Connect with us

ದಕ್ಷಿಣ ಕನ್ನಡ

ಇಂದು (ಏ 15 ) ಮಧ್ಯಾಹ್ನ ಅರುಣ್ ಕುಮಾರ್ ಪುತ್ತಿಲ ಮಹತ್ವದ ಪತ್ರಿಕಾಗೋಷ್ಟಿ – ಚುನಾವಣೆ ಸ್ಪರ್ಧೆ ಕುರಿತು ಘೋಷಣೆ ಸಾಧ್ಯತೆ

Published

on



Ad Widget

Ad Widget

Ad Widget

Ad Widget

ಪುತ್ತೂರು ವಿಧಾನಸಭೆ ಕ್ಷೇತ್ರಕ್ಕೆ ಬಿಜೆಪಿ ಈ ಬಾರಿ ಟಿಕೆಟ್‌ ನೀಡಲು ಅನುಸರಿಸಿರುವ ಕ್ರಮವನ್ನು ವಿರೋಧಿಸಿ , ಕಾರ್ಯಕರ್ತರ ಸ್ವಾಭಿಮಾನದ ಪ್ರತೀಕವಾಗಿ ಬಿಜೆಪಿ ಹೈಕಮಾಂಡ್‌ ವಿರುದ್ದ  ಬಂಡಾಯದ ಕಹಳೆ ಊದುತ್ತಿರುವ ಅರುಣ್‌ ಕುಮಾರ್‌ ಪುತ್ತಿಲ ತಮ್ಮ ನಿರ್ಧಾರವನ್ನು ಪ್ರಕಟಿಸಲು ಮಹತ್ವದ ಪತ್ರಿಕಾಗೋಷ್ಟಿಯನ್ನು ಇಂದು( ಏ 15)  ಮಧ್ಯಾಹ್ನ ಕರೆದಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರಿನ ಬಿಜೆಪಿ ಟಿಕೆಟ್‌ ಕಡಬ ತಾಲೂಕಿನ ಆಶಾ ತಿಮ್ಮಪ್ಪ ಗೌಡರವರ ಪಾಲಾಗುತ್ತಲೇ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಒಂದು ಗುಂಪು ಪಕ್ಷದ ತೀರ್ಮಾನದ  ವಿರುದ್ದ ತೀವ್ರ ಅಸಮಾಧನ ವ್ಯಕ್ತಪಡಿಸಿತ್ತು. ಇದಾದ ಬಳಿಕ ಅರುಣ್‌ ಕುಮಾರ್‌ ಪುತ್ತಿಲರಿಗೆ ಟಿಕೆಟ್‌ ನೀಡಬೇಕೆಂದು ಒತ್ತಾಯಿಸಿ ದೊಡ್ಡ ಮಟ್ಟದ ಅಭಿಯಾನ ನಡೆಸಿದ ʼಪುತ್ತಿಲ ಫಾರ್‌ ಪುತ್ತೂರುʼ  ಸಂಘಟನೆಯು ಏ 12 ರಂದು ತುರ್ತು ಸಮಾಲೋಚನ ಸಭೆಯನ್ನು ಕೋಟೆಚಾ ಹಾಲ್‌ ನಲ್ಲಿ  ನಡೆಸಿತ್ತು. ಸಭಾಂಗಣದಲ್ಲಿ ಕಿಕ್ಕಿರಿದು ಸೇರಿದ ಜನಸ್ತೋಮವು ಪಕ್ಷೇತರರಾಗಿ ಸ್ಪರ್ಧಿಸುವಂತೆ ಪುತ್ತಿಲರನ್ನು ಈ ವೇಳೆ  ಒಕ್ಕೊರೊಳಲ್ಲಿ ಒತ್ತಾಯಿಸಿತ್ತು.  

Ad Widget

Ad Widget

Ad Widget alt="Ad Widget"/>

Ad Widget

ಬಳಿಕ  ಮಾತನಾಡಿದ ಅರುಣ್‌ ಕುಮಾರ್‌ ಪುತ್ತಿಲ “ ಈ ಬಾರಿ ಚುನಾವಣೆಯಲ್ಲಿ ಕಾರ್ಯಕರ್ತರ ನೋವಿಗೆ ಬೆಲೆ ಸಿಗದ ಸ೦ದರ್ಭ ಈ ಚುನಾವಣೆಯನ್ನು ಯಾವ ರೀತಿ ಎದುರಿಸಬೇಕೆಂದು ಚಿಂತಿಸಬೇಕಾಗಿದೆ.ಪುತ್ತೂರು ಕ್ಷೇತ್ರದಲ್ಲಿ ಹಿ೦ದುತ್ವವನ್ನು ಉಳಿಸಲು ನಾವೆಲ್ಲ ಜೊತೆಯಾಗಿ ಸಾಗಬೇಕು.ಕಾರ್ಯಕರ್ತರ ಆಯ್ಕೆಗೆ ಪೂರಕವಾಗಿ ಯಾವುದೇ ಕಾರ್ಯಕರ್ತ ವಿಧಾನಸಭೆ ಪ್ರವೇಶಿಸಿದರೆ ಮೊದಲು ಸಂತೋಷ ಪಡುವ ವ್ಯಕ್ತಿ ನಾನು.

Ad Widget

Ad Widget <> Ad Widget

ನೀವು ಕೊಟ್ಟ ಸಲಹೆ, ನಿಮ್ಮ ಯೋಚನೆಗಳನ್ನು ಸಾಕಾರಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.ಪಕ್ಷದ ಮುಖಂಡರು, ಸಂಘ ಪರಿವಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರು, ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿರುವ ಸ್ವಾಮೀಜಿಗಳ ಆಶೀರ್ವಾದ ಪಡೆದು ಮಂದಿನ 2 ದಿನದಲ್ಲಿ ತಮ್ಮೆಲ್ಲರ ಯೋಚನೆಗಳನ್ನು ಸಾಕಾರಗೊಳಿಸುವ ಪ್ರಯತ್ನ ಮಾಡುತ್ತೇನೆಎಂದರು



Ad Widget

ಒಂದು ವೇಳೆ ಚುನಾವಣೆ ಎದುರಿಸಬೇಕೆಂಬ ನಿರ್ಣಯವನ್ನು ನಾವೆಲ್ಲ ತೆಗೆದುಕೊಂಡರೆ ಇಲ್ಲಿ ನೆರೆದಿರುವ ಬೆಂಬಲಿಗರ ಹತ್ತುಪಾಲು ಜನ ಚುನಾವಣೆ ಸಂರ್ಭದಲ್ಲಿ ಕಾರ್ಯಕರ್ತರಾಗಬೇಕು ಎಂದೂ ಪುತ್ತಿಲ ಹೇಳಿದ್ದರು.

Ad Widget

Ad Widget

ಸಂಧಾನ ವಿಫಲ

ಇದಾದ ಬಳಿಕ ಜಿಲ್ಲೆಯ ಅರ್‌ ಎಸ್‌ ಎಸ್‌ ಮುಖಂಡರು ಅರುಣ್‌ ಪುತ್ತಿಲ ಹಾಗೂ ಅವರ ಬೆಂಬಲಿಗರ ಜತೆ ಮಾತುಕತೆ ನಡೆಸಿದ್ದು ಅದು ಫಲಪ್ರದವಾಗಿಲ್ಲ ಎಂದು ತಿಳಿದು ಬಂದಿದೆ. 2018ರ ಟಿಕೆಟ್‌ ಘೋಷಣೆಯ ವೇಳೆಯೂ ಇದೇ ರೀತಿ ಪುತ್ತಿಲ ಬೆಂಬಲಿಗರು ಅಸಮಾಧನಗೊಂಡಿದ್ದ ಸಂದರ್ಭ ಜಿಲ್ಲೆಯ ಬಿಜೆಪಿಯ ಪ್ರಭಾವಿ ನಾಯಕರು, ಅರ್‌ ಎಸ್‌ ಎಸ್‌ ನ ರಾಜ್ಯ ಮಟ್ಟದ ನಾಯಕರು, ಜಿಲ್ಲೆಯ ಪ್ರಖ್ಯಾತ ಮಠಾದೀಶರೊಬ್ಬರು ಪುತ್ತಿಲರವರ ಮನೆಗೆ ಆಗಮಿಸಿ ಪಕ್ಷದಲ್ಲಿ ಪೋಸ್ಟ್‌ ನೀಡುವ ಜತೆಗೆ ಅವರೆಲ್ಲ ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಆ ಬಳಿಕ  ಚುನಾವಣಾ ಕಣಕ್ಕಿಳಿದಪುತ್ತಿಲ  ಮಠಂದೂರು ಪರ ಬಿರುಸಿನ  ಪ್ರಚಾರ ಕಾರ್ಯ ನಡೆಸಿದ್ದರು.

ಚುನಾವಣೆ ನಡೆದ ಬಳಿಕ ಪೋಸ್ಟ್‌ ನೀಡುವ ಭರವಸೆ ಸಹಿತ ಅವರ ಯಾವುದೇ ಬೇಡಿಕೆಯನ್ನು ಪಕ್ಷ ಈಡೇರಿಸಿರಲಿಲ್ಲ. ಅದರ ಬದಲು ಅವರನ್ನು ಪಕ್ಷದಿಂದ ದೂರ ಮಾಡುವ ಕಾರ್ಯವನ್ನು ಮಾಡಲಾಗಿತ್ತು ಎನ್ನುವ ಮಾತುಗಳನ್ನು ಅವರ ಬೆಂಬಲಿಗರು ಹೇಳುತ್ತಿದ್ದಾರೆ.‌

ಅಣಬೆ

ಅಲ್ಲದೇ ಅಮಿತ್‌ ಶಾ ಪುತ್ತೂರಿಗೆ ಆಗಮಿಸಿದ ವೇಳೆ ಸ್ವಾಗತ ಕೋರಿ ಪುತ್ತಿಲ  ಹಾಕಿದ ಬ್ಯಾನರ್‌ ಕುರಿತು, ಪುತ್ತೂರು ಶಾಸಕರು ಪರೋಕ್ಷವಾಗಿ ಟಾಂಗ್ ನೀಡಿದ್ದರು. ಅಣಬೆಗಳು ಎಂದ ಕರೆದ ವೇಳೆ 2018ರಲ್ಲಿ ಪುತ್ತಿಲ ಮನೆಗೆ ಬಂದು ಭರವಸೆ ನೀಡಿದವರು ಸೇರಿದಂತೆ ಯಾವೊಬ್ಬ ಬಿಜೆಪಿ ನಾಯಕರು ಅವರ ಬೆಂಬಲಕ್ಕೆ ಬಾರದಿದ್ದದ್ದು ಅವರ ಬೆಂಬಲಿಗರನ್ನು ಕೆರಳುವಂತೆ ಮಾಡಿತ್ತು.

ಸಭೆಯ ಬಳಿಕ ಪುತ್ತಿಲ ಮಿಂಚಿನ ಸಂಚಾರ

ಏ 12ರ ಬೆಂಬಲಿಗರ ಸಭೆಯ ಬಳಿಕ ಮಿಂಚಿನ ಸಂಚಾರ ನಡೆಸುತ್ತಿರುವ ಪುತ್ತಿಲರು ಕರಾವಳಿಯ ಹಲವು ಮಠಾದೀಶರನ್ನು ಬೇಟಿಯಾಗಿ ಸಲಹೆ, ಮಾರ್ಗದರ್ಶನ ಮತ್ತು ಆಶೀರ್ವಾದ ಪಡೆಯುತ್ತಿದ್ದಾರೆ.  ಇದರ ಜತೆಗೆ ವಿವಿಧ ಸಮಾಜದ ಹಿರಿಯರು, ಮುಖಂಡರುಗಳ ಬಗ್ಗೆ ಚುನಾವಣೆ ಸ್ಪರ್ಧೆ ಕುರಿತು ಸಲಹೆ ಪಡೆದಿದ್ದಾರೆ.

ನಿನ್ನೆ ಸಂಜೆ ಪುತ್ತೂರಿನ ಸುಭದ್ರ ಕಲ್ಯಾಣ ಮಂಟಪದಲ್ಲಿ ಸಭೆ ಶೆರಿದ ಪುತ್ತಿಲಫಾರ್‌ ಪುತ್ತೂರು ಸಂಘಟನೆಯ ಮುಖಂಡರು 3 ಗಂಟೆಗೂ ಅಧಿಕ ಕಾಲ ಚುನಾವಣಾ ಸ್ಪರ್ಧೆಯ ಸಾಧಕ ಬಾದಕಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿದು ಬಂದಿದೆ.

ಇವೆಲ್ಲದರ ಬಳಿಕ ಇಂದು ಮಧ್ಯಾಹ್ನ ಪ್ರಮುಖರ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು ಬಳಿಕ ತಮ್ಮ ನಿರ್ಧಾರವನ್ನು ಅರುಣ್‌ ಕುಮಾರ್‌ ಪುತ್ತಿಲರವರು ಪತ್ರಿಕಾಗೋಷ್ಟಿಯಲ್ಲಿ ಪ್ರಕಟಿಸಲಿದ್ದಾರೆ.

Ad Widget
Click to comment

Leave a Reply

ಶಿಕ್ಷಣ

Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget

Ad Widget

Ad Widget

Ad Widget

ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget

Ad Widget

Ad Widget alt="Ad Widget"/>

Ad Widget

ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ‌ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.

Ad Widget

Ad Widget <> Ad Widget

ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ‌ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.



Ad Widget

ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು‌ ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.

Continue Reading

ಕಾರ್ಯಕ್ರಮಗಳು

Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

Published

on



Ad Widget

Ad Widget

Ad Widget

Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.

Ad Widget

Ad Widget <> Ad Widget

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.



Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Continue Reading

ಮಂಗಳೂರು

Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!

Published

on



Ad Widget

Ad Widget

Ad Widget

Ad Widget

“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.

Ad Widget

Ad Widget

Ad Widget

Ad Widget

“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.

Ad Widget

Ad Widget <> Ad Widget

“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading