Connect with us

ದಕ್ಷಿಣ ಕನ್ನಡ

ಕೊಯಿಲ ಪಶು ವೈದ್ಯಕೀಯ ಕಾಲೇಜು, ಗೋಶಾಲೆ, ಕಡಬ  ಆಡಳಿತ  ಸೌಧ, ತಾಲೂಕು  ಪಂ. ಕಟ್ಟಡ ಕಡಬದಲ್ಲಿ ಲೋಕಾರ್ಪಣೆ

Published

on



Ad Widget

Ad Widget

Ad Widget

Ad Widget

ಕಡಬ : ಮಾ 27 : 1994 ರಿಂದ ಇಲ್ಲಿಯ ತನಕ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿನ ಸಮಸ್ಯೆಗಳ ಸವಾಲುಗಳು ಹಾಗೂ ಅವಮಾನಗಳನ್ನು ಎದುರಿಸಿ ಹೊಣೆಗಾರಿಕೆಯಿಂದ ಕ್ಷೇತ್ರದ ಅಭಿವೃದ್ಧಿ ಮಾಡಿ ಸಾಧಿಸಿದ್ದೇನೆ ಎಂದು ಬಂದರು ಮೀನುಗಾರಿಕೆ  ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.

Ad Widget

Ad Widget

Ad Widget

Ad Widget

ಅವರು ಶುಕ್ರವಾರ  ಒಟ್ಟು 152  ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ  ಕಾಮಗಾರಿಗಳಾದ ಕಡಬ ತಾಲೂಕು ಆಡಳಿತ ಸೌಧ, ಕಡಬ ತಾಲೂಕು ಪಂಚಾಯಿತಿ ಕಟ್ಟಡ , ಕೊಯಿಲ ಪಶು ವೈದ್ಯಕೀಯ ಕಾಲೇಜು ಕಟ್ಟಡ ಹಾಗೂ ಕೊಯಿಲ ಗೋ ಶಾಲೆಯನ್ನು ಲೋಕಾರ್ಪಣೆ ಮಾಡಿ ತಾಲೂಕು ಪಂಚಾಯಿತಿ ಕಟ್ಟಡ ಬಳಿ ನಡೆದ ಸಭೆಯಲ್ಲಿ  ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತು ವಿತರಣೆ ನೆರವೇರಿಸಿ  ಮಾತನಾಡಿದರು. 

Ad Widget

Ad Widget

Ad Widget alt="Ad Widget"/>

Ad Widget

ನನ್ನ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರದಲ್ಲಿ ಮೂಲಭೂತ ವ್ಯವಸ್ಥೆಗಳನ್ನು ಅಳವಡಿಸಿ ಆಮೂಲಾಗ್ರ ಬದಲಾವಣೆ ಮಾಡಲಾಗಿದ್ದು , ಸಾಕಷ್ಟು  ಅಭಿವೃದ್ಧಿ ಕಾರ್ಯಗಳು ನಡೆದಿವೆ. ನಾನು ಶಾಸಕನಾಗುವ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ರಸ್ತೆಗಳು ಹದಗೆಟ್ಟು ಹೋಗಿದ್ದವು. ಈಗ ಕ್ಷೇತ್ರದ ಎಲ್ಲಾ ಮುಖ್ಯ ರಸ್ತೆಗಳು  ಅಭಿವೃದ್ಧಿಯಾಗಿವೆ, ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕ್ಷೇತ್ರದ ಹಳ್ಳಿಗಳ ರಸ್ತೆಗಳು ಕಾಂಕ್ರೀಟಿಕರಣಗೊಂಡು ಸುಸಜ್ಜಿತವಾಗಿವೆ, ಕ್ಷೇತ್ರದ ಬಹುತೇಕ ಮುಳುಗು ಸೇತುವೆಗಳಿಗೆ ಮುಕ್ತಿ ನೀಡಲಾಗಿದೆ. ಕೇಂದ್ರ ಸರಕಾರದ ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ ಗ್ರಾಮೀಣ ಭಾಗದ ಜನರಿಗೆ ಶುದ್ದ ಕುಡಿಯುವ ನೀರು ಒದಗಿಸಲಾಗುತ್ತಿದೆ. ಶಾಶ್ವತ ಕುಡಿಯುವ ನೀರಿನ ಯೋಜನೆಗೆ ನದಿಗಳಲ್ಲಿ, ತೋಡುಗಳಲ್ಲಿ ಅಣೆಕಟ್ಟೆಗಳನ್ನು ನಿರ್ಮಾಣ ಮಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.  ಕ್ಷೇತ್ರದ ವಿವಿದೆಡೆ ಸಬ್‌ಸ್ಟೇಷನ್‌ಗಳನ್ನು ನಿರ್ಮಾಣ ಮಾಡಿ ವಿದ್ಯುತ್ ಸಮಸ್ಯೆಗಳನ್ನು ನೀಗಿಸಲಾಗಿದೆ.   ಆರೋಗ್ಯ, ಶಿಕ್ಷಣ, ವಸತಿ   ಮುಂತಾದ  ಮೂಲಭೂತ ವ್ಯವಸ್ಥೆಯನ್ನು ಅಭಿವೃದ್ಧಿಪಡಿಲಾಗಿದೆ. ಕಡಬವನ್ನು ತಾಲೂಕು ಎಂದು ಘೋಷಣೆ ಮಾಡಿದ ಬಳಿಕ ಹಂತಹAತವಾಗಿ ಅನುಷ್ಠಾನ ಮಾಡಲಾಗುತ್ತಿದೆ.  ಜನರಿಗೆ ಒಂದೇ ಸೂರಿನಡಿ ಸರಕಾರಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಆಡಳಿತ ಸೌಧವನ್ನು ನಿರ್ಮಾಣಮಾಡಲಾಗಿದೆ, ನೂತನ ತಾಲೂಕು ಪಂಚಾಯಿತಿ ಕಟ್ಟಡವನ್ನು ನಿರ್ಮಾಣ ಮಾಡಿ ಲೋಕಾರ್ಪಣೆಯಾಗಿದೆ, ವಿಶೇಷವೆಂದರೆ ನೂತನವಾಗಿ ಘೋಷಣೆಯಾದ ತಾಲೂಕುಗಳಲ್ಲಿ ಕಡಬದಲ್ಲಿಯೇ ಪ್ರಥಮವಾಗಿ ಇಂತಹ ಯೋಜನೆಗಳು ಆನುಷ್ಠಾನವಾಗುತ್ತಿದೆ, ಕಡಬ ತಾಲೂಕಿಗೆ ಎಲ್ಲಾ ವ್ಯವಸ್ಥೆಗಳನ್ನು ಶೀಘ್ರದಲ್ಲಿ ಅನುಷ್ಠಾನ ಮಾಡಲು ಬದ್ದರಿದ್ದೇವೆ  ಎಂದು ಸಚಿವರು ಹೇಳಿದರು.

Ad Widget

Ad Widget <> Ad Widget

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ ದೇಶದಲ್ಲಿ ಸ್ವಾತಂತ್ಯç ಬಂದ ಬಳಿಕ ಕೇವಲ ಹದಿನಾಲ್ಕು  ವರ್ಷ ಆಡಳಿತ ನಡೆಸಿದ ನರೇಂದ್ರ ಮೋದಿ ಸರಕಾರ ದೇಶದ ಚಿತ್ರಣವನ್ನೇ ಬದಲಿಸಿದೆ. ಇಡೀ ವಿಶ್ವವೇ ಭಾರತವನ್ನು ಒಪ್ಪಿಕೊಂಡು ಅಪ್ಪಿಕೊಂಡಿದೆ. ವಿಶ್ವದ ಮೂರನೇ ಅಭಿವೃದ್ಧಿ ಹೊಂದಿದ ರಾಷ್ಟçವಾಗಿ ಭಾರತ ಹೊರಹೊಮ್ಮಿದೆ.  ನಾವು ಇಂದು ಬದಲಾದ ಭಾರತವನ್ನು ನೋಡುತ್ತಿದೇವೆ,  ಸಮಾಜದ ಕಟ್ಟಕಡೆಯ ವ್ಯಕ್ತಿಯ  ಜೀವನದ ಮೇಲೆ ದೊಡ್ಡ ಮಟ್ಟದ ಒಳ್ಳೆಯ  ಪರಿಣಾಮ ಬೀರಿದೆ, ದೇಶದ ಅಭಿವೃದ್ಧಿಯ ವೇಗಕ್ಕೆ ಕರ್ನಾಟಕದಲ್ಲಿ ಕೂಡಾ ಪ್ರಗತಿಯ ಸಾಥ್ ಸಿಗುತ್ತಿದೆ. ಸಚಿವ ಅಂಗಾರ ಅವರು ಯಾರೂ ಏನೇ ಹೇಳಿದರೂ ತಮ್ಮ ಪಾಡಿಗೆ ಸದ್ದಿಲ್ಲದೆ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ ಎನ್ನುವುದಕ್ಕೆ ಕಡಬದಲ್ಲಿ ಇಂದು ಲೊಕಾರ್ಪಣೆಯಾದ ಕೋಟ್ಯಾಂತರ ರುಪಾಯಿಯ  ಅಭಿವೃದ್ಧಿ ಕಾರ್ಯಗಳೇ ಸಾಕ್ಷಿ ಎಂದರು.



Ad Widget

ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಕುಮಾರ್ ಮಾತನಾಡಿ ಸಾಮಾನ್ಯ ಜನ ಆಡಳಿತ ವ್ಯವಸ್ಥೆಯ ಸುತ್ತ ಸುತ್ತುವ ಬದಲು  ಆಡಳಿತ ವ್ಯವಸ್ಥೆಯೇ ಜನರ ಸುತ್ತ ಸುತ್ತಬೇಕು ಎನ್ನುವ ನಿಟ್ಟಿನಲ್ಲಿ ಸರಕಾರ ಚಿಂತನೆ ಮಾಡಿ ಅನುಷ್ಠಾನ ಮಾಡುತ್ತಿದೆ ಎಂದರು.

Ad Widget

Ad Widget

ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವದ್ಯಾನಿಲಯ ಬೀದರ್ ಇಲ್ಲಿನ ಕುಲಪತಿ ಡಾ|ಕೆ.ಸಿ ವೀರಣ್ಣ , ಪಶುಪಾಲನಾ  ಮತ್ತು  ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೆಶಕ ಡಾ|ಅರುಣ್ ಕುಮಾರ್ ಶೆಟ್ಟಿ ಎನ್ ಮಾತನಾಡಿ ಶುಭ ಹಾರೈಸಿದರು. ಮೀನುಗಾರಿಕ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥಾರಾಮ, ಕರ್ನಾಟಕ ಗೃಹಮಂಡಳಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಜಯಕುಮಾರ್, ಪಂಚಾಯತ್‌ರಾಜ್ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಭರತ್ ಬಿ.ಎಂ, ಸುಳ್ಯ ತಹಸೀಲ್ದಾರ್ ಮಂಜುನಾಥ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಕಾಲೇಜಿನ ಡೀನ್ ಡಾ|ರಂಗನಾಥ್, ಕಡಬ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಕೀರ ಮೂಲ್ಯ, ಕಡಬ ತಾಲೂಕು ಪಂಚಾಯಿತಿ ಸಹಾಯಕ ನಿರ್ದೆಶಕ ಚೆನ್ನಪ್ಪ ಗೌಡ ಕಜೆಮೂಲೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಡಬ ಉಪತಹಸೀಲ್ದಾರ್ ಮನೋಹರ ಕೆ.ಟಿ ಪಲಾನುಭವಿಗಳ ಪಟ್ಟಿ ವಾಚಿಸಿದರು.ಕಟ್ಟಡಗಳ  ವಾಸ್ತುಶಿಲ್ಪಿ ಯೋಗೇಶ್ ಚಂದ್ರಾದರ್, ಕಟ್ಟಡ ನಿರ್ಮಾಣ ಕಾಮಗಾರಿ ನಿರ್ವಹಣೆ ಮಾಡಿದ ಪ್ರದೀಪ್ ಶೆಟ್ಟಿ, ಅಬ್ದುಲ್ ಆಸಿಫ್, ಮಂಜುನಾಥ್  ಮತ್ತಿತರರನ್ನು ಸನ್ಮಾನಿಸಲಾಯಿತು.

ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಸ್ವಾಗತಿಸಿದರು. ಉಪತಹಸೀಲ್ದಾರ್ ಗೋಪಲ್ ಕಲ್ಲುಗುಡ್ಡೆ ವಂದಿಸಿದರು. ಪತ್ರಕರ್ತ ನಾಗರಾಜ್ ಎನ್.ಕೆ ಹಾಗೂ ಶಿಕ್ಷಕ ಪ್ರಶಾಂತ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

ಒಟ್ಟು  151.55  ಕೋಟಿ ರೂ. ಅನುದಾನದ ಯೋಜನೆಗಳ ವಿವರ :

  10  ಕೋಟಿ ರೂ. ವೆಚ್ಚದಲ್ಲಿ  ನಿರ್ಮಾಣಗೊಂಡಿರುವ ತಾಲೂಕು ಆಡಳಿತ ಸೌಧ, 4.50  ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಡಬ ತಾಲೂಕು ಪಂಚಾಯಿತಿ ಕಟ್ಟಡ, ಕೊಯಿಲದಲ್ಲಿ  136  ಕೋಟಿ ರೂ. ವೆಚ್ಚದಲ್ಲಿ  ನಿರ್ಮಾಣಗೊಂಡಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಮೊದಲನೇ ಹಂತದ ಕಟ್ಟಡ ಹಾಗೂ 1.5ಕೋಟಿ ರೂ. ವೆಚ್ಚದಲ್ಲಿ  ರಾಮಕುಂಜದಲ್ಲಿ ನಿರ್ಮಾಣಗೊಂಡಿರುವ ಕುಮಾರಧಾರ ಸರಕಾರಿ ಜಿಲ್ಲಾ  ಗೋಶಾಲೆಯನ್ನು ಉದ್ಘಾಟಿಸಲಾಯಿತು.

 ಕಡಬ ತಾಲೂಕು ವ್ಯಾಪ್ತಿಯ  ಸುಮಾರು 500 ಫಲಾನುಭವಿಗಳಿಗೆ ಅಕ್ರಮ ಸಕ್ರಮ ಮತ್ತು 94 ಸಿ ಹಕ್ಕುಪತ್ರಗಳ ವಿತರಣೆ, ಅರ್ಹ ಫಲಾನುಭವಿಗಳಿಗೆ ಮೋಟಾರ್ ಚಾಲಿತ,  ಗಾಲಿಕುರ್ಚಿ, ವಿಕಲಚೇತನರಿಗೆ ಚತುಷ್ಚಕ್ರ ವಾಹನ, ಶಾಲೆಗಳಿಗೆ ಶುದ್ಧ ನೀರಿನ ಘಟಕ ಸೇರಿದಂತೆ ವಿವಿಧ ಇಲಾಖೆಗಳ ಸವಲತ್ತುಗಳನ್ನು  ಸಮಾರಂಭದಲ್ಲಿ ವಿತರಿಸಲಾಯಿತು.

ನಾವೇ ಅಧಿಕಾರಕ್ಕ ಬರುತ್ತೇವೆ:

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡುತ್ತಾ, ಮುಂದೆ ಕೂಡಾ ನಮ್ಮದೇ ಸರಕಾರ ಎಂದು ಮೆಲುಧ್ವನಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ  ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸದಲ್ಲಿರುವುದುರಿಂದ ಮುಖ್ಯಮಂತ್ರಿಯಾದಿಯಾಗಿ ಸಚಿವರುಗಳು ಇಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ.  ಈ ಸರಕಾರದ ಕೊನೆಯ ಸಚಿವ ಸಂಪುಟ ಸಭೆ ಕೂಡಾ ಇವತ್ತು ನಡೆಯಲಿದೆ. ಇದು ಕೊನೆಯ ಸಭೆ ಎಂದು ಹೇಳಲು ಸಾಧ್ಯವಿಲ್ಲ. ಮುಂದೆ ಕುಡಾ ನಮ್ಮದೇ ಸರಕಾರ ಅಧಿಕಾರಕ್ಕೆ ಬರಲಿದೆ. ಅದನ್ನು ಇಲ್ಲಿ ಗಟ್ಟಿಯಾಗಿ ಹೇಳಲು ಸಾಧ್ಯವಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು.  

152 ಕೋ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಕಡಬ ತಾಲೂಕು ಅಡಳಿತ ಸೌಧ, ತಾಲೂಕು ಪಂಚಾಯತ್‌ ಕಟ್ಟಡ, ಕೊಯಿಲ ಪಶು ವೈದಕೀಯ ಕಾಲೇಜು ಕಟ್ಟಡ, ಕೊಯಿಲ ಗೋ ಶಾಲೆ ಲೋಕಾರ್ಪಣೆಯನ್ನು ಮಾ 24 ರಂದು ಕ್ಷೇತ್ರದ ಶಾಸಕ ಹಾಗೂ ಮೀನುಗಾರಿಕೆ ಸಚಿವ ಎಸ್‌ ಅಂಗಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ನನ್ನ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರದ ಮೂಲಭೂತ ವ್ಯವಸ್ಥೆಯಲ್ಲಿ ಅಮೊಲಾಗ್ರ ಬದಲಾವಣೆ ಮಾಡಲಾಗಿದೆ. 1994 ರಲ್ಲಿ ನಾನು ಮೊದಲ ಬಾರಿ ಶಾಸಕನಾದ ವೇಳೆ ಇಲ್ಲಿ ಎಲ್ಲ ರಸ್ತೆಗಳು ಹದಗೆಟ್ಟಿದ್ದು ಈಗ ಕ್ಷೇತ್ರದ ಎಲ್ಲ ಮುಖ್ಯ ರಸ್ತೆಗಳು ಅಭಿವೃದ್ದಿ ಹೊಂದಿದೆ ಎಂದರು.

ಜಲ ಜೀವನ್‌ ಮಿಶನ್‌ ಯೋಜನೆಯಡಿ ಶುದ್ದ ಕುಡಿಯುವ ನೀರು, ನದಿ, ತೋಡು, ಅಣೆಕಟ್ಟು ನಿರ್ಮಾಣದ ಮೂಲಕ ಬಹುಗ್ರಾಮ ಶಾಶ್ವತ ಕುಡಿಯುವ ನೀರು  ಹಾಗೂ ವಿವಿದೆಡೆ ಸಬ್‌ ಸ್ಟೇಷನ್‌ ಗಳನ್ನು ನಿರ್ಮಿಸಿ ವಿದ್ಯುತ್‌ ಸಮಸ್ಯೆ ನಿವಾರಣೆ ನನ್ನ ಅಡಳಿತದ ಅವಧಿಯಲ್ಲಿ ಡಬಲ್‌ ಇಂಜೀನ್‌ ಸರಕಾರದಿಂದ ಆಗಿದೆ ಎಂದರು

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading