Connect with us

ದಕ್ಷಿಣ ಕನ್ನಡ

ಪುತ್ತೂರಿನ ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣಾ ಕಛೇರಿ ಉದ್ಘಾಟನೆ – ಎ. 19 ರಂದು 25 ಸಾವಿರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ | ಕಾರ್ಯಕರ್ತರಿಗೆ ನೋವಾಗದಂತೆ ಕಾರ್ಯನಿರ್ವಹಿಸಿ- ಶಕುಂತಳಾ ಶೆಟ್ಟಿ

Published

on



Ad Widget

Ad Widget

Ad Widget

Ad Widget

ಪುತ್ತೂರು:  ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ  ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರ ಚುನಾವಣಾ ಕಚೇರಿ ಎ.17ರಂದು ಉದ್ಘಾಟನೆಗೊಂಡಿತ್ತು.

Ad Widget

Ad Widget

Ad Widget

Ad Widget

 ದರ್ಬೆಯ  ಆರ್‌ಇಬಿ ಎಂಕ್ಲೇವ್ ಕಟ್ಟಡದಲ್ಲಿ ರುವ ಈ ಕಛೇರಿಯಲ್ಲಿ ಅರ್ಚಕ ಹರಿಪ್ರಸಾದ್ ಬನಾರಿಯವರ ನೇತೃತ್ವದಲ್ಲಿ ಗಣಪತಿ ಹವನ, ಪೂಜಾ ವಿಧಿವಿಧಾನಗಳು ನೆರವೇರಿತು. ಬಳಿಕ   ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ, ಹಿರಿಯರಾದ ವಲೇರಿಯನ್ ಡಯಾಸ್  ಮೊದಲಾದವರು ದೀಪ ಬೆಳಗಿಸಿ ಕಛೇರಿಯನ್ನು  ಉದ್ಘಾಟಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಬಳಿಕ ಮಾತನಾಡಿದ  ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ   ಪುತ್ತೂರು ಮಹಾಲಿಂಗೇಶ್ವರ  ದೇವರ  ರಥೋತ್ಸವದ ಸಂದರ್ಭದಲ್ಲಿಯೇ ಅಶೋಕ್ ರೈಯವರ ಪಕ್ಷದ ಕಚೇರಿಯು ಉದ್ಘಾಟನೆಗೊಳ್ಳುತ್ತಿದ್ದು ಪುತ್ತೂರಿನಲ್ಲಿ ಹಾಗೂ ರಾಜ್ಯದಲ್ಲಿ ಪಕ್ಷದ ತೇರು ಎಳೆಯುವಂತಾಗಲಿ ಎಂದರು.

Ad Widget

Ad Widget <> Ad Widget

ಪುತ್ತೂರಿನಲ್ಲಿ 14 ಮಂದಿ ಆಕಾಂಕ್ಷಿಯಾಗಿದ್ದರು. ಅವರವರ ಅಭಿಮಾನದಲ್ಲಿ ಹಲವು ಮಂದಿಯಿದ್ದರು.  ಆವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾರ  ಮನಸ್ಸಿಗೂ  ನೋವಾಗದಂತೆ  ಕೆಲಸಮಾಡಬೇಕು. ಫೋಸ್ ಕೊಡುವವರು ಯಾರೂ ಕೆಲಸ ಮಾಡುವುದಿಲ್ಲ. ಕಾರ್ಯಕರ್ತರು ಮಾತ್ರ ಕೆಲಸ ಮಾಡುವುದು. ನಾನು ಪಕ್ಷಕ್ಕೆ ಬರುವಾಗಲೂ ಇದೇ ಸಮಸ್ಯೆಇತ್ತು ಎಂದರು.



Ad Widget

 ನಿಮಗೆ ಟಿಕೆಟ್ ದೊರೆತಿರುವುದು ಸಂತೋಷ ತಂದಿದ್ದು ಸತ್ಯ ದರ್ಶನವಾಗಿದೆ. ಯಾರನ್ನೂ ನಂಬಬೇಡಿ. ಪ್ರಯೋಜವಿದ್ದಾಗ ಮಾತ್ರ ನಿಮ್ಮ ಬಳಿ ಬರುತ್ತಾರೆ. ಕಾರ್ಯಕರ್ತರೇ ಜೀವಾಳ. ಹೀಗಾಗಿ ಕಾರ್ಯಕರ್ತರಿಗೆ ಬೆಲೆ ಕೊಡಬೇಕು. ಕಾರ್ಯಕರ್ತರಿಗೆ ನೋವಾಗದಂತೆ ನಡೆದರೆ ಈ ಭಾರಿ ಜಯಗಳಿಸುವುದು ಖಂಡಿತ.   ಎಂದು ಅಶೋಕ್‌ ಕುಮಾರ್‌ ರೈಯವರಿಗೆ ಕಿವಿಮಾತು  ಹೇಳಿದರು.

Ad Widget

Ad Widget

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಮಾತನಾಡಿ, ಪಕ್ಷದ ಕಾರ್ಯಕರ್ತರು ಪ್ರತಿಯೊಬ್ಬರೂ ನಾನೇ ಅಭ್ಯರ್ಥಿ ಎಂಬ ಭಾವನೆಯೊಂದಿಗೆ ಚುನಾವಣಾ ಹೋರಾಟದಲ್ಲಿ ಭಾಗಿಗಳಾಗುವ ಮೂಲಕ ಪಕ್ಷದ ಗೆಲುವಿಗೆ ಕಾರಣರಾಗಬೇಕು. ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಮಾತ್ರವಲ್ಲದೆ ರಾಜ್ಯದಲ್ಲಿಯೂ ಬದಲಾವಣೆಯನ್ನು ತರುವಂತಾಗಬೇಕು. ಕಾಂಗ್ರೆಸ್ ಪಕ್ಷದ ಶಾಸಕರ ಮೂಲಕ ಪುತ್ತೂರಿನಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಬೇಕು. ವಿಜಯದ ಸಂಕೇತ ಕಚೇರಿಯಿಂದ ಪ್ರಾರಂಭವಾಗಿದ್ದು ಮೆ.13 ರ ಫಲಿತಾಂಶವು ಇದೇ ಕಚೇರಿಯಲ್ಲಿ ನಡೆಯಬೇಕು ಎಂದು ಹೇಳಿದರು.

 ಬಹಳಷ್ಟು ಜವಾಬ್ದಾರಿ ನನ್ನ ತಲೆ ಮೇಲಿದೆ

ರಾಜ್ಯದಲ್ಲಿರುವ ಬಿಜೆಪಿನ ಸರಕಾರ ಭ್ರಷ್ಠಾಚಾರದಿಂದ ತುಂಬಿ ತುಳುಕಿದೆ. ಬಿಜೆಪಿಯ ಎಲ್ಲಾ ನಾಯಕರು ಪಕ್ಷ ತೊರೆದು ಕಾಂಗ್ರೆಸ್‌ನತ್ತ ಬರುತ್ತಿದ್ದಾರೆ. ಅಕ್ರಮ ಸಕ್ರಮದಲ್ಲಿ ಒಂದು ಎಕರೆಗೆ 3 ಲಕ್ಷ ರೂಪಾಯಿ ಹಾಗೂ  94 ಸಿಯಲ್ಲಿ 20000 ನೀಡಬೇಕಾದ ಪರಿಸ್ಥಿತಿಯಿದೆ. ಬಿಜೆಪಿ ಸರಕಾರದಲ್ಲಿ ಈಗಿರುವಷ್ಟು ಭ್ರಷ್ಟಾಚಾರ ಈ ಹಿಂದೆ ಯಾರಿಂದಲೂ ನಡೆದಿಲ್ಲ. ಅಕ್ರಮ-ಸಕ್ರಮದಲ್ಲಿ ನಾನು ಸಲ್ಲಿಸಿದ ಅರ್ಜಿಗೆ 2  ಲಕ್ಷ ರೂಪಾಯಿ ನೀಡುವಂತೆ ತಿಳಿಸಿದ್ದಾರೆ.

 ನಾನು ಹಣ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿಲ್ಲ. ಪಕ್ಷಕ್ಕಾಗಿ ದುಡಿಯುತ್ತೇನೆ. ಬಡವರ , ದೀನ ದಲಿತರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಬಡವರಿಗೆ ದೊರೆಯಬೇಕಾದ 94 ಸಿಯನ್ನು ಮನೆ ಮನೆ ಹೋಗಿ ನ್ಯಾಯ ಒದಗಿಸುತ್ತೇನೆ. ಅದರಲ್ಲಿ ಯಾವುದೇ ರಾಜಿಯಿಲ್ಲ. ಯಾವುದೇ ಪಕ್ಷ ಬೇಧವಿಲ್ಲದೆ ಎಲ್ಲರಿಗೂ ಕಾನೂನು ಬದ್ದವಾಗಿ ದೊರೆಯಬೇಕಾದ ಸವಲತ್ತುಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ಪ್ರಯತ್ನಿಸುತ್ತೇನೆ. ಭ್ರಷ್ಠಾಚಾರ ರಹಿತ ಆಡಳಿತ ನೀಡುವುದೇ ನನ್ನ ಗುರಿಯಾಗಿದೆ ಎಂದ ಅವರು, ಪುತ್ತೂರಿನಲ್ಲಿ 14 ಮಂದಿ ಆಕಾಂಕ್ಷಿಗಳಿದ್ದರೂ ನನಗೆ ಅವಕಾಶ ದೊರೆತಿದೆ. ಬಹಳಷ್ಟು ಜವಾಬ್ದಾರಿ ನನ್ನ ತಲೆ ಮೇಲಿದ್ದು ನನ್ನ ಜವಾಬ್ದಾರಿ ಅರಿತು ಕೆಲಸ ಮಾಡುತ್ತೇನೆ ಎಂದರು.

ಎ.19 – ನಾಮಪತ್ರ

ಮೇ.18 ರಂದು ಎಲ್ಲಾ ಧರ್ಮಗಳ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದು  ಎ.19 ರಂದು ನಾಮಪತ್ರ ಸಲ್ಲಿಸಲಾಗುವುದು. ಬೆಳಿಗ್ಗೆ 9.30ಕ್ಕೆ ಮಹಾಲಿಂಗೇಶ್ವರ  ದೇವಸ್ಥಾನದಿಂದ ಮೆರವಣಿಗೆ ಮೂಲಕ ತೆರಲಿ ನಾಮಪತ್ರ ಸಲ್ಲಿಸಲಾಗುವುದು.. ಮೆರವಣಿಗೆಯಲ್ಲಿ 25000ಮಂದಿ ಭಾಗವಹಿಸುವ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.

ಜಿ.ಪಂ ಮಾಜಿ ಸದಸ್ಯ ಎಂ.ಎ ಮಹಮ್ಮದ್  ಮಾತನಾಡಿದರು.ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಮಂಗಳೂರು

Raghupti Bhat-2028ರ ಚುನಾವಣೆಯಲ್ಲಿ ಸ್ಪರ್ಧೆ ಖಚಿತ; ಕಾಂಗ್ರೆಸ್ ಸೇರ್ಪಡೆ ಬಗ್ಗೆ ಏನು ಹೇಳಿದ್ರು ರಘುಪತಿ ಭಟ್

Published

on



Ad Widget

Ad Widget

Ad Widget

Ad Widget

ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಕಾಂಗ್ರೆಸ್ ಸೇರ್ಪಡೆಯ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಆದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಿಂದ ಈಗಾಗಲೇ ಆಹ್ವಾನ ಬಂದಿರುವುದು ನಿಜ. ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚಿಸಿ, ಅವರ ಅಭಿಪ್ರಾಯ ಪಡೆದುಕೊಂಡ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದರು.

Ad Widget

Ad Widget <> Ad Widget

“ಬಿಜೆಪಿಯವರು ಕರೆಯುತ್ತಾರೆ ಎಂದು ಕಾಯುತ್ತಿದ್ದೇನೆ. ಬಿಜೆಪಿ ಸೇರುವ ಬಗ್ಗೆಯೂ ಯೋಚಿಸಬಹುದು. ಆದರೆ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ” ಎಂದು ಸ್ಪಷ್ಟಪಡಿಸಿದರು.
ಬಾಲ್ಯದಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ಬೆಳೆದು, ಬಿಜೆಪಿಯಲ್ಲಿ ಯುವ ಮೋರ್ಚಾ ಜಿಲ್ಲಾ ಘಟಕ ಹಾಗೂ ಜಿಲ್ಲಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿದ್ದೇನೆ. ಹೀಗಿರುವಾಗ ಏಕಾಏಕಿ ಪಕ್ಷ ಬದಲಿಸುವ ನಿರ್ಧಾರ ಕೈಗೊಳ್ಳಲು ನನ್ನ ಮನಸ್ಸು ಒಪ್ಪುತ್ತಿಲ್ಲ. ನನ್ನ ಬೆಂಬಲಿಗರ ವಿಶ್ವಾಸ ಪಡೆದುಕೊಂಡೇ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ತಿಳಿಸಿದರು.



Ad Widget

ಕಳೆದ ಚುನಾವಣೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ರಘುಪತಿ ಭಟ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ತಪ್ಪಿದ್ದಕ್ಕಿಂತಲೂ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಹೇಳಿ, ಕೊನೆಗೆ ಅವಕಾಶ ನೀಡದಿರುವುದು ನೋವು ತಂದಿದೆ ಎಂದರು.

Ad Widget

Ad Widget

ತಮ್ಮದೇ ಪಕ್ಷದ ಕೆಲವು ಶಾಸಕರಿಂದ ವೈಯಕ್ತಿಕ ದಬ್ಬಾಳಿಕೆ ಎದುರಿಸಬೇಕಾಯಿತು ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸಂಘದ ಹಿರಿಯರು ಹಾಗೂ ಬಿಜೆಪಿಯ ನಾಯಕರು ತಮ್ಮೊಂದಿಗೆ ಮಾತನಾಡದಿರುವುದು ಬೇಸರ ತಂದಿದೆ ಎಂದು ಹೇಳಿದರು.

“ನನ್ನ ಹತ್ತಿರದ ಕ್ಷೇತ್ರಗಳ ಮಾಜಿ ಶಾಸಕರನ್ನು ಗೌರವದಿಂದ ಕಾಣಲಾಗುತ್ತದೆ. ನನಗೆ ವಿಶೇಷ ಗೌರವ ಬೇಡ. ಕನಿಷ್ಠ ಬಹುವಚನದಲ್ಲಿ ಮಾತನಾಡಿದ್ದರೂ ಸಾಕಿತ್ತು. ಈ ಎಲ್ಲ ಘಟನೆಗಳು ಮಾನಸಿಕವಾಗಿ ನೋವುಂಟುಮಾಡಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

2028ರ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರು ನನ್ನನ್ನು ಸೋಲಿಸಿಲ್ಲ. ಪಕ್ಷವೇ ನನಗೆ ಟಿಕೆಟ್ ತಪ್ಪಿಸಿದೆ ಎಂಬ ಭಾವನೆ ಜನರಲ್ಲಿದೆ. ಜನರು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಜನರು ಬೇಡ, ನೀವು ಚುನಾವಣೆಗೆ ನಿಲ್ಲಬೇಡಿ ಎಂದು ಹೇಳಿದರೆ ಮನೆಯಲ್ಲೇ ಕುಳಿತುಕೊಳ್ಳುತ್ತೇನೆ. ಜನರ ಕೆಲಸ ಮಾಡಲು ಜನಪ್ರತಿನಿಧಿಯಾಗಲೇಬೇಕೆಂದಿಲ್ಲ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಜನರಿಗೆ ಸಹಾಯ ಮಾಡಬಹುದು ಎಂದು ರಘುಪತಿ ಭಟ್ ಹೇಳಿದರು

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು

Published

on



Ad Widget

Ad Widget

Ad Widget

Ad Widget

ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್‌ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.

Ad Widget

Ad Widget <> Ad Widget

ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.



Ad Widget

120 ಎಕರೆ ಸರ್ಕಾರಿ ಜಮೀನಿನತ್ತ ಗಮನ

ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.

Ad Widget

Ad Widget

ಸಮನ್ವಯದ ಚಿಕಿತ್ಸೆಗೆ ಅವಕಾಶ

ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.

ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರಿ ಸ್ವಾಮ್ಯಕ್ಕೆ ಒತ್ತು

ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.

ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.

ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಫುಡೀಪ್ರಿನಿಯರ್’: ಆಹಾರದಿಂದ ಉದ್ಯಮದತ್ತ ವಿದ್ಯಾರ್ಥಿಗಳ ಹೆಜ್ಜೆ; ‘ಟೇಸ್ಟ್ ದಿ ಫ್ಯೂಚರ್’ ಮೂಲಕ ಸೃಜನಶೀಲತೆ, ರುಚಿ ಮತ್ತು ಉದ್ಯಮಶೀಲತೆಯ ಸಂಗಮ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಆಹಾರವನ್ನು ಕೇವಲ ರುಚಿಯ ಅನುಭವಕ್ಕೆ ಸೀಮಿತಗೊಳಿಸದೆ, ಸೃಜನಶೀಲತೆ, ನವೀನತೆ ಹಾಗೂ ಉದ್ಯಮಶೀಲತೆಯ ಅವಕಾಶವಾಗಿ ಪರಿವರ್ತಿಸುವ ಉದ್ದೇಶದಿಂದ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗ ಹಾಗೂ ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ವತಿಯಿಂದ ‘ಫುಡೀಪ್ರಿನಿಯರ್–ಟೇಸ್ಟ್ ದಿ ಫ್ಯೂಚರ್’ ಎಂಬ ವಿಶಿಷ್ಟ ಉದ್ಯಮಶೀಲತಾ ಕಾರ್ಯಕ್ರಮವನ್ನು ಅ. 6 ರಂದು ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಆಹಾರ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಉದ್ಯಮಾವಕಾಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ, ಸಣ್ಣ ಆಲೋಚನೆಯನ್ನು ಉತ್ಪನ್ನವಾಗಿ, ಉತ್ಪನ್ನವನ್ನು ಬ್ರ್ಯಾಂಡ್ ಆಗಿ ಹಾಗೂ ಬ್ರ್ಯಾಂಡ್ ಅನ್ನು ಯಶಸ್ವಿ ಉದ್ಯಮವಾಗಿ ರೂಪಿಸುವ ಚಿಂತನೆ ಬೆಳೆಸುವ ಉದ್ದೇಶದಿಂದ. ಆಹಾರ ತಯಾರಿಕೆ, ಪ್ರಸ್ತುತಿ, ಗ್ರಾಹಕರ ಆಕರ್ಷಣೆ, ಮಾರುಕಟ್ಟೆ ಹಾಗೂ ಉದ್ಯಮದ ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಒದಗಿಸಲಾಯಿತು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಉದ್ಯೋಗಕ್ಕಾಗಿ ಕಾಯದೆ, ತಮ್ಮ ಜ್ಞಾನ ಮತ್ತು ಸೃಜನಶೀಲತೆಯನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು ಎಂದು ಕರೆ ನೀಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.



Ad Widget

ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ಪುತ್ತೂರಿನ ಹೋಟೆಲ್ ವಿಶ್ವ ರಂಜಿನಿಯ ವ್ಯವಸ್ಥಾಪಕ ಪಾಲುದಾರ ವಿ.ಜೆ. ಪುನೀತ್ ಮಾತನಾಡಿ, ಆಹಾರ ಮತ್ತು ಆತಿಥ್ಯ ಕ್ಷೇತ್ರದಲ್ಲಿ ಯುವಜನರಿಗೆ ಲಭ್ಯವಿರುವ ವಿವಿಧ ಉದ್ಯಮಾವಕಾಶಗಳ ಕುರಿತು ಮಾಹಿತಿ ನೀಡಿದರು. ಸ್ಥಳೀಯ ಸಂಪನ್ಮೂಲಗಳು, ಹೊಸ ಆಲೋಚನೆಗಳು ಹಾಗೂ ಗುಣಮಟ್ಟದ ಉತ್ಪನ್ನಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಸಣ್ಣ ಪ್ರಯತ್ನವನ್ನೂ ಯಶಸ್ವಿ ಉದ್ಯಮವನ್ನಾಗಿ ಬೆಳೆಸಬಹುದು ಎಂದು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.

Ad Widget

Ad Widget

‘ಫುಡೀಪ್ರಿನಿಯರ್’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ, ತಂಡಕಾರ್ಯ, ವ್ಯವಹಾರಿಕ ಚಿಂತನೆ, ಸಂವಹನ ಕೌಶಲ ಹಾಗೂ ಮಾರುಕಟ್ಟೆ ಅರಿವನ್ನು ಪ್ರದರ್ಶಿಸಲು ಅವಕಾಶ ಪಡೆದು ,ಆಹಾರವನ್ನು ಕೇಂದ್ರವಾಗಿಟ್ಟುಕೊಂಡು ಹೊಸ ಆಲೋಚನೆಗಳನ್ನು ರೂಪಿಸುವ ಮೂಲಕ ಭವಿಷ್ಯದಲ್ಲಿ ಸ್ವಂತ ಉದ್ಯಮ ಆರಂಭಿಸುವ ಸಾಧ್ಯತೆಗಳ ಬಗ್ಗೆಯೂ ಅರಿವು ಪಡೆದರು.

ಕಾರ್ಯಕ್ರಮದ ಪ್ರಸ್ತಾವಿಕ ಮಾತುಗಳನ್ನು ಪ್ರಶಾಂತ್ ರೈ ಪಿ. ನೆರವೇರಿಸಿ, ಮ್ಯಾನೇಜ್‌ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ತೃತೀಯ ಬಿಬಿಎ ವಿದ್ಯಾರ್ಥಿ ಪ್ರಕೃತ್ ಜಿ.ಕೆ. ಅತಿಥಿಗಳನ್ನು ಸ್ವಾಗತಿಸಿ, ತೃತೀಯ ಬಿಬಿಎ ವಿದ್ಯಾರ್ಥಿ ಭವತ್ ಬಿ.ಎಲ್. ವಂದನಾರ್ಪಣೆ ಸಲ್ಲಿಸಿ, ದ್ವಿತೀಯ ಬಿಬಿಎ (ಬಿಸಿನೆಸ್ ಅನಾಲಿಟಿಕ್ಸ್) ವಿದ್ಯಾರ್ಥಿನಿ ಸಮೃದ್ಧಿ ಚೌಟಾ ಕಾರ್ಯಕ್ರಮ ನಿರೂಪಿಸಿದರು.ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ಮತ್ತು ಪ್ರೊಫೆಷನಲ್ ಸ್ಟಡೀಸ್ ವಿಭಾಗದ ಡೀನ್ ಹಾಗೂ ಮುಖ್ಯಸ್ಥ ಡಾ. ರಾಧಾಕೃಷ್ಣ ಗೌಡ ವಿ. ಉಪಸ್ಥಿತರಿದ್ದರು.

‘ಟೇಸ್ಟ್ ದಿ ಫ್ಯೂಚರ್’ ಆಶಯದೊಂದಿಗೆ ನಡೆದ ‘ಫುಡೀಪ್ರಿನಿಯರ್’ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಆಹಾರದ ರುಚಿಯೊಂದಿಗೆ ಉದ್ಯಮದ ರುಚಿಯನ್ನೂ ಪರಿಚಯಿಸಿ, “ಒಂದು ಆಲೋಚನೆ, ಒಂದು ಪ್ರಯತ್ನ, ಒಂದು ಉದ್ಯಮ” ಎಂಬ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವಲ್ಲಿ ಯಶಸ್ವಿಯಾಯಿತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading