Connect with us

ಬಂಟ್ವಾಳ

ಬಂಟ್ಚಾಳ: ವಿವಾಹಿತೆಯ ಆತ್ಮಹತ್ಯೆ – ಯುವಕನ ಪ್ರಚೋದನೆ ಕಾರಣ : ಪತಿಯಿಂದ ದೂರು

Published

on

Ad Widget

Ad Widget

Ad Widget

Ad Widget

ಬಂಟ್ವಾಳ, ಮಾ. 27:ಒಂದೂವರೆ ತಿಂಗಳ ಹಿಂದೆ ನಡೆದ ಪತ್ನಿಯ ಸಾವಿನ ಪ್ರಕರಣದಲ್ಲಿ ಯುವಕನೊಬ್ಬನ ಕೈವಾಡ ವಿರುವ ಬಲವಾದ ಸಂಶಯವಿದ್ದು, ಹೀಗಾಗಿ ಇದರ ಸಮಗ್ರ ತನಿಖೆಯಾಗಬೇಕು ಎಂದು ಆಕೆಯ ಪತಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

Ad Widget

Ad Widget

Ad Widget

Ad Widget

ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ಸತೀಶ್ ಪಿ. ಅವರ ಪತ್ನಿ ಬೀನಾ ಸಿ. ಅವರು ಫೆ 14 ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಾವಿನ ಕುರಿತು ಸತೀಶ್ ಪಿ ಅನುಮಾನ ವ್ಯಕ್ತಪಡಿಸಿದ್ದು ಆತ್ಮಹತ್ಯೆಗೆ ಪ್ರೇರಣೆಯಾದ ವಿಚಾರದ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಬೀನಾ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಈ ವೇಳೆ ಆಕೆಯ ಮಹಿಳೆಯ ಕಿವಿಯಲ್ಲಿ ಇಯರ್ ಫೋನ್ ಇದ್ದು, ಆಕೆಯ ಮೊಬೈಲ್ ಕೆಳಗಡೆ ಬಿದ್ದುಕೊಂಡಿತ್ತು. ಹೀಗಾಗಿ ಅದು ವ್ಯವಸ್ಥಿತ ಸಂಚು ಎಂಬ ಸಂಶಯ ಮೂಡುತ್ತಿದೆ ಎಂದು ದೂರಲಾಗಿದೆ.

Ad Widget

Ad Widget <> Ad Widget

ಮಂಗಳೂರಿನಲ್ಲಿ ಕೆಲಸಕಿದ್ದ ತಾನು ವಾರಕ್ಕೊಮ್ಮೆ ಮನೆಗೆ ಹೋಗುತ್ತಿದ್ದೆ. ಈ ವೇಳೆ ಯುವಕನೋರ್ವ ಮನೆಗೆ ಬಂದು ಹೋಗುತ್ತಿದ್ದು, ಆತನೇ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾನೆ. ಜತೆಗೆ ಘಟನೆಯ ಕೆಲವು ದಿನಗಳ ಹಿಂದೆ ತನ್ನ ಪತ್ನಿಯ ತಾಯಿಗೆ ಕರೆ ಮಾಡಿ ಬೀನಾ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಹೇಳಿದ ಈ ವೇಳೆ ಆಕೆಯನ್ನು ವಿಚಾರಿಸಿದಾಗ ಯುವಕ ಕಿರುಕುಳ ನೀಡುವ ವಿಚಾರವನು ತಾಯಿಯ ಬಳಿ ಹೇಳಿಕೊಂಡಿದ್ದಳು.

ಕರೆ ಮಾಡಿದ್ದ ಘಟನೆ ನಡೆದ ದಿನವೂ ತನ ಪತ್ನಿಯ ತಾಯಿಗೆ ಕರೆ ಮಾಡಿ ಬೀನಾ ಆತ್ಮಹತ್ಯೆಯ ವಿಚಾರ ಹೇಳಿದ್ದಾನೆ ಎಂದು ಮೃತ ಮಹಿಳೆಯ ಪತಿ ಸತೀಶ್ ಅವರು ಎಸ್ಪಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

Click to comment

Leave a Reply

ಅಪರಾಧ

Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget alt="Ad Widget"/>

Ad Widget

ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Bantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.23: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ 21 ವರ್ಷದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ನಾಪತ್ತೆಯಾದ ಯುವತಿಯನ್ನು ಪೆರ್ನೆ ಗ್ರಾಮದ ನಿವಾಸಿ ಕವಿತಾ (21) ಎಂದು ಗುರುತಿಸಲಾಗಿದೆ. ಇವರು ಬಿ.ಸಿ.ರೋಡಿನ ಬ್ಯಾಂಕ್‌ವೊಂದರಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.

Ad Widget

Ad Widget <> Ad Widget

ನವೆಂಬರ್ 20ರಂದು ಕವಿತಾ ಅವರು ನಾಪತ್ತೆಯಾಗಿದ್ದು, ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಗದರಿಸಿದ್ದರಿಂದ ಅಜ್ಜಿಯ ಮನೆಗೆ ಹೋಗುವುದಾಗಿ ತೆರಳಿದ್ದ ಕವಿತಾ ಬಳಿಕ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!