ಬಿಗ್ ನ್ಯೂಸ್
C-Voters Opinion Poll | ಸಿ-ಓಟರ್ ಸಮೀಕ್ಷೆ ಬಹಿರಂಗ – ಕರ್ನಾಟಕದಲ್ಲಿ ಕಾಂಗ್ರೇಸ್ ಭರ್ಜರಿ ಗೆಲುವು : ಕರಾವಳಿಯಲ್ಲಿ ಯಾವಾ ಪಕ್ಷ ಎಷ್ಟು ಸ್ಥಾನ ಪಡೆಯಲಿದೆ ಗೊತ್ತೇ ..?
ಬೆಂಗಳೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸುಲಭವಾಗಿ ಅಧಿಕಾರ ಹಿಡಿಯಲಿದೆ ಎಂದು ಸಿ-ವೋಟರ್ ಸಮೀಕ್ಷೆ (C-Voters Opinion Poll) ಅಭಿಪ್ರಾಯಪಟ್ಟಿದೆ.
ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ಗೆ 115ರಿಂದ 127 ಸ್ಥಾನಗಳು ಸಿಗಲಿವೆ. ಉಳಿದಂತೆ ಬಿಜೆಪಿಗೆ 68ರಿಂದ 80 ಸ್ಥಾನ ಹಾಗೂ 23ರಿಂದ 35 ಸ್ಥಾನಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಅಂದಾಜಿಸಲಾಗಿದೆ.
ಹಲವು ಶಾಸಕರು ಬಿಜೆಪಿಗೆ ಹೋದ ಕಾರಣ ಸಮ್ಮಿಶ್ರ ಸರ್ಕಾರ ಮುರಿದು ಬಿದ್ದ ನಂತರ ಬಿಜೆಪಿ 121 , ಕಾಂಗ್ರೇಸ್ 70, ಜೆಡಿಎಸ್ 30 ಶಾಸಕರ ಬಲ ಹೊಂದಿದೆ.
ಸಮೀಕ್ಷೆ ಪ್ರಕಾರ ಕರಾವಳಿ ಕರ್ನಾಟಕದ 21 ಕ್ಷೇತ್ರಗಳಲ್ಲಿ ಬಿಜೆಪಿ 9 ರಿಂದ 13 ಸ್ಥಾನ ಗೆಲ್ಲಲಿದೆ. ಕಾಂಗ್ರೇಸ್ 8 ರಿಂದ 12 ಸ್ಥಾನ ಗೆಲ್ಲಲಿದೆ ಎನ್ನಲಾಗಿದೆ ಎಂದು ಸಮೀಕ್ಷೆ ತಿಳಿಸಿದೆ.
ಹಳೆ ಮೈಸೂರು ಭಾಗದ 55 ಕ್ಷೇತ್ರದಲ್ಲಿ ಬಿಜೆಪಿ 5 ಸ್ಥಾನ, ಕಾಂಗ್ರೇಸ್ 28 , ಜೆಡಿಎಸ್ 27 ಗೆಲ್ಲಲಿದೆ ಎನ್ನಲಾಗಿದೆ.
ಮುಂಬೈ ಕರ್ನಾಟಕ 50 ಕ್ಷೇತ್ರದಲ್ಲಿ ಬಿಜೆಪಿ 25 , ಕಾಂಗ್ರೇಸ್ 29, ಜೆಡಿಎಸ್ 1 ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ. ಹೈದರಾಬಾದ್ ಕರ್ನಾಟಕದ 31 ಕ್ಷೇತ್ರದಲ್ಲಿ ಬಿಜೆಪಿ 12 , ಕಾಂಗ್ರೇಸ್ 23, ಜೆಡಿಎಸ್ 1 ಗೆಲ್ಲಲಿದೆ ಎನ್ನಲಾಗಿದೆ.
ಬೆಂಗಳೂರಿನ 32 ಕ್ಷೇತ್ರಗಳ ಪೈಕಿ ಬಿಜೆಪಿ 15, ಕಾಂಗ್ರೇಸ್ 19 ಜೆಡಿಎಸ್ 3 ಸ್ಥಾನ ಗೆಲ್ಲಲಿದೆ ಎಂದು ಸಿ- ಓಟರ್ ಸಮೀಕ್ಷೆ ತಿಳಿಸಿದೆ.
ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ 2023ರ ಮೇ.13 ರಂದು ಬಿಜೆಪಿ ಕರ್ನಾಟಕದಲ್ಲಿ ಅರಳಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಏಪ್ರಿಲ್ 13ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ಇಂದಿನಿಂದಲೇ ನೀತಿಸಂಹಿತೆ ಜಾರಿಗೆ ಬಂದಿದೆ.
ಏಪ್ರಿಲ್ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 21ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ರಾಜ್ಯದಲ್ಲಿ 5.22 ಕೋಟಿ ಮತದಾರರರಿದ್ದು, 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಇದ್ದಾರೆ.
ಇದರಲ್ಲಿ 9,17,241 ಮೊದಲ ಬಾರಿ ಮತದಾರರು, 80 ವರ್ಷ ಮೇಲ್ಪಟ್ಟ 12,15,763 ಮತದಾರರು. ಅಂಗವಿಕಲರು 5,55,073 ಮತದಾರರು, 4,699 ತೃತೀಯ ಲಿಂಗಿ ಮತದಾರರು ಇದ್ದಾರೆ.
80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗುತ್ತದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ.
ವಿಶೇಷವಾಗಿ ಯುವ ಸಿಬ್ಬಂದಿ ಮಾತ್ರ ನಿರ್ವಹಿಸುವ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯೇ ನಿರ್ವಹಿಸು 1320 ಮತಗಟ್ಟೆಗಳು ಇರುತ್ತವೆ. ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.
ಬಿಗ್ ನ್ಯೂಸ್
Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.
ಬಿಗ್ ನ್ಯೂಸ್
Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.
ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.
ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.
ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.
ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.
ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.
ಸಮಗ್ರ ತೋಟಗಾರಿಕಾ ಸೇವೆ:
ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
ಬಿಗ್ ನ್ಯೂಸ್23 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ8 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ7 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ6 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ7 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸಿನೆಮಾ6 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ6 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ6 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















