ಅಪರಾಧ
ಮಂಗಳೂರು : ಟೈಲ್ಸ್ ಪ್ಯಾಕ್ಟರಿಯ ಮೋರಿಯಲ್ಲಿ ಎಂಟರ ಹರೆಯದ ಬಾಲಕಿಯ ಶವ ಪತ್ತೆ ಪ್ರಕರಣ – ಕಾಮಾಂಧ ರಾಕ್ಷಸರ ಪೈಶಾಚಿಕ ಕೃತ್ಯ ಬಯಲು | ಸಾಮೂಹಿಕ ಅತ್ಯಾಚಾರಗೈದು ಕತ್ತು ಹಿಸುಕಿ ಕೊಲೆ –ಪುತ್ತೂರಿನ ಆರೋಪಿಯೂ ಸೇರಿ ನಾಲ್ವರ ಬಂಧನ | 8ರ ಬಾಲಕಿಯ ಮೇಲೆ ಮೂವರು ಕಾಮುಕರು ಎರಗಿ ಕೊಂದರು – ದ.ಕ ಜಿಲ್ಲೆ ಕಂಡು ಕೇಳರಿಯದ ಕೃತ್ಯ – ಪ್ರಕರಣದ ಇಂಚಿಂಚು ವಿವರ ಇಲ್ಲಿದೆ
ದ.ಕ ಜಿಲ್ಲೆಯ ಇತಿಹಾಸದಲ್ಲೇ ಇಂತಹದೊಂದು ಭೀಭತ್ಸ ಘಟನೆ ಈ ವರೆಗೆ ನಡೆದ ಬಗ್ಗೆ ವರದಿಯಾಗಿಲ್ಲ. ತಮ್ಮ ಕಾಮ ತೃಷೆ ಪೂರೈಸಲು ಎಂಟರ ಹರೆಯದ ಬಾಲಕಿಯ ಮೇಲೆ ಎರಗಿದ ಮೂವರು ಕೀಚಕರು ಆಕೆಯನ್ನು ಹುರಿದು ಮುಕ್ಕಿ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿ ಮೋರಿಯಲ್ಲಿ ಎಸೆದು ಹೋದ ಎದೆ ಜಲ್ಲೆನ್ನುವ, ಊಹಿಸಲು ಅಸಾಧ್ಯವಾದ ಪೈಶಾಚಿಕ ಕೃತ್ಯ ಮೂರು ದಿನಗಳ ಹಿಂದೆ ಮಂಗಳೂರಿನ ರಾಜ್ ಟೈಲ್ಸ್ ಪ್ಯಾಕ್ಟರಿಯ ಅವರಣದಲ್ಲಿ ನಡೆದಿದೆ.
ಈ ಅತ್ಯಂತ ಹೇಯ ಕೃತ್ಯದ ತನಿಖೆ ನಡೆಸಿದ ಮಂಗಳೂರು ಪೊಲೀಸರು ಇದು ಮದ್ಯಪ್ರದೇಶ ಹಾಗೂ ಜಾರ್ಖಂಡ್ ರಾಜ್ಯದಿಂದ ದ.ಕ. ಜಿಲ್ಲೆಗೆ ಕೆಲಸಕ್ಕೆಂದು ಬಂದ ಕಾಮುಕರ ತಂಡದ ಕೃತ್ಯ ಎಂದು ಪತ್ತೆ ಹಚ್ಚಿದ್ದು, ಕೃತ್ಯದಲ್ಲಿ ನೇರ ಭಾಗಿಯಾದ ಮೂವರನ್ನು ಹಾಗೂ ದುಷ್ಕೃತ್ಯಕ್ಕೆ ನೆರವಾದ ಓರ್ವನನ್ನು ಬಂಧಿಸಿದ್ದಾರೆ. ತನ್ನ ಸಹೋದರ ಸಹೋದರಿಯರ ಜತೆ ಆಟವಾಡುತ್ತಿದ್ದ ಕಂದಮ್ಮನನ್ನು ಅಪಹರಿಸಿ, ಹತ್ತಿರದ ಕಾರ್ಖಾನೆ ಸಮೀಪ ಅತ್ಯಾಚಾರ ಎಸಗಿರುವುದು ತನಿಖೆಯಿಂದ ಬಹಿರಂಗವಾಗಿದೆ.
ಮಧ್ಯಪ್ರದೇಶ ಜಿಲ್ಲೆಯ ಪನ್ನಾ ಜಿಲ್ಲೆಯ 21 ರ ಹರೆಯದ ಜಯ್ ಸಿಂಗ್ (ಎ 1 )ಆರೋಪಿಯಾಗಿದ್ದು, ಮಧ್ಯಪ್ರದೇಶ ಜಿಲ್ಲೆಯ ಪನ್ನಾ ಜಿಲ್ಲೆಯ 20 ವರ್ಷ ಪ್ರಾಯದ ಇಬ್ಬರು ಯುವಕರು ಕ್ರಮವಾಗಿ ಮುಕೇಶ್ ಸಿಂಗ್ (ಎ2 ) ಮತ್ತು ಮುನೀಮ್ ಸಿಂಗ್ (ಎ4) ಆರೋಪಿಗಳಾಗಿದ್ದಾರೆ. ಜಾರ್ಖಂಡ್ ರಾಜ್ಯದ ರಾಂಚಿ ಜಿಲ್ಲೆಯ 33ರ ಹರೆಯದ ಯುವಕ ಮನೀಶ್ ತಿರ್ಕಿ ಎ3 ಆರೋಪಿಯಾಗಿದ್ದಾನೆ.
ಜಯ್ ಸಿಂಗ್, ಮುಕೇಶ್ ಸಿಂಗ್ ಹಾಗೂ ಮನೀಶ್ ತಿರ್ಕಿ ಪರಾರಿಯಲ್ಲಿರುವ ರಾಜ್ ಟೈಲ್ಸ್ ಫ್ಯಾಕ್ಟರಿಯ ಕೂಲಿ ಕಾರ್ಮಿಕರಾಗಿದ್ದರೆ, ಮುನೀಮ್ ಸಿಂಗ್ (20) ಪುತ್ತೂರಿನಲ್ಲಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ . ಆರೋಪಿಗಳ ಪೈಕಿ ಈತ ಬಾಲಕಿಯ ಅತ್ಯಾಚಾರಗೆಯ್ಯುವ ಮೊದಲೇ ಬಾಲಕಿ ಮೃತಪಟ್ಟಿದ್ದಳು . ಉಳಿದ ಮೂವರು ಪೈಶಾಚಿಕವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಪೋಕ್ಸೋ ಕಾಯ್ದೆ. ಹಾಗೂ ಐಪಿಸಿ ಕಲಂ 376 ಹಾಗೂ 302ರಂತೆ ಪ್ರಕರಣ ದಾಖಲಾಗಿದೆ. ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಮೂಲತ : ಜಾರ್ಖಂಡ ರಾಜ್ಯದ, ಸಿಂಡೇಗಾ ಜಿಲ್ಲೆಯವರಾದ ಮೃತ ಬಾಲಕಿಯ ತಂದೆ ( 35 ವರ್ಷ ) ಹಾಗೂ ತಾಯಿ (28 ವರ್ಷ ಪ್ರಾಯ ) ಕಳೆದ , ಸುಮಾರು 2 ವರ್ಷಗಳಿಂದ ರಾಜ್, ಟೈಲ್ಸ್ ಪ್ಯಾಕ್ಟರಿಯಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ . ಈ ದಂಪತಿಗಳಿಗೆ ಒಟ್ಟು ನಾಲ್ಕು ಮಕ್ಕಳಿದ್ದು ಅವರ ದೊಡ್ಡವಳು 8 ವರ್ಷ ಪ್ರಾಯದ ಮೃತ ಬಾಲಕಿ
ಆರೋಪಿಗಳಾದ ಜಯ್ ಸಿಂಗ್ ಮತ್ತು ಮುಕೇಶ್ ಸಿಂಗ್ ಹೆಚ್ಚಾಗಿ ಒಂದೇ ರೂಮಿನಲ್ಲಿ ವಾಸಿಸುತ್ತಿದ್ದುಮೃತ ಬಾಲಕಿಯನ್ನು ಈ ಹಿಂದೆ ಅನೇಕ ಬಾರಿ ರೂಮಿಗೆ ಬರಮಾಡಿಕೊಂಡು ಅನುಚಿತ ವರ್ತನೆ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವುದು ತನಿಖೆಯಿಂದ ಬಹಿರಂಗವಾಗಿದೆ
ಹತ್ಯೆ ನಡೆಯುವ ನಾಲೈದು ದಿನಗಳ ಹಿಂದೆ ಆರೋಪಿಗಳಾದ ಜಯ್ ಸಿಂಗ್ , ಮುಕೇಶ್ ಸಿಂಗ್ ರವರು ಮನೀಶ್ ತಿರ್ಕಿ ರವರ ರೂಮಿನಲ್ಲಿ ಮಧ್ಯಪಾನ ಮಾಡುತ್ತಿದ್ದ ವೇಳೆ ಬಾಲಕಿಯ ಬಗ್ಗೆ ಪ್ರಸ್ತಾಪ ಬಂದಿದೆ . ರವಿವಾರ ದಿನ ಟೈಲ್ಸ್ ಕಂಪೆನಿಗೆ ರಜೆ ಇರುವುದರಿಂದ ಕಾರ್ಮಿಕರು ಯಾರು ಇರುವುದಿಲ್ಲ. ಬಾಲಕಿಯ ತಂದೆ-ತಾಯಿಯವರು ಕೂಡಾ ಮದ್ಯದ ನಶೆಯಲ್ಲಿರುತ್ತಾರೆ. ಹೀಗಾಗಿ ರವಿವಾರ ಆಕೆಯನ್ನು ಬಳಸಿಕೊಳ್ಳುವ ಬಗ್ಗೆ ಆರೋಪಿಗಳು ಮಾತನಾಡಿಕೊಂಡಿದ್ದಾರೆ. ನಾಲ್ಕನೇ ಆರೋಪಿ ಮುನೀಮ್ ಸಿಂಗ್ ಪುತ್ತೂರಿನಿಂದ ಮುಕೇಶ್ ಸಿಂಗ್ ಮನೆಗೆ ಶನಿವಾರ ಬಂದಿದ್ದು ಆತನ ಬಳಿ ಕೂಡ ಬಾಲಕಿಯ ವಿಚಾರ ಪ್ರಸ್ತಾಪವಾಗಿದೆ.

ಕೃತ್ಯ ನಡೆದ ದಿನ :
ರವಿವಾರ ನ .21 ರಂದು ಸುಮಾರು ಮಧ್ಯಾಹ್ನ 1-10 ರ ವೇಳೆಗೆ ಬಾಲಕಿಯು ತನ್ನ ಸಹೋದರ, ಸಹೋದರಿಯವರೊಂದಿಗೆ ಪ್ಯಾಕ್ಟರಿಯ ಕಂಪೌಂಡಿನ ಒಳಗಡೆ ಇರುವ ನೀರಿನ ಟ್ಯಾಂಕ್ ಬಳಿ ಆಟವಾಡುತ್ತಿದ್ದಾಗ ನಾಲ್ವರು ಆರೋಪಿಗಳು ಬಾಲಕಿಯ ಬಾಯಿನ್ನು ಕೈಯಿಂದ ಮುಚ್ಚಿ ಎತ್ತಿಕೊಂಡು ರೂಮಿನೊಳಗೆ ಹೋಗಿದ್ದಾರೆ.
ನಂತರ ಎ2 ಆರೋಪಿಯ ಬಾಲಕಿಯ ಒಳವಸ್ತ್ರವನ್ನು ತೆಗೆದು ಲೈಂಗಿಕ ದೌರ್ಜನ್ಯ ನಡೆಸಿದ್ದು, ನಂತರ ಎ3 ಆರೋಪಿಯು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ನಂತರ ಎ1 ಆರೋಪಿಯು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು ಆ ವೇಳೆಗೆ ಬಾಲಕಿ ರಕ್ತ ಸಾವದಿಂದ ಮತ್ತು ನೋವಿನಿಂದ ಬಳಲಿ ಕಿರುಚಾಡಿದ್ದಾಳೆ. ಆ ನಂತರ ಎl ಆರೋಪಿಯು ಬಾಲಕಿಯ ಕತ್ತು ಹಿಚುಕಿ ಸಾಯಿಸಿರುತ್ತಾನೆ.

ಆರೋಪಿಗಳು ಒಬ್ಬರ ಬಳಿಕ ಒಬ್ಬರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವಾಗ ಉಳಿದ ಆರೋಪಿಗಳು ಯಾರಾದರೂ ನೋಡುತ್ತಾರೆ ಎಂದು ಕಾವಲು ಕಾಯುತಿದ್ದರು. ನಂತರ ಆರೋಪಿ ಜಯಸಿಂಗ್ ಹಾಗೂ ಇತರರು ಸುತ್ತ ಮುತ್ತ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಮೃತ ಬಾಲಕಿಯನ್ನು ಮೋರಿಯ ಒಳಗಡೆ ಬಿಸಾಡಿರುತ್ತಾರೆ. ಎ4 ಆರೋಪಿಯೂ ಇತರ ಆರೋಪಿಗಳು ಲೈಂಗಿಕ ದೌರ್ಜನ್ಯ ನಡೆಸಿದಾಗ ಯಾರಾದರೂ ಬರುತ್ತಿರುತ್ತಾರೆಯೇ ಎಂಬುದರ ಬಗ್ಗೆ ನೋಡಿಕೊಳ್ಳುತ್ತಿದ್ದ ಹಾಗೂ ಬಾಲಕಿಯು ಮೃತ ಪಟ್ಟ ಹಿನ್ನಲೆಯಲ್ಲಿ ಈತನಿಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಅವಕಾಶ ಸಿಕ್ಕಿರಲಿಲ್ಲ.
ನಂತರ ಆರೋಪಿಗಳು ಈ ವಿಷಯವನ್ನು ಯಾರಿಗೂ ಹೇಳದಿರುವ ನಿರ್ಧಾರಕ್ಕೆ ಬರುತ್ತಾರೆ. ಆರೋಪಿಗಳು ಕೃತ್ಯ ಎಸಗಿರುವ ಸ್ಥಳದಲ್ಲಿ ಯಾವುದೇ ಸಿಸಿ ಕ್ಯಾಮರಾ ಇರುವುದಿಲ್ಲ ಎನ್ನುವುದು ಕೂಡ ಅವರ ಧೈರ್ಯಕ್ಕೆ ಕಾರಣವಾಗಿರುತ್ತದೆ. ಆರೋಪಿಗಳಾದ ಮುಕೇಶ್ ಸಿಂಗ್ (ಎ2 ) ಮತ್ತು ಮುನೀಮ್ ಸಿಂಗ್ (ಎ4) ಪುತ್ತೂರಿಗೆ ಹೋಗುವುದಾಗಿಯೂ ಹಾಗೂ ಜಯಸಿಂಗ್ ಮತ್ತು ಮನೀಶ್ ತಿರ್ಕಿ ಪ್ಯಾಕ್ಟರಿಯಲ್ಲಿದ್ದು, ಯಾರಿಗೂ ಸಂಶಯ ಬಾರದ ರೀತಿಯಲ್ಲಿ ನಡೆದುಕೊಳ್ಳುವುದಾಗಿಯೂ ಮಾತನಾಡಿಕೊಂಡು ಅಲ್ಲಿಂದ ಹೊರಟಿರುತ್ತಾರೆ.

ಏನಿದು ಪ್ರಕರಣ ?
ನ 21 ರಂದು ಮಧ್ಯಾಹ್ನ 12-00 ಗಂಟೆಯ ಸುಮಾರಿಗೆ ಮನೆಯಲ್ಲಿ ಊಟ ಮಾಡಿದ ಮೃತ ಬಾಲಕಿಯೂ ತನ್ನ ಸಹೋದರ ಸಹೋದರಿಯವರೊಂದಿಗೆ ಆಟವಾಡಲು ಹೋಗಿದ್ದಾಳೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ವಾಪಾಸು ಮನೆಗೆ ಮೂರು ಮಕ್ಕಳು ಮಾತ್ರ ವಾಪಸ್ಸು ಮನೆಗೆ ಬಂದಿದ್ದು, ದೊಡ್ಡ ಮಗಳು ಬಂದಿರುವುದಿಲ್ಲ . ಬಾಲಕಿಯು ಬಾರದೇ ಇದ್ದಾಗ, ತಂದೆ ತಾಯಿ ಆಕೆಗಾಗಿ ಅಕ್ಕಪಕ್ಕದವರಲ್ಲಿ ವಿಚಾರಿಸಿದ್ದಾರೆ. ಫ್ಯಾಕ್ಟರಿಯ ಹೊರಗಡೆ ಇರುವ ಮನೆಯವರನ್ನು, ಅಲ್ಲಿ ಇರುವ ಉಳಿದ ಕಾರ್ಮಿಕರನ್ನು ವಿಚಾರಿಸಿದ್ದು, ಬಾಲಕಿಯೂ ಸಿಕ್ಕಿರುವುದಿಲ್ಲ . ಕೆಲವೊಂದು ಬಾರಿ ಮಕ್ಕಳು ಅಡಗಿಕೊಳ್ಳುವ ಆಟವಾಡುವುದ್ದುದರಿಂದ ಪ್ಯಾಕ್ಟರಿಯ ಮೂಲೆ ಮೂಲೆಯಲ್ಲೂ ತಂದೆ-ತಾಯಿ ಮತ್ತು ಅಕ್ಕಪಕ್ಕದ ಜನರು ಹುಡುಕಾಟ ನಡಸಿದ್ದಾರೆ, ಸಂಜೆ 6-00 ಗಂಟೆ ಸುಮಾರಿಗೆ ಫ್ಯಾಕ್ಟರಿ ಒಳಗಡೆ ಇರುವ ತೋಡಿನ ಒಳಗಡೆ ಬಾಲಕಿ ಬಿದ್ದಿರುವುದನ್ನು ವಿಶ್ವನಾಥ ಎಂಬವರಿಗೆ ಕಾಣಿಸಿದೆ. ಬಾಲಕಿ ಆಕಸ್ಮಿಕವಾಗಿ ಮೋರಿಗೆ ಬಿದ್ದಿರಬಹುದು ಎಂದು ಮೇಲಕ್ಕೆತ್ತಿ ಮಲಗಿಸಿ ನೋಡಿದಾಗ ಆಕೆ ಮೃತಪಟ್ಟಿರುವುದು ಗೋಚರವಾಗಿದೆ.
ಬಾಲಕಿಯೂ ಕಾಣೆಯಾದ ಬಗ್ಗೆ ಮನೆಯವರು ಹುಡುಕಾಟ ನಡೆಸಿದಾಗ ಅಲ್ಲಿಯೆ ಇದ್ದ ಆರೋಪಿಗಳಾದ ಜಯಸಿಂಗ್ ಮತ್ತು ಮನೀಶ್ ತಿರ್ಕಿ ಕೂಡಾ ಬಾಲಕಿಯನ್ನು ಹುಡುಕುವಂತೆ ನಟಿಸಿದ್ದಾರೆ.
ತನಿಖೆ :

ಇದೊಂದು ಗಂಭೀರ ಪ್ರಕರಣವಾಗಿರುವುದರಿಂದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಡಿಸಿಪಿ(ಕಾ.ಸು), ಡಿಸಿಪಿ (ಅಪರಾಧ). ಎಸಿಪಿ(ದಕ್ಷಿಣ), ಎಸಿಪಿ(ಕೇಂದ್ರ) ಎಸಿಪಿ(ಉತ್ತರ), ಎಸಿಪಿ(ಸಿಸಿಆರ್‌ಬಿ) ಅವರ ನೇತ್ರತ್ವದಲ್ಲಿ (1) ಕೃತ್ಯದ ಬಗ್ಗೆ (2) ಆರೋಪಿತರ ಪತ್ತೆಯ ಬಗ್ಗೆ, (3) ಸಂಶಯಾಸ್ಪದ ಆರೋಪಿಗಳ ವಿಚಾರಣೆಯ ಬಗ್ಗೆ (4) ತಾಂತ್ರಿಕ ಮಾಹಿತಿಯನ್ನು ಕಲೆ ಹಾಕಲು ನಾಲ್ಕು ತಂಡಗಳನ್ನು ನೇಮಕ ಮಾಡಲಾಗಿತ್ತು.
ಸಿ.ಸಿ.ಟಿ.ವಿ. ಪೂಟೇಜ್, ಸಿ.ಡಿ.ಆರ್. ವಿಶ್ಲೇಷಣೆ, ಪ್ರತ್ಯಕ್ಷ ಸಾಕ್ಷಿಗಳು, ಸಾಂಧರ್ಬಿಕ ಸಾಕ್ಷಿಗಳು, ಆರೋಪಿಗಳ ತಪ್ಪೂಪಿಗೆ ಹೇಳಿಕೆಗಳ ಅಧಾರದಲ್ಲಿ ನಾಲ್ಕು ಜನ ಆರೋಪಿಗಳು ಭಾಗಿಯಾಗಿರುವುದು ಪತ್ತೆಯಾಗಿದೆಯೆಂದು ಮಂಗಳೂರು ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಅಂತರ ರಾಜ್ಯ
Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.
ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
-
Uncategorized9 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized8 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized7 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized11 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized9 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized8 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















