Connect with us

ಬಿಗ್ ನ್ಯೂಸ್

ಕಡಬ : ಕಾಲೇಜ್ ವಿದ್ಯಾರ್ಥಿನಿ ರೇಬಿಸ್ ಗೆ ಬಲಿ – ನಾಲ್ಕು ತಿಂಗಳ ಹಿಂದೆ ಪರಿಸರದಲ್ಲಿ ಕಾಣಿಸಿಕೊಂಡಿದ್ದ ಹುಚ್ಚುನಾಯಿ

Published

on



Ad Widget

Ad Widget

Ad Widget

Ad Widget

ಕಾಲೇಜ್‌ ವಿದ್ಯಾರ್ಥಿನಿಯೊಬ್ಬಳು ರೇಬಿಸ್ ವೈರಸ್‌ಗೆ ತುತ್ತಾಗಿ ಮೃತಪಟ್ಟ ಧಾರುಣ ಘಟನೆ ಅ. 1 ರಂದು ಕಡಬ ತಾಲೂಕಿನ ಆಲಂಕಾರು ಗ್ರಾಮದಲ್ಲಿ ನಡೆದಿದೆ.  ಆಲಂಕಾರು ಗ್ರಾಮದ ಕೆದಿಲ ವರ್ಗಿಸ್ ಅವರ ಪುತ್ರಿ  ವಿನ್ಸಿ ಸಾರಮ್ಮ  (17) ಮೃತ ದುರ್ದೈವಿ.  ಈಕೆ  ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ.

Ad Widget

Ad Widget

Ad Widget

Ad Widget

ಗುರುವಾರ ಬೆಳಿಗ್ಗೆ ವಿನ್ಸಿಗೆ ತಲೆ ನೋವು ಕಾಣಿಸಿಕೊಂಡಿತ್ತು. ನೋವು ಶಮನಕ್ಕಾಗಿ ಸ್ಥಳೀಯ ಆಸ್ಫತ್ರೆಯಿಂದ ಮದ್ದು ತರಲಾಗಿತ್ತು. ಸಂಜೆಯ ವೇಳೆಗೆ ರೋಗ ಮತ್ತಷ್ಟು ಉಲ್ಭಣಿಸಿತ್ತು. ಹೀಗಾಗಿ ಆಕೆಯನ್ನು ಪುತ್ತೂರು ಖಾಸಗಿ ಆಸ್ಫತ್ರೆಗೆ ಕರೆದುಕೊಂಡು ಹೋಗಿ ಬಳಿಕ ಮಂಗಳೂರಿನ ಜಿಲ್ಲಾಸ್ಫತ್ರೆಗೆ ದಾಖಲಿಸಲಾಗಿತ್ತು. ಆದರೇ ಗುರುವಾರ ತಡ ರಾತ್ರಿ ಆಕೆ ನಿಧನ ಹೊಂದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ನಾಲ್ಕು ತಿಂಗಳ ಹಿಂದೆ ಅಲಂಕಾರು ಪೇಟೆ ಹಾಗೂ ಇವರ ಮನೆಯ ಸುತ್ತಮುತ್ತ ಹುಚ್ಚುನಾಯಿ ಹಾವಳಿ ಇಟ್ಟಿತ್ತು ಹಾಗೂ ಇಬ್ಬರ ಮೇಲೆ ದಾಳಿ ಕೂಡ ಮಾಡಿತ್ತು. ಅಲ್ಲದೇ, ಈ ಪರಿಸರದ ಹಲವು ನಾಯಿಗಳಿಗೆ ಈ ಹುಚ್ಚು ನಾಯಿ ಕಚ್ಚಿತ್ತು ಎನ್ನಲಾಗಿದೆ.   ಮೃತ ವಿನ್ಸಿ ಮನೆಯ ನಾಯಿಯು ಕೆಲವು ತಿಂಗಳುಗಳ ಹಿಂದೆ ರೇಬಿಸ್‌ಗೆ ಒಳಗಾಗಿ ಸಾವನ್ನಪ್ಪಿತ್ತು. ಅದೇ ನಾಯಿಯ ವೈರಸ್ ವಿದ್ಯಾರ್ಥಿನಿಗೂ ತಗಲಿರಬಹುದೆಂದು ಈಗ ಶಂಕೆ ವ್ಯಕ್ತವಾಗಿದೆ.

Ad Widget

Ad Widget <> Ad Widget

ಮೃತ : ವಿನ್ಸಿ ಸಾರಮ್ಮ

ವಿನ್ಸಿ ಮನೆಯಲ್ಲಿ ದುರಂತಗಳ ಸರಮಾಲೆ



Ad Widget

ವಿನ್ಸಿಗೆ ಒರ್ವ ಸಹೋದರನಿದ್ದು ಆತ ನಾಲ್ಕು ವರ್ಷಗಳ ಅಕಸ್ಮಿಕವಾಗಿ ನದಿಗೆ ನೀರಿಗೆ ಬಿದ್ದು ಮೃತಪಟ್ಟಿದ್ದ. 2018ರ ಎಪ್ರಿಲ್‌ನಲ್ಲಿ ಆತ  ಅಡೋಲೆಯ ಅಜ್ಜಿ ಮನೆಗೆ ಹೋಗಿದ್ದಾಗ ದುರ್ಘಟನೆ ಸಂಭವಿಸಿತ್ತು. ಈ ಮೂಲಕ ವರ್ಗಿಸ್‌ ದಂಪತಿಗಳು ಬೆಳೆದು ನಿಂತ ಇಬ್ಬರೂ ಮಕ್ಕಳನ್ನು ಅಕಾಲಿಕವಾಗಿ ಕಳೆದುಕೊಂಡು ದು:ಖದ ಮಡುವಿನಲ್ಲಿ ತೇಲಾಡುತ್ತಿದ್ದಾರೆ . ಮಗಳ ಸಾವಿನ ಬಳಿಕ ನಿನ್ನೆ ಮನೆಯವರ ಆಕ್ರಂಧನ ಮುಗಿಲು ಮುಟ್ಟಿತ್ತು.

ಸ್ಥಳೀಯ

Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget <> Ad Widget

ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.



Ad Widget

ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Ad Widget

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕ ಕಿರಣ್ ಅವರ ಸಮಯಪ್ರಜ್ಞೆ ಹಾಗೂ ಸಹಪ್ರಯಾಣಿಕರ ಮಾನವೀಯ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget
Continue Reading

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಅಂತರ ರಾಜ್ಯ

Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

Published

on



Ad Widget

Ad Widget

Ad Widget

Ad Widget

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.

Ad Widget

Ad Widget <> Ad Widget

ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.



Ad Widget

ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.

Ad Widget

Ad Widget

ಸುಮಾರು ನಾಲ್ಕು ದಶಕಗಳ ವೃತ್ತಿಜೀವನದಲ್ಲಿ ಅವರು ಆಪರೇಷನ್ ಸಫೇದ್ ಸಾಗರ್, ಆಪರೇಷನ್ ರಕ್ಷಕ್, ಕೋಪ್ ಇಂಡಿಯಾ ಹಾಗೂ ಆಪರೇಷನ್ ಸಿಂಧೂರ್ ಸೇರಿದಂತೆ ಹಲವು ಪ್ರಮುಖ ಸೇನಾ ಕಾರ್ಯಾಚರಣೆಗಳು ಮತ್ತು ಸಮರಾಭ್ಯಾಸಗಳಲ್ಲಿ ಭಾಗವಹಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading