ದಕ್ಷಿಣ ಕನ್ನಡ
ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ ಸೀ ಪುಡ್ ಪಾರ್ಕ್ ಮಾಡಲು ಹೊರಟ ಬಿಜೆಪಿ ಈಗ ಜನಾಂದೋಲನಕ್ಕೆ ಹೆದರಿ ಸುಳ್ಳು ಹೇಳುತ್ತಿದೆ : ಪುತ್ತೂರು ಕಾಂಗ್ರೆಸ್
ಪುತ್ತೂರು: ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಕನಸು ಕಂಡವರೇ ನಾವು ಎಂದು ಬಿಜೆಪಿ ಪತ್ರಿಕಾಗೋಷ್ಟಿಲ್ಲಿ ಹೇಳಿದ್ದು, ಕಾಲೇಜು ಹೋರಾಟ ಅಭಿಯಾನವು ಕಾಂಗ್ರೆಸ್ನ ಟೂಲ್ ಕಿಟ್ ಎಂದು ಆರೋಪಿಸಿದೆ. ಮೆಡಿಕಲ್ ಕಾಲೇಜ್ ಕನಸು ಬಿಜೆಪಿ ಕಂಡಿದ್ದು ನಿಜವೇ ಆಗಿದ್ದಲ್ಲಿ, ಪುತ್ತೂರು ಶಾಸಕರು ಯಾಕೆ ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗದಲ್ಲಿ ಸೀಫುಡ್ ಕಾರ್ಖಾನೆ ತರಲು ಹೊರಟರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ. ನಾರಾಯಣ್ ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅಭಿಯಾನದ ಕುರಿತು ವ್ಯಂಗ್ಯವಾಡಿ ಅದೊಂದು ರಾಜಕೀಯ ಪ್ರೇರಿತ ಅಭಿಯಾನ ಎಂದು ಕುಹಕವಾಡಿದ್ದಾರೆ. ಆದರೇ ಸರಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಪಕ್ಷಾತೀತವಾದುದು. ಜಾತ್ಯತೀತವಾದುದು ಮತ್ತು ಧರ್ಮಾತೀತವಾದುದು. ಇದರಲ್ಲಿ ಎಲ್ಲ ಜಾತಿ, ಪಕ್ಷ, ಧರ್ಮದವರಿದ್ದಾರೆ. ಈ ಹೋರಾಟ ಪುತ್ತೂರು ಮತ್ತು ಪಕ್ಕದ ತಾಲೂಕುಗಳ ಜನರ ಆರೋಗ್ಯ ರಕ್ಷಣೆಗಾಗಿ ಮಾಡಲಾಗುತ್ತಿದೆಯೇ ಹೊರತು ಕಾಂಗ್ರೆಸ್ನ ಟೂಲ್ಕಿಟ್ ಅಲ್ಲ ಎಂದವರು ಸ್ಪಷ್ಟಪಡಿಸಿದರು.
ಹೋರಾಟ ಸಮಿತಿಯ ಅಧ್ಯಕ್ಷನನ್ನಾಗಿ ಮಾಡುವ ಸಂದರ್ಭ ಪಕ್ಷವನ್ನು ನೋಡಿ ಮಾಡಿಲ್ಲ. ವೈದ್ಯಕೀಯ ಕಾಲೇಜು ಆಗಬೇಕೆಂಬ ತುಡಿತ ಸಾಮೆತ್ತಡ್ಕ ಮೂಲದ ಯು.ಎಸ್.ಎ. ನಲ್ಲಿ ವೈದ್ಯ ಸಂದೀಪ್ ಅವರದ್ದಾಗಿದ್ದು, ಈ ಹೋರಾಟಕ್ಕೆ ಪ್ರೇರಣೆಯಾಗಿದೆ. ಕಾಂಗ್ರೆಸ್ ಪಕ್ಷದ ಕರಾವಳಿ ಪ್ರಣಾಳಿಕೆಯ ಪ್ರಧಾನಾಂಶ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯಾಗಿದೆ. ಅಧಿಕಾರಕ್ಕೆ ಯಾವ ಪಕ್ಷ ಬಂದರೂ ಹಕ್ಕೊತ್ತಾಯದ ಕಾರ್ಯ ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ನಡೆಯುತ್ತದೆ
ನಾನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಜ. ಹಾಗೆಂದು ಈ ಹುದ್ದೆಯ ಹೆಸರಿನಲ್ಲಿ ನಾನು ಆ ಸಮಿತಿಗೆ ಅಧ್ಯಕ್ಷನಾಗಿದ್ದಲ್ಲ. ಸಮಾಜದ ಮೇಲಿನ ತುಡಿತದಿಂದ ಆ ಹೋರಾಟಕ್ಕೆ ಇಳಿದೆವು. ಎಲ್ಲ ವರ್ಗದ ಜನರಿಂದ ಅದ್ಭುತ ಸ್ಪಂದನೆ ಸಿಕ್ಕಿದೆ. ಎಲ್ಲ ಪಕ್ಷದವರೂ ನಮ್ಮೊಂದಿಗಿದ್ದಾರೆ. ಹೋರಾಟಗಾರರು ನನ್ನನ್ನು ಅಧ್ಯಕ್ಷನಾಗಿ ಮಾಡಿದಾಗ ಪ್ರೀತಿಯಿಂದ ಒಪ್ಪಿಕೊಂಡಿದ್ದೇನೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಪಕ್ಷದಲ್ಲಿರುವ ಒಬ್ಬ ವ್ಯಕ್ತಿ ಸಾಮಾಜಿಕ ಹೋರಾಟದಲ್ಲಿ ಭಾಗವಹಿಸಬಾರದು ಎಂದೇನಿಲ್ಲವಲ್ಲ? ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವ ಕಾರಣ ಈ ಅಭಿಯಾನ ನಮ್ಮ ಸರಕಾರದ ವಿರುದ್ಧ ಎಂದು ಬಿಜೆಪಿಯವರಿಗೆ ಅನಿಸಿದೆಯೋ ಏನೋ. ಆದರೆ ಇದು ಸರಕಾರ, ಪಕ್ಷದ ವಿರುದ್ಧದ ಅಭಿಯಾನವಲ್ಲ. ಜನರ ಹಕ್ಕೊತ್ತಾಯ ಮಂಡಿಸುವ ಜನಾಂದೋಲನವಾಗಿದೆ ಎಂದರು.
ನಾಳೆ ನಮ್ಮ ಸರಕಾರ ಬಂದ ಮೇಲೂ ನಮ್ಮ ಈ ಹೋರಾಟ ಮುಂದುವರಿಯುತ್ತದೆ. ಪುತ್ತೂರಿನಲ್ಲಿ ನಮ್ಮ ಪಕ್ಷದ ಶಾಸಕರು ಬಂದರೂ ನಾವು ಅವರಿಗೂ ಈ ಹಕ್ಕೊತ್ತಾಯ ಮಾಡುತ್ತೇವೆ ಎಂದು ಹೇಳಿದ ಅವರು, ಸರಕಾರಿ ಮೆಡಿಕಲ್ ಕಾಲೇಜು ಪುತ್ತೂರಿನಲ್ಲಿ ಸ್ಥಾಪಿಸುವ ಬಗ್ಗೆ ಮೊದಲು ಕನಸು ಕಂಡವರೇ ನಾವು ಎಂದು ಬಿಜೆಪಿಗರು ಹೇಳುವುದರಲ್ಲಿ ಅರ್ಥವಿಲ್ಲ. ಯಾಕೆಂದರೆ ಸೇಡಿಯಾಪು ಬಳಿ ಸರಕಾರಿ ಮೆಡಿಕಲ್ ಕಾಲೇಜಿಗೆ 40 ಎಕರೆ ಜಾಗ ಮಂಜೂರು ಮಾಡಿದ್ದು ಶಕುಂತಳಾ ಶೆಟ್ಟಿಯವರು. ಇದು ಎಲ್ಲರಿಗೂ ಗೊತ್ತಿರುವ ಸಂಗತಿ. ಒಂದು ವೇಳೆ ಬಿಜೆಪಿಗರು ಸರಕಾರಿ ಮೆಡಿಕಲ್ ಕಾಲೇಜಿಗೆ ಪರವಾಗಿದ್ದಿದ್ದರೆ ಶಾಸಕ ಸಂಜೀವ ಮಠಂದೂರು ಯಾಕೆ ಕಾಲೇಜಿಗೆ ಮಂಜೂರಾದ ಜಾಗದಲ್ಲಿ ಸೀ ಫುಡ್ ಕಾರ್ಖಾನೆ ನಿರ್ಮಿಸಲು ಮುಂದಾದರು? ಅದಕ್ಕೆ ಬೇರೆ ಜಾಗ ನೋಡಬಹುದಿತ್ತಲ್ಲವೇ? ಸಾರ್ವಜನಿಕರ ಪ್ರಬಲ ವಿರೋಧ ಬಂದಾಗ ಸೀಫುಡ್ ಕಾರ್ಖಾನೆ ಯೋಜನೆಯಿಂದ ಹಿಂದೆ ಸರಿದರು. ಇದು ಸತ್ಯವಲ್ಲವೇ ಎಂದರು.
ಬೇಕಾದ ಮಾನದಂಡ ಪುತ್ತೂರಿನಲ್ಲಿಲ್ಲ ಎಂದಿದ್ದರು ಶಾಸಕರು
ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಮಾತನಾಡಿ, ಶಾಸಕ ಸಂಜೀವ ಮಠಂದೂರು ಅವರಿಗೆ ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವುದು ಇಷ್ಟವಿರಲಿಲ್ಲ. ಕಾಲೇಜಿನ ಜಾಗಕ್ಕೆ ಸೀಫುಡ್ ಕಾರ್ಖಾನೆ ತರುವ ಸಂದರ್ಭ ಅವರೇ ಪತ್ರಿಕಾ ಹೇಳಿಕೆ ನೀಡಿ, ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಬರುವುದಿಲ್ಲ. ಅದಕ್ಕೆ ಬೇಕಾದ ಮಾನದಂಡ ಇಲ್ಲಿ ಇಲ್ಲ ಎಂದು ಹೇಳಿದ್ದರು. ಈಗ ಮೆಡಿಕಲ್ ಕಾಲೇಜು ಪರವಾಗಿ ದೊಡ್ಡ ಮಟ್ಟದ ಆಂದೋಲನ ನಡೆಯುತ್ತಿರುವುದನ್ನು ಕಂಡು ನಾವು ಕೂಡ ಮೆಡಿಕಲ್ ಕಾಲೇಜು ಪರವಾಗಿದ್ದೇವೆ ಎಂದು ಹೇಳುತ್ತಿದ್ದಾರೆ.
ಕಾಲೇಜು ಹೋರಾಟ ಸಮಿತಿಯವರು ಶಾಸಕರಿಗೆ ಆರಂಭದಲ್ಲಿ ತಿಳಿಸಿಲ್ಲ ಎಂದು ಬಿಜೆಪಿ ನಾಯಕ ಆರ್. ಸಿ. ನಾರಾಯಣ್ ಮಾಡಿರುವ ಆರೋಪ ಸುಳ್ಳು. ಯಾಕೆಂದರೆ ಹೋರಾಟ ಸಮಿತಿ ರಚನೆಯಾದ ಕೆಲವೇ ದಿನಗಳಲ್ಲಿ ನಡೆದ ಪುತ್ತೂರು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಸ್ವತಃ ಹೋರಾಟ ಸಮಿತಿಯ ಗೌರವಾಧ್ಯಕ್ಷರಾದ ಅಣ್ಣಾ ವಿನಯಚಂದ್ರ ಭಾಗವಹಿಸಿದ್ದರು. ಆ ಸಭೆಯಲ್ಲಿ ಶಾಸಕರು ವಿನಯಚಂದ್ರರ ಜತೆ ಮೆಡಿಕಲ್ ಕಾಲೇಜು ರಚನೆಯ ಬಗ್ಗೆ ಚರ್ಚೆ ನಡೆಸಿದ್ದರು. ಸಿಆರ್ಎಫ್ ಫಂಡ್ ತರಲು ಪ್ರಯತ್ನಿಸಿ ಎಂದು ವಿನಯಚಂದ್ರರು ಶಾಸಕರಿಗೆ ಮನವಿ ಮಾಡಿದ್ದರು. ಇದು ಬಿಜೆಪಿಗರಿಗೆ ಮರೆತು ಹೋಯಿತೇ ಎಂದರು.
ಕಾಂಗ್ರೆಸ್ನ ಟೂಲ್ ಕಿಟ್ ಆಗಿದ್ದರೆ ಸಮಿತಿ ರಚನೆಯಾದ ಸಂದರ್ಭದಲ್ಲೇ ಹೇಳಬೇಕಿತ್ತು. ಯಾಕೆ ಹೇಳಿಲ್ಲ. ಈಗ ಜನಾಂದೋಲನ ಕಂಡು ಭಯಪಟ್ಟು ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ೬ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾಗಿತ್ತು. ಈ ಬಾರಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಣಾಳಿಕೆಯಲ್ಲಿ ಈ ಅಂಶ ಸೇರಿಸುತ್ತೇವೆ ಎಂದವರು ನುಡಿದರು.
ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಮೌರೀಸ್ ಮಸ್ಕರೇನಸ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಶಕೂರ್ ಹಾಜಿ, ಎಸ್ಸಿ ಘಟಕದ ಅಧ್ಯಕ್ಷರಾದ ಕೇಶವ ಪಡೀಲ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಮಂಗಳೂರು
Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್
ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.
“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.
ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.
“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು
ಬಿಗ್ ನ್ಯೂಸ್
Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.
ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.
120 ಎಕರೆ ಸರ್ಕಾರಿ ಜಮೀನಿನತ್ತ ಗಮನ
ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.
ಸಮನ್ವಯದ ಚಿಕಿತ್ಸೆಗೆ ಅವಕಾಶ
ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರಿ ಸ್ವಾಮ್ಯಕ್ಕೆ ಒತ್ತು
ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.
ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.
ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
-
ನಿಧನ ವಾರ್ತೆ18 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ನಿಧನ ವಾರ್ತೆ12 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ17 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು15 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ17 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
Uncategorized10 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಬಿಗ್ ನ್ಯೂಸ್12 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಶಿಕ್ಷಣ12 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ


















