ಬಿಗ್ ನ್ಯೂಸ್
Pan Aadhaar Link | ಪ್ಯಾನ್-ಆಧಾರ್ ಜೋಡಣೆ ದಿನಾಂಕ ವಿಸ್ತರಣೆ – ಈಗ ದಂಡವೆಷ್ಟು ಗೊತ್ತೇ ..?
ನವದೆಹಲಿ: ಪ್ಯಾನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಜೋಡಿಸುವ (Pan Aadhaar Link) ದಿನಾಂಕವನ್ನು 2023ರ ಜೂನ್ 30ರವರಗೆ ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶ ಮಾಡಿದೆ.
ಈ ಮೊದಲು ಮಾರ್ಚ್ 31 ಆಧಾರ್ ಅನ್ನು ಪ್ಯಾನ್ ಕಾರ್ಡ್ ಜೊತೆಗೆ ಜೋಡಿಸಲು ಕಡೆಯ ದಿನವಾಗಿತ್ತು.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದರು. ಈ ಬೆನ್ನಲ್ಲೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಲಿಂಕ್ ಮಾಡಲು 2022ರ ಮಾರ್ಚ್ 31ರವರೆಗೆ ಉಚಿತವಾಗಿತ್ತು. 2022ರ ಏಪ್ರಿಲ್ 1ರಿಂದ 500 ಪಾವತಿಸಿ ಆಧಾರ್ ಲಿಂಕ್ ಮಾಡಬೇಕಾಗಿತ್ತು. 2022ರ ಜೂನ್‌ನಿಂದ 2023ರ ಮಾರ್ಚ್ 31ರವರಗೆ ಲಿಂಕ್ ಮಾಡಬೇಕಾದರೆ 1,000 ಪಾವತಿಸಬೇಕು ಎಂದು ಹೇಳಲಾಗಿತ್ತು. ಒಂದು ವೇಳೆ ಈ ಗಡುವಿನ ಒಳಗೆ ಲಿಂಕ್ ಮಾಡದಿದ್ದರೇ ಆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ದಂಡ ಹಾಕಲಾಗುವುದು ಎಂದು ತಿಳಿಸಲಾಗಿತ್ತು.
ಆದರೆ, ಇದೀಗ ಗುಡುವು ಮತ್ತೆ ವಿಸ್ತರಣೆಯಾಗಿರುವುದರಿಂದ 1000 ಶುಲ್ಕದೊಂದಿಗೆ ಜೂನ್ 30ರವರಗೆ ಆಧಾರ್ ಸಂಖ್ಯೆಯನ್ನು ಪ್ಯಾನ್‌ಗೆ ಲಿಂಕ್ ಮಾಡಬಹುದು.
ಬಿಗ್ ನ್ಯೂಸ್
High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.
ಬಿಗ್ ನ್ಯೂಸ್
Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.
ಬಿಗ್ ನ್ಯೂಸ್
Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.
ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.
ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.
ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.
ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.
ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.
ಸಮಗ್ರ ತೋಟಗಾರಿಕಾ ಸೇವೆ:
ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.
-
ಬಿಗ್ ನ್ಯೂಸ್23 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ8 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ7 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ7 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸಿನೆಮಾ6 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ7 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ7 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ7 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















