Connect with us

ದಕ್ಷಿಣ ಕನ್ನಡ

Farmer Sucide : ಇಡ್ಕಿದು ಸೊಸೈಟಿಯ ಕಿರುಕುಳ, ಬೆದರಿಕೆಗೆ ಮನನೊಂದು ರೈತ ಆತ್ಮಹತ್ಯೆ – ಸಾವಿಗೆ ಕಾರಣರಾದ ಸಿಇಒ ವಜಾ ಮಾಡಿ, ಆಡಳಿತ ಮಂಡಳಿ ಬರ್ಖಾಸ್ತುಗೊಳಿಸಿ, 50 ಲ.ರೂ ಪರಿಹಾರ ನೀಡಿ : ರೈತ ಸಂಘ ಹಸಿರು ಸೇನೆ ಆಗ್ರಹ

Published

on



Ad Widget

Ad Widget

Ad Widget

Ad Widget

ಪುತ್ತೂರು Puttur : ಮಾ 20 : ಕೃಷಿ ಅಭಿವೃದ್ಧಿ ಸಾಲ ಪಡೆದ ರೈತನಿಗೆ ಮರು ಪಾವತಿಸುವಂತೆ ಸಹಕಾರಿ ಬ್ಯಾಂಕಿನ ಕಾರ್ಯ ನಿರ್ವಹಣಾಧಿಕಾರಿಯವರು ನಿರಂತರ ಕಿರುಕುಳ ನೀಡಿದ ಹಿನ್ನಲೆ ಆ ರೈತ  ಆತ್ಮಹತ್ಯೆ (Farmer Sucide) ಮಾಡಿಕೊಂಡಿದ್ದು, ಇದು ಸರಕಾರಿ ಪ್ರಾಯೋಜಿತ ಕೊಲೆಯೆಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಆರೋಪಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಮುಖಂಡರು, ಆತ್ಮಹತ್ಯೆ ಮಾಡಿಕೊಂಡ  ರೈತನ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು. ರೈತನ ಸಾವಿಗೆ ಕಾರಣರಾದ  ಇಡ್ಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ವಜಾ ಮಾಡಬೇಕು ಮತ್ತು ಆಡಳಿತ ಮಡಳಿಯನ್ನು ತಕ್ಷಣ ಬರ್ಕಾಸ್ತುಗೊಳಿಸಬೇಕೆಂದು  ಎಂದು ಅವರು ಅಗ್ರಹಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಇಡ್ಕಿದು ಗ್ರಾಮದ ಬಂಗೇರಕೋಡಿ ನಿವಾಸಿ ವೀರಪ್ಪ ಗೌಡ ಅವರಿಗೆ ಅಂದಾಜು 1.5 ಎಕ್ರೆ ಜಾಗವಿದ್ದು ಸುಮಾರು 6 ಲಕ್ಷದಷ್ಟು ಸಾಲವನ್ನು ಪಡೆದಿದ್ದಾರೆ. ಪತ್ನಿಯ ಅನಾರೋಗ್ಯ ಸಮಸ್ಯೆಯಿಂದ ಮೃತಪಟ್ಟ ಕಾರಣ ಅರ್ಥಿಕ ಸಮಸ್ಯೆಗೆ ಒಳಗಾದ ಕುಟುಂಬಕ್ಕೆ  ಸಾಲ ಮರು ಪಾವತಿಗೆ ಸಮಸ್ಯೆಯಾಗಿತ್ತು. ಈ ಸಮಸ್ಯೆಯನ್ನು ಬ್ಯಾಂಕಿನವರಿಗೆ ಮನವರಿಕೆ ಮಾಡಿದರೂ,  ಕೃಷಿಕರ ಮನೆಗೆ ಬೇಟಿ ನೀಡಿದ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ದೌರ್ಜನ್ಯ ಎಸಗಿದ್ದಾರೆ. ಒತ್ತಡ ಹಾಕಿದ್ದಾರೆ. ಸಾಲವನ್ನು ತಕ್ಷಣ ಕಟ್ಟಬೇಕು ಇಲ್ಲದೇ ಹೋದಲ್ಲಿ ಮನೆಯನ್ನು ಜಪ್ತಿಮಾಡುವ ಜತೆಗೆ ಮನೆಯಲ್ಲಿರುವ ಸೊತ್ತುಗಳನ್ನು ಹರಾಜು ಹಾಕುವ ಬಗ್ಗೆ ಬೆದರಿಕೆಯನ್ನು ಒಡ್ಡಲಾಗಿದೆ. ಇದರಿಂದ ಮನನೊಂದ  ವೀರಪ್ಪಗೌಡರವರು  ವಿಷ ಸೇವಿಸಿ  ಮಾ.16 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ರೈತ ಸಂಘದವರು ತಿಳಿಸಿದರು.

Ad Widget

Ad Widget <> Ad Widget

ಇಡ್ಕಿದು ಸೊಸೈಟಿಯಲ್ಲಿದ್ದ ಸಾಲಕ್ಕೆ ಅಲ್ಲಿನ ಅಡಳಿತ ಮಂಡಳಿ ಹಾಗೂ ಅಧಿಕಾರಿಗಳು ನೀಡುತ್ತಿದ್ದ  ಕಿರುಕುಳ  ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ  ವಿಟ್ಲ  ಪೊಲೀಸ್ ಠಾಣೆಗೆ ಮೃತರ  ಪುತ್ರ ಮುರಳೀಧರ ದೂರು ನೀಡಿದರೂ,ಪೊಲೀಸರು  ಸಮರ್ಪಕವಾಗಿ ಪ್ರಕರಣ ದಾಖಲಿಸಿಕೊಳ್ಳಲಿಲ್ಲ.  ಬ್ಯಾಂಕ್, ಸೊಸೈಟಿ ಸಾಲ, ಮೀಟರ್ ಬಡ್ಡಿ ಬಾದೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಾವುಗಳು ಸಂಭವಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಬಲಾಡ್ಯರ ಒತ್ತಡದಿಂದ ಪ್ರಕರಣಗಳು ಮುಚ್ಚಿಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಈ ಸಹಕಾರಿ ಬ್ಯಾಂಕಿನವರ ಕಿರುಕುಳಕ್ಕೆ ಇದೇ ಗ್ರಾಮದ ಇನ್ನೂ 2-3 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ನಮ್ಮ ಗಮನಕ್ಕೆ ಬಂದಿದ್ದು, ಈ ಬಗ್ಗೆ ಹೆಚ್ಚಿನ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.



Ad Widget

ರೈತ ಸಾಲ ಮರು ಪಾವತಿಸುವಂತೆ ಯಾವುದೇ ಒತ್ತಡ  ಹೇರಬಾರದು ಎಂದು ನಿಯಮವಿದ್ದರೂ, ಸಂಘ ಸಂಸ್ಥೆಗಳು  ಒತ್ತಡ ಹಾಕುವ ಕಾರ್ಯ ಮಾಡುತ್ತಿದೆ. ಸರ್ಕಾರದಿಂದ ರೈತನ ಕೊಲೆ ನಡೆಯುತ್ತಿದೆ. ಹೀಗಾಗಿ ಪ್ರವೀಣ್‌ ನೆಟ್ಟಾರ್‌  ಕುಟುಂಬಕ್ಕೆ ಸರಕಾರ ನೀಡಿದಷ್ಟೆ ಪರಿಹಾರಈ ರೈತನ ಸಾವಿಗೂ ನೀಡಬೇಕು ಎಂದು ಅಗ್ರಹಿಸಿದ ಅವರು  ರೈತ ಜಾಗವನ್ನು ಜಪ್ತಿ ಏಲಂ ಪ್ರಕ್ರಿಯೆ ನಡೆಸಬಾರದು. ಮಾಡಲು ಮುಂದಾದರೆ ಜಿಲ್ಲಾಧಿಕಾರಿ ತಕ್ಷಣ ನಿಲ್ಲಿಸುವ ಕಾರ್ಯ ಮಾಡಬೇಕು. ಇಲ್ಲದಿದ್ದಲ್ಲಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದರು .

Ad Widget

Ad Widget

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟದ ಮುಖ್ಯಸ್ಥರಾದ ರೂಪೇಶ್ ರೈ ಅಲಿಮಾರ್, ಸನ್ನಿ ಡಿಸೋಜ, ವಿನೋದ್ ಭಟ್ ಪಾದೆಕಲ್ಲು, ಅಮರನಾಥ ಆಳ್ವ ಈಶ್ವರಮಂಗಲ, ಭರತ್ ರೈ ಸವಣೂರು, ಭಾಸ್ಕರ ಕೊಪ್ಪಳ ಹಾಜರಿದ್ದರು.

Ad Widget

ಮಂಗಳೂರು

D.K. Shivakumar-ಅ.15ರಂದು ಮಂಗಳೂರು, ಉಡುಪಿ ಜಿಲ್ಲೆಗೆ ಡಿ.ಕೆ. ಶಿವಕುಮಾರ್ ಭೇಟಿ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 15ರ ಗುರುವಾರ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಗುರುವಾರ ಮಧ್ಯಾಹ್ನ 4.10ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4.40ಕ್ಕೆ ಕಾಪು ಉಚ್ಚಿಲದಲ್ಲಿ ನಡೆಯುವ ದಸರಾ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಮಹಿಳಾ ದಸರಾವನ್ನು ಉದ್ಘಾಟಿಸಲಿದ್ದಾರೆ.

Ad Widget

Ad Widget <> Ad Widget

ಬಳಿಕ ಸಂಜೆ 6.30ಕ್ಕೆ ಮಂಗಳೂರಿನಲ್ಲಿ ನಡೆಯುವ ಮಂಗಳೂರು ದಸರಾ ನವರಾತ್ರಿ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿರುವ ಅವರು, ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ವಿಶೇಷ ಕೊಡುಗೆ

Published

on



Ad Widget

Ad Widget

Ad Widget

Ad Widget

ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

Ad Widget

Ad Widget

Ad Widget

Ad Widget

ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್‌ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.



Ad Widget

ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.

Ad Widget
Continue Reading

ಸುಳ್ಯ

ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget alt="Ad Widget"/>

Ad Widget

ನವದೆಹಲಿ: ನಿಷೇಧಿತ ಪ್ರದೇಶವಾದ ಜಂತರ್ ಮಂತರ್ ಪ್ರವೇಶಿಸಿ, ಪೊಲೀಸ್ ಬ್ಯಾರಿಕೇಡ್ ಉಲ್ಲಂಘಿಸಿದ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget <> Ad Widget


ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಾಯಕರು ಮಂಗಳವಾರ ಮುಂಜಾನೆ ಜಂತರ್ ಮಂತರ್ ಬಳಿ ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಭೇದಿಸಿ ಒಳಪ್ರವೇಶಿಸಿದ ಅವರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿತ್ತು.



Ad Widget


ಬಂಧಿತ ನಾಯಕರನ್ನು ಇಂದು (ಬುಧವಾರ) ವಿಶೇಷ ಕಾರ್ಯಕಾರಿ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಬಳಿಕ ಅವರನ್ನು ತಿಹಾರ್ ಜೈಲಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Ad Widget

Ad Widget


ಪೊಲೀಸರ ವಿರುದ್ಧ ಸಿಜೆಪಿ ಆರೋಪ:
ಸಿಜೆಪಿ ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್ ಅವರು ‘ಎಕ್ಸ್’ (ಟ್ವಿಟರ್) ಮೂಲಕ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.


“ಜಂತರ್ ಮಂತರ್ ಘಟನೆಗೆ ಸಂಬಂಧಿಸಿದಂತೆ ನಮ್ಮ ನಾಯಕರಾದ ಸೌರವ್ ದಾಸ್, ಅಶುತೋಷ್ ಹಾಗೂ ಅಜಿಂಕ್ಯ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಅವರ ಮೇಲೆ ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ತಡರಾತ್ರಿಯವರೆಗೂ ವಕೀಲರನ್ನು ಭೇಟಿ ಮಾಡಲು ಪೊಲೀಸರು ಅವಕಾಶ ನೀಡಿರಲಿಲ್ಲ.

ಮುಂಜಾನೆ 3 ಗಂಟೆ ಸುಮಾರಿಗೆ ಖಾಸಗಿ ವ್ಯಾನ್ ಮೂಲಕ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಗೆ ಕರೆತರಲಾಗಿದೆ. ಈ ಎಲ್ಲ ಕಾನೂನುಬಾಹಿರ ಕ್ರಮಗಳ ನಡುವೆಯೂ ನಮ್ಮ ನಾಯಕರ ನೈತಿಕ ಸ್ಥೈರ್ಯ ಕುಗ್ಗಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹಿನ್ನೆಲೆ ಏನು?
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸಿಜೆಪಿ ಹಾಗೂ ಇತರ ಕೆಲವು ಸಂಘಟನೆಗಳು ದೆಹಲಿಯಲ್ಲಿ ಪ್ರತಿಭಟನೆಗಳನ್ನು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ರಾಜಧಾನಿಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.


ಕಳೆದ ಅಕ್ಟೋಬರ್ 11ರಂದು ನೂತನ ಆದೇಶ ಹೊರಡಿಸಿದ್ದ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಅವರು, ಯಾವುದೇ ಧರಣಿ ಮತ್ತು ಪ್ರತಿಭಟನೆಗಳಿಗೆ ಕೇವಲ ರಾಮ್‌ಲೀಲಾ ಮೈದಾನ, ಬುರಾರಿ ಗ್ರೌಂಡ್ ಹಾಗೂ ಸಿಬಿಡಿ ಗ್ರೌಂಡ್‌ಗಳನ್ನು ಮಾತ್ರ ನಿಗದಿಪಡಿಸಿದ್ದರು. ಈ ಆದೇಶದ ಅನ್ವಯ ಜಂತರ್ ಮಂತರ್ ಅನ್ನು ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ಕೈಬಿಡಲಾಗಿದ್ದು, ಅಲ್ಲಿ ಜಮಾವಣೆಯನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಪ್ರತಿಭಟನೆ ನಡೆಸಿದ್ದರಿಂದ ಈ ಬಂಧನ ಕಾರ್ಯಾಚರಣೆ ನಡೆದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading