ದಕ್ಷಿಣ ಕನ್ನಡ
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಯಲ್ಲಿ ಪದವಿ ಪ್ರಧಾನ
ಪುತ್ತೂರು: ಭಾರತದಲ್ಲಿ ವಿದ್ಯಾಭ್ಯಾಸ ಪಡೆದು ವಿದೇಶಕ್ಕೆ ಹೋಗಿ ವೃತ್ತಿ ಜೀವನ ಸಾಗಿಸುವುದಕ್ಕಿಂತ ನಮ್ಮ ದೇಶದಲ್ಲೇ ಇದ್ದು ಉದ್ಯೋಗ ಪಡೆಯುವುದು ಉತ್ತಮ. ನಮ್ಮ ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯುವುದರಲ್ಲಿ ನಮ್ಮ ಪಾತ್ರವು ಮುಖ್ಯವಾಗಿರುತ್ತದೆ. ನಮ್ಮ ಗುರಿ ಕೇವಲ ಹಣಕ್ಕಾಗಿ ಮಾತ್ರ ಸೀಮಿತವಾಗಿರದೆ ಅದು ನಮ್ಮ ಕನಸಾಗಿರಬೇಕು. ಸಮಾಜದಲ್ಲಿ ಅದೆಷ್ಟೋ ಸಾಧನೆ ಮಾಡಿದವರಲ್ಲಿ ನಾವು ಒಬ್ಬರೆಂದು ಗುರುತಿಸಿಕೊಳ್ಳುವಂತಾಗಬೇಕು ಎಂದು ಮೈಸೂರಿನ ಸಿ ಎಫ್ ಟಿ ಆರ್ ಐ ನ ಪೂರ್ವ ನಿರ್ದೇಶಕ ಹಾಗೂ ಹೆಸರಾಂತ ವಿಜ್ಞಾನಿ ಪದ್ಮಶ್ರೀ ಡಾ.ವಿಶ್ವೇಶ್ವರಯ್ಯ ಪ್ರಕಾಶ್ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ 2021-22 ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ನಡೆಸಿದ ಇಂಜಿನಿಯರಿಂಗ್ ಮತ್ತು ಎಂಬಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು
ಹಲವಾರು ಪ್ರಶಸ್ತಿಗಳು ಬರುತ್ತದೆ, ಆದರೆ ನಮ್ಮ ಕೆಲಸಗಳನ್ನು ನಿಲ್ಲಿಸಬಾರದು. ಮನುಷ್ಯ ಮೊದಲು ಅಹಂ ಬಿಡಬೇಕು. ನಮ್ಮ ದೇಶದಲ್ಲಿ ಸಾಧನೆ ಮಾಡುವವರಿಗೆ ಅವಕಾಶಗಳು ಬಹಳಷ್ಟು ಇದೆ ಅದನ್ನು ಬಳಸಿಕೊಳ್ಳುವ ಮನೋಭಾವವನ್ನು ನಾವು ರೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಿರದೆ, ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಇದು ಮುಂದಿನ ಜೀವನಕ್ಕೆ ಸಹಕಾರಿಯಾಗಲಿದೆ ಎಂದು ನುಡಿದರು.

ಗೌರವ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ಹಿರಿಯ ವಿದ್ಯಾರ್ಥಿ, ಬೆಂಗಳೂರಿನ ಲ್ಯಾಮ್ ರಿಸರ್ಚ್ ಸಂಸ್ಥೆಯಲ್ಲಿ ಇಂಜಿನಿಯರಿAಗ್ ಮ್ಯಾನೇಜರ್ ಆಗಿರುವ ಆಸ್ಟ್ರನ್ ಲೋಬೋ ಮಾತನಾಡಿ ಮನುಷ್ಯರಿಗೆ ಜೀವನದಲ್ಲಿ ಮಾನವೀಯತೆ ಮತ್ತು ವಿನಮ್ರತೆ ಎಂಬುದು ತುಂಬಾ ಆವಶ್ಯಕವಾಗಿದೆ ಎಂದರು. ಯಾವುದೇ ಕೆಲಸವನ್ನು ಪ್ರೀತಿ ಇಟ್ಟು ಮಾಡಬೇಕು ಆಗ ಮಾತ್ರ ಅದು ಫಲಕಾರಿಯಾಗಲು ಸಾಧ್ಯ. ನಾವು ಮಾಡುವ ಕೆಲಸದಲ್ಲಿ ಸ್ಪಷ್ಟತೆ ಇರಬೇಕು ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಮಾತನಾಡಿ ಸಮಾಜದಲ್ಲಿ ಒಳ್ಳೆಯದು ಕೆಟ್ಟದು ಎರಡು ಇದೆ ಆದ್ದರಿಂದ ನಾವು ಒಳ್ಳೆಯದನ್ನು ಹುಡುಕಿ, ಒಳ್ಳೆಯ ಮಾರ್ಗದಲ್ಲಿ ಹೋಗಬೇಕು. ಜಗತ್ತಿನ ಎಲ್ಲಾ ದೇಶಗಳು ನಮ್ಮ ರಾಷ್ಟ್ರದತ್ತ ತಿರುಗಿ ನೋಡುತ್ತಿದೆ ಆದ್ದರಿಂದ ನಮ್ಮ ದೇಶ ಎತ್ತರಕ್ಕೆ ಏರಬೇಕು ಅದಕ್ಕೆ ನಮ್ಮ ಪಾತ್ರ ಏನು ಎಂಬುದನ್ನು ನಾವು ಯೋಚಿಸಬೇಕು. ಶ್ರದ್ದೆ, ಪ್ರಾಮಾಣಿಕತೆ ಎಲ್ಲವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಅತಿಥಿಗಳು ಭಾರತ ಮಾತೆಗೆ ಹಾಗೂ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವೇದಿಕೆಗೆ ಆಗಮಿಸಿದರು.ಈ ಸಂದರ್ಭದಲ್ಲಿ ಶೈಕ್ಷಣಿಕವಾಗಿ ವಿಶೇಷ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು ಹಾಗೂ ಇಂಜಿನಿಯರಿಂಗ್ ಮತ್ತು ಎಂಬಿಎ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಘಟಿಕೋತ್ಸವದ ಪ್ರಮಾಣ ಪತ್ರ ನೀಡಲಾಯಿತು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು, ಖಜಾಂಚಿ, ನಿರ್ದೇಶಕರು ಮತ್ತು ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಸ್ವಾಗತಿಸಿ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಮೋಹನ್ ಎ. ಜೆ ವಂದಿಸಿದರು. ಮೂಲವಿಜ್ಞಾನ ವಿಭಾಗದ ಉಪನ್ಯಾಸಕಿ ಪ್ರೊ.ಸೌಜನ್ಯ ಹಾಗೂ ಎಲೆಕ್ಟ್ರಾನಿಕ್ ವಿಭಾಗದ ಉಪನ್ಯಾಸಕಿ ಪ್ರೊ.ಪ್ರಭಾ ಜಿ.ಎಸ್ ಕಾರ್ಯಕ್ರಮ ನಿರ್ವಹಿಸಿದರು.
ಮಂಗಳೂರು
Soujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಜಗಲ್ಸಾರ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮುಂದಿನ ಎರಡು ದಿನಗಳಲ್ಲಿ ಎಸ್‌ಐಟಿ ತಂಡ ಬೆಳ್ತಂಗಡಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಸೌಜನ್ಯ ಅವರ ಮನೆ ಹಾಗೂ ಕೊಲೆ ನಡೆದ ಸ್ಥಳವನ್ನು ಪರಿಶೀಲಿಸಲಿದೆ. ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ಸೇರಿದಂತೆ ಹಲವು ಮಂದಿಯನ್ನು ವಿಚಾರಣೆಗೊಳಪಡಿಸಲು ತಂಡ ಮುಂದಾಗಿದೆ. ಅಲ್ಲದೆ, ಸೌಜನ್ಯ ಅವರ ಪೋಷಕರು ಆರೋಪಿಸಿರುವ ವ್ಯಕ್ತಿಗಳನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಪ್ರಕರಣದ ಮರುತನಿಖೆ ನಡೆಸಿ 90 ದಿನಗಳೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಗೆ ಮಹತ್ವ ಬಂದಿದೆ. ಸುಮಾರು 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ದಸರಾ ನೃತ್ಯ ವೈಭವದಲ್ಲಿ ಪ್ರಥಮ ಸ್ಥಾನ
ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಆಹ್ವಾನಿತ ತಂಡಗಳಿಗಾಗಿ ಆಯೋಜಿಸಲಾದ ಶಾಸ್ತ್ರೀಯ ಮತ್ತು ಅರೆಶಾಸ್ತ್ರೀಯ ವಿಭಾಗಗಳಲ್ಲಿ ವೈಯಕ್ತಿಕ ಹಾಗೂ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಈ ಅದ್ಭುತ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಮೂಹಿಕ ವಿಭಾಗದಲ್ಲಿ ನವದುರ್ಗಾರಾಧನೆಯ ವಿಷಯದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು.
ಈ ಅಮೋಘ ಸಾಧನೆ ಮಾಡಿದ ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಗುರುಗಳು, ಆಡಳಿತ ಮಂಡಳಿ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.
ಕಾರ್ಯಕ್ರಮಗಳು
Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.
ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.
-
ಮಂಗಳೂರು23 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್24 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
Uncategorized19 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ನಿಧನ ವಾರ್ತೆ5 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ಮಂಗಳೂರು24 hours agoABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
-
ಸ್ಥಳೀಯ5 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಕ್ರೀಡೆ23 hours agoMCC:ಎಂಸಿಸಿಯಿಂದ ಕ್ರಿಕೆಟ್ ನಿಯಮಗಳ ಪರಿಷ್ಕರಣೆ: ಅ.1ರಿಂದ ಹೊಸ ಬದಲಾವಣೆಗಳು ಜಾರಿ
-
ಸ್ಥಳೀಯ4 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!




















