ಪುತ್ತೂರು
Big Breaking: ಆಮ್ ಆದ್ಮಿ ಪಕ್ಷ ಪುತ್ತೂರು ಅಭ್ಯರ್ಥಿಯಾಗಿ ನಿವೃತ್ತ ಯುವಜನಸೇವಾ ಕ್ರೀಡಾಧಿಕಾರಿ ಮಾಧವ ಗೌಡ ಬಿ.ಕೆ ಸಹೋದರ , ಕೃಷಿ ವಿಜ್ಞಾನಿ ಡಾ.ವಿಶು ಕುಮಾರ್ ಬಿ.ಕೆ ಆಯ್ಕೆ
ಪುತ್ತೂರು : 2023ರ ವಿಧಾನಸಭಾ ಚುನಾವಣೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಕೃಷಿ ವಿಜ್ಞಾನಿ ಡಾ.ವಿಶು ಕುಮಾರ್ ಬಿ.ಕೆ ಆಯ್ಕೆಯಾಗಿದ್ದಾರೆ.
ಇವರ ಸಹೋದರ ನಿವೃತ್ತ ಯುವಜನಸೇವಾ ಕ್ರೀಡಾಧಿಕಾರಿ, ಮಾಧವ ಗೌಡ ಬಿ.ಕೆ ಇವರು ನಿವೃತ್ತ ಸೈನಿಕ ಸಂಘ , ಕಬಡ್ಡಿ ಪಂದ್ಯಾವಳಿಗಳಲ್ಲಿ ಪುತ್ತೂರಿನಲ್ಲಿ ಚಿರಪರಿಚಿತರಾಗಿದ್ದಾರೆ.
ಎಮ್ ಎಸ್ಸಿ, ಪಿಎಚ್ ಡಿ , ಎಂಬಿಎ ಪದವಿಧರರಾದ ಡಾ.ವಿಶು ಕುಮಾರ್ ಸುಳ್ಯದ ಪಂಜ ಬೇರಿಯ ಮನೆಯವರು
ಇವರ ತಂದೆ ಪಟೇಲ್ ಕುಶಾಲಪ್ಪ ಗೌಡ, ಅಮ್ಮ ಜಾನಕಿ , ಪತ್ನಿ
ಪತ್ನಿ ಡಾ.ವೀಣಾ ಟಿ.ಎಚ್.
51 ವರ್ಷದ ವಿಶುಕುಮಾರ್, ಕೃಷಿ ವಿಜ್ಞಾನಿಯಾಗಿದ್ದು, ಅಡಿಕೆ ಕೊಳೆ ರೋಗ, ಹಳದಿ ರೋಗ ಹಾಗೂ ಎಳೆಚುಕ್ಕಿ ರೋಗದ ಬಗ್ಗೆ ಜಾಗೃತಿ ಮೂಡಿಸುತಿದ್ದಾರೆ. 5000ಕ್ಕೂ ಹೆಚ್ಚು ಅಡಿಕೆ ತೋಟಗಳಿಗೆ ಹೋಗಿ ಕೃಷಿಕರಿಗೆ ಮಾಹಿತಿಯನ್ನು ಉಚಿತ ಕೃಷಿ ಮಾಹಿತಿ ಆಂದೋಲನವನ್ನೇ ಕೈಗೊಂಡಿದ್ದಾರೆ.

ಮೈಸೂರಿನಲ್ಲಿ ತನ್ನ ಮೈಕ್ರೋ ನ್ಯೂಟ್ರಿಯೆಂಟ್ ನ ಸ್ವಂತ ಇಂಡಸ್ಟ್ರೀ ಹೊಂದಿದ್ದಾರೆ . ಇದನ್ನು ಅವರ ಪತ್ನಿ ಮುನ್ನಡೆಸುತ್ತಿದ್ದಾರೆ.
ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತಿದ್ದಾಗ ದಕ್ಷಿಣ ಕನ್ನಡ ಒಕ್ಕಲಿಗ ಗೌಡ ಜನಾಂಗವನ್ನು ಮೈಸೂರಿನಲ್ಲಿ ಒಗ್ಗೂಡಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ಕಳೆದ ಎರಡು ವರ್ಷಗಳಿಂದ ಪುತ್ತೂರಿನಲ್ಲಿ ಆಮ್ ಅದ್ಮಿ ಪಕ್ಷದ ಪರವಾಗಿ ಪ್ರಚಾರ ಕಾರ್ಯ ನಿರ್ವಹಿಸುತ್ತಿದ್ದಾರೆ.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ದಸರಾ ನೃತ್ಯ ವೈಭವದಲ್ಲಿ ಪ್ರಥಮ ಸ್ಥಾನ
ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಆಹ್ವಾನಿತ ತಂಡಗಳಿಗಾಗಿ ಆಯೋಜಿಸಲಾದ ಶಾಸ್ತ್ರೀಯ ಮತ್ತು ಅರೆಶಾಸ್ತ್ರೀಯ ವಿಭಾಗಗಳಲ್ಲಿ ವೈಯಕ್ತಿಕ ಹಾಗೂ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಈ ಅದ್ಭುತ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಮೂಹಿಕ ವಿಭಾಗದಲ್ಲಿ ನವದುರ್ಗಾರಾಧನೆಯ ವಿಷಯದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು.
ಈ ಅಮೋಘ ಸಾಧನೆ ಮಾಡಿದ ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಗುರುಗಳು, ಆಡಳಿತ ಮಂಡಳಿ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.
ಶಿಕ್ಷಣ
Ambika-ಅಂಬಿಕಾ ಪ.ಪೂ.ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ; ಉದ್ದೇಶ ಸ್ಪಷ್ಟತೆ ಇರುವವರಿಗೆ ಯಾವುದೇ ಅಡೆತಡೆಗಳಿಲ್ಲ: ಪಿ. ಪ್ರದೀಪ್ ಕುಮಾರ್
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ ಕಾರ್ಯಕ್ರಮವನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಉದ್ಘಾಟಿಸಿ ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಮಾತನಾಡಿದರು.

ಪುತ್ತೂರು: ಪ್ರತಿಭೆಯಿಲ್ಲದ ವ್ಯಕ್ತಿಯಿಲ್ಲ. ಆದರೆ ನಮ್ಮೊಳಗಿರುವ ಪ್ರತಿಭೆಗಳನ್ನು ಗುರುತಿಸುವುದು, ಬೆಳೆಸುವುದು ಹಾಗೂ ಆ ಪ್ರತಿಭೆಯನ್ನು ಸತ್ಕಾರ್ಯಗಳಿಗಾಗಿ ಬಳಸುವುದು ಅತ್ಯಂತ ಮುಖ್ಯ. ಸಮರ್ಪಿತ ಹಾಗೂ ಉದ್ದೇಶಸ್ಪಷ್ಟತೆ ಹೊಂದಿರುವ ವ್ಯಕ್ತಿಯ ಬೆಳವಣಿಗೆಗೆ ಯಾವುದೇ ಅಡೆತಡೆಗಳಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಪಿ. ಪ್ರದೀಪ್ ಕುಮಾರ್ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಹಾಗೂ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಪ್ರತಿಭಾ ದಿನಾಚರಣೆ – ಮಾನಸೋಲ್ಲಾಸ ಕಾರ್ಯಕ್ರಮವನ್ನು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಉದ್ಘಾಟಿಸಿ ಶನಿವಾರ ಮಾತನಾಡಿದರು.

ಈ ದೇಶದ ದೊಡ್ಡ ದೊಡ್ಡ ವಿಜ್ಞಾನಿಗಳು, ವೈದ್ಯರು, ಇಂಜಿನಿಯರ್ಗಳು, ದೊಡ್ಡ ದೊಡ್ಡ ಸಾಧಕರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶಗಳಿಂದ ಬಂದವರೇ ಆಗಿದ್ದಾರೆ. ಹಾಗಾಗಿ ಗ್ರಾಮೀಣ ಭಾಗದಲ್ಲಿ ಅವಕಾಶಗಳು ಕಡಿಮೆ ಎಂಬ ಭಾವನೆಯನ್ನು ಇಟ್ಟುಕೊಳ್ಳಬೇಕಿಲ್ಲ. ನಾವು ಎಲ್ಲಿಂದ ಬಂದಿದ್ದೇವೆ, ಯಾವ ಹಿನ್ನೆಲೆಯಿಂದ ಬಂದಿದ್ದೇವೆ ಎಂಬುದು ಮುಖ್ಯವಲ್ಲ. ಸಾಧನೆಯೆಡೆಗೆ ಮುಖ ಮಾಡಿ ನಿರಂತರ ಕಾರ್ಯಪ್ರವೃತ್ತರಾದರೆ ಅಂದುಕೊಡ ಗಮ್ಯವನ್ನು ತಲಪುವುದಕ್ಕೆ ಸಾಧ್ಯವಿದೆ ಎಂದರು.
ಕನಸು ಕಾಣುವುದಕ್ಕೆ ಎಲ್ಲರಿಗೂ ಸಾಧ್ಯವಿದೆ. ಆದರೆ ಕಂಡ ಕನಸುಗಳನ್ನು ನನಸು ಮಾಡುವುದಕ್ಕೆ ಶಿಸ್ತು, ಪ್ರಾಮಾಣಿಕತೆ, ನಿರಂತರ ಪ್ರಯತ್ನ ಹಾಗೂ ಎದುರಾಗುವ ಅಡೆತಡೆಗಳನ್ನು ಮೀರಿ ಮುನ್ನಡೆಯುವ ಸಾಮರ್ಥ್ಯಗಳಿರಬೇಕು. ಆಕಾಂಕ್ಷೆ ಹಾಗೂ ಸಾಧನೆಗಳ ಮಧ್ಯೆ ಬಹುದೊಡ್ಡ ಅಂತರವಿದೆ. ಆ ಅಂತರದ ನಡುವಣ ಸೇತುವೆಯಲ್ಲಿ ನಡೆಯಲು ಕಠಿಣ ಪರಿಶ್ರಮವೊಂದೇ ದಾರಿ. ಯಶಸ್ಸಿಗೆ ಯಾವುದೇ ಅಡ್ಡದಾರಿಗಳಿಲ್ಲ. ನಮ್ಮ ವ್ಯಕ್ತಿತ್ವವನ್ನು ತಂತ್ರಜ್ಞಾನ ರೂಪಿಸಲಾರದು, ಸ್ವತಃ ನಾವೇ ರೂಪಿಸಿಕೊಳ್ಳಬೇಕು ಎಂದು ನುಡಿದರು.

ಮತ್ತೋರ್ವ ಅತಿಥಿ, ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಹಾಗೂ ಬೆಂಗಳೂರಿನ ಭಾರತ್ ಇಲೆಕ್ಟಾçನಿಕ್ಸ್ನ ಡೆಪ್ಯೂಟಿ ಇಂಜಿನಿಯರ್ ಅನುಜ್ಞಾ ಪಳ್ಳತ್ತಡ್ಕ ಮಾತನಾಡಿ ನಾವು ಉಸಿರಾಡುವ ಗಾಳಿ, ತಿನ್ನುವ ಆಹಾರ ಈ ದೇಶದ್ದು. ಹಾಗಾಗಿ ಈ ದೇಶದ ಸೇವೆಯನ್ನು ಮಾಡಿ ನಮ್ಮ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕು. ನಮ್ಮ ಬದುಕಿನಲ್ಲಿ ಒಂದು ಸರಿಯಾದ ಉದ್ದೇಶವನ್ನಿಟ್ಟುಕೊಂಡು ಮುಂದುವರೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ನಮ್ಮ ಹಿರಿಯರ ಪರಿಶ್ರಮದ ಫಲವಾಗಿ ನಮ್ಮ ಭಾರತೀಯ ಕಲೆ, ಸಂಸ್ಕೃತಿಗಳು ಬೆಳೆದು ಬಂದಿವೆ. ಅವುಗಳನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಅಂಬಿಕಾ ಸಂಸ್ಥೆಗಳು ಸದಾ ತೊಡಗಿಕೊಂಡಿವೆ. ದೇಶ ಮೊದಲು ಎಂಬ ಭಾವನೆಯಡಿ ವಿದ್ಯಾರ್ಥಿಗಳನ್ನು ರೂಪಿಸಲಾಗುತ್ತಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ, ಆಡಳಿತ ಮಂಡಳಿ ಸದಸ್ಯರಾದ ವಿಶ್ರಾಂತ ಪ್ರಾಚಾರ್ಯ ಡಾ.ಎಚ್.ಮಾಧವ ಭಟ್, ಬಾಲಕೃಷ್ಣ ಬೋರ್ಕರ್, ಬಪ್ಪಳಿಗೆ ಹಾಗೂ ನೆಲ್ಲಿಕಟ್ಟೆ ಸಂಸ್ಥೆಗಳ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಅವಿನಾಶ ಕೊಡೆಂಕಿರಿ ಹಾಗೂ ತಿಲಕ್ ಬಿ.ಸಿ, ಅಂಬಿಕಾ ನೀಟ್ ಅಕಾಡೆಮಿಯ ಪ್ರಾಚಾರ್ಯ ಕಿಶೋರ್ ಭಟ್, ವಿದ್ಯಾರ್ಥಿ ಸಂಘದ ನಾಯಕರಾದ ಅವನಿ ನಾಯಕ್, ಎಚ್.ವಿ.ಭವಿತ್ ಗೌಡ, ರಿಧಿ ಗೌಡ ಹಾಗೂ ಇಂದಿವರ್ ಪಿ.ಪಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶೈಕ್ಷಣಿಕ ಸಾಧಕರು, ಕ್ರೀಡಾ ಸಾಧಕರು, ವಿದ್ಯಾಭಾರತಿ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ದತ್ತಿನಿಧಿ ಬಹುಮಾನಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿನಿ ಅಮೃತಾ ರಾವ್ ಶಂಖನಾದಗೈದರು. ವಿದ್ಯಾರ್ಥಿನಿ ಶ್ರೀವಿಭಾ ಹಾಗೂ ತಂಡದವರು ಪ್ರಾರ್ಥಿಸಿದರು. ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿ, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ.ಎಸ್. ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಅವರಿಂದ ವಿಡಿಯೋ ಪ್ರಾತ್ಯಕ್ಷಿಕೆ ಸಹಿತ ವರದಿ ವಾಚನ ನಡೆಯಿತು. ವಿದ್ಯಾರ್ಥಿನಿಯರಾದ ಸೋನಾ ನಾರ್ಕೋಡ್ ಹಾಗೂ ಉರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಆನ್ಯಾ ಹಾಗೂ ಚಿನ್ಮಯೋ ಶೆಟ್ಟಿ ಅತಿಥಿ ಪರಿಚಯ ನಡೆಸಿಕೊಟ್ಟರು.
ಬಿಗ್ ನ್ಯೂಸ್
Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.
ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
-
ಮಂಗಳೂರು23 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ನಿಧನ ವಾರ್ತೆ6 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
Uncategorized20 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಸ್ಥಳೀಯ6 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಸ್ಥಳೀಯ5 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಕ್ರೀಡೆ23 hours agoMCC:ಎಂಸಿಸಿಯಿಂದ ಕ್ರಿಕೆಟ್ ನಿಯಮಗಳ ಪರಿಷ್ಕರಣೆ: ಅ.1ರಿಂದ ಹೊಸ ಬದಲಾವಣೆಗಳು ಜಾರಿ
-
ಮಂಗಳೂರು24 hours agoMangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ
-
Uncategorized23 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ


















