ಬಿಗ್ ನ್ಯೂಸ್
ಪೆರ್ಡೂರು ಮೇಳಕ್ಕೆ ಜನ್ಸಾಲೆ ಬದಲು ಧಾರೇಶ್ವರ – ಪರ ವಿರೋಧ ಚರ್ಚೆ ತಾರಕಕ್ಕೆ | ́ನನ್ನನ್ನು ನಾನು ಮಾರಿಕೊಳ್ಳಲು ತಯಾರಿಲ್ಲʼ : ಜನ್ಸಾಲೆ |ಪಟ್ಲರ ನೆನಪಿಸದ ಘಟನೆ
ಕುಂದಾಪುರ, ನ. 23: ಬಡಗುತಿಟ್ಟಿನ ಪ್ರಖ್ಯಾತ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ ತಾನು ಹಲವು ವರ್ಷಗಳಿಂದ ಯಕ್ಷಗಾನ ಕೃಷಿ ಮಾಡಿದ ಪೆರ್ಡೂರು ಮೇಳದ ತಿರುಗಾಟಕ್ಕೆ ತಿಲಾಂಜಲಿ ಹಾಡಿದ್ದಾರೆ. ಪೆರ್ಡೂರು ಮೇಳದ ಪ್ರಧಾನ ಭಾಗವತರಾಗಿದ್ದ ಅವರು ಈ ಸಾಲಿನಿಂದ ಆ ಮೇಳದ ಭಾಗವಾಗಿರುವುದಿಲ್ಲ.
ಈ ವರ್ಷದ ತಿರುಗಾಟಕ್ಕೆ ತಯಾರಿ ನಡೆಸಿರುವ ಪೆರ್ಡೂರು ಮೇಳವೂ ಕೆಲವೊಂದು ಮುಮ್ಮೇಳ ಕಲಾವಿದರ ಬದಲಾವಣೆ ನಡೆಸಿತ್ತು. ಆದರೆ, ‘ತಿರುಗಾಟ ಪ್ರಾರಂಭಕ್ಕೆ ಕೆಲವೇ ದಿನ ಇದೆ ಎನ್ನುವಾಗ ಕಳೆದ 9 ವರ್ಷಗಳಿಂದ ಮೇಳದ ಪ್ರಧಾನ ಭಾಗವತರಾಗಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರು ಮೇಳದಿಂದ ನಿರ್ಗಮಿಸಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿದೆ
ಜನ್ಸಾಲೆ ಸ್ಥಾನಕ್ಕೆ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮಂಡಳಿಯೂ ಹಲವು ವರ್ಷಗಳ ಹಿಂದೆ ಇದೇ ಮೇಳದ ನೊಗ ಹೊತ್ತಿದ್ದ ಮತ್ತೊರ್ವ ಹಿರಿಯ ಹಾಗೂ ಪ್ರಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರವರನ್ನು ತಂದಿದೆ. 9 ವರ್ಷಗಳ ತರುವಾಯ ಮತ್ತೆ ಅವರು ಈ ವರ್ಷದ ತಿರುಗಾಟದ ಮೂಲಕ ಪೆರ್ಡೂರು ಮೇಳದ ಪ್ರಧಾನ ಭಾಗವತರ ನೆಲೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
9 ವರ್ಷಗಳ ಹಿಂದೆ ಧಾರೇಶ್ವರರು ಬಡಗುತಿಟ್ಟಿನ ಪ್ರಸಿದ್ದ ಮೇಳಗಳಲ್ಲಿ ಒಂದಾದ ಪೆರ್ಡೂರು ಮೇಳದ ಸಾರಥ್ಯವಹಿಸಿಕೊಂಡಿದ್ದರು. ಎರಡೂವರೆ ದಶಕಕ್ಕೂ ಅಧಿಕ ಕಾಲ ಅವರು ಈ ಮೇಳದಲ್ಲಿ ಯಕ್ಷ ಕೃಷಿ ಮಾಡಿದ್ದಾರೆ. ಶಿವಾನಿ-ಭವಾನಿ, ನಾಗವಲ್ಲಿ, ದಾಮಿನಿ-ಭಾಮಿನಿ, ಸಾವನಿ-ಪಾವನಿ, ಹೀಗೆ ಅನೇಕ ಯಶಸ್ವಿ ಸಾಮಾಜಿಕ ಹಾಗೂ ಪೌರಾಣಿಕ ಪ್ರಸಂಗಗಳು ಇವರ ದಕ್ಷ ನಿರ್ದೇಶನ ಹಾಗೂ ಪ್ರಧಾನ ಭಾಗವತಿಕೆಯಲಿ ಮೂಡಿಬಂದು ಜನಪ್ರಿಯ ಕಲಾ ಪ್ರಸಂಗಗಳು ಎನಿಸಿಕೊಂಡಿದ್ದವು. 9 ವರ್ಷಗಳ ಹಿಂದೆ ಪೆರ್ಡೂರು ಮೇಳದಿಂದ ನಿರ್ಗಮಿಸಿದ ಇವರು ಕೇವಲ ಅತಿಥಿ ಕಲಾವಿದರಾಗಿ ಹಾಗೂ ಧಾರೇಶ್ವರ ಯಕ್ಷಬಳಗದಲ್ಲಿ ಮಾತ್ರ ಭಾಗವಹಿಸುತ್ತಿದ್ದರು.

64 ಹರೆಯದ ಧಾರೇಶ್ವರರು ಯಕ್ಷಗಾನದ ಸಾಂಪ್ರದಾಯಿಕ ರಾಗಗಳೊಂದಿಗೆ ಹೊಸ ರಾಗಗಳನ್ನು ಪರಿಚಯಿಸಿದ ಸ್ವರ ಸಂಯೋಜಕ. ಪೆರ್ಡೂರು ಮೇಳವೂ ಪೌರಣಿಕ ಪ್ರಸಂಗಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿ ಸಾಮಾಜಿಕ ಪ್ರಸಂಗಳನ್ನು ಆಡಿಸುವ ಮೇಳ. ಧಾರೇಶ್ವರರು ಈ ಎರಡು ಮಾದರಿಯ ಪ್ರಸಂಗದಲ್ಲೂ ನಿಷ್ಣಾತರು.
ನ. 30ರಿಂದ ಮೇಳ ಈ ಸಾಲಿನ ತಿರುಗಾಟ ಆರಂಭಿಸಲಿದ್ದು ಪ್ರೊ. ಪವನ್ ಕಿರಣ್‌ಕರೆ ಅವರ ‘ಕೃಷ್ಣಕಾದಂಬಿನಿ’ ಪ್ರಸಂಗ ಈ ವರ್ಷದ ಕಥಾನಕವಾಗಿ ಪ್ರದರ್ಶನವಾಗಲಿದೆ. ಮತ್ತೆ ಮೇಳದ ಸಾರಥ್ಯವಹಿಸುವದನ್ನುಖಚಿತಪಡಿಸರುವ ಧಾರೇಶ್ವರರು ““ಪೆರ್ಡೂರು ಬಿಟ್ಟ ಬಳಿಕ ಯಾವುದೇ ಮೇಳದಲ್ಲಿ ತಿರುಗಾಟ ಮಾಡಿರಲಿಲ್ಲ. ಈಗ ಕರುಣಾಕರ ಶೆಟ್ಟಿ ಅವರು ಮತ್ತೆ ಮೇಳಕ್ಕೆ ಸೇರುವಂತೆ ಆಹ್ವಾನಿಸಿದ್ದಾರೆ” ಎಂದಿದ್ದಾರೆ.
ಏನಿದು ಬೆಳವಣಿಗೆ ?
ಜನ್ಸಾಲೆ ಹಾಗೂ ಪೆರ್ಡೂರು ಮೇಳದ ಯಜಮಾನರ ನಡುವೆ ಕಳೆದೆರಡು ವರ್ಷಗಳಿಂದ ಶೀತಲ ಸಮರ ನಡೆಯುತ್ತಿರುವ ಬಗ್ಗೆ ಅಲ್ಲಲ್ಲಿ ವದಂತಿಗಳು ಹುಟ್ಟುತಿದ್ದವು. ಕೆಲವು ತಿಂಗಳ ಹಿಂದೆ ಇಂತಹ ಸುದ್ದಿ ಜಾಲತಾಣದಲ್ಲಿ ಪ್ರಸಾರವಾದ ಬಳಿಕ ಜನ್ಸಾಲೆಯವರೇ ಸ್ಪಷ್ಟನೆ ನೀಡಿ ಮೇಳದಲ್ಲಿ ಮುಂದುವರಿಯುವ ಬಗ್ಗೆ ತಿಳಿಸಿದ್ದರು.
ಆ ಬಳಿಕ ಮೇಳದ ನೂತನ ಪ್ರಸಂಗ ‘ಕೃಷ್ಣಕಾದಂಬಿನಿʼಯ ಕರಪತ್ರಗಳಲ್ಲಿ ಜನ್ಸಾಲೆಯವರ ಭಾವಚಿತ್ರ ಹಾಗೂ ಹೆಸರು ನಮೂದಿಸಲಾಗಿತ್ತು. ಅದರೇ ಇದೀಗ ನಡೆದಿರುವ ಅಚ್ಚರಿಯ ಬೆಳವಣಿಗೆಯಲ್ಲಿ ಈ ಪ್ರಸಂಗದ ಕರಪತ್ರದಲ್ಲಿ ಧಾರೇಶ್ವರ ಅವರ ಭಾವಚಿತ್ರ ಹಾಗೂ ಹೆಸರನ್ನು ನಮೂದಿಸಲಾಗಿದೆ.
ರಾಘವೇಂದ್ರ ಆಚಾರ್ಯ ಅವರು ಮುನಿಸಿಕೊಂಡು ಮೇಳ ಬಿಟ್ಟಿರುವುದೆ ಈ ಬೆಳವಣಿಗೆಗೆ ಕಾರಣ ಎನ್ನಲಾಗುತ್ತಿದೆ. ಮೇಳವೂ ವಿಧಿಸಿರುವ ನೂತನ ಕಟ್ಟುಪಾಡುಗಳನ್ನು ದಿಕ್ಕರಿಸಿ ಜನ್ಸಾಲೆಯವರು ಈ ನಿರ್ಧಾರಕ್ಕೆ ಬಂದಿದ್ದಾರೆ . ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು “ಹಗಲು ಹೊತ್ತಿನಲ್ಲಿ ಕೂಡ ಗಾನವೈಭವ, ತಾಳಮದ್ದಳೆಯಂತಹ ಕಾರ್ಯಕ್ರಮಗಳಿಗೆ ತೆರಳಲು ನಿರ್ಬಂಧ ವಿಧಿಸಲಾಗಿದೆ. ನನ್ನನ್ನು ನಾನು ಮಾರಿಕೊಳ್ಳಲು ತಯಾರಿಲ್ಲ. ಆದ್ದರಿಂದ ಪೆರ್ಡೂರು ಮೇಳದ ತಿರುಗಾಟಕ್ಕೆ ವಿದಾಯ ಹೇಳಿದ್ದೇನೆ ಎಂದಿದ್ದಾರೆ.

ಇನ್ನೂ ಈ ಬೆಳವಣಿಗೆಗಳ ಬಗ್ಗೆ ಪೆರ್ಡೂರು ಮೇಳದ ಯಜಮಾನರಾದ ವೈ. ಕರುಣಾಕರ ಶೆಟ್ಟಿಯವರು ಪ್ರತಿಕ್ರಿಯಿಸಿದ್ದು “ ಮೇಳದ ವ್ಯವಸ್ಥೆಗಳಿಗೆ ಜನ್ಸಾಲೆ ಅವರು ಒಪ್ಪದೇ ಇರುವುದರಿಂದ ಬದಲಾವಣೆ ಅನಿವಾರ್ಯವಾಯಿತು. ಧಾರೇಶ್ವರ ಅವರು ಮೇಳದಲ್ಲಿ ಮುಂದುವರಿಯಲಿದ್ದಾರೆ. ಪ್ರದರ್ಶನ ಪೂರ್ವ ತಯಾರಿಗಳು ಅವರ ನಿರ್ದೇಶನದಲ್ಲಿ ಆರಂಭವಾಗಿವೆ ಎಂದಿದ್ದಾರೆ
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವಮೇಳದ ಹಿರಿಯ ಕಲಾವಿದರಾದ ವಿದ್ಯಾಧರ ರಾವ್ ಜಲವಳ್ಳಿ ಹಾಗೂ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪರವರು “ ತಿರುಗಾಟದ ಅವಧಿಯಲ್ಲಿ ಬೇರೆ ಖಾಸಗಿ ಪ್ರದರ್ಶನಗಳಿಗೆ ಹೋಗುವುದಿಲ್ಲ ಎನ್ನುವ ತೀರ್ಮಾನಕ್ಕೆ ಕಲಾವಿದರು ಹಾಗೂ ಯಜಮಾನರ ನಡುವೆ ನಡೆದ ಸಭೆಯಲ್ಲಿ ನಾವೆಲ್ಲ ಬಂದಿದ್ದೇವು ಎಂದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ
ಜನ್ಸಾಲೆಯವರು ಯಕ್ಷಗಾನದ ಸ್ಟಾರ್ ಭಾಗವತರಾಗಿರುವುದರಿಂದ ಪೆರ್ಡೂರು ಮೇಳದ ಈ ಬೆಳವಣಿಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ, ಒಂದಷ್ಟು ಮಂದಿ ಜನ್ಸಾಲೆ ಪರ ಬ್ಯಾಟಿಂಗ್ ಮಾಡಿದರೆ ಉಳಿದವರು ಮೇಳದ ಯಜಮಾನರ ಪರ ವಾದ ಮಂಡಿಸುತ್ತಿದ್ದಾರೆ.
ಅಸಂಖ್ಯಾತ ಅಭಿಮಾನಿಗಳನ್ನು ಅದರಲ್ಲೂ ವಿಶೇಷವಾಗಿ ಯುವ ಯಕ್ಷಗಾನ ಅಭಿಮಾನಿಗಳ ನೆಚ್ಚಿನ ಭಾಗವತರಾಗಿರುವ ಜನ್ಸಾಲೆ ಮೇಳದ ಯಶಸ್ಸಿಗೆ ಕಾರಣರಾಗಿದ್ದರು. ಇವರ ನಿರ್ಗಮನದಿಂದ ಮೇಳದ ಅಕರ್ಷಣೆಯಲ್ಲಿ ಕುಂಠಿತವಾಗಲಿದೆ ಎನ್ನುವ ವಾದ ಕೆಲವರದು. ಕಟೀಲು ಮೇಳದಿಂದ ತೆಂಕುತಿಟ್ಟಿನ ಪ್ರಸಿದ್ದ ಬಾಗವತರಾದ ಸತೀಶ ಶೆಟ್ಟಿ ಪಟ್ಲ ರವರ ನಿರ್ಗಮನವೂ ಇದೇ ರೀತಿಯಾಗಿತ್ತು ನೆನಪಿಸಿಕೊಂಡಿರುವ ಕೆಲವರು ಮೇಳದ ಕಲಾವಿದರೂ ಮೇಳಕ್ಕಿಂತ ಹೆಚ್ಚಿನ ಗೌರವವನ್ನು ಪಡೆಯುವುದು ಮೇಳ ನಡೆಸುವವರಿಗೆ ರುಚಿಸುವುದಿಲ್ಲ ಎಂದು ಆರೋಪಿಸಿದ್ದಾರೆ.

ಪ್ರಸ್ತುತ ಸನ್ನಿವೇಶದಲ್ಲಿ ಮೇಳ ನಡೆಸುವುದು ಸುಲಭದ ಕೆಲಸವಲ್ಲ. ಅದನ್ನು ಕಲೆಯ ಮೇಲಿನ ಪ್ರೀತಿಯಿಂದ ನಡೆಸಲಾಗುತ್ತಿದೆಯೆ ಹೊರತು ಅರ್ಥಿಕ ಲಾಭದ ಉದ್ದೇಶದಿಂದ ಅಲ್ಲ . ಹಾಗಾಗಿ ಕಲಾವಿದರೂ ಮೇಳದ ಯಜಮಾನರು ರೂಪಿಸಿವ ನಿಯಮಗಳಿಗೆ ಬದ್ದರಾಗಿರಬೇಕು . ಯಾವೂದೋ ಒಬ್ಬ ಕಲಾವಿದನಿಗಾಗಿ ಮೇಳದ ನಿಯಮಗಳನ್ನು ಬದಲಿಸುವುದು ಸರಿಯಲ್ಲ ಎನ್ನುವ ವಾದವನ್ನು ಕೆಲವರು ಮಾಡುತ್ತಿದ್ದಾರೆ .
ಜನ್ಸಾಲೆ ಮುಂದೇನು ?
9 ವರ್ಷದಿಂದ ಪೆರ್ಡೂರು ಮೇಳದಲ್ಲಿ ಮಾಡಿರುವ ಕೆಲಸದಲ್ಲಿ ತೃಪ್ತಿ ಇದೆ. ಬೇರೆ ಮೇಳಗಳಿಂದ ಕರೆ ಬಂದಿದ್ದರೂ, ಈಗಾಗಲೇ ಕಲಾವಿದರ ಆಯ್ಕೆ ನಡೆದಿರುವುದರಿಂದ, ನನ್ನಿಂದಾಗಿ ಬೇರೆಯವರಿಗೆ ತೊಂದರೆ ಆಗಬಾರದು ಎನ್ನುವುದಕ್ಕಾಗಿ ಈ ವರ್ಷ ತಿರುಗಾಟ ಮಾಡುವುದಿಲ್ಲ. ಆದರೆ ಯಾವುದೇ ಪ್ರದರ್ಶನಕ್ಕೆ ಪ್ರೀತಿಯಿಂದ ಕರೆ ಬಂದರೂ ಅತಿಥಿಯಾಗಿ ಭಾಗವತಿಕೆಗೆ ಹೋಗುತ್ತೇನೆ’ ಎಂದು ಜನ್ಸಾಲೆ ರಾಘವೇಂದ್ರ ಆಚಾರ್ಯ ಪ್ರತಿಕ್ರಿಯಿಸಿದರು.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
ನಿಧನ ವಾರ್ತೆ14 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು12 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು10 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ14 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ14 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ13 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ13 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ15 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















