ದಕ್ಷಿಣ ಕನ್ನಡ
ಮಾ.25-31: ಪುತ್ತೂರು : ಮಜಲುಮಾರು ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ, ವರ್ಷಾವಧಿ ಜಾತ್ರೋತ್ಸವ
ಪುತ್ತೂರು: ಮಾ 21: ಮಾಂಗಲ್ಯ ವರಪ್ರದಾಯಕ, ಸಂತಾನ ಪ್ರದಾಯಕ ಕ್ಷೇತ್ರ ಎಂದೇ ಪ್ರಸಿದ್ಧಿ ಪಡೆದಿರುವ, ಸುಮಾರು 800 ವರ್ಷಗಳ ಇತಿಹಾಸವಿರುವ ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ, ಪುಷ್ಪರಥ ಸಮರ್ಪಣೆ ಹಾಗೂ ಜಾತ್ರೋತ್ಸವ ಮಾ 25 ರಂದು ಆರಂಭಗೊಂಡು ಮಾ 31 ರವರೆಗೆ ವಾರಗಳ ಕಾಲ ವಿಜ್ರಂಭಣೆಯಿಂದ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು, ಉಮಾಮಹೇಶ್ವರ ಟ್ರಸ್ಟ್ನ ಗೌರವಾಧ್ಯಕ್ಷರಾಗಿರುವ ಜಯರಾಮ ಕೆದಿಲಾಯ ಶಿಬರ ಹೇಳಿದರು
ಪುತ್ತೂರಿನ ವಾರ್ತಾಭವನದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಹಾಗೂ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ, ತಾಂತ್ರಿಕ ಕಾರ್ಯಕ್ರಮಗಳು ನಡೆಯಲಿದ್ದು , ಇದರ ಜತೆಗೆ ಅಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಬ್ರಹ್ಮಕಲಶೋತ್ಸವದ ಸಂಭ್ರಮಕ್ಕೆ ಮೆರಗು ನೀಡಲಿದೆ ಎಂದರು
ಮಾ.30ರಂದು ಪೂರ್ವಾಹ್ನ 108 ಕಾಯಿ ಮಹಾಗಣಪತಿ ಹೋಮ, ಮೀನ ಲಗ್ನ ಶುಭಮುಹೂರ್ತದಲ್ಲಿ ದೇವರಿಗೆ ಅಷ್ಟಬಂಧಕ್ರಿಯೆ ಬ್ರಹ್ಮಕಲಶಾಭಿಷೇಕ, ಪುಷ್ಪ ರಥ ಸಮರ್ಪಣೆ ನಡೆಯಲಿದೆ. ಕಾಸರಗೋಡು ಪದ್ಮಾಂಬಿಕ ಭಜನಾ ಮಂಡಳಿಯವರಿಂದ ಭಜನೆ ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮಿಜಿಯವರು ಆಶೀರ್ವಚನ ನೀಡಲಿದ್ದಾರೆ. ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಸಕ ಸಂಜೀವ ಮಠಂದೂರು, ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್, ಅರಣ್ಯ ಇಲಾಖೆ ಪುತ್ತೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಿ.ಪಿ ಕಾರ್ಯಪ್ಪ, ಎಂಆರ್ಪಿಎಲ್ನ ಸೀತಾರಾಮ ರೈ ಕೈಕಾರ, ಪುತ್ತೂರು ವಲಯದ ವಲಯಾರಣ್ಯಾಧಿಕಾರಿ ಕಿರಣ್ ಬಿ.ಎಂ., ಉಮಾಮಹೇಶ್ವರ ಸೇವಾ ಟ್ರಸ್ಟ್ನ ಅಧ್ಯಕ್ಷ ಲಕ್ಷ್ಮೀಶ ತಂತ್ರಿ,, ನರಿಮೊಗರು ಗ್ರಾ,ಪಂ ಉಪಾಧ್ಯಕ್ಷ ಸುಧಾಕರ ಕುಲಾಲ್ ಉಪಸ್ಥಿತರಿರುವರು. ಮಧ್ಯಾಹ್ನ ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಪಿ.ಕೆ ಗಣೇಶ್ ಬಳಗದವರಿಂದ ಸ್ಯಾಕ್ಸೋಫೋನ್ ವಾದನ, ಮಹಾಪೂಜೆ, ಶ್ರೀದೇವರ ಬಲಿ ಹೊರಟು ಶ್ರೀಭೂತ ಬಲಿ ಉತ್ಸವ, ದೇವರಿಗೆ ಪ್ರಥಮ ಪುಷ್ಪರಥೋತ್ಸವ ವಸಂತಕಟ್ಟೆ ಪೂಜೆ ನಡೆಯಲಿದೆ.
ಮಾ.31ರಂದು ಬೆಳಿಗ್ಗೆ ಶ್ರೀದೇವರ ಬಲಿ ಹೊರಟು ಉತ್ಸವ, ಪಲ್ಲಕ್ಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ದೈವಗಳ ಭಂಡಾರ ತೆಗೆದು ವಾರಹಿ, ರಕ್ತೇಶ್ವರಿ, ಗುಳಿಗ ದೈವಗಳಿಗೆ ನೇಮೋತ್ಸವಗಳೊಂದಿಗೆ ಸಂಪನ್ನಗೊಳ್ಳಲಿದೆ ಎಂದು ಅವರು ತಿಳಿಸಿದರು.
ಆಮಂತ್ರಣ ಪತ್ರಿಕೆ ವಿತರಣೆ – ಹಸಿರುವಾಣಿ
ಮಾ 21ರಂದು ಪುತ್ತೂರಿನ ಬೋಳ್ವಾರಿನಿಂದ ಧರ್ಬೆ ಕೂರ್ನಡ್ಕದವರೆಗೆ ಮುಖ್ಯರಸ್ತೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ನಡೆಯಲಿದೆ
ಮಾ 25 ರಂದು ಶ್ರೀ ದೇವರಿಗೆ ಸಮರ್ಪಣೆಯಾಗಲಿರುವ ಪುಷ್ಪರಥ ಮತ್ತು ಹಸಿರುವಾಣಿಯ ಮೆರವಣಿಗೆ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಿಂದ ವಾದ್ಯ ಘೋಷಗಳೊಂದಿಗೆ ಭವ್ಯವಾದ ಮೆರವಣಿಗೆಯಲ್ಲಿ ಶ್ರೀಕ್ಷೇತ್ರಕ್ಕೆ ಸಾಗಲಿದೆ.
ಮಜಲುಮಾರು ಶ್ರೀ ಉಮಾಮಹೇಶ್ವರ ಟ್ರಸ್ಸ್ನ ಅಧ್ಯಕ್ಷ ಲಕ್ಷ್ಮೀಶ ತಂತ್ರಿ,ಸದಸ್ಯ ಸುಜಾಯ ತಂತ್ರಿ,ಕಾರ್ಯದರ್ಶಿ ಕೇಶವ ಮುಕ್ವೆ, ಕೋಶಾಧಿಕಾರಿ ನವೀನ್ ರೈ ಶಿಬರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಣ
Sanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಪ್ರತಿಸ್ಪರ್ಧಿಗಳಿಗೆ ತೀವ್ರ ಪೈಪೋಟಿ ನೀಡಿದ ಸಾನಿಧ್ಯ, ತಮ್ಮ ಚೆಸ್ ಕೌಶಲ್ಯ ಮತ್ತು ಅತ್ಯುತ್ತಮ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯೊಂದಿಗೆ ಅವರು ಮುಂದಿನ ಹಂತದ ಎಸ್ಜಿಎಫ್ಐ (School Games Federation of India) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.
ಸುದೇಶ್ ಮತ್ತು ಶ್ರುತಿ ದಂಪತಿಯ ಪುತ್ರಿಯಾದ ಸಾನಿಧ್ಯ, ನಿರಂತರ ಪರಿಶ್ರಮ, ಏಕಾಗ್ರತೆ ಹಾಗೂ ಕ್ರೀಡಾ ಕೌಶಲ್ಯದ ಮೂಲಕ ಈ ಮಹತ್ವದ ಯಶಸ್ಸು ಸಾಧಿಸಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.
ಕಾರ್ಯಕ್ರಮಗಳು
‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್ಫೆಸ್ಟ್ 2K26’
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.
ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಫಿನ್ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಕರಾಗಿ ಭಾಗವಹಿಸಿದರು.
ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್ಫೆಸ್ಟ್ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

ಮೇಳದಲ್ಲಿ ವಾಣಿಜ್ಯ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಸಾಮರ್ಥ್ಯ, ಉದ್ಯಮಶೀಲ ಚಿಂತನೆ, ಸೃಜನಶೀಲತೆ, ಹಣಕಾಸು ಅರಿವು, ಸಂವಹನ ಕೌಶಲ, ನಾಯಕತ್ವ, ತಂಡಭಾವನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದವು. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯಕರ ಸ್ಪರ್ಧೆ ಹಾಗೂ ಸಹಕಾರದ ವಾತಾವರಣ ನಿರ್ಮಿಸಿದರು.
ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು, ಪುತ್ತೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ, ಪುತ್ತೂರು ಸಮಗ್ರ ರನ್ನರ್ಅಪ್ ಸ್ಥಾನ ಗಳಿಸಿತು.
ಪದವಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ತ್ರಿಶಾ ಕಾಲೇಜು, ಮಂಗಳೂರು ಸಮಗ್ರ ರನ್ನರ್ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಸತತ ಸಾಧನೆ, ಸಿದ್ಧತೆ, ತಂಡಕಾರ್ಯ ಹಾಗೂ ಪ್ರತಿಭೆಗೆ ಈ ಫಲಿತಾಂಶ ಸಾಕ್ಷಿಯಾಯಿತು.
ವಿಜೇತರಿಗೆ ಪ್ರಶಸ್ತಿ ಪ್ರದಾನ
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ರನ್ನರ್ಅಪ್ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.
-
ದಕ್ಷಿಣ ಕನ್ನಡ24 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ22 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು16 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ23 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized22 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಕಾರ್ಯಕ್ರಮಗಳು16 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಕಾರ್ಯಕ್ರಮಗಳು15 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
-
ಬಿಗ್ ನ್ಯೂಸ್23 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ



















