ಸುಳ್ಯ
Praveen Nettar | ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ – ಸುಳ್ಯ ಪಿಎಫ್ಐ ಕಚೇರಿ ಎನ್ಐಎ ಜಪ್ತಿ
ಪುತ್ತೂರು: ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ.) ಸುಳ್ಯ ಗಾಂಧಿನಗರದ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಚೇರಿಯನ್ನು ಕಾನೂನು ಪ್ರಕಾರ ಜಪ್ತಿ ಪಡಿಸಿಕೊಳ್ಳುವ ಪ್ರಕ್ರಿಯೆಗಳನ್ನು ಶನಿವಾರ ನಡೆಸಿದೆ.
ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳು ಹತ್ಯೆಗೆ ಸಂಚು ಸಭೆಗಳನ್ನು ನಡೆಸಲು ಈ ಕಚೇರಿ ಬಳಸುತ್ತಿದ್ದರು. ಜನರಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸುವ ಉದ್ದೇಶದಿಂದ ಮಾಡಲ್ಪಟ್ಟಿದೆ ಮತ್ತು ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡುವ ಉದ್ದೇಶದಿಂದ ಮಾಡಲ್ಪಟ್ಟಿದೆ, ಆ ಮೂಲಕ ಭಾರತದ ಏಕತೆ, ಸಮಗ್ರತೆ, ಭದ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರಲು ಪ್ರಯತ್ನಿಸಿದೆ ಎಂಬುದನ್ನು ಎನ್.ಐ. ಎ. ಹೇಳಿದೆ.
1967 ರ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಕಲಂ 25ರ ಅನ್ವಯ ಕೃತ್ಯಕ್ಕೆ ಬಳಸಿದ ಸುಳ್ಯ ಪಿ.ಎಫ್.ಐ. ಕಛೇರಿಯನ್ನು ಎನ್. ಐ. ಎ. ತನ್ನ ಸ್ವಾಧೀನಕ್ಕೆ ಪಡೆದುಕೊಂಡಿದೆ. ಕಛೇರಿಯನ್ನು ಪೂರ್ವಾನುಮತಿ ಹೊರತುಪಡಿಸಿ ಯಾವುದೇ ರೀತಿಯಲ್ಲಿ ಹೇಳಲಾದ ಆಸ್ತಿಯನ್ನು ವರ್ಗಾಯಿಸಲು, ಗುತ್ತಿಗೆಗೆ, ವಿಲೇವಾರಿ ಮಾಡಲು, ಅದರ ಸ್ವರೂಪವನ್ನು ಬದಲಾಯಿಸಲು ಅಥವಾ ವ್ಯವಹರಿಸಲು ನಿರ್ಬಂಧಿಸಲಾಗಿದೆ. ಬೆಂಗಳೂರು ವಿಭಾಗ ಎನ್.ಐ.ಎ ಯ ಮುಖ್ಯ ತನಿಖಾಧಿಕಾರಿ ಷಣ್ಮುಗಂ ಎಂ. ಅವರು ನೋಟೀಸ್ ಜಾರಿಗೊಳಿಸಿ ಆದೇಶಿಸಿದ್ದಾರೆ.
ಆದೇಶದ ಪ್ರತಿಯನ್ನು ನವದೆಹಲಿಯ ಎಂ. ಎಚ್. ಎ. ಜಂಟಿ ಕಾರ್ಯದರ್ಶಿಗಳಿಗೆ, ಡಿ. ಜಿ. ಎನ್. ಐ. ಎ. ನವದೆಹಲಿ, ಜಿಲ್ಲಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆ, ಪೊಲೀಸ್ ಅಧೀಕ್ಷಕರು ದಕ್ಷಿಣ ಕನ್ನಡ ಜಿಲ್ಲೆ, ಠಾಣಾಧಿಕಾರಿಗಳು ಸುಳ್ಯ ಪೊಲೀಸ್ ಠಾಣೆಗೆ ರವಾನೆ ಮಾಡಿರುವ ಬಗ್ಗೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.


ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
Uncategorized14 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized16 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು19 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ18 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಅಂತರ ರಾಜ್ಯ23 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಉದ್ಯೋಗ20 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಸ್ಥಳೀಯ23 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಬಿಗ್ ನ್ಯೂಸ್19 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ


















