ಅಪರಾಧ
ಮಂಗಳೂರು : ಲಾಡ್ಜ್ ನಲ್ಲಿ ತಂಗಿದ್ದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಮಂಗಳೂರು, ಮಾ 31 : ಲಾಡ್ಜ್ ವೊಂದರಲ್ಲಿ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೈಸೂರು ನಿವಾಸಿಗಳಾದ ದೇವೇಂದ್ರ (48), ಪತ್ನಿ ನಿರ್ಮಲ, ಅವಳಿ ಮಕ್ಕಳಾದ ಚೈತ್ರಾ, ಚೈತನ್ಯ ಆತ್ಮಹತ್ಯೆ ಮಾಡಿಕೊಂಡವರು.
ದೇವೇಂದ್ರ ಎಂಬವರು ತನ್ನ ಪತ್ನಿ ಹಾಗೂ ಹೆಣ್ಣುಮಕ್ಕಳಿಗೆ ವಿಷವುಣಿಸಿ ತಾನು ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಂಗಳೂರಿನ ಕೆ ಎಸ್ ರಾವ್ ರಸ್ತೆಯಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಘಟನೆ ಸಂಭವಿಸಿದೆ. ಡೆಟ್ ನೋಟ್ ಸಿಕ್ಕಿದ್ದು, ಸಾಲಬಾಧೆ, ಸಾಲಗಾರರ ಒತ್ತಡವೇ ಆತ್ಮಹತ್ಯೆಗೆ ಕಾರಣವೆಂದು ಬರೆದಿದ್ದಾರೆ ಎನ್ನಲಾಗಿದೆ.
ಮಾ 27 ರಂದು ಮಂಗಳೂರಿಗೆ ಬಂದು ಕರುಣಾ ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿದ್ದರು. ಬಳಿಕ ಎರಡು ದಿನಗಳ ಕಾಲ ರೂಮ್ ನ್ನು ಮುಂದುವರೆಸಿ ನಿನ್ನೆಗೆ ಮುಕ್ತಾಯವಾಗಿತ್ತು. ಇದಕ್ಕಾಗಿ ಲಾಡ್ಜ್ ನ ಸಿಬ್ಬಂದಿಯು ವಿಚಾರಿಸುವ ಸಲುವಾಗಿ ಬಾಗಿಲು ಬಡಿದಾಗ ತೆರೆದಿರಲಿಲ್ಲ. ಅನುಮಾನಗೊಂಡ ಬಾಗಿಲಿನ ಲಾಕ್ ಮುರಿದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಮಂಗಳೂರು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.
ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪರಾಧ
Mangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು, ನ.20: ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗುರುವಾರ ಸಂಜೆ ನಡೆದ ಘಟನೆಯಲ್ಲಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಂಬಂಧಿಕರು ಎನ್ನಲಾದ ಕೆಲವರು ಕಾಲೇಜು ಆವರಣದಲ್ಲೇ ಬಲವಂತವಾಗಿ ಕಾರಿಗೆ ಹತ್ತಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಹಲವು ಯುವಕರು ಸೇರಿಕೊಂಡು ವಿದ್ಯಾರ್ಥಿನಿಯನ್ನು ಎಳೆದು ಕಾರಿನಲ್ಲಿ ಕರೆದೊಯ್ಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ವಯಸ್ಕರಾದ ಬಳಿಕ ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ಜೀವನ ನಡೆಸುವ ಹಕ್ಕಿದೆ. ವಿದ್ಯಾರ್ಥಿನಿಯೂ ತನ್ನ ಇಚ್ಛೆಯಂತೆ ಬದುಕಲು ಸ್ವತಂತ್ರಳಾಗಿದ್ದಾಳೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬಸ್ಥರು ಸೇರಿದಂತೆ ಯಾರೇ ಬಲವಂತವಾಗಿ ಕರೆದೊಯ್ದಿದ್ದರೂ ಅದು ಕಾನೂನುಬಾಹಿರವಾಗಿದ್ದು, ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅಪರಾಧ
FIR-‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್, ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್
ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು: ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಲ್ಯಾಣದ ಭಂಡಾರಿಯಾಗಿದ್ದ ಬಸವಣ್ಣನವರ ಮೇಲೆ ಜಾತಿವಾದಿಗಳು ಮಾಡಿದ್ದ ಸುಳ್ಳು ಆರೋಪಗಳನ್ನು ‘ಕಳ್ಳತನ’ ಎಂದು ವ್ಯಾಖ್ಯಾನಿಸಿರುವುದು ಹಾಗೂ ಕಲ್ಯಾಣ ಕ್ರಾಂತಿಯ ಐತಿಹಾಸಿಕ ಸಂಘರ್ಷಗಳನ್ನು ತಿರುಚಿ ಬಸವಣ್ಣನವರ ಮೇಲೆ ಆರೋಪ ಹೊರಿಸಿರುವುದು ಇತಿಹಾಸಕ್ಕೆ ಮಾಡಿದ ಅಪಚಾರ ಎಂದು ಬಸವ ಸಮಿತಿ ದೂರಿನಲ್ಲಿ ಆಕ್ಷೇಪಿಸಿದೆ.
ರವಿ ಹಂಜ್ ಅವರು ಇಂತಹ ಪೂರ್ವಾಗ್ರಹಪೀಡಿತ ಬರಹಗಳಿಗೆ ಸಂಶೋಧನೆಯ ಮುಖವಾಡ ತೊಡಿಸಿ ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದರೆ, ಪ್ರಕಾಶಕ ವಿಶ್ವೇಶ್ವರ ಭಟ್ ಅವರು ಕೃತಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.
ಇಂತಹ ವಿವಾದಾತ್ಮಕ ಕೃತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿತ್ತು.
-
ಬಿಗ್ ನ್ಯೂಸ್23 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ7 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ6 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ6 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ7 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಸಿನೆಮಾ6 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ6 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ6 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ

















