಷಭಾದ್ರಿ ಪ್ರೊಡಕ್ಷನ್‌ ಅಡಿ ಮೇ 14ರಂದು ಚಿತ್ರೀಕರಣದ ಮುಹೂರ್ತ ಮಾಡಬೇಕು ಅಂದುಕೊಂಡಿದ್ದೆ. ಮೈಸೂರು ಸಂಸ್ಥಾನಕ್ಕೆ ಸಂಬಂಧಿಸಿದಂತೆ ಬಹಳ ದೊಡ್ಡ ಸಿನಿಮಾವನ್ನು ಮಾಡಬೇಕು ಅಂದುಕೊಂಡಿದ್ದೆ. ಟಿಪ್ಪು ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಚರ್ಚೆಯಾಗಿತ್ತು. ಎಚ್‌ಡಿ ಕುಮಾರಸ್ವಾಮಿ ಅವರು ಮುನಿರತ್ನನಿಗೆ ಅಶ್ವತ್ಥ್ ನಾರಾಯಣ್ ಸಿನಿಮಾ ಮಾಡೋಕೆ ಹೇಳಿರಬೇಕು ಅಂತಾ ಹೇಳಿದ್ದರು. ಅಲ್ಲಿಯವರೆಗೆ ನನಗೆ ಸಿನಿಮಾ ಮಾಡುವ ಆಲೋಚನೆ ಇರಲಿಲ್ಲ ಎಂದರು.

Ad Widget

Ad Widget

Ad Widget alt="Ad Widget"/>

Ad Widget

ಉರಿಗೌಡ, ನಂಜೇಗೌಡ ವಿಚಾರದಲ್ಲಿ ಒಂದಷ್ಟು ದಾಖಲೆ ಸಿಗುತ್ತಿವೆ, ಒಂದಷ್ಟು ಸಿಗುತ್ತಿಲ್ಲ. ಅದಕ್ಕಾಗಿ ನನಗೆ ಚಿತ್ರ ಮಾಡಬೇಕು ಅನ್ನಿಸಿತು. ಸ್ವಾಮೀಜಿ ಅವರ ಜೊತೆ ಚರ್ಚೆ ಮಾಡಿದೆ. ಆಗ ನನಗೆ ಅನ್ನಿಸಿತು, ಯಾರಿಗೂ ಮನಸ್ಸು ನೋಯಿಸಿ ಸಿನಿಮಾ ಮಾಡಬಾರದು. ಸಿನಿಮಾ ಮಾಡಲು ಕಥೆಗಳು ತುಂಬಾ ಸಿಗುತ್ತದೆ. ಸ್ವಾಮೀಜಿ ಅವರಿಗೆ ಹೇಳಿದ್ದೇನೆ, ಯಾರ ಮನಸ್ಸು ನೋಯಿಸುವ ಉದ್ದೇಶ ನನ್ನದಲ್ಲ. ನಾನು ಈ‌ ಸಿನಿಮಾ ಇಲ್ಲಿಯೇ ಕೈ ಬಿಡುತ್ತೇನೆ. ಬಿಜೆಪಿಯವನು ಅಂತಾ ನಾನು ಈ ಸಿನಿಮಾ ಮಾಡಲು ಹೋಗಲ್ಲ ಎಂದು ಹೇಳಿದರು.

Ad Widget

Ad Widget <> Ad Widget

ಮುನಿರತ್ನ ಭೇಟಿ ಬಳಿಕ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳು, ಸಚಿವ ಮುನಿರತ್ನ ಅವರ ಉರಿಗೌಡ, ದೊಡ್ಡ ನಂಜೇಗೌಡ ಚಿತ್ರ ನಿರ್ಮಾಣದ ವಿಚಾರದಲ್ಲಿ ಸಚಿವ ಮಾತುಕತೆ ನಡೆಸಿದ್ದೇನೆ. ಒಕ್ಕಲಿಗ ಜನಾಂಗದ ಅಸ್ಮಿತೆಯಿಂದಾಗಿ ಈ ಚಿತ್ರ ನಿರ್ಮಾಣ ಮಾಡದಂತೆ ಹೇಳಿದ್ದೇನೆ. ಈ ಚಿತ್ರ ನಿರ್ಮಾಣಕ್ಕೆ ಸರಿಯಾದ ಐತಿಹ್ಯ ದಾಖಲೆಗಳಿಲ್ಲ. ಇದರಿಂದ ನಮ್ಮ ಸಮಾಜದ ಅಸ್ಮಿತೆಗೆ ಧಕ್ಕೆಯಾಗಲಿದೆ ಎಂದು ತಿಳಿಸಿದ್ದೇನೆ. ಈ ವಿಚಾರದಲ್ಲಿ ಸಚಿವ ಮುನಿರತ್ನ‌ ಕೂಡ ಚಿತ್ರ ನಿರ್ಮಾಣದಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ. ಯಾರಿಗೂ ನೋವು ಉಂಟು ಮಾಡುವ ಉದ್ದೇಶವಿಲ್ಲ ಎಂದು ಅವರು‌ ಕೂಡ ಸ್ಪಷ್ಟಪಡಿಸಿದ್ದಾರೆ‌. ನಿಮ್ಮ ನಿರ್ದೇಶನದ ಮೇರೆಗೆ ಚಿತ್ರ ನಿರ್ಮಾಣ ‌ಮಾಡುವುದಿಲ್ಲ ಎಂದಿದ್ದಾರೆ ಎಂದು ತಿಳಿಸಿದರು.



Ad Widget
Ad Widget
Click to comment

Leave a Reply

ಸಿನೆಮಾ

Bana-ಮುಂಬೈ ಪ್ರೀಮಿಯರ್ನಲ್ಲಿ” ಬನ” ತುಳು ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ

Published

on



Ad Widget

Ad Widget

Ad Widget

Ad Widget

ಬಹು ನಿರೀಕ್ಷೆಯ ಬನ ಚಿತ್ರದ ಮೊದಲ ಎರಡು ಪ್ರೀಮಿಯರ್ ಮುಂಬೈನ ಮುಲುಂದ್ ಮತ್ತು ಕಲ್ಯಾಣ್ ನಲ್ಲಿ ನಡೆದಿದ್ದು ಅಲ್ಲಿನ ತುಳು ಪ್ರೇಕ್ಷಕರು ಚಿತ್ರದ ಬಗ್ಗೆ ಪ್ರಶಂಸೆಯ ಸುರಿಮಳೆ ಗೈದಿದ್ದಾರೆ. ಯುವ ಕಲಾವಿದರು ಅದ್ಭುತವಾಗಿ ನಟಿಸಿದ್ದು ಚಿತ್ರದ ಕಥೆ ಎಲ್ಲರ ಗಮನ ಸೆಳೆದಿದೆ. ಇದು ಮೊದಲ ನಾಗ ಆಧಾರಿತ ತುಳುಚಿತ್ರವಾಗಿದ್ದು ಅದ್ಭುತವಾಗಿ ಮೂಡಿಬಂದಿದೆ

Ad Widget

Ad Widget

Ad Widget

Ad Widget

ಬಹು ನಿರೀಕ್ಷೆಯ ಬನ ಚಿತ್ರದ ಮೊದಲ ಎರಡು ಪ್ರೀಮಿಯರ್ ಮುಂಬೈನ ಮುಲುಂದ್ ಮತ್ತು ಕಲ್ಯಾಣ್ ನಲ್ಲಿ ನಡೆದಿದ್ದು ಅಲ್ಲಿನ ತುಳು ಪ್ರೇಕ್ಷಕರು ಚಿತ್ರದ ಬಗ್ಗೆ ಪ್ರಶಂಸೆಯ ಸುರಿಮಳೆ ಗೈದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಯುವ ಕಲಾವಿದರು ಅದ್ಭುತವಾಗಿ ನಟಿಸಿದ್ದು ಚಿತ್ರದ ಕಥೆ ಎಲ್ಲರ ಗಮನ ಸೆಳೆದಿದೆ. ಇದು ಮೊದಲ ನಾಗ ಆಧಾರಿತ ತುಳುಚಿತ್ರವಾಗಿದ್ದು ಅದ್ಭುತವಾಗಿ ಮೂಡಿಬಂದಿದೆ. ಅಲ್ಲಿನ ಪ್ರೇಕ್ಷಕರ ಪ್ರಕಾರ ಚಿತ್ರವನ್ನು ಕಥೆ ಆವರಿಸಿಕೊಂಡಿದ್ದು ಹಿರಿಯ ಕಿರಿಯ ಕಲಾವಿದರು ತಮ್ಮ ತಮ್ಮ ಪಾತ್ರಕ್ಕೆ ಜೀವ ತುಂಬಿದ್ದಾರೆ.

Ad Widget

Ad Widget <> Ad Widget

ಬಾಬಪ್ರಸಾದ್ ಅರಸ ಹಾಗೂ ನಾಗಕಿರಣ್ ಶೆಟ್ಟಿ ಮುಂಬಯಿ ನೇತೃತ್ವದಲ್ಲಿ ಮುಂಬೈ ಶೋ ಯಶಸ್ವಿಯಾಗಿ ನೆರವೇರಿದೆ. ಶನಿವಾರ ಶೋ ನಡೆದು ಹೌಸ್ಫುಲ್ ಪ್ರದರ್ಶನ ಗೊಂಡ ದಾಕಲೆ ಬನ ಚಿತ್ರದ್ದು.ಚಿತ್ರ ಇದೆ ತಿಂಗಳು 23 ಕ್ಕೆ ಬಿಡುಗಡೆಯಾಗಲಿದೆ.



Ad Widget
Ad Widget
Continue Reading

ಸಿನೆಮಾ

Nana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget

Ad Widget

ಪಣಜಿ: ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಡೋನಾ ಪೌಲಾದ ಓಷನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್‌ನ ಮಣಿಪಾಲ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ 75 ವರ್ಷದ ನಾನಾ ಪಾಟೇಕರ್ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.

Ad Widget

Ad Widget <> Ad Widget

ತನಿಖೆಯ ಭಾಗವಾಗಿ ನಟನ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯೂ ನಡೆದಿದೆ.



Ad Widget

ನಾನಾ ಪಾಟೇಕರ್ ಅವರ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ, ಸಾವಿನ ನಿಖರ ಕಾರಣ ಮತ್ತು ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿರುವುದು ಮಾತ್ರವೇ ಸಾವಿನಲ್ಲಿ ಅಪರಾಧ ಅಥವಾ ಸಂಶಯಾಸ್ಪದ ಕೃತ್ಯ ನಡೆದಿದೆ ಎಂಬುದನ್ನು ಸೂಚಿಸುವುದಿಲ್ಲ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

Continue Reading

ಸಿನೆಮಾ

Drishyam 3-ಮಲಯಾಳಂ ನ ದಾಖಲೆ ಮುರಿದು ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಧಮಾಕಾ; 4 ದಿನದಲ್ಲೇ ₹300 ಕೋಟಿ ಕ್ಲಬ್‌ಗೆ ಎಂಟ್ರಿ..!

Published

on



Ad Widget

Ad Widget

Ad Widget

Ad Widget

ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್‌ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ ಇದೀಗ ₹303 ಕೋಟಿ ತಲುಪಿದೆ.

Ad Widget

Ad Widget

Ad Widget

Ad Widget

ಮುಂಬೈ: ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್‌ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ ಇದೀಗ ₹303 ಕೋಟಿ ತಲುಪಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಿಡುಗಡೆಯ ನಾಲ್ಕನೇ ದಿನ ಚಿತ್ರವು ಭಾರತದಲ್ಲಿ 16,274 ಪ್ರದರ್ಶನಗಳಿಂದ ಸುಮಾರು ₹21 ಕೋಟಿ ನಿವ್ವಳ ಗಳಿಸಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ನಿವ್ವಳ ಗಳಿಕೆ ₹197.50 ಕೋಟಿಗೆ ತಲುಪಿದ್ದು, ಒಟ್ಟು ಕಲೆಕ್ಷನ್ ಸುಮಾರು ₹237 ಕೋಟಿ ಆಗಿದೆ.

Ad Widget

Ad Widget <> Ad Widget

ಚಿತ್ರಕ್ಕೆ ಭಾರತ ಮಾತ್ರವಲ್ಲದೆ ಸಾಗರೋತ್ತರ ಮಾರುಕಟ್ಟೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾಲ್ಕನೇ ದಿನ ವಿದೇಶಿ ಮಾರುಕಟ್ಟೆಯಲ್ಲಿ ಸುಮಾರು ₹5 ಕೋಟಿ ಗಳಿಸಿದ್ದು, ಇದರೊಂದಿಗೆ ವಿದೇಶದಲ್ಲಿನ ಒಟ್ಟು ಗಳಿಕೆ ₹66 ಕೋಟಿ ತಲುಪಿದೆ.



Ad Widget

ಮಲಯಾಳಂ ‘ದೃಶ್ಯಂ 3’ ಗಳಿಕೆಯನ್ನೂ ಮೀರಿಸಿದ ಹಿಂದಿ ಸಿನಿಮಾ
ಅಜಯ್ ದೇವಗನ್ ಅಭಿನಯದ ಹಿಂದಿ ‘ದೃಶ್ಯಂ 3’ಗೂ ಮುನ್ನ ಮೋಹನ್‌ಲಾಲ್ ನಟನೆಯ ಮಲಯಾಳಂ ‘Drishyam 3: The Past Never Stays Silent’ ಬಿಡುಗಡೆಯಾಗಿತ್ತು. ಆ ಚಿತ್ರವು ವಿಶ್ವಾದ್ಯಂತ ₹237.70 ಕೋಟಿ ಗಳಿಕೆ ದಾಖಲಿಸಿತ್ತು ಎಂದು ವರದಿಯಾಗಿದೆ.

Ad Widget

Ad Widget

ಬಾಕ್ಸ್ ಆಫೀಸ್ ಗಳಿಕೆಯ ವಿವರ
ಕೇರಳ: ಸುಮಾರು ₹86.25 ಕೋಟಿ
ಭಾರತದ ಇತರ ಭಾಗಗಳು: ₹37.52 ಕೋಟಿ
ವಿದೇಶಿ ಮಾರುಕಟ್ಟೆ: ₹109.15 ಕೋಟಿ

ಮಧ್ಯಪ್ರಾಚ್ಯ, ಉತ್ತರ ಅಮೆರಿಕಾ ಹಾಗೂ ಯುಕೆ ಮಾರುಕಟ್ಟೆಗಳಲ್ಲಿ ಚಿತ್ರದ ಗಳಿಕೆ ಗಮನಾರ್ಹವಾಗಿದ್ದು, ವಿದೇಶಿ ಕಲೆಕ್ಷನ್ ಹೆಚ್ಚಲು ಈ ಪ್ರದೇಶಗಳ ಕೊಡುಗೆ ಪ್ರಮುಖವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading