ಅಪರಾಧ
Puneeth Kerehalli | ಹಲ್ಲೆಗೊಳಗಾದ ಗೋಸಾಗಟ ಮಾಡುತ್ತಿದ್ದ ವ್ಯಕ್ತಿಯ ಅನುಮಾನಸ್ಪದ ಸಾವು – 5 ದಿನಗಳಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ
ಬೆಂಗಳೂರು: ಕನಪುರದ ಸಾತನೂರು ಬಳಿ ಗೋ ಸಾಗಾಟ ವೇಳೆ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ಬಂಧನವಾಗಿದೆ. ಕಳೆದ ಐದು ದಿನಗಳಿಂದ ತಲೆಮರೆಸಿಕೊಂಡಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರರನ್ನು ಸಾತನೂರು ಠಾಣೆ ಪೊಲೀಸರು ಇಂದು(ಏಪ್ರಿಲ್ 05) ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಾರ್ಚ್ 31 ರಂದು ಪುನೀತ್ ಕೆರೆಹಳ್ಳಿ ಹಾಗೂ ತಂಡ ಗೋವುಗಳನ್ನು ಸಾಗಿಸುತ್ತದ್ದ ಕ್ಯಾಂಟರ್ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಅದರಲ್ಲಿದ್ದ ವ್ಯಕ್ತಿಗೆ ಹಲ್ಲೆ ನಡೆಸಿದ್ದರು . ಮಾರನೇ ದಿನ ಅಂದ್ರೆ ಏಪ್ರಿಲ್ 1ರಂದು ಕ್ಯಾಂಟರ್ನಲ್ಲಿದ್ದ ಇದ್ರೀಷ್ ಪಾಷ(35) ಶವವಾಗಿ ಪತ್ತೆಯಾಗಿದ್ದರು. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಬಳಿ ಮಂಡ್ಯದ ಗುತ್ತಲು ನಿವಾಸಿ ಇದ್ರೀಷ್ ಪಾಷ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಸಾತನೂರು ಠಾಣೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರರ ವಿರುದ್ಧ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 341, 504, 506, 324, 302, 34 ರ ಅಡಿ ಕೇಸ್ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಕಳೆದ ಐದು ದಿನದಿಂದ ಪುನೀತ್ ಅಂಡ್ ಟೀಂ ತಲೆ ಮರೆಸಿಕೊಂಡಿತ್ತು. ಇನ್ನು ಆರೋಪಿಗಳನ್ನು ಬಂಧಿಸಲು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ನಾಲ್ಕು ತಂಡಗಳನ್ನು ರಚಿಸಿದ್ದರು. ಇದೀಗ ಅಂತಿಮವಾಗಿ ಆರೋಪಿಗಳು ರಾಜಸ್ಥಾನದಲ್ಲಿ ಸಿಕ್ಕಿಬಿದ್ದಿದ್ದಾರೆ.
ಅಜ್ಞಾತ ಸ್ಥಳದಿಂದ ವಿಡಿಯೋ : ಪೊಲೀಸರ ಕಣ್ತಪ್ಪಿಸಿಕೊಂಡಿದ್ದ ಪುನೀತ್ ಕೆರೆಹಳ್ಳಿ, ನನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ಪ್ರಕರಣದ ವಿಚಾರವಾಗಿ ಕಾನೂನಾತ್ಮಕವಾಗಿ ಹೋರಾಟ ಮಾಡುವುದಾಗಿ ವಿಡಿಯೋ ಬಿಡುಗಡೆ ಮಾಡಿದ್ದ. ಎಲ್ಲೂ ಕಾನೂನನ್ನು ಮೀರಿಲ್ಲ, ಯಾರಿಗೂ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ. ದುಡ್ಡು ಮಾಡಲು ಈ ಹೋರಾಟಕ್ಕೆ ಬಂದಿಲ್ಲ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕುಮಾರಸ್ವಾಮಿ ಯಾರೇ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ ಎಂದು ವಿಡಿಯೋನಲ್ಲಿ ಹೇಳಿದ್ದ. ಅಲ್ಲದೇ ಮಂಡ್ಯದಿಂದ ಹಲಗೂರು, ಸಾತನೂರು ಮಾರ್ಗವಾಗಿ ನಿರಂತರವಾಗಿ ಜಾನುವಾರು ಸಾಗಣೆಯಾಗುತ್ತಿದ್ದು, ಇದಕ್ಕೆ ರಾಜಕಾರಣಿಗಳ ಕೃಪಾಕಟಾಕ್ಷವಿದೆ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಾನೆ.
ಕನಕಪುರ (Kanakapura) ತಾಲೂಕಿನ ಸಾತನೂರು ಬಳಿ ಜಾನುವಾರು ರಕ್ಷಣೆ ವೇಳೆ ವ್ಯಕ್ತಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣದ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ, ಮೃತ ವ್ಯಕ್ತಿ ಇದ್ರೀಷ್ ಪಾಷ ಸಾವಿಗೆ ನಿಖರ ಕಾರಣ ಏನೆಂಬುದು ಪರೀಕ್ಷೆ ಹಾಗೂ ಎಫ್ಎಸ್ಎಲ್ (FSL) ವರದಿ ಬಂದ ಬಳಿಕವಷ್ಟೇ ತಿಳಿಯಲಿದೆ ಎಂದು ಹೇಳಿದ್ದರು.
ಕನಕಪುರ ವೈದ್ಯರ ತಂಡವು ಇದ್ರೀಷ್ ಅವರ ಮರಣೋತ್ತರ ಪರೀಕ್ಷೆ ನಡೆಸಿದೆ. ಅವರಿಂದ ಎಫ್ಎಸ್ಎಲ್ ವರದಿಯನ್ನು ಪಡೆಯಲಾಗುತ್ತದೆ. ಸದ್ಯ ತನಿಖೆ ಪ್ರಗತಿಯಲ್ಲಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತೇವೆ. ಇಡೀ ಪ್ರಕರಣ ಕುರಿತು ಸಾತನೂರು ಠಾಣೆಯಲ್ಲಿ ಮೂರು ಎಫ್ಐಆರ್ಗಳು (FIR) ದಾಖಲಾಗಿವೆ ಎಂದು ತಿಳಿಸಿದ್ದರು.
ಅಂತರ ರಾಜ್ಯ
Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.
ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.
ಸ್ಥಳೀಯ
Arrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
ಕುಂದಾಪುರ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
2026ರ ಸೆಪ್ಟೆಂಬರ್ 14ರಂದು ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಅವರು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ವೇಳೆ ಜನಸಂದಣಿಯ ನಡುವೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಎಂಬ ಮೂವರು ಮಹಿಳೆಯರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸರು ಬಂಧಿಸಿರುವ ಮಾಹಿತಿ ಕುಂದಾಪುರ ಪೊಲೀಸರಿಗೆ ಲಭ್ಯವಾಗಿತ್ತು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದಂತೆ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Uncategorized8 hours ago
ಪುತ್ತೂರು : ಅಡಿಕೆ ತೆಗೆಯುವಾಗ ಕಂಗಿನಿಂದ ಬಿದ್ದು ಗಂಭೀರ ಗಾಯ: ಚಿಕಿತ್ಸೆಗೆ ₹8 ಲಕ್ಷದ ಅಗತ್ಯ; ದಾನಿಗಳ ನೆರವಿನ ನಿರೀಕ್ಷೆಯಲ್ಲಿ ಬಡ ಕುಟುಂಬ
-
Uncategorized15 hours ago
ಕಾರ್ಯಕರ್ತರ ಶ್ರಮದಲ್ಲಿ ನೆಲಪ್ಪಾಲು ವೀರಾಂಜನೇಯ ಕ್ಷೇತ್ರ ನಿರ್ಮಾಣ: ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ | ಶ್ರೀ ಪಂಚಮುಖಿ ಆಂಜನೇಯ ಯಾಗದ ಅಂಗವಾಗಿ ಧರ್ಮಸಭೆ
-
Uncategorized8 hours ago
ಗ್ರಾಮೀಣ ವಿದ್ಯಾರ್ಥಿಗಳಿಗೆ ಮಡಿಯಾಲದಲ್ಲಿ ಉಚಿತ ಎಐ ಪದವಿ ಶಿಕ್ಷಣ ಕೇಂದ್ರ; ನ. 30ರಂದು ನಾರಾಯಣ ಭಟ್ ಜನ್ಮಶತಾಬ್ದಿ ಸ್ಮರಣಾರ್ಥ ಭೂಮಿಪೂಜೆ; 2027–28ರಿಂದ 30 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಯೋಜನೆ

















