ರಾಜಕೀಯ
Narendra Modi | ಪ್ರಧಾನಿ ಮೋದಿ ಪದವಿ ಪ್ರಮಾಣಪತ್ರ ಕೇಳಿದ ಕೇಜ್ರಿವಾಲ್ ಗೆ 25000 ರೂ. ದಂಡ ವಿಧಿಸಿದ ಗುಜರಾತ್ ಹೈಕೋರ್ಟ್
ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣಪತ್ರವನ್ನು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ನೀಡಬೇಕು ಎಂದು ಪ್ರಧಾನಿ ಪದವಿ ಪ್ರಮಾಣಪತ್ರದ ವಿವರಗಳನ್ನು ನೀಡಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು, ಆದರೆ ಇದೀಗ ಹೈಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಪ್ರಧಾನಿ ಮೋದಿ ತಮ್ಮ ಪದವಿ ಪ್ರಮಾಣ ಪತ್ರಗಳನ್ನು ಪ್ರಧಾನ ಮಂತ್ರಿ ಕಚೇರಿಗೆ ಒದಗಿಸುವ ಅಗತ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ಶುಕ್ರವಾರ ತೀರ್ಪು ನೀಡಿದೆ ಎಂದು ಎಎನ್‌ಐ ವರದಿ ಮಾಡಿದೆ. ಇದರ ಜೊತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ 25 ಸಾವಿರ ದಂಡ ವಿಧಿಸಿದೆ.
ಇದನ್ನು ಪ್ರಶ್ನಿಸಿದ ಕೇಜ್ರಿವಾಲ್ ಮೋದಿ ಅವರು ಪದವಿ ಪ್ರಮಾಣಪತ್ರ ನಕಲಿಯೇ? ಅದನ್ನು ಏಕೆ ಮರೆಮಾಡಲಾಗುತ್ತಿದೆ? ಎಂದು ಪ್ರಶ್ನಿಸಿದ್ದಾರೆ. ಗುಜರಾತ್ ಹೈಕೋರ್ಟ್ ಆದೇಶವು ಪ್ರಧಾನಿಯವರ ಶಿಕ್ಷಣದ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ನಮ್ಮ ದೇಶಕ್ಕೆ ಅಶಿಕ್ಷಿತ ಅಥವಾ ಕಡಿಮೆ ಶಿಕ್ಷಣ ಪಡೆದ ಪ್ರಧಾನಿ ಅಪಾಯಕಾರಿ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ವಿವರಗಳನ್ನು ಬಹಿರಂಗಪಡಿಸುವಂತೆ ಗುಜರಾತ್ ವಿಶ್ವವಿದ್ಯಾಲಯಕ್ಕೆ ನೀಡಿದ್ದ ಆದೇಶವನ್ನು ಹೈಕೋರ್ಟ್ ನಿನ್ನೆ ರದ್ದುಗೊಳಿಸಿತು.
ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ಏಕಸದಸ್ಯ ಪೀಠವು ಪ್ರಧಾನ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ರದ್ದುಗೊಳಿಸಿತು, ಪಿಎಂಒದ ಸಾರ್ವಜನಿಕ ಮಾಹಿತಿ ಅಧಿಕಾರಿ (ಪಿಐಒ) ಮತ್ತು ಗುಜರಾತ್ ವಿಶ್ವವಿದ್ಯಾಲಯ ಮತ್ತು ದೆಹಲಿ ವಿಶ್ವವಿದ್ಯಾಲಯದ ಪಿಐಒಗಳಿಗೆ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿವರಗಳನ್ನು ಒದಗಿಸುವಂತೆ ನಿರ್ದೇಶಿಸಿದೆ.
ಪ್ರಧಾನಿ ಪದವಿ ಪ್ರಮಾಣಪತ್ರದ ವಿವರಗಳನ್ನು ಕೋರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಗುಜರಾತ್ ಹೈಕೋರ್ಟ್ 25,000 ರೂ, ದಂಡ ವಿಧಿಸಿದೆ. ಮುಖ್ಯ ಮಾಹಿತಿ ಆಯೋಗದ ಆದೇಶವನ್ನು ಪ್ರಶ್ನಿಸಿ ಗುಜರಾತ್ ವಿಶ್ವವಿದ್ಯಾಲಯ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಪ್ರಜಾಪ್ರಭುತ್ವದಲ್ಲಿ, ಕಚೇರಿಯಲ್ಲಿ ವ್ಯಕ್ತಿಯು ಡಾಕ್ಟರೇಟ್ ಅಥವಾ ಅನಕ್ಷರಸ್ಥ ಎಂದು ವ್ಯತ್ಯಾಸವಿರುವುದಿಲ್ಲ. ಅಲ್ಲದೆ, ಈ ವಿಷಯದಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಒಳಗೊಂಡಿಲ್ಲ. ಅವರ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಕಾನೂನು ವೆಬ್‌ಸೈಟ್ ಬಾರ್ ಮತ್ತು ಬೆಂಚ್ ವಿಶ್ವವಿದ್ಯಾಲಯದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ವಾದಿಸಿದರು.
ಪ್ರಧಾನಿ ನರೇಂದ್ರ ಮೋದಿಯವರ ಪ್ರಕಾರ, ಅವರು 1978 ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಪದವಿ ಮತ್ತು 1983 ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು. ಮತ್ತೊಂದೆಡೆ, ಕೇಜ್ರಿವಾಲ್ ಪರ ವಕೀಲ ಪರ್ಸಿ ಕವಿನಾ ವಾದಿಸಿದರು, ನೀವು ನಾಮನಿರ್ದೇಶನ ಫಾರ್ಮ್ ಅನ್ನು (ಚುನಾವಣೆಯಲ್ಲಿ ಸಲ್ಲಿಸಿದ) ನೋಡಿದರೆ ಅದು ಅವರ ಶೈಕ್ಷಣಿಕ ಅರ್ಹತೆಯನ್ನು ಕೇಳುತ್ತದೆ. ಹೀಗಾಗಿ, ನಾವು ಪದವಿ ಪ್ರಮಾಣಪತ್ರವನ್ನು ಕೇಳುತ್ತಿದ್ದೇವೆ ಮತ್ತು ಅವರ ಅಂಕಪಟ್ಟಿ ಅಲ್ಲ ಎಂದು ವಾದಿಸಿದರು.
ಅಂತರ ರಾಜ್ಯ
By-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.
ಹೊಸದಿಲ್ಲಿ: ಒಂದು ಲೋಕಸಭಾ ಕ್ಷೇತ್ರ ಮತ್ತು ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿ ಗಮನ ಸೆಳೆದಿದೆ. ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾರೀ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆದಿದೆ.
ಪಶ್ಚಿಮ ಬಂಗಾಳದ ರೇಜಿನಗರ ಮತ್ತು ನಂದಿಗ್ರಾಮ, ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ಹಾಗೂ ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಇದರ ಜತೆಗೆ ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರಕ್ಕೂ ಚುನಾವಣೆ ನಡೆದಿತ್ತು. ಲಭ್ಯವಿರುವ ಮಾಹಿತಿಯ ಪ್ರಕಾರ, ಕೆಲವು ಕ್ಷೇತ್ರಗಳಲ್ಲಿ ಫಲಿತಾಂಶದ ಚಿತ್ರಣ ಸ್ಪಷ್ಟವಾಗಿದ್ದರೂ ಚುನಾವಣಾ ಆಯೋಗದ ಅಧಿಕೃತ ಪ್ರಕಟಣೆ ಬಾಕಿಯಿದೆ.
ನಾಗೌನ್‌ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ
ಅಸ್ಸಾಂನ ನಾಗೌನ್ ಲೋಕಸಭಾ ಕ್ಷೇತ್ರವು ಈ ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರದ್ಯುತ್ ಬೊರ್ದೊಲೊಯಿ ಅವರು ಬಿಜೆಪಿ ಅಭ್ಯರ್ಥಿ ಸುರೇಶ್ ಬೋರಾ ವಿರುದ್ಧ 2,12,231 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಬಳಿಕ ಪ್ರದ್ಯುತ್ ಬೊರ್ದೊಲೊಯಿ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ದಿಸ್ಪುರ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಹೀಗಾಗಿ ನಾಗೌನ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಿತು.
ಸದ್ಯದ ಮಾಹಿತಿಯ ಪ್ರಕಾರ, ಬಿಜೆಪಿ ಅಭ್ಯರ್ಥಿ ದೇವಶಿಸ್ ಶರ್ಮಾ ಅವರು ಎಐಯುಡಿಎಫ್ ಅಭ್ಯರ್ಥಿ ಬದ್ರುದ್ದೀನ್ ಅಜ್ಮಲ್ ವಿರುದ್ಧ ಸುಮಾರು 1.2 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿಬಾಮಣಿ ಬೋರಾ ಮೂರನೇ ಸ್ಥಾನದಲ್ಲಿದ್ದಾರೆ ಎಂದು ವರದಿಯಾಗಿದೆ.
ಪಶ್ಚಿಮ ಬಂಗಾಳದ ಎರಡು ಕ್ಷೇತ್ರಗಳಲ್ಲಿ ಪೈಪೋಟಿ
ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹಸಿರಾಣಿ ರಥ್ ಅವರು ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ವಿರುದ್ಧ ಸುಮಾರು 1.05 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.
ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ನಂದಿಗ್ರಾಮ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.
ಇನ್ನು ರೇಜಿನಗರ ಕ್ಷೇತ್ರದಲ್ಲಿ ಸಖಾರವ್ ಸರ್ಕಾರ್ ಅವರು ಎಜೆಯುಪಿ ಅಭ್ಯರ್ಥಿ ಗೋಲಂ ನಬಿ ಆಜಾದ್ ವಿರುದ್ಧ ಸುಮಾರು 38 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಈ ಕ್ಷೇತ್ರದಲ್ಲಿಯೂ ಮತ ಎಣಿಕೆಯ ಬೆಳವಣಿಗೆಗಳ ಮೇಲೆ ರಾಜಕೀಯ ವಲಯದ ಗಮನ ನೆಟ್ಟಿದೆ.
ತಮಿಳುನಾಡಿನಲ್ಲಿ ಟಿವಿಕೆ ಅಭ್ಯರ್ಥಿಗಳಿಗೆ ಮುನ್ನಡೆ
ತಮಿಳುನಾಡಿನ ಮಧುರಂಟಕಂ ಮತ್ತು ಧಾರಾಪುರಂ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.
ಮಧುರಂಟಕಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಮರಗತಂ ಕುಮಾರವೇಲು ಅವರು ತಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಮಾರು 6 ಸಾವಿರ ಮತಗಳ ಮುನ್ನಡೆ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆ ಎಐಎಡಿಎಂಕೆ ಅಭ್ಯರ್ಥಿಯಾಗಿದ್ದ ಅವರು, ನಂತರ ಟಿವಿಕೆ ಸೇರಿ ಸ್ಪರ್ಧಿಸಿದ್ದರು ಎನ್ನಲಾಗಿದೆ.
ಧಾರಾಪುರಂ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಪಿ. ಸತ್ಯಭಾಮಾ ಅವರು ಡಿಎಂಕೆ ಅಭ್ಯರ್ಥಿ ವಿರುದ್ಧ ಸುಮಾರು 9,600 ಮತಗಳ ಮುನ್ನಡೆ ಸಾಧಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸತ್ಯಭಾಮಾ, ಡಿಎಂಕೆ ಅಭ್ಯರ್ಥಿ ಟಿ. ಇಂದಿರಾಣಿ ವಿರುದ್ಧ 16,727 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು.
ಪುದುಚೇರಿಯಲ್ಲಿ ಎನ್‌ಡಿಎ ಅಭ್ಯರ್ಥಿಗೆ ಗೆಲುವು
ಪುದುಚೇರಿಯ ತಟ್ಟನಚಾವಡಿ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಆನಂದ್ ಅವರು ಕಾಂಗ್ರೆಸ್ ಅಭ್ಯರ್ಥಿ ಇ. ವಿನಾಯಗಂ ವಿರುದ್ಧ 8,482 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಲಭ್ಯವಿರುವ ಮಾಹಿತಿ ತಿಳಿಸಿದೆ.
ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು ತಟ್ಟನಚಾವಡಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು ಎನ್ನಲಾಗಿದೆ.
ಉಪಚುನಾವಣೆಯ ಅಧಿಕೃತ ಫಲಿತಾಂಶ ಪ್ರಕಟವಾದ ಬಳಿಕ ವಿವಿಧ ರಾಜ್ಯಗಳ ರಾಜಕೀಯ ಲೆಕ್ಕಾಚಾರಗಳ ಮೇಲೆ ಇದರ ಪರಿಣಾಮದ ಚಿತ್ರಣ ಮತ್ತಷ್ಟು ಸ್ಪಷ್ಟವಾಗಲಿದೆ.
ರಾಜಕೀಯ
Sanjeev Mathandur-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ; ‘ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ’ – ಸಂಜೀವ ಮಠಂದೂರು
ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಪರಿಹಾರ ವಿತರಣೆಯಲ್ಲಿ ಅನ್ಯಾಯವಾಗುತ್ತಿದ್ದು, ಇದರ ಹಿಂದೆ ಷಡ್ಯಂತ್ರ ಹಾಗೂ ಭ್ರಷ್ಟಾಚಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಸಮಗ್ರ ಹಾಗೂ ಕೂಲಂಕಷ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.
ಅ.8ರಂದು ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕುಗಳ ರೈತರು ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಸುಮಾರು ₹840 ಕೋಟಿ ಪರಿಹಾರ ಬರಬೇಕಿದ್ದು, ವಾಸ್ತವವಾಗಿ ರೈತರಿಗೆ ಎಷ್ಟು ಮೊತ್ತ ವಿತರಿಸಲಾಗಿದೆ ಎಂಬುದನ್ನು ಸರಕಾರ ಹಾಗೂ ವಿಮಾ ಕಂಪನಿಗಳು ಅಂಕಿ-ಅಂಶಗಳ ಸಹಿತ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ರೈತರು ಪಾವತಿಸಿದ ವಿಮಾ ಮೊತ್ತಕ್ಕೆ ಅನುಗುಣವಾಗಿ ಎಷ್ಟು ಪರಿಹಾರ ನೀಡಲಾಗಿದೆ? ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಮೊತ್ತದಲ್ಲಿ ವ್ಯತ್ಯಾಸವಾಗಲು ಕಾರಣವೇನು? ಯಾವ ವೈಜ್ಞಾನಿಕ ಮಾನದಂಡದ ಆಧಾರದಲ್ಲಿ ಪರಿಹಾರ ನಿಗದಿಪಡಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.
ಟರ್ಮ್‌ಶೀಟ್ ಬದಲಾದ ಬಳಿಕ ಸಮಸ್ಯೆ
2023-24ನೇ ಸಾಲಿನವರೆಗೆ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ಪರಿಹಾರ ವಿತರಣೆಯಲ್ಲಿ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಸಮಸ್ಯೆ ಇರಲಿಲ್ಲ. ಆದರೆ ಬಳಿಕ ಟರ್ಮ್‌ಶೀಟ್ ಬದಲಾವಣೆಯಾದ ನಂತರ ಸಮಸ್ಯೆಗಳು ಆರಂಭವಾಗಿವೆ ಎಂದು ಮಠಂದೂರು ಆರೋಪಿಸಿದರು.
ಒಂದೇ ತಾಲೂಕು, ಹೋಬಳಿ ಹಾಗೂ ಒಂದೇ ರೀತಿಯ ಭೌಗೋಳಿಕ ಪರಿಸ್ಥಿತಿಯಲ್ಲಿರುವ ಗ್ರಾಮಗಳ ನಡುವೆ ಪರಿಹಾರ ಮೊತ್ತದಲ್ಲಿ ಭಾರಿ ವ್ಯತ್ಯಾಸ ಕಂಡುಬರುತ್ತಿದೆ. ಕೆಲವೆಡೆ ಕೇವಲ 100 ಮೀಟರ್ ಅಂತರದಲ್ಲಿರುವ ರೈತರಿಗೂ ₹10 ಸಾವಿರದಿಂದ ₹15 ಸಾವಿರದವರೆಗೆ ವ್ಯತ್ಯಾಸವಾಗುತ್ತಿದೆ. ಪಂಚಾಯಿತಿಯಿಂದ ಪಂಚಾಯಿತಿಗೆ, ಗ್ರಾಮದಿಂದ ಗ್ರಾಮಕ್ಕೆ ಪರಿಹಾರ ಬದಲಾಗುತ್ತಿರುವುದರ ಹಿಂದಿನ ಕಾರಣವನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರಕಾರವೂ ವಿಮಾ ಮೊತ್ತದ ಶೇ.20ರಷ್ಟು ಪಾಲು ಪಾವತಿಸುತ್ತಿರುವುದರಿಂದ ವಿಮಾ ಕಂಪನಿಗಳ ಕಾರ್ಯವೈಖರಿ ಕುರಿತು ರಾಜ್ಯ ಸರಕಾರವೇ ತನಿಖೆ ನಡೆಸಬೇಕು. ರೈತರಿಗೆ ಅನ್ಯಾಯವಾಗುತ್ತಿದ್ದರೂ ಸರಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಆರೋಪಿಸಿದರು.
274 ಗ್ರಾಮ ಪಂಚಾಯಿತಿಗಳ ಪೈಕಿ 231 ಮಳೆ ಮಾಪಕ ಮಾತ್ರ ಕಾರ್ಯನಿರ್ವಹಣೆ
ಬಿಜೆಪಿ ಸತ್ಯಶೋಧನ ಸಮಿತಿ ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ನಡೆಸಿದ ಅಧ್ಯಯನದಲ್ಲಿ ಹಲವು ಕಡೆ ಮಳೆ ಮಾಪಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದು ಕಂಡುಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಬಳಿಕ ಕೆಲವು ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ 274 ಗ್ರಾಮ ಪಂಚಾಯಿತಿಗಳಲ್ಲಿ ಮಳೆ ಮಾಪಕಗಳನ್ನು ಅಳವಡಿಸಲಾಗಿದ್ದು, 231 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ. 20 ಹೋಬಳಿ ಮಟ್ಟದಲ್ಲಿ ಉಷ್ಣಾಂಶ ಮಾಪಕಗಳಿವೆ. ಮಳೆ ಹಾಗೂ ಉಷ್ಣಾಂಶದ ದಾಖಲೆಗಳ ಆಧಾರದಲ್ಲಿ ಟರ್ಮ್‌ಶೀಟ್ ಪ್ರಕಾರ ವಿಮಾ ಪರಿಹಾರ ನಿರ್ಧರಿಸಲಾಗುತ್ತದೆ ಎಂದು ವಿವರಿಸಿದರು.
‘ಗ್ರಾಮಕ್ಕೊಂದು ಮಾನದಂಡ ಸಲ್ಲ’
ತಾಲೂಕಿನ ಎಲ್ಲ ಗ್ರಾಮಗಳ ರೈತರಿಗೆ ಒಂದೇ ಮಾನದಂಡದಲ್ಲಿ ವಿಮಾ ಪರಿಹಾರ ನೀಡಬೇಕು. ಒಂದು ಗ್ರಾಮಕ್ಕೆ ಗರಿಷ್ಠ ಪರಿಹಾರ ನೀಡಲು ಅನ್ವಯಿಸುವ ಮಾನದಂಡವಿದ್ದರೆ, ಅದೇ ಮಾನದಂಡವನ್ನು ಇತರ ಗ್ರಾಮಗಳಿಗೂ ಅನ್ವಯಿಸಬೇಕು. ಪಂಚಾಯಿತಿ, ಹೋಬಳಿ ಹಾಗೂ ಗ್ರಾಮವಾರು ಪ್ರತ್ಯೇಕ ಮಾನದಂಡಗಳಿಂದ ಪರಿಹಾರ ನೀಡಿದರೆ ರೈತರು ಬೆಳೆ ವಿಮಾ ಯೋಜನೆಯ ಮೇಲಿನ ವಿಶ್ವಾಸ ಕಳೆದುಕೊಳ್ಳಲಿದ್ದಾರೆ ಎಂದು ಮಠಂದೂರು ಹೇಳಿದರು.
2025-26ನೇ ಸಾಲಿನಲ್ಲಿ ರೈತರು ಶೇ.5, ರಾಜ್ಯ ಸರಕಾರ ಶೇ.20 ಹಾಗೂ ಕೇಂದ್ರ ಸರಕಾರ ಶೇ.10ರಷ್ಟು ಪಾಲನ್ನು ಪಾವತಿಸಿವೆ. ಜಿಲ್ಲೆಯ ರೈತರಿಂದ ₹42.03 ಕೋಟಿ, ಕೇಂದ್ರದಿಂದ ₹84.07 ಕೋಟಿ ಹಾಗೂ ರಾಜ್ಯದಿಂದ ₹168.14 ಕೋಟಿ ಸೇರಿದಂತೆ ಒಟ್ಟು ₹294.26 ಕೋಟಿ ವಿಮಾ ಮೊತ್ತ ಪಾವತಿಯಾಗಿದೆ ಎಂದರು.
ರೈತರು ಪ್ರತಿ ಹೆಕ್ಟೇರ್ ಅಡಿಕೆಗೆ ₹6,475 ಹಾಗೂ ಕಾಳುಮೆಣಸಿಗೆ ₹2,377ರಂತೆ ವಿಮಾ ಮೊತ್ತ ಪಾವತಿಸಿದ್ದಾರೆ. ಆದರೆ ಬಜತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ₹45 ಸಾವಿರ ವಿಮಾ ಮೊತ್ತ ಪಾವತಿಸಿದ್ದರೂ ಕೆಲ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ ₹10,800 ಮಾತ್ರ ಪರಿಹಾರ ದೊರೆತಿದೆ. ಅದೇ ಪ್ರದೇಶದ ಕೆಲವು ರೈತರ ಖಾತೆಗೆ ₹51,824 ಪರಿಹಾರ ಜಮೆಯಾಗಿರುವುದಾಗಿ ಅವರು ತಿಳಿಸಿದರು.
‘ರಾಜ್ಯ ಸರಕಾರ ರೈತ ವಿರೋಧಿ’
ಅಡಿಕೆ ಬೆಳೆಗಾರರು ವಿಮಾ ಮೊತ್ತ ಪಾವತಿಸಿದರೂ ಸಮರ್ಪಕ ಪರಿಹಾರ ದೊರೆಯುತ್ತಿಲ್ಲ. ಮತ್ತೊಂದೆಡೆ ಅಡಿಕೆ ಧಾರಣೆಯಲ್ಲೂ ಕುಸಿತವಾಗಿದೆ. ಹಿಂದಿನ ಅವಧಿಯಲ್ಲಿ ರೈತರಿಗೆ ದೊರೆಯುತ್ತಿದ್ದ ಕಿಸಾನ್ ಸನ್ಮಾನ್ ಹಾಗೂ ವಿದ್ಯಾನಿಧಿ ಯೋಜನೆಗಳನ್ನು ಈಗಿನ ಸರಕಾರ ಸ್ಥಗಿತಗೊಳಿಸಿದೆ. ರೈತರಿಗೆ ಒಂದಲ್ಲೊಂದು ರೀತಿಯಲ್ಲಿ ತೊಂದರೆ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಠಂದೂರು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ಹಾಗೂ ರೈತ ಮೋರ್ಚಾ ಅಧ್ಯಕ್ಷ ಶರತ್ನಂದ ಬೈಪಾಡಿತ್ತಾಯ ಉಪಸ್ಥಿತರಿದ್ದರು.
ಅಂತರ ರಾಜ್ಯ
DK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.
ನವದೆಹಲಿ: ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ”ನನ್ನ ಬಳಿ “ಸ್ಟಿಂಗ್ ಆಪರೇಷನ್” ಬಗ್ಗೆ ಎಲ್ಲ ಮಾಹಿತಿ ಇದೆ. ನಾನು ಸಿಎಂ ಆದ ಬಳಿಕ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ.ನಾನು ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳು ಇವೆ” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಫಾರ್ಮ್-7 ಮುದ್ರಣ
ಬಿಜೆಪಿ ಕಾರ್ಯಕರ್ತರು ಅಲ್ಪಸಂಖ್ಯಾಕರ ಮತಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಲು, ಮತದಾರರ ವಿವರಗಳನ್ನು ಮೊದಲೇ ಭರ್ತಿ ಮಾಡಲಾಗಿರುವ ಫಾರ್ಮ್-7ಗಳನ್ನು ಮುದ್ರಿಸಿ ಬಳಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಮತದಾರರ ವಿವರಗಳನ್ನು ಮೊದಲೇ ನಮೂದಿಸಿರುವ ಫಾರ್ಮ್-7ಗಳನ್ನು ಪ್ರದರ್ಶಿಸಿದ ಅವರು, ಈ ಫಾರ್ಮ್‌ಗಳನ್ನು ಬಿಜೆಪಿಯವರು ಮತದಾರರ ಹೆಸರುಗಳನ್ನು ಅಳಿಸಲು ಬಳಸಿದ್ದಾರೆ ಎಂದು ಆರೋಪಿಸಿದರು.
‘ಫಾರ್ಮ್-7 ದುರ್ಬಳಕೆಯನ್ನು ತಡೆಯಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಯಾವುದೇ ಕ್ರಮ ಕೈಗೊಂಡಿಲ್ಲ. ಇಡೀ ಜಗತ್ತು ಈ ಬೆಳವಣಿಗೆಯನ್ನು ಗಮನಿಸುತ್ತಿದೆ’ ಎಂದು ಶಿವಕುಮಾರ್ ಹೇಳಿದರು.
ಜಿಎಸ್‌ಟಿ ಮಂಡಳಿ ಸಭೆಗೆ ದೆಹಲಿಗೆ
ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವುದಾಗಿ ತಿಳಿಸಿದ ಶಿವಕುಮಾರ್, ‘ಇಂದು ಕೆಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ’ ಎಂದರು.
ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ದೇಶಾದ್ಯಂತ ನಡೆದಿರುವ ಬೆಳವಣಿಗೆಗಳು ಈಗಾಗಲೇ ಬಹಿರಂಗಗೊಂಡಿವೆ. ಚುನಾವಣಾ ಆಯೋಗದ ಸದಸ್ಯರೂ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನ್ಯಾಯಾಲಯಗಳೂ ಇದನ್ನು ಗಮನಕ್ಕೆ ತೆಗೆದುಕೊಂಡಿವೆ. ಸೂಕ್ತ ನಿರ್ದೇಶನ ನೀಡಿದ ನ್ಯಾಯಾಲಯಗಳಿಗೆ ನಾನು ಕೃತಜ್ಞನಾಗಿದ್ದೇನೆ’ ಎಂದರು.
‘ನನ್ನ ರಾಜ್ಯದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗುತ್ತಿದೆ. ಫಾರ್ಮ್-7 ಅರ್ಜಿಗಳನ್ನು ಬಿಜೆಪಿ ಕೇಂದ್ರ ಕಚೇರಿಯಲ್ಲೇ ಮುದ್ರಿಸಲಾಗಿದೆ ಎಂಬ ಆರೋಪವಿದೆ. ನಾವು ದೂರು ಸಲ್ಲಿಸಿದ ಬಳಿಕ ಅವರು ಕೂಡಲೇ ಹಲವು ಬಿಎಲ್‌ಒಗಳನ್ನು ಸಂಪರ್ಕಿಸಿ, ಆ ಫಾರ್ಮ್‌ಗಳನ್ನು ವಾಪಸ್ ಪಡೆದಿದ್ದಾರೆ. ಇದು ಅಪರಾಧವಲ್ಲವೇ? ತಡೆಯುವ ಮುನ್ನವೇ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆದಿತ್ತು’ ಎಂದು ಸಿಎಂ ಪ್ರಶ್ನಿಸಿದರು.
ಸ್ಟಿಂಗ್ ಆಪರೇಷನ್
ಡಿ.ಕೆ.ಶಿವಕುಮಾರ್ ಅವರೇ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ಎಚ್ಚರಿಕೆ ನೀಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ವಿಪಕ್ಷಗಳಿಂದ ಕೆಲ ಸಚಿವರು ‘ಟಾರ್ಗೆಟ್’ ಆಗಿದ್ದು, ರಹಸ್ಯ ಕಾರ್ಯಾಚರಣೆ ನಡೆಸಲು ತಂಡಗಳನ್ನೇ ರಚನೆ ಮಾಡಲಾಗಿದೆ ಎಂಬುದಾಗಿ ಹೇಳಿದ್ದಾರೆನ್ನಲಾಗಿದೆ. ಈ ಬೆಳವಣಿಗೆ ಬಗ್ಗೆ ವಿಪಕ್ಷಗಳು ಖಾರವಾದ ಪ್ರತಿಕ್ರಿಯೆಯನ್ನೂ ನೀಡಿವೆ.
-
ನಿಧನ ವಾರ್ತೆ13 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು11 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು9 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ13 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ13 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ12 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ12 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ14 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















