Connect with us

ದಕ್ಷಿಣ ಕನ್ನಡ

Puttur Politics : ಪುತ್ತೂರು : ರಾಜಕೀಯ ʼಚಿತ್ರʼಣ ಕೆಡಿಸಿದ ಚಿತ್ರ – ಯಾರು ಇದರ ಹಿಂದಿರುವ ಪಾತ್ರ ?

Published

on



Ad Widget

Ad Widget

Ad Widget

Ad Widget

 ಎರಡು ಮೂರು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಪ್ರತಿಷ್ಠಿತ ರಾಜಕಾರಣಿ ಹಾಗು ಮಹಿಳೆಯೊಬ್ಬರ ಫೋಟೊ ಪುತ್ತೂರಿನ ರಾಜಕೀಯ ಚಿತ್ರಣವನ್ನೆ ಬದಲಾಯಿಸಿದೆ. ಆ ಪೋಟೊದಲ್ಲಿದೆ ಮಹಿಳೆ ಹಾಗೂ ರಾಜಕಾರಣಿ ಈಗಾಗಲೇ ವೈರಲ್‌ ಫೋಟೊʼ ಎಡಿಟೆಡ್‌ ʼ ಎಂದು ತಿಳಿಸಿದ್ದು, ಆ ಕುರಿತು ಠಾಣೆಗೆ ದೂರು ನೀಡಿದ್ದಾರೆ. ಹೈ ಪ್ರೊಫೈಲ್‌ ಪ್ರಕರಣ ಇದಾಗಿರುವುದರಿಂದ ಪೊಲೀಸರು ಕೂಡ ವಿವಿಧ ಆಯಾಮಗಳಲ್ಲಿ ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget

Ad Widget

ಆದರೇ ಇದರ ಮಧ್ಯೆ ಸಾರ್ವಜನಿಕ ವಲಯದಲ್ಲಿ, ಈ ಫೋಟೊ  ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟವರು ಯಾರು ? ಎಂಬ ಕುರಿತು ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿದೆ. ಇದು ನಾನಾ ರೀತಿಯ ವದಂತಿಗಳಿಗೆ ಕಾರಣವಾಗಿದೆ.  ವೈರಲ್‌ ಫೋಟೊ ಅಸಲಿಯೋ ನಕಲಿಯೋ ಎಂಬ ಕುರಿತು ಚರ್ಚೆಗಳು ನಡೆಯುತ್ತಿದೆಯಾದರೂ, ಬಹುತೇಕರಿಗೆ ಅದು ದೊಡ್ಡ ಆಸಕ್ತಿಯ ವಿಚಾರವಾಗಿಲ್ಲ . ಏಕೇಂದರೆ ಫೋಟೊಗ್ರಾಫಿ ಹಾಗೂ  ಫೋಟೊ ಶಾಪ್‌ ಕುರಿತು ಹೆಚ್ಚಿನವರಿಗೆ ಸದ್ಯ ದೊಡ್ಡ ಮಟ್ಟದ ಮಾಹಿತಿ ಇರುವುದರಿಂದ ತಮ್ಮೊಳಗೆ ಈ ಅನುಮಾನಗಳನ್ನು ನಿವಾರಿಸಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಾಣದ ಕೈ ಯಾರು ?

Ad Widget

Ad Widget <> Ad Widget

ಆದರೇ  ಅತ್ಯಂತ ಸಂಕ್ರಮಣ ಕಾಲದಲ್ಲಿ ಈ ಫೋಟೊವನ್ನು ವೈರಲ್‌ ಮಾಡಿದ ಕೈಗಳು ಯಾವುದು ಅನ್ನುವುದು ಸಾರ್ವಜನಿಕರಿಗಿರುವ ಬತ್ತದ ಕುತೂಹಲ. ವರ್ಷಗಳ ಹಿಂದೆಯೇ ಈ ಕುರಿತ ವದಂತಿಗಳು ಕೆಲ ಮಾಧ್ಯಮಗಳಲ್ಲಿ ಒರೆ ಕೋರೆಯಾಗಿ ವರದಿಯಾಗಿದ್ದವು.  ಹೀಗಾಗಿ ವೈರಲ್‌ ಆದ ಫೋಟೊ ವರ್ಷದ ಹಿಂದಿನದು ಎಂಬ ಅನುಮಾನ ಜನರಲ್ಲಿದೆ. ಮೂರು ತಿಂಗಳ ಹಿಂದೆ ಪುತ್ತೂರಿನ ರಾಜಕೀಯ ವಲಯವನ್ನು ಅಲ್ಲೋಲ ಕಲ್ಲೋಲ ಮಾಡಿದ ವೈರಲ್‌ ಆಡಿಯೋದಲ್ಲೂ ಈ ಕುರಿತು ಉಲ್ಲೇಖವಾಗಿತ್ತು.



Ad Widget

ಫೋಟೊ ವೈರಲ್‌ ಆಗುತ್ತಲೇ ಈ ಕುರಿತಾಗಿ  ಸಾಮಾಜಿಕ ಜಾಲತಾಣಗಳಲ್ಲಿ  ಹಲವು ಆಯಾಮಗಳಲ್ಲಿ ಚರ್ಚೆ ನಡೆಯುತ್ತಿದೆ  .  ಈ ವಿಚಾರ ವರ್ಷಗಳ ಹಿಂದೆಯೇ ಬೆಳಕಿಗೆ ಬಂದಾಗ ಅದನ್ನು ಮುಚ್ಚಿ ಹಾಕಲು ಹಣದ ಡೀಲ್‌ ನಡೆಸಲಾಗಿತ್ತು ಎಂಬ ಆರೋಪಗಳು ಕೇಳಿ ಬಂದಿವೆ. ಮೂಲಗಳ ಪ್ರಕಾರ ದೊಡ್ಡ ಮೊತ್ತಕ್ಕೆ ಡೀಲ್‌ ಕುದುರಿಸಲಾಗಿತ್ತಾದರೂ, ಬಳಿಕವು ಇನ್ಯಾರದೋ ಚಿತಾವಣೆಗೆ ಒಳಗಾಗಿ  ಆ ಫೋಟೊವನ್ನು ಹರಿ ಬಿಡಲಾಗಿದೆ ಎನ್ನಲಾಗುತ್ತಿದೆ. ರಾಜಕಾರಣಿಯ ಆಪ್ತ ವಲಯದವರೇ ಈ ಕಾರ್ಯವನ್ನು ಮಾಡಿದ್ದಾರೆ ಎಂಬ ಗುಸು ಗುಸು ಕೇಳಿ ಬರುತ್ತಿದೆ. ಅಲ್ಲದೇ ಇಂತಹವೊಂದು ವಿಚಾರ ಸ್ಫೋಟಗೊಳ್ಳಲಿದೆ ಎಂಬ ಬಗ್ಗೆ ಪಕ್ಷದ ಮಟ್ಟದಲ್ಲಿ ಹಲವು ತಿಂಗಳ ಹಿಂದೆಯೇ ಗುಮಾನಿಗಳಿದ್ದವು ಹಾಗು ಅದನ್ನು ಎದುರಿಸುವ ಕುರಿತು ಚರ್ಚೆಗಳು ನಡೆದಿದ್ದವು ಎನ್ನಲಾಗಿದೆ.

Ad Widget

Ad Widget

ಗೆದ್ದ ಬಳಿಕ ಉನ್ನತ ಸ್ಥಾನ ಪ್ರಾಪ್ತಿಯಾಗಬಹುದು, ಅದರಿಂದ ತನಗೆ ಸಿಗಬಹುದಾದ ಆ ಸ್ಥಾನ ತಪ್ಪಬಹುದೆಂಬ ಹಿನ್ನಲೆಯಲ್ಲಿ ಈಗಲೇ ಟಿಕೆಟ್‌ ತಪ್ಪಿಸುವ ಉದ್ದೇಶದಿಂದ  ಸ್ವಪಕ್ಷದ ಅಕ್ಕ ಪಕ್ಕದ ಕ್ಷೇತ್ರದ ನಾಯಕರೊಬ್ಬರು ಈ ಫೋಟೊ ಪ್ರಕರಣದ ಹಿಂದಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಪೊಲೀಸ್‌ ಇಲಾಖೆ ಕೂಡ ಈಗ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತೆ ಕಂಡು ಬಂದರೂ ಮುಂದಿನ ದಿನಗಳಲ್ಲಿ ತನಿಖೆ ಹಳ್ಳ ಹಿಡಿಯುವುದು ಖಂಡಿತ.

ಸರಣಿ ಗುಪ್ತ ಸಭೆಗಳು  

ಫೋಟೊ ವೈರಲ್‌ ಆದ ಬಳಿಕ ಪಕ್ಷದಲ್ಲಿ ದೊಡ್ಡ ಮಟ್ಟದ  ಸಂಚಲನ ಉಂಟಾಗಿದ್ದು ಗುಪ್ತ ಸ್ಥಳಗಳಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದೆ. ಈ ಪ್ರಕರಣವನ್ನು ಸೂಕ್ಷ್ಮವಾಗಿ  ನಿಭಾಯಿಸುವ ಮೂಲಕ ಚುನಾವಣೆ ಎದುರಿಸುವ ತಂತ್ರಗಾರಿಕೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಒಂದೇ ಕಾರಣಕ್ಕೆ ಟಿಕೆಟ್‌ ಬದಲಿಸುವುದೇ ಅಥಾವ ಕಾದು ನೋಡಿ ಪರಿಸ್ಥಿತಿ ಸುದಾರಿಸಿದರೇ ಇವರಿಗೆ ಟಿಕೆಟ್‌ ನೀಡುವ ಕುರಿತು ಉನ್ನತ ಹಂತದಲ್ಲಿ ವಿಚಾರ ವಿಮರ್ಷೆ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಹಾಗಾದಲ್ಲಿ ಆರೋಪವನ್ನು ಎದುರಿಸಲು ಕಾರ್ಯಕರ್ತರನ್ನು ಸಜ್ಜುಗೊಳಿಸುವ ಹಾಗು ತರಭೇತಿಗೊಳಿಸುವ ಬಗ್ಗೆಯೂ ಚಿಂತನ ಮಂಥನಗಳು ಪಕ್ಷದ ಥಿಂಕ್‌ ಟ್ಯಾಂಕ್‌ ನಲ್ಲಿ ನಡೆಯುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ  

Ad Widget
Click to comment

Leave a Reply

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading