Connect with us

ದಕ್ಷಿಣ ಕನ್ನಡ

 ವಿಟ್ಲ : ಉಡುಪಿ – ಕಾಸರಗೋಡು 440 ಕೆವಿ ವಿದ್ಯುತ್ ಪ್ರಸರಣ ಮಾರ್ಗ – ಅರ್ಜಿದಾರರು ಸರ್ವೇಕಾರ್ಯಕ್ಕೆ  ಸ್ಪಂದಿಸಿ : ಡಿಸಿ ಸೂಚನೆ – ಚುನಾವಣೆ ಸಂದರ್ಭ ಸುಳ್ಳು ಹೇಳಿದ್ರಾ ಶಾಸಕರು

Published

on



Ad Widget

Ad Widget

Ad Widget

Ad Widget

ವಿಟ್ಲ: ಉಡುಪಿ – ಕಾಸರಗೋಡು 440 ಕೆವಿ ವಿದ್ಯುತ್ ಪ್ರಸರಣ ಮಾರ್ಗ ಕಾಮಗಾರಿಗೆ ಸಂಬಂಧಿಸಿ ಬಂಟ್ವಾಳ ತಾಲೂಕು ವ್ಯಾಪ್ತಿಯ ಜಮೀನಿನ ಸರ್ವೇ ಮಾಡಲು ಕರ್ನಾಟಕ ಉಚ್ಚ ನ್ಯಾಯಾಲಯ ಮಾ 20 ರಂದು  ಸೂಚಿಸಿದೆ. ಹೀಗಾಗಿ ಈ ಕುರಿತು ನ್ಯಾಯಲಯದ ಕದ ತಟ್ಟಿರುವ  69  ಮಂದಿ ಅರ್ಜಿದಾರರು ಸರ್ವೇಕಾರ್ಯಕ್ಕೆ  ಸ್ಪಂದಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಆದರೇ ಏತನ್ಮಧ್ಯೆ ಇದಕ್ಕೆ ಸಂಬಂಧಿಸಿದಂತೆ ವಿಟ್ಲದ ಚಂದಳಿಕೆಯಲ್ಲಿ  ಕಾರ್ಯಕ್ರಮವೊಂದರಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು  ಸುಳ್ಳು ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.  ಉಡುಪಿ – ಕಾಸರಗೋಡು 400 ಕೆ. ವಿ. ವಿದ್ಯುತ್ ಪ್ರಸರಣ ಮಾರ್ಗ ಯೋಜನೆಯನ್ನು ನಿಲ್ಲಿಸುವ ಕಾರ್ಯ ಮಾಡಲಾಗಿದೆ ಎಂದು ಶಾಶಕರು ಇತ್ತೀಚೆಗೆ ಹೇಳಿಕೊಂಡಿದ್ದರು.    ಆದರೆ ಈಗ ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಹಿಡಿದು ಸರ್ವೆ ಕಾರ್ಯಕ್ಕೆ ಬರುತ್ತಿದ್ದು, ಚುನಾವಣೆಯ ಸಮಯ ಜನರಿಗೆ  ಶಾಸಕರು ಸುಳ್ಳು ಹೇಳಿದರಾ ? ಎಂಬ ಪ್ರಶ್ನೆಗಳು ಉದ್ಭವಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಡಿಸಿ ಹೊರಡಿಸಿದ ಪ್ರಕಟನೆಯಲ್ಲಿ ಏನಿದೆ ?

Ad Widget

Ad Widget <> Ad Widget

ಉಚ್ಛ ನ್ಯಾಯಾಲಯದ ಆದೇಶದಂತೆ ತಹಸೀಲ್ದಾರರು, ಭೂದಾಖಲೆಗಳ ಸಹಾಯಕ ನಿರ್ದೇಶಕರು, ಭೂ ದಾಖಲೆಗಳ ಉಪ ನಿರ್ದೇಶಕರು ಹಾಗೂ ತಂಡ ಸರ್ವೆ ಕಾರ್ಯ ನಡೆಸಲು ಯಾವುದೇ ವ್ಯಕ್ತಿ,   ಸಂಸ್ಥೆ, ಸಂಘ ಮತ್ತು ಸಂಘಟನೆಗಳಿಂದ ಅಡಚಣೆ ಮಾಡಬಾರದು. ಸರ್ವೆ ನಡೆಸಲು ಎಲ್ಲರೂ ಸಂಪೂರ್ಣ ಸಹಕರಿಸಬೇಕು. ಇಲ್ಲದೇ ಹೋದಲ್ಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಆಗುತ್ತದೆ ಎಂದು ಜಿಲ್ಲಾಧಿಕಾರಿಗಳು ಮಾ.27 ರಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Ad Widget

ನ್ಯಾಯಾಲಯ ಮಾ.15 ಹಾಗೂ 20 ರಂದು ವಿಚಾರಣೆಯನ್ನು ನಡೆಸಿ, ಆದೇಶ ಹೊರಡಿಸಿದ ಪ್ರಕಾರ ಮಾ.27 ರಂದು ಬೆಳಗ್ಗೆ 10 ಗಂಟೆಗೆ ತಹಸೀಲ್ದಾರ್ ಅವರ ಸಮ್ಮುಖದಲ್ಲಿ ಹಾಜರಾಗಿ, ಜಮೀನುಗಳಿಗೆ ತಹಸೀಲ್ದಾರರು ಹೋಗಿ, ಡಿಜಿಟಲ್ ಗ್ಲೋಬಲ್ ಪೊಸಿಷನಿಂಗ್ ಸರ್ವೇ ವಿಧಾನ ಬಳಸಿ ತಾಲೂಕು ಸರ್ವೇಯರ್ ಸಮೀಕ್ಷೆಯನ್ನು ನಡೆಸಬೇಕು.  ಮುಂದಿನ ವಿಚಾರಣೆಯ ಸಮಯ ಸಮೀಕ್ಷೆಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ತಾಲೂಕು ಸರ್ವೇಯರ್ ಸಲ್ಲಿಸುವ ಸಮೀಕ್ಷೆಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ ಸ್ವಾತಂತ್ಯವನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Click to comment

Leave a Reply

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading