ಸುಳ್ಯ
S.Angara | ನಾನು ಚುನಾವಣೆಗೆ ನಿಲ್ಲುತ್ತೇನೆ – ಸುಬ್ರಹ್ಮಣ್ಯದಲ್ಲಿ ತುಲಾಭಾರ ನೆರವೇರಿಸಿ ಎಸ್.ಅಂಗಾರ
ಸುಬ್ರಹ್ಮಣ್ಯ: ಚುನಾವಣೆಗೆ ಸಂಬಂಧಿಸಿದಂತೆ ದಿನಾಂಕ ನಿಗಧಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಕೆಲಸ ಕಾರ್ಯಗಳನ್ನು ಆರಂಭಿಸಲಾಗಿದೆ. ಅಭ್ಯರ್ಥಿ ಆಯ್ಕೆ ಮಾಡಿ ಇನ್ನು ನಿರ್ಧಾರ ಹೈಕಮಾಂಡ್ ಗೆ ಕಳುಹಿಸಬೇಕಿದೆ. ಆದರೆ ಅಭ್ಯರ್ಥಿ ಆಯ್ಕೆಯಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ (S.Angara) ಹೇಳಿದರು.
ಅವರು ರವಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಪತ್ರಕರ್ತರ ಜತೆ ಮಾತನಾಡಿದರು.
ಸುಳ್ಯಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಆಕಾಂಕ್ಷಿಗಳು ಇದ್ದಾರೆ. ಸ್ಪರ್ಧೆಗೆ ಆಕಾಂಕ್ಷೆ ಯಾರೂ ವ್ಯಕ್ತಪಡಿಸಬಹುದು. ಆದರೆ ನಿರ್ಧಾರವನ್ನು ಪಾರ್ಟಿ ಮಾಡಲಿದೆ. ಅದರ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದ ಅವರು ರಾಜ್ಯದಲ್ಲಿ ಈ ಬಾರಿ 135 ಕ್ಕೂ ಅಧಿಕ ಸೀಟುಗಳನ್ನು ಬಿಜೆಪಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು. ಪಕ್ಷ ಅವಕಾಶ ನೀಡಿದರೆ ನಾನು ಚುನಾವಣೆಗೆ ನಿಲ್ಲುತ್ತೇನೆ ಎಂದರು.
ಬಹಳಷ್ಟು ಅಭಿವೃದ್ದಿ ಕಾರ್ಯ ಸುಳ್ಯದಲ್ಲಿ ಆಗಿದೆ. ಇನ್ನಷ್ಟು ಆಗಬೇಕಾಗಿದೆ. 1994 ರಿಂದ ಸುಳ್ಯದಲ್ಲಿ ಗೆಲುವು ಸಾಧಿಸಿದ್ದೇವೆ. 5 ವರ್ಷ ಅಟಲ್ ಜಿ ಸರ್ಕಾರ, 9 ವರ್ಷ ಮೋದಿ ಸರ್ಕಾರ ಅಭಿವೃದ್ದಿ ಮಾಡಿದೆ ಎಂದರು.
ಮೋದಿ, ಷಾ ಚುನಾವಣೆಯ ಸಮಾವೇಶಕ್ಕೆ ಬಂದರೆ ಜನರ ಅಭಿಪ್ರಾಯ ಬದಲಾಗಲಿದೆ ಎಂದು ಅಂಗಾರ ಹೇಳಿದರು.
ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಕ್ಷೇತ್ರದಲ್ಲಿ ತುಲಾಭಾರ ಸೇವೆ ನೆರವೇರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಬ್ರಹ್ಮಣ್ಯ ದೇವಳದ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯ ಮನೋಜ್ ಎಸ್, ಸುಬ್ರಹ್ಮಣ್ಯ ಬಿಜೆಪಿ ಮುಖಂಡ ಶ್ರೀಕುಮಾರ್, ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್, ಸೀಮಂತ ಜೋಳದಪ್ಪಗೆ, ವ್ಯವಸ್ಥಾಪನ ಸಮಿತಿ ಸದಸ್ಯ ಶೋಭಾ ಗಿರಿಧರ್, ಮುಂತಾದವರು ಉಪಸ್ಥಿತರಿದ್ದರು.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
ನಿಧನ ವಾರ್ತೆ22 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು20 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು18 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ರಾಜ್ಯ22 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ22 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ21 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ17 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ21 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















