ಸುಳ್ಯ
Sullia | ಸುಳ್ಯ: ಮಣ್ಣು ಕುಸಿದು ಮಹಿಳೆ ಸೇರಿ ಮೂರು ಮಂದಿ ದಾರುಣ ಸಾವು
ಸುಳ್ಯ: ಸುಳ್ಯದ (Sullia) ಗುರುಂಪು ಬಳಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು ಕುಸಿದು ಮಣ್ಣಿನಡಿಗೆ ಸಿಲುಕಿ ಮೂರು ಮಂದಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಇಬ್ಬರು ಪುರುಷರು ಹಾಗು ಓರ್ವ ಮಹಿಳೆ ಮೃತಪಟ್ಟಿದ್ದಾರೆ.
ಗದಗ ಜಿಲ್ಲೆಯ ಮುಂಡರಗಿಯ ಸೋಮಶೇಖರ ರೆಡ್ಡಿ(45) ಪತ್ನಿ ಶಾಂತಾ(40) ಹಾಗು ಮತ್ತೊರ್ವ ಪುರುಷ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಗ್ನಿಶ್ಯಾಮಕ ದಳ, ಪೊಲೀಸ್ ಮತ್ತಿತರರು ಕಾರ್ಯಾಚರಣೆ ನಡೆಸಿ ಮಣ್ಣಿನಡಿಯಲ್ಲಿ ಸಿಲುಕಿ ಕೊಂಡವರನ್ನು ಹೊರ ತೆಗೆದು ಆಂಬುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.
ಗುರುಂಪು ಬಳಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಮಣ್ಣು ಕುಸಿತ ಉಂಟಾಗಿದೆ. 7 ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಇದರಲ್ಲಿ ಮೂರು ಮಂದಿ ಮಣ್ಣಿನಡಿಯಲ್ಲಿ ಸಿಲುಕಿ ಕೊಂಡರು. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸೇರಿಂದತೆ ಅಧಿಕಾರಿಗಳು ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದರು. ನಿರ್ಮಾಣ ಕಾಮಗಾರಿ ನಡೆಯುತ್ತಿದ್ದಂತೆ ಭಾರೀ ಪ್ರಮಾಣದಲ್ಲಿ ಮಣ್ಣು ಅವಘಡ ಸಂಭವಿಸಿತು.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
ಮಂಗಳೂರು17 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized14 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized12 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ21 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ21 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು23 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಉದ್ಯೋಗ17 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ16 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!


















