ಸುಳ್ಯ
ಇನ್ನು ಅಭ್ಯರ್ಥಿ ಬದಲಾವಣೆ ಸಾಧ್ಯವಿಲ್ಲ : ಕೃಷ್ಣಪ್ಪನವರೇ ಸುಳ್ಯದ ಅಧಿಕೃತ ಅಭ್ಯರ್ಥಿ – ನಂದಕುಮಾರ್ ಅಭಿಮಾನಿಗಳು ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ : ಸುಧೀರ್ ಕುಮಾರ್ | ಎಂಎಸ್ಸಿ ಪದವೀಧರರಾದ ಕೃಷ್ಣಪ್ಪನವರ ಪರಿಚಯ ಇಲ್ಲಿದೆ
ಕಡಬ: ಕಾಂಗ್ರೇಸ್ ಪಕ್ಷ ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದು ಯಾರೂ ಏನೇ ಹೇಳಿದರೂ ಅವರೇ ಕಾಂಗ್ರೇಸ್ ಪಕ್ಷದ ಅಧಿಕೃತ ಅಭ್ಯರ್ಥಿ ಪಕ್ಷದ ನಿಯಮಾವಳಿ ಪ್ರಕಾರ ಬದಲಾವಣೆ ಸಾಧ್ಯವಿಲ್ಲ ಎಂದು ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹೇಳಿದರು.
ಅವರು ಗುರುವಾರ ಕಡಬದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಕಾಂಗ್ರೇಸ್ ಅಭ್ಯರ್ಥಿ ಕೃಷ್ಣಪ್ಪ ಅವರನ್ನು ಕಡಬಕ್ಕೆ ಬರಮಾಡಿಕೊಂಡು ನಮ್ಮಲ್ಲಿ ಅಭ್ಯರ್ಥಿತನಕ್ಕೆ ಆಕಾಂಕ್ಷೆ ಇರುವುದು ಹಾಗೂ ಗೊಂದಲ ಇರುವುದು ಸತ್ಯ ಇದನ್ನೆಲ್ಲಾ ಸರಿಪಡಿಸಿಕೊಂಡು ಕೃಷ್ಣಪ್ಪನವರನ್ನು ನಾವು ಗೆಲ್ಲಿಸಿ ವಿಧಾನ ಸಭೆಗೆ ಕಳುಹಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೃಷ್ಣಪ್ಪನವರು ಕಳೆದ ಎಂಟು ವರ್ಷಗಳಿಂದ ಸುಳ್ಯ ವಿಧಾನಸಭಾ ಕ್ಷೇತ್ರಾದ್ಯಂತ ಓಡಾಟ ಮಾಡಿ ಕ್ಷೇತ್ರದ ಪ್ರತೀ ಬೂತ್‌ನಲ್ಲಿಯೂ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರುಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ಪಕ್ಷ ಬಲವರ್ಧನೆ ಮಾಡುತ್ತಾ ಬಂದಿದ್ದಾರೆ.

ಕೊರೋನಾ ಸಂದರ್ಭದಲ್ಲಿ ಜಾತಿ ಮತ ನೋಡದೆ ಕಿಟ್ ವಿತರಣೆ ಸುಬ್ರಹ್ಮಣ್ಯ, ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರು ಮುಂತಾದೆಡೆ ಪೃಕೃತಿ ವಿಕೋಪದಲ್ಲಿ ಭೂಕುಸಿತ ಉಂಟಾದಾಗ ಕೃಷ್ಣಪ್ಪ ನವರು ಜನರ ನೆರವಿಗೆ ಬಂದಿದ್ದಾರೆ. ನೂರಾರು ಕುಟುಂಬಗಳಿಗೆ ನೆರವಿನ ಹಸ್ತ ನೀಡಿದ್ದಾರೆ. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ. ಪಕ್ಷ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಗಿ ನಿರ್ವಹಿಸಿದ್ದಾರೆ ಈ ಎಲ್ಲ ಹಿನ್ನೆಲೆಯಲ್ಲಿ ಹೈಕಮಾಂಡ್ ಅವರಿಗೆ ಟಿಕೇಟ್ ನೀಡಿದೆ ಎಂದರು.
ನಂದಕುಮಾರ್ ಅಭಿಮಾನಿಗಳು ಅಭ್ಯರ್ಥಿ ಬದಲಾವಣೆಯ ಮಾಡಬೇಕೆಂದು ಪಕ್ಷದ ಮುಖಂಡರಿಗೆ ಮನವಿ ಮಾಡಿರುವ ಬಗ್ಗೆ ಉತ್ತರಿಸಿದ ಸುಧೀರ್ ಕುಮಾರ್ ಅವರು ಕ್ಷೇತ್ರದಲ್ಲಿ ಅನೇಕ ಆಕಾಂಕ್ಷಿಗಳು ಇದ್ದಾರೆ. ನಂದಕುಮಾರ್ ಕೂಡಾ ಆಕಾಂಕ್ಷಿಯಾಗಿದ್ದರು. ಟಕೇಟು ಸಿಗದೇ ಇದ್ದಾಗ ಅಸಮಾಧಾನ ಸಹಜ ಆದರೆ ಯರೂ ಪಕ್ಷ ವಿರೋಧಿ ಕೆಲಸ ಮಾಡುತ್ತಿಲ್ಲ, ಗೊಂದಲಗಳನ್ನು ಸರಿಪಡಿಸುವ ಶಕ್ತಿ ಪಕ್ಷಕ್ಕಿದೆ. ಅಸಮಾಧಾನ ವ್ಯಕ್ತಪಡಿಸಿದ ನಾಯಕರುಗಳು ಸಂಪರ್ಕದಲ್ಲಿದ್ದಾರೆ, ಎಲ್ಲರೂ ಒಟ್ಟಾಗಿದ್ದೇವೆ, ಹೈಕಮಂಡ್ ಅಭ್ಯರ್ಥಿ ಘೋಷನೆ ಮಾಡಿದ ಬಳಿಕ ನಾವು ಅಭ್ಯರ್ಥಿಯ ಗೆಲುವಿಗೆ ಒಟ್ಟಾಗಿ ಶ್ರಮಿಸುತ್ತೇವೆ.
28 ವರ್ಷಗಳಿಂದ ಕ್ಷೇತ್ರದಲ್ಲಿ ಕಾಂಗ್ರೇಸ್ ಶಾಸಕರಿಲ್ಲದ ಕೊರಗನ್ನು ಈ ಬಾರಿ ನೀಗಿಸುತ್ತೇವೆ ಎಂದು ಸುಧೀರ್ ಹೇಳಿದರು.
ಘೋಷಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಮಾತನಾಡಿ, ನನ್ನ ಪತ್ನಿ ಮನೆ ಕ್ಷೇತ್ರದ ರಾಮಕುಂಜದಲ್ಲಿದೆ, ಪಕ್ಷ ನನಗೆ ಜವಾಬ್ದಾರಿ ನೀಡಿದ ಬಳಿಕ ಕ್ಷೇತ್ರದಲ್ಲಿ ವಿವಿಧ ಚುನಾವಣೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ, ಆಲಂಕಾರಿನಿದ ಕಡಬ ತನಕ ನಡೆದ ಕಾಂಗ್ರೇಸ್ ಕಾಲ್ನಡಿಗೆ ಯಾತ್ರೆಯನ್ನು ಅತ್ಯಂತ ಯಶಸ್ವಿಯಾಗಿ ಮಾಡಲಾಗಿದೆ, ಭಾರತ್ ಜೋಡೋ ಕಾರ್ಯಕ್ರಮ ಕೂಡಾ ಜಿಲ್ಲೆಯಲ್ಲೇ ಹೆಚ್ಚು ಪರಿಣಾಮಕಾರಿಯಾಗಿ ಕ್ಷೇತ್ರದಲ್ಲಿ ನಡೆದಿದೆ. ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಾಧ್ಯಕ್ಷರಾಗಿದ್ದಾಗ ಅವರು ನಿಡಿದ ರಾಜ್ಯ ಮಟ್ಟದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ, ಈಗ ಸುಳ್ಯ ವಿಧಾನ ಸಭೆಗೆ ಸ್ಪರ್ಧಿಸಲು ಪಕ್ಷ ಅವಕಾಶ ಕಲ್ಪಿಸಿದೆ, ನನ್ನನ್ನು ಗೆಲ್ಲಿಸಿ ಕ್ಷೇತ್ರದ ಸೇವೆ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ, ಸತೀಶ್ ನಾಯ್ಕ್ ಮೇಲಿನಮನೆ, ಕೆ.ಪಿ.ತೋಮಸ್, ಎಚ್.ಆದಂ, ದಿವಾಕರ ಗೌಡ ಶಿರಾಡಿ, ರಾಯ್ ಅಬ್ರಹಾಂ, ಮಾಧವ ಪೂಜಾರಿ, ಬಾಬು ಮುಗೇರ, ಅಝೀಜ್ ಕೋಲ್ಪೆ ಮತ್ತಿತರರು ಉಪಸ್ಥಿತರಿದ್ದರು.
ಜಿ.ಕೃಷ್ಣಪ್ಪ ಯಾರು .. ?
ಜಿ. ಕೃಷ್ಣಪ್ಪ ಇವರು ಮೂಲತ ಸಕಲೇಶಪುರದ ಕೆರೋಡಿಯವರು , ಕಡಬ ತಾಲೂಕಿನ ರಾಮಕುಂಜದ ಶಾರದನಗರದಲ್ಲಿ ನೆಲೆಸಿದ್ದಾರೆ.
ಎಂಎಸ್ಸಿ ಪದವಿಧರರಾದ ಕೃಷ್ಣಪ್ಪ ಅವರು , ಗ್ರ್ಯಾನೆಟ್ ಉದ್ಯಮಿಯೂ ಆಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೃಷ್ಣಪ್ಪರು ,ಕಾಂಗ್ರೇಸ್ ಪಕ್ಷದಲ್ಲಿ ವಿದ್ಯಾರ್ಥಿ ದೆಸೆಯಲ್ಲಿ NSUI ಮೂಲಕ ಗುರುತಿಸಿಕೊಂಡಿದ್ದರು.
ಯುಪಿಎ ಸರ್ಕಾರದ ಅವಧಿಯಲ್ಲಿ ಸ್ಟೀಲ್ ಕನ್ಸ್ಯುಮರ್ ಕೌನ್ಸಿಲ್ ಮೆಂಬರ್ ಆಗಿ , PPF (ಕಾರ್ಮಿಕ ನಿಧಿ) ಮಂಡಳಿಯ ಸದಸ್ಯರಾಗಿದ್ದರು.
58 ವರ್ಷ ಪ್ರಾಯದ ಕೃಷ್ಣಪ್ಪರ ಮಗಳು ವೈಧ್ಯೆಯಾಗಿಯೂ ಪುತ್ರ ಇಂಜಿನಿಯರ್ ಆಗಿದ್ದಾರೆ. ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೇಸ್ ಕಾರ್ಡಿನೇಟರ್ ಆಗಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ.
ನಿಖರ ನ್ಯೂಸ್ ಜೊತೆ ಮಾತನಾಡಿದ ಕೃಷ್ಣಪ್ಪರು ವಿಸ್ತಾರವಾಗಿರುವ ಸುಳ್ಯಕ್ಕೆ ವಿಶೇಷ ಪ್ಯಾಕೇಜ್ ತಂದು ರಸ್ತೆ ಸಮಸ್ಯೆ ಬಗೆಹರಿಸಬೇಕೆಂಬ ನಿಲುವು ಹೊಂದಿದ್ದಾರೆ.

ಅಭ್ಯರ್ಥಿ ಕೃಷ್ಣಪ್ಪ ಸುಬ್ರಹ್ಮಣ್ಯ ಸ್ವಾಮಿಯವರ ಭೇಟಿ ಮಾಡಿ ಆಶೀರ್ವಾದ ಪಡೆದರು.
ಅಡಿಕೆ, ರಬ್ಬರ್,ಗೇರು ಸಂಬಂಧಿತ ಇಂಡಸ್ಟ್ರಿ ಸುಳ್ಯದಲ್ಲಿ ನಿರ್ಮಾಣವಾಗಬೇಕು ಹಾಗೂ ಕಡಬ ಹಾಗೂ ಸುಳ್ಯಕ್ಕೆ ಎರಡು ಕೈಗಾರಿಕ ವಲಯ ಸ್ಥಾಪನೆಯ ಗುರಿ ಹೊಂದಿದ್ದಾರೆ.
ಅಡಿಕೆ ಹಳದಿ ರೋಗಕ್ಕೆ ವಿಶೇಷ ಪ್ಯಾಕೇಜ್ ಹಾಗೂ ರೋಗ ನಿಯಂತ್ರಣಕ್ಕೆ ಶಾಶ್ವತ ಪರಿಹಾರದ ಬಗ್ಗೆ ವಿಜ್ಞಾನಿಗಳ ತಂಡ ರಚನೆ ಮಾಡುವ ಇಚ್ಛೆ ಕೃಷ್ಣಪ್ಪರಿಗಿದೆ. ಎಲೆಚುಕ್ಕಿ ರೋಗಕ್ಕೆ ಪರಿಹಾರದ ಆಶ್ವಾಸನೆಯನ್ನು ಕೃಷ್ಣಪ್ಪರು ನೀಡಿದ್ದಾರೆ.
ಸುಳ್ಯದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ , ಆರೋಗ್ಯ ಕೇಂದ್ರದ ಕೊರತೆ , ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಗೆ ವಿಶೇಷ ಪ್ರಯತ್ನ ಪಟ್ಟು ಪರಿಹರಿಸುವ ಭರವಸೆ ಕೃಷ್ಣಪ್ಪರಿಗಿದೆ.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
Uncategorized18 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ದಕ್ಷಿಣ ಕನ್ನಡ12 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಸಿನೆಮಾ19 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ19 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ19 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಅಪರಾಧ11 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ಬಿಗ್ ನ್ಯೂಸ್17 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು18 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















