ಬಿಗ್ ನ್ಯೂಸ್
ಜಗದೀಶ್ ಕಾರಂತ್ ವಿರುದ್ಧ ಡಿಸಿ ದೂರು ನೀಡಿದ ಬಳಿಕ ಕಾರಿಂಜ ಕ್ಷೇತ್ರದ ಭಗವಧ್ವಜ ತೆಗೆಯಲು ಪೊಲೀಸರಿಂದ ಸೂಚನೆ- ತಾಖತ್ ಇದ್ದರೆ ಭಗವಧ್ವಜ ತೆಗೆದು ನೋಡಿ, ಹಿಂದೂ ಸಮಾಜ ಫುಟ್ಬಾಲ್ ಅಲ್ಲ, ಕಲ್ಲುಗುಂಡು ..!!! ತುಳಿದರೆ ಕಾಲು ಮುರಿಯುತ್ತದೆ : ಹಿಂದೂ ಜಾಗರಣೆ ವೇದಿಕೆ ಗುಡುಗು
ಮಂಗಳೂರು : ನ 25 : ಹಿಂದೂ ಜಾಗರಣ ವೇದಿಕೆಯ ಪ್ರಾಂತೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ರವರು ನ .21ರಂದು ಮಾಡಿದ ಭಾಷಣವೊಂದರಲ್ಲಿ ಕಾರಿಂಜದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸದೇ ಹೋದಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ನುಗ್ಗಿ ಕೊರಳು ಪಟ್ಟಿ ಹಿಡಿಯುವ ಎಚ್ಚರಿಕೆ ನೀಡಿದ್ದು ಆ ಬಳಿಕ ಹಿಂದೂ ಜಾಗರಣ ವೇದಿಕೆ ಮತ್ತು ಜಿಲ್ಲಾಧಿಕಾರಿ ನಡುವೆ ಜಟಾಪಟಿ ತಾರಕ್ಕೇರಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರರವರು ಈ ಭಾಷಣದ ವಿರುದ್ದ ಬಂಟ್ವಾಳದ ಪೂಂಜಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.ದೂರು ಸ್ವೀಕರಿಸಿದ ಪೊಲೀಸರು ಜಗದೀಶ್ ಕಾರಂತ್ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ̤
ಈ ದೂರನ್ನು ಹಿಂಪಡೆಯಬೇಕು ಎಂದು ಅಗ್ರಹಿಸಿ ಹಿಂದೂ ಜಾಗರಣೆ ವೇದಿಕೆಯ ಪ್ರಾಂತ್ಯ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯರವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಜಗದೀಶ್ ಕಾರಂತ್ ವಿರುದ್ದ ದೂರು ದಾಖಲಿಸಿದ ಬಳಿಕ ಅದೇ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಸೌಮ್ಯ ರವರು ಕಾರಿಂಜ ದೇವಸ್ಥಾನದಲ್ಲಿ ಹಾಕಿರುವ ಭಗವಾಧ್ವಜ ತೆಗೆಯಲು ಸೂಚಿಸಿದ್ದಾರೆ ಎಂಬ ಗಂಭೀರ ಆರೋಪವನ್ನು ಅಡ್ಯಂತಾಯರು ಮಾಡಿದ್ದಾರೆ .
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ :
ಇದೇನು ಮಕ್ಕಳಾಟಿಕೆಯೇ? ಘೋರಿ ಮಹಮ್ಮದ್, ಟಿಪ್ಪು ಕಾಲವೇ ಎಂದು ಪ್ರಶ್ನಿಸಿದ ಅವರು ತಾಖತ್ ಇದ್ದರೆ ಭಗವಾಧ್ವಜ ತೆಗೆದು ತೋರಿಸಿ ವಾರದೊಳಗೆ ಸಾವಿರ ಭಗವಾಧ್ವಜ ಹಾಕಿ ತೋರಿಸುತ್ತೇವೆ ತಾಕತ್ತಿದ್ದರೆ ತಡೆಯಿರಿ ಎಂದು ಅವರು ಗುಡುಗಿದರು.
ಹಿಂದೂ ಸಮಾಜದ ಭಾವನೆ ಜೊತೆ ಚೆಲ್ಲಾಟವಾಡಬೇಡಿ, ನಮ್ಮನ್ನು ಜಾಸ್ತಿ ತುಳಿಯೋಕೆ ನೋಡಬೇಡಿ, ಹಿಂದೂ ಸಮಾಜ ಫುಟ್ಬಾಲ್ ಅಲ್ಲ, ಹಿಂದೂ ಸಮಾಜ ಕಲ್ಲು ಗುಂಡು,ಇದು ಕಾಲು ಮುರಿಯುತ್ತದೆ ಎಂದು ಅವರು ಎಚ್ಚರಿಸಿದರು
ಡಿಸಿ ಕಾಲರ್ ಪಟ್ಟಿ ಹಿಡಿಯುವುದು ಎಂದರೆ ಆಗ್ರಹ ಪೂರ್ವಕವಾಗಿ ನಾವು ಕೇಳಿದ್ದೆವು. ಅಕ್ಷರರಕ್ಷಕ್ಕೆ ಅರ್ಥ ಕಲ್ಪಿಸಬೇಡಿ. ಅದರ ಹಿಂದಿನ ಭಾವನೆ ಅರ್ಥ ಮಾಡಿಕೊಳ್ಳಿ. ಜಿಲ್ಲಾಧಿಕಾರಿಯ ಕಾಲರ್ ಪಟ್ಟಿ ಹಿಡಿಯಲಾಗುತ್ತದೆಯೇ ಎಂದು ಹೇಳುವ ಮೂಲಕ ಅವರು ನ .21 ರಂದು ಜಗದೀಶ್ ಕಾರಂತ್ ರವರು ರುದ್ರಗಿರಿ ರಣಕಹಳೆ ಎಂಬ ಪ್ರತಿಭಟನಾ ಸಭೆಯಲ್ಲಿ ಮಾಡಿದ ಭಾಷಣಕ್ಕೆ ಸಮಜಾಯಿಷಿ ನೀಡಿದರು.
ಕೇಸನ್ನು ಹಿಂತೆಗೆದುಕೊಳ್ಳಿ ಎಂದು ಮನವಿ ಮಾಡಲು ಪತ್ರಿಕಾಗೋಷ್ಠಿ ಕರೆದಿಲ್ಲ.ನಾವು ಕೇಸಿಗೆಲ್ಲ ಹೆದರುವವರು ಅಲ್ಲ, ಬಗ್ಗವವರು ಅಲ್ಲ ಉದ್ದೇಶಪೂರ್ವಕವಾಗಿ ಜಿಲ್ಲಾಧಿಕಾರಿಯನ್ನು ಅಪಮಾನ ಮಾಡಿಲ್ಲ. ಕೇಸಿಗೆ ಹೆದರಿ ತಲೆಬಗ್ಗಿ ಹೋಗುವವರಲ್ಲ ಎಂದು ಅವರು ಘಂಟಾಘೋಷವಾಗಿ ಘೋಷಿಸಿದರು.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ :
ಜಿಲ್ಲಾಧಿಕಾರಿಗಳು ತಮ್ಮ ಕರ್ತವ್ಯವನ್ನು ಸರಿಯಾಗಿ ಮಾಡಲಿ . ಅವರ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸುವ ಕೆಲಸವನ್ನು ಮಾಡಲಿ. ಅದು ಬಿಟ್ಟು ಅಕ್ರಮದ ವಿರುದ್ದ ಹೋರಾಟ ಮಾಡುವ, ಧ್ವನಿ ಉಡುಗಿಸುವ ಕೆಲಸವನ್ನು ಜಿಲ್ಲಾಧಿಕಾರಿಗಳು ಮಾಡುತ್ತಿದ್ದಾರೆ. ಕಾರೀಂಜೇಶ್ವರ ದೇವಸ್ಥಾನದ 10 ಕಿಮೀ ಸುತ್ತಳತ್ತೆಯಲ್ಲಿ ಯಾವುದೇ ಗಣಿಗಾರಿಕೆ ಆಗದಂತೆ ನೋಡಿಕೊಳ್ಳಬೇಕು ಎಂದು ಅವರು ಅಗ್ರಹಿಸಿದರು.
ಪತ್ರಿಕಾಗೋಷ್ಟಿಯಲ್ಲಿ ದಕ್ಷಿಣ ಪ್ರಾಂತ ಉಪಾಧ್ಯಕ್ಷ ಕಿಶೋರ್ ಕುಮಾರ್, ರತ್ನಾಕರ್ ಶೆಟ್ಟಿ ಹಾಗೂ ಜಗದೀಶ್ ನೆತ್ತರಕೆರೆ ಇದ್ದರು.
ಹೆಚ್ಚಿನ ಮಾಹಿತಿಗೆ ಇದ್ದನ್ನು ಓದಿ : ‘ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೊರಳಪಟ್ಟಿ ಹಿಡಿಯುತ್ತೇನೆ’ ಎಂದ ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ವಿರುದ್ದ ಪ್ರಕರಣ ದಾಖಲು
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
ನಿಧನ ವಾರ್ತೆ14 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು12 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು10 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ14 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ14 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ13 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ13 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ15 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















