ಬಂಟ್ವಾಳ
ಬಂಟ್ಚಾಳ: ವಿವಾಹಿತೆಯ ಆತ್ಮಹತ್ಯೆ – ಯುವಕನ ಪ್ರಚೋದನೆ ಕಾರಣ : ಪತಿಯಿಂದ ದೂರು
ಬಂಟ್ವಾಳ, ಮಾ. 27:ಒಂದೂವರೆ ತಿಂಗಳ ಹಿಂದೆ ನಡೆದ ಪತ್ನಿಯ ಸಾವಿನ ಪ್ರಕರಣದಲ್ಲಿ ಯುವಕನೊಬ್ಬನ ಕೈವಾಡ ವಿರುವ ಬಲವಾದ ಸಂಶಯವಿದ್ದು, ಹೀಗಾಗಿ ಇದರ ಸಮಗ್ರ ತನಿಖೆಯಾಗಬೇಕು ಎಂದು ಆಕೆಯ ಪತಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ಸತೀಶ್ ಪಿ. ಅವರ ಪತ್ನಿ ಬೀನಾ ಸಿ. ಅವರು ಫೆ 14 ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಾವಿನ ಕುರಿತು ಸತೀಶ್ ಪಿ ಅನುಮಾನ ವ್ಯಕ್ತಪಡಿಸಿದ್ದು ಆತ್ಮಹತ್ಯೆಗೆ ಪ್ರೇರಣೆಯಾದ ವಿಚಾರದ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಬೀನಾ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಈ ವೇಳೆ ಆಕೆಯ ಮಹಿಳೆಯ ಕಿವಿಯಲ್ಲಿ ಇಯರ್ ಫೋನ್ ಇದ್ದು, ಆಕೆಯ ಮೊಬೈಲ್ ಕೆಳಗಡೆ ಬಿದ್ದುಕೊಂಡಿತ್ತು. ಹೀಗಾಗಿ ಅದು ವ್ಯವಸ್ಥಿತ ಸಂಚು ಎಂಬ ಸಂಶಯ ಮೂಡುತ್ತಿದೆ ಎಂದು ದೂರಲಾಗಿದೆ.
ಮಂಗಳೂರಿನಲ್ಲಿ ಕೆಲಸಕಿದ್ದ ತಾನು ವಾರಕ್ಕೊಮ್ಮೆ ಮನೆಗೆ ಹೋಗುತ್ತಿದ್ದೆ. ಈ ವೇಳೆ ಯುವಕನೋರ್ವ ಮನೆಗೆ ಬಂದು ಹೋಗುತ್ತಿದ್ದು, ಆತನೇ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾನೆ. ಜತೆಗೆ ಘಟನೆಯ ಕೆಲವು ದಿನಗಳ ಹಿಂದೆ ತನ್ನ ಪತ್ನಿಯ ತಾಯಿಗೆ ಕರೆ ಮಾಡಿ ಬೀನಾ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಹೇಳಿದ ಈ ವೇಳೆ ಆಕೆಯನ್ನು ವಿಚಾರಿಸಿದಾಗ ಯುವಕ ಕಿರುಕುಳ ನೀಡುವ ವಿಚಾರವನು ತಾಯಿಯ ಬಳಿ ಹೇಳಿಕೊಂಡಿದ್ದಳು.
ಕರೆ ಮಾಡಿದ್ದ ಘಟನೆ ನಡೆದ ದಿನವೂ ತನ ಪತ್ನಿಯ ತಾಯಿಗೆ ಕರೆ ಮಾಡಿ ಬೀನಾ ಆತ್ಮಹತ್ಯೆಯ ವಿಚಾರ ಹೇಳಿದ್ದಾನೆ ಎಂದು ಮೃತ ಮಹಿಳೆಯ ಪತಿ ಸತೀಶ್ ಅವರು ಎಸ್ಪಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.
ಬಿಗ್ ನ್ಯೂಸ್
Bantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದಲ್ಲಿ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಜಖಂಗೊಂಡಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಮಹಿಳೆಯೊಬ್ಬರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಅನಿಲ್ದಡ್ಡ ಎಂಬಲ್ಲಿ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ನಾಗೇಶ್ ಕುಲಾಲ್ ಎಂಬುವವರ ಮನೆಗೆ ಸಿಡಿಲು ಬಡಿದಿದೆ.
ಸಿಡಿಲಿನ ತೀವ್ರ ಹೊಡೆತಕ್ಕೆ ಮನೆಯ ಹಂಚು, ಗೋಡೆ ಹಾಗೂ ಕಿಟಕಿಗಳ ಗಾಜುಗಳು ಹಾನಿಗೊಂಡಿದ್ದು, ಮನೆ ಸಂಪೂರ್ಣ ಜಖಂಗೊಂಡಿದೆ. ಘಟನೆಯ ವೇಳೆ ಮನೆಯಲ್ಲಿದ್ದ ನಾಗೇಶ್ ಕುಲಾಲ್ ಅವರ ಪತ್ನಿ ಕುಶಲ ಅವರು ಅಸ್ವಸ್ಥರಾಗಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲಿನ ಆರ್ಭಟದಿಂದ ವಿವಿಧೆಡೆ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಬಿಗ್ ನ್ಯೂಸ್
Prabhakar Bhat-ಭರತ್ ಕುಮ್ಡೇಲ್ ಗೆ ಮೊದಲು ಎಸ್ಪಿ ಮಂಪರು ಪರೀಕ್ಷೆ ಮಾಡಿಕೊಳ್ಳಲಿ : ಕಲ್ಲಡ್ಕ ಪ್ರಭಾಕರ ಭಟ್
ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಹಾಗೂ ಇತರ ಆರೋಪಿಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಆರೋಪಪಟ್ಟಿ ಬಿಡುಗಡೆ ಮಾಡಿರುವ ವಿಚಾರಕ್ಕೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ಡೇಲ್ ಹಾಗೂ ಇತರ ಆರೋಪಿಗಳ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಆರೋಪಪಟ್ಟಿ ಬಿಡುಗಡೆ ಮಾಡಿರುವ ವಿಚಾರಕ್ಕೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಆರೋಪಪಟ್ಟಿ ಕುರಿತು ಪ್ರತಿಕ್ರಿಯಿಸಿದ ಅವರು, ಒಟ್ಟು 17 ಪ್ರಕರಣಗಳ ಪೈಕಿ 15 ಪ್ರಕರಣಗಳು ಬಿದ್ದುಹೋಗಿವೆ. ಇನ್ನುಳಿದ ಎರಡು ಪ್ರಕರಣಗಳಿಗೆ ಗೂಂಡಾ ಕಾಯ್ದೆ ಅನ್ವಯಿಸುವುದು ಸರಿಯೇ ಎಂದು ಪ್ರಶ್ನಿಸಿದರು. ನ್ಯಾಯಾಲಯದ ಸೂಚನೆಗಳಿಗೂ ಪೊಲೀಸರಿಗೆ ಒಪ್ಪಿಗೆ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
ತಮಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ತಿಳಿಸಿದ ಪ್ರಭಾಕರ್ ಭಟ್, ತಮ್ಮ ಮೇಲೂ ಗೂಂಡಾ ಕಾಯ್ದೆ ಜಾರಿಗೊಳಿಸುವ ಯೋಚನೆ ಇರಬಹುದೇ ಎಂಬ ಅನುಮಾನ ವ್ಯಕ್ತಪಡಿಸಿದರು. ದೇಶವಿರೋಧಿ ಅಥವಾ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಯಾರಾದರೂ ತೊಡಗಿದ್ದರೆ ಪ್ರಕರಣ ದಾಖಲಿಸಲಿ ಎಂದು ಹೇಳಿದರು.
“ಹಿಂದೂಗಳ ಮೇಲೆ ದಾಳಿ ಮಾಡುವುದು ಶಾಂತಿಯೇ? ಪೊಲೀಸರು ಅಶಾಂತಿ ನಿರ್ಮಾಣ ಮಾಡುತ್ತಿದ್ದಾರೆಯೇ? ಪೊಲೀಸರು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು” ಎಂದು ಅವರು ಹೇಳಿದರು. ಪ್ರಕರಣದ ವಿಚಾರಣೆಯಲ್ಲಿ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಪೊಲೀಸರಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದೂ ಅವರು ಹೇಳಿದರು.
“ನಾವು ಶಾಂತಿಯಿಂದ ಜೀವನ ನಡೆಸುತ್ತಿದ್ದೇವೆ. ಅವರ ಕ್ರಮಕ್ಕೆ ನಮ್ಮ ಸಣ್ಣ ಪ್ರತಿಕ್ರಿಯೆ” ಎಂದು ಪ್ರಭಾಕರ್ ಭಟ್ ಹೇಳಿದರು.
ಭರತ್ ಕುಮ್ಡೇಲ್ ಗೆ ಮಂಪರು ಪರೀಕ್ಷೆ
ಭರತ್ ಕುಮ್ಡೇಲ್ ಅವರಿಗೆ ಮಂಪರು ಪರೀಕ್ಷೆ ನಡೆಸುವ ಪ್ರಸ್ತಾಪದ ಬಗ್ಗೆಯೂ ಪ್ರಭಾಕರ್ ಭಟ್ ಪ್ರಶ್ನೆ ಎತ್ತಿದರು. “ಮಂಪರು ಪರೀಕ್ಷೆಗೆ ಏಕೆ ಒಪ್ಪಿಕೊಳ್ಳಬೇಕು? ಅದಕ್ಕೆ ಏನು ಆಧಾರವಿದೆ?” ಎಂದು ಪ್ರಶ್ನಿಸಿದ ಅವರು, ಮೊದಲು ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರೇ ಮಂಪರು ಪರೀಕ್ಷೆಗೆ ಒಳಗಾಗಲಿ ಎಂದು ಹೇಳಿದರು.
ತಾವು ಭರತ್ ಕುಮ್ಡೇಲ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿರುವುದನ್ನು ಉಲ್ಲೇಖಿಸಿದ ಅವರು, ಕೇವಲ ಫೋನ್‌ನಲ್ಲಿ ಮಾತನಾಡಿದ್ದಕ್ಕೆ ತಮ್ಮನ್ನು ವಿಚಾರಣೆಗೆ ಕರೆಯಲಾಗುತ್ತದೆಯೇ ಎಂದು ಪ್ರಶ್ನಿಸಿದರು. “ಮಾಧ್ಯಮದವರೂ ಫೋನ್ ಮಾಡುತ್ತೀರಿ; ನಿಮಗೂ ವಿಚಾರಣೆಗೆ ಕರೆಯುತ್ತಾರೆಯೇ?” ಎಂದು ಪ್ರಶ್ನಿಸಿದರು.
ಈ ಹಿಂದೆ ತಾವು ಜೈಲಿಗೆ ಹೋಗಿದ್ದು, ತಮ್ಮ ಪತ್ನಿಯನ್ನೂ ಜೈಲಿಗೆ ಕಳುಹಿಸಲಾಗಿದೆ ಎಂದು ಹೇಳಿದ ಅವರು, “ಇನ್ನು ಏನಿದ್ದರೂ ಗಲ್ಲಿಗೆ ಹಾಕುವುದು ಮಾತ್ರ ಬಾಕಿ. ತಾಕತ್ತಿದ್ದರೆ ನನ್ನನ್ನು ಗಲ್ಲಿಗೆ ಹಾಕಲಿ” ಎಂದು ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಗ್ ನ್ಯೂಸ್
Prabhakar Bhat-ನನ್ನ ಮೇಲೆ ಹಾಕಿದ ಕೇಸ್ ನನ್ನ ಕೂದಲಿಗೂ ಸಮ ಅಲ್ಲ : ಗುಡುಗಿದ ಕಲ್ಲಡ್ಕ ಪ್ರಭಾಕರ ಭಟ್
ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಅದನ್ನು ಸಂಘಟನೆಯ ಮೇಲೆ ಹೊರಿಸುವುದು ಏಕೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ. ಬಿ.ಸಿ.ರೋಡ್ ಚಲೋ ಪ್ರತಿಭಟನೆಯ ಬಳಿಕ ಮಾತನಾಡಿದ ಅವರು, ಅಬ್ದುಲ್ ರೆಹಮಾನ್ ಹಾಗೂ ಹತ್ಯೆ ಆರೋಪಿಗಳ ನಡುವಿನ ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
ಮಂಗಳೂರು: ಬಂಟ್ವಾಳದ ಅಬ್ದುಲ್ ರೆಹಮಾನ್ ಹತ್ಯೆ ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಅದನ್ನು ಸಂಘಟನೆಯ ಮೇಲೆ ಹೊರಿಸುವುದು ಏಕೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಶ್ನಿಸಿದ್ದಾರೆ.
ಬಿ.ಸಿ.ರೋಡ್ ಚಲೋ ಪ್ರತಿಭಟನೆಯ ಬಳಿಕ ಮಾತನಾಡಿದ ಅವರು, ಅಬ್ದುಲ್ ರೆಹಮಾನ್ ಹಾಗೂ ಹತ್ಯೆ ಆರೋಪಿಗಳ ನಡುವಿನ ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಹೇಳಿದ್ದಾರೆ. ಈ ಕುರಿತು ಹೆಚ್ಚಿನ ವಿವರಣೆ ನೀಡುವುದಿಲ್ಲ. ಸಂಬಂಧಪಟ್ಟ ಊರಿಗೆ ಹೋದರೆ ಅಲ್ಲಿನವರೇ ವಿಚಾರವನ್ನು ಹೇಳುತ್ತಾರೆ ಎಂದರು.
“ವೈಯಕ್ತಿಕ ದ್ವೇಷವನ್ನು ಸಂಘಟನೆಯ ಮೇಲೆ ಹಾಕುವುದು ಏಕೆ? ಬೇರೆ ತಪ್ಪು ನಡೆದಿದ್ದರೆ ಪ್ರಕರಣ ದಾಖಲಿಸಿ” ಎಂದು ಅವರು ಹೇಳಿದರು.
ಹತ್ಯೆಯನ್ನು ತಾವು ಪ್ರತಿಪಾದಿಸುವುದಿಲ್ಲ ಎಂದ ಪ್ರಭಾಕರ್ ಭಟ್, ಪ್ರಕರಣದಲ್ಲಿ ಸಂಬಂಧವಿಲ್ಲದ ಭರತ್ ಕುಮ್ಡೇಲ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಆರೋಪಿಸಿದರು. ಭರತ್ ಕುಮ್ಡೇಲ್ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಿರುವುದನ್ನೂ ಅವರು ಪ್ರಶ್ನಿಸಿದರು.
ಭರತ್ ಕುಮ್ಡೇಲ್ ಬಂಧನದ ಬಳಿಕ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಭರತ್ ಅವರ ಮಗುವಿಗೆ ಅನಾರೋಗ್ಯವಾದಾಗ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ದ ವ್ಯಕ್ತಿಯ ಮೇಲೂ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದರು.
ಕುಟುಂಬಕ್ಕೆ ಸಹಾಯ ಮಾಡಿದವರ ಮೇಲೆಯೂ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದು ಹೇಳಿದ ಅವರು, ಕಾನೂನು ಪ್ರಕ್ರಿಯೆ ಬಿಟ್ಟು ಗೃಹ ಸಚಿವರು ಅಥವಾ ಮುಖ್ಯಮಂತ್ರಿಗಳು ಹೇಳುತ್ತಾರೆ ಎಂಬ ಕಾರಣಕ್ಕೆ ಪ್ರಕರಣ ದಾಖಲಿಸಬಾರದು ಎಂದು ಹೇಳಿದರು.
ತಮ್ಮ ಮೇಲೂ ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ ಎಂದು ಹೇಳಿದ ಪ್ರಭಾಕರ್ ಭಟ್, “ಇದು ನನಗೆ ದೊಡ್ಡ ವಿಷಯವಲ್ಲ. ಈ ಪ್ರಕರಣ ನನ್ನ ಕೂದಲಿಗೆ ಸಮ” ಎಂದು ಪ್ರತಿಕ್ರಿಯಿಸಿದರು.
ಭರತ್ ಕುಮ್ದೇಲ್ ಅವರೊಂದಿಗೆ ತಾವು ದೂರವಾಣಿಯಲ್ಲಿ ಮಾತನಾಡಿರುವುದನ್ನು ಒಪ್ಪಿಕೊಂಡ ಅವರು, ʻʻನಾನು ಯಾರ ಹತ್ರ ಬೇಕಾದರೂ ಫೋನ್ ನಲ್ಲಿ ಮಾತನಾಡುತ್ತೇನೆ. ನನಗೆ ಅಂಬೇಡ್ಕರ್ ಕೊಟ್ಟ ಸಂವಿಧಾನ . ಭರತ್ ಜೊತೆ ನಾನು ಫೋನ್ ನಲ್ಲಿ ಮಾತನಾಡಿದ್ದೇನೆ. ನಾನು ಯಾರಿಗಾದರೂ ಹೊಡಿ ಅಥವಾ ಕೊಲ್ಲು ಎಂದು ಹೇಳಿದ್ದೇನಾ? ಅಂತಹ ಸಂಭಾಷಣೆ ಪೊಲೀಸರಿಗೆ ಸಿಕ್ಕಿದೆಯೇ?” ಎಂದು ಪ್ರಶ್ನಿಸಿದರು.
ಪೊಲೀಸರು ಈ ರೀತಿಯ ಕ್ರಮಗಳನ್ನು ಕೈಗೊಳ್ಳುವ ಮುನ್ನ ವಾಸ್ತವಾಂಶಗಳನ್ನು ಪರಿಶೀಲಿಸಬೇಕು. ಪೊಲೀಸರ ಈ ರೀತಿಯ ಹುಚ್ಚು ಸ್ವಲ್ಪ ಇಳಿಯಬೇಕು ಎಂದು ಅವರು ಆಗ್ರಹಿಸಿದರು.
-
Uncategorized15 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized18 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ19 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ21 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್20 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ20 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್21 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















