ದಕ್ಷಿಣ ಕನ್ನಡ
ಯುವಕರಿಗೆ ಉದ್ಯೋಗ ಸೃಷಿಸಿಲು ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಗುರುತಿಸಲಾಗಿದೆ : ಮಠಂದೂರು | ಮುಂದಿನ ಬಾರಿ ತ್ರಿಬಲ್ ಇಂಜಿನ್ ಸರಕಾರ ಕೆಲಸ ಮಾಡಬೇಕು : ಡಾ| ಎಂ.ಕೆ .ಪ್ರಸಾದ್ | ವಾಹನ ಜಾಥ ನೋಡಿ ಕಾಂಗ್ರೆಸ್ಸಿಗರಿಗೆ ನಡುಕ ಹುಟ್ಟಿದೆ : ಸಹಜ್ ರೈ
ಪುತ್ತೂರು: ಪುತ್ತೂರಿನಲ್ಲಿ ಇಂಡಸ್ಟ್ರೀಯಲ್ ಏರಿಯಾಕ್ಕೆ 100 ಎಕ್ರೆ ಜಾಗ ಗುರುತಿಸುವ ಕಾರ್ಯವಾಗಿದ್ದು, ಈ ಮೂಲಕ ಯುವ ಜನತೆಗೆ ಪುತ್ತೂರಿನಲ್ಲಿ ಉದ್ಯೋಗ ಕೊಡಿಸಲು ಬಿಜೆಪಿ ಕಟಿಬದ್ದವಾಗಿದೆ ಎಂದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.
ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಂಡ ಬೈಕ್ ಜಾಥಾದ ಅಂಗವಾಗಿ ಕಲ್ಲೇಗ ಸಭಾ ವೇದಿಕೆಯಲ್ಲಿ ನಡೆದ ಜಾಥಾದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಯುವಕರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಆ ಮೂಲಕ ದೇಶದ ಗರಿಮೆಯನ್ನು ಎತ್ತರಕ್ಕೆರಿಸುವ ಕಾರ್ಯ ಮಾಡಬೇಕು. ಇದೆ ಉದ್ದೇಶದಿಂದ ಪುತ್ತೂರಿನ ತೆಂಕಿಲದಲ್ಲಿ ಜಾಗ ಖರೀದಿ ಮಾಡಲಾಗಿದೆ ಎಂದ ಅವರು ಪುತ್ತೂರಿನಲ್ಲಿ ಮತ್ತೊಮ್ಮೆ ಕಮಲ ಅರಳಿಸುವ ಸಂದೇಶವನ್ನು ಬೈಕ್ ಜಾಥಾ ಮೂಲಕ ಆಯೋಜಿಸಿದ ಪಕ್ಷದ ಯುವ ಮೋರ್ಚಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.
ಹಿರಿಯ ವೈದ್ಯ ಡಾ.ಎಂ.ಕೆ.ಪ್ರಸಾದ್ ಮಾತನಾಡಿ, ಮುಂದಿನ ಅವಧಿಯಲ್ಲಿ ಶಾಸಕರು ಮತ್ತಷ್ಟು ಅನುದಾನ ತರುವ ಪ್ರಯತ್ನ ಮಾಡಬೇಕು. ಜತೆಗೆ ಮುಂಬರುವ ಚುನಾವಣೆಯಲ್ಲಿ ಡಬಲ್ ಇಂಜಿನ್ ಬದಲು ತ್ರಿಬಲ್ ಇಂಜಿನ್ ಸರಕಾರದಂತೆ ಕೆಲಸ ಮಾಡಬೇಕು ಎಂದು ಹೇಳಿದರು.

ಬಿಜೆಪಿ ಯುವಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಜಿಲ್ಲಾ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಗುರುದತ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಬೆಳ್ತಂಗಡಿ, ಸುದರ್ಶನ್, ಸಚಿನ್ ಶೆಣೈ ಉಪಸ್ಥಿತರಿದ್ದರು.
ಕುಂಬ್ರದಿಂದ ಬೈಕ್ ಜಾಥಾ ನಗರದ ದರ್ಬೆ ವೃತ್ತದ ಮೂಲಕ ಸಾಗಿ ಸಾಗಿ ಕಲ್ಲೇಗಕ್ಕೆ ಹಾಗೂ ವಿಟ್ಲದಿಂದ ಆಗಮಿಸಿದ ಜಾಥಾ ಕಲ್ಲೇಗಕ್ಕೆ ಆಗಮಿಸಿ ಸಮಾರೋಪಗೊಂಡಿತು.
ನೆಟ್ಟಾರ್ ಜತೆ ಭಾವನಾತ್ಮಕ ಸಂಬಂಧವಿದೆ : ಸಹಜ್ ರೈ
ಪ್ರವೀಣ್ ನೆಟ್ಟಾರ್ ಜತೆ ಬಿಜೆಪಿ ಯುವ ಮೋರ್ಚಾಕ್ಕೆ ಭಾವನಾತ್ಮಕ ಸಂಬಂದವಿದೆ. ಹೀಗಾಗಿ ವೇದಿಕೆಯಲ್ಲಿ ಅವರ ಭಾವಚಿತ್ರವನ್ನು ಅಳವಡಿಸಲಾಗಿದೆ. ಜಿಲ್ಲಾ ಯುವ ಮೋರ್ಚಾದ ಸದಸ್ಯರಾಗಿದ್ದ ಅವರನ್ನು ಪಿಎಫೈನ ಜಿಹಾದಿ ಶಕ್ತಿಗಳು ಹತ್ಯೆ ನಡೆಸಿದರು. ಆದರೇ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತ್ರತ್ವದ ಸರಕಾರ ಈ ಜಿಹಾದಿ ಸಂಘಟನೆಯನ್ನು ನಿಷೇಧಿಸಿದ್ದಾರೆ. ಅವರಿಗೆ ಅಭಿನಂದನೆಗಳು . ಇನ್ನೂ ಇಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಸಾವಿರಾರು ಬಿಜೆಪಿ ಕಾರ್ಯಕರ್ತರು ವಾಹನ ಜಾಥದಲ್ಲಿ ಪಾಲ್ಗೊಂಡಿದ್ದು , ಕಾಂಗ್ರೆಸ್ ಗೆ ನಡುಕ ಹುಟ್ಟಿಸಿದ್ದಾರೆ
ಸಹಜ್ ರೈ ಬಳಜ್ಜ ,
ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
-
ನಿಧನ ವಾರ್ತೆ15 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು13 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು11 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ15 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ15 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ14 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ14 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ16 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















