ಪುತ್ತೂರು
ರೋಚಕ ಕದನ ಕಣವಾದ ಪುತ್ತೂರು ಚುನಾವಣೆ : ಅಂತಿಮ ಕಣದಲ್ಲಿ 8 ಅಭ್ಯರ್ಥಿಗಳು – ಮಾದರಿ ಮತಪತ್ರದಲ್ಲಿ ಯಾರ ಹೆಸರು ಎಲ್ಲಿದೆ ಗೊತ್ತೇ..?
ಪುತ್ತೂರು: ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 10 ಜನರು ಸಲ್ಲಿಸಿದ್ದ ಉಮೇದುವಾರಿಕೆಯಲ್ಲಿ ಇಬ್ಬರು ಹಿಂಪಡೆಯುವ ಮೂಲಕ 8 ಮಂದಿ ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದುಕೊಂಡಿದ್ದಾರೆ.
ಎಸ್. ಡಿ. ಪಿ.ಐ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ ಪಿ.ಇಬ್ರಾಹಿಂ, ಜೆ.ಡಿ.ಎಸ್. ಪಕ್ಷೇತರ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಕೆ ಮಾಡಿದ ಮಹಮ್ಮದ್ ಅಶ್ರಫ್ ಕಲ್ಲೇಗ ಕಣದಿಂದ ಹಿಂದೆ ಸರಿದ್ದಾರೆ.
ಮತಯಂತ್ರದಲ್ಲಿ ಮುದ್ರಿತವಾಗಲಿರುವ ಮಾದರಿ ಮತಪತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರ ಹೆಸರು ಫಸ್ಟ್ ಇದೆ. ಪುತ್ತೂರು ಕ್ಷೇತ್ರದ ಚುನಾವಣಾಧಿಕಾರಿಯವರ ಕಚೇರಿ ನೊಟೀಸ್ ಬೋರ್ಡ್ನಲ್ಲಿ ಮತಪತ್ರದ ಮಾದರಿಯನ್ನು ಪ್ರಕಟಿಸಲಾಗಿದೆ.
ಅಂತಿಮ ಕಣದಲ್ಲಿರುವ 8 ಅಭ್ಯರ್ಥಿಗಳ ಪೈಕಿ ನಂ.1 – ಅಶೋಕ್ ಕುಮಾರ್ ರೈಯವರು ಅದಾದ ಬಳಿಕ ಕ್ರಮವಾಗಿ ನಂ.2- ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ, ನಂ.3-ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ, ನಂ.4-ಆಮ್ ಆದ್ಮ ಪಾರ್ಟಿಯ ಬಿ.ಕೆ. ವಿಶು ಕುಮಾರ್, ನಂ.5-ಎಸ್ಡಿಪಿಐ ಅಭ್ಯರ್ಥಿ ಇಸ್ಮಾಯಿಲ್ ಶಾಫಿ ಬೆಳ್ಳಾರೆ, ನಂ.6-ಕರ್ನಾಟಕ ರಾಷ್ಟ್ರ ಸಮಿತಿಯ ಐವನ್ ಫೆರಾವೋ, ನಂ.7- ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮತ್ತು ನಂ.8- ಪಕ್ಷೇತರ ಅಭ್ಯರ್ಥಿ ಸುಂದರ ಕೊಯಿಲ ಹೆಸರು ಇದೆ.ಕಾಂಗ್ರೇಸ್ ಬಿಜೆಪಿಯ , ಕಾಂಗ್ರೆಸ್, ಆಮ್ ಆದ್ಮಿ ಸೇರಿ ಮೂರು ರಾಷ್ಟ್ರೀಯ ಪಕ್ಷಗಳು, ಜೆಡಿಎಸ್ ರಾಜ್ಯ ಪಕ್ಷ, ಎಸ್.ಡಿ.ಪಿ. ಐ. ಹಾಗೂ ಕೆ.ಆರ್.ಎಸ್. ಎರಡು ನೋಂದಾಯಿತ ಪಕ್ಷಗಳು, ಅರುಣ್ ಕುಮಾರ್ ಪುತ್ತಿಲ ಹಾಗೂ ಸುಂದರ ಕೊಯಿಲ ಇಬ್ಬರು ಪಕ್ಷೇತರಗಳು ಕಣದಲ್ಲಿ ಇದ್ದಾರೆ.
ಶಿಕ್ಷಣ
Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ
ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮಗಳು
Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಅಪರಾಧ
Puttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
ಪುತ್ತೂರಿನಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
2026ರ ಅಕ್ಟೋಬರ್ 14ರಂದು ಸಂಜೆ ಪುತ್ತೂರು ಕಸಬ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ಕೇರಳ ರಾಜ್ಯದ ಲಾಟರಿಯನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕ ವಾಸು ನಾಯ್ಕ್ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಅಂಗಡಿ ಮಾಲೀಕ, ಪುತ್ತೂರು ಕಸಬ ನಿವಾಸಿ ಶ್ರೀನಿವಾಸ ಪೈ (33) ಎಂಬವರು ಮಾರಾಟಕ್ಕಾಗಿ ಇಟ್ಟಿದ್ದ ಲಾಟರಿ ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಯಿತು. ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ತಂದು ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 124/2026ರ ಅಡಿಯಲ್ಲಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii)ರಂತೆ ಪ್ರಕರಣ ದಾಖಲಿಸಲಾಗಿದೆ.
ಇದೇ ದಿನ ಪುತ್ತೂರು ಕಸಬ ಗ್ರಾಮದ ಲಿನೆಟ್ ಜಂಕ್ಷನ್ ಬಳಿಯ ಪಾನ್ ಸ್ಟಾಲ್ ಒಂದರಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಸಹಾಯಕ ಪೊಲೀಸ್ ಉಪನಿರೀಕ್ಷಕ ಗಂಗಾಧರ ಎ.ಬಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಅಂಗಡಿ ಮಾಲೀಕ, ಪುತ್ತೂರು ಪಡ್ನೂರು ಗ್ರಾಮದ ನಿವಾಸಿ ಲಕ್ಷ್ಮಣ (42) ಎಂಬವರ ಬಳಿ ಮಾರಾಟಕ್ಕಾಗಿ ಇಟ್ಟಿದ್ದ ಲಾಟರಿ ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಯಿತು. ಕೇರಳದಿಂದ ಲಾಟರಿ ಟಿಕೆಟ್ಗಳನ್ನು ತಂದು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 125/2026ರ ಅಡಿಯಲ್ಲಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii)ರಂತೆ ಮತ್ತೊಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
-
ಸ್ಥಳೀಯ16 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ರಾಜಕೀಯ9 hours agoH.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ
-
ಅಪರಾಧ10 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ಅಪರಾಧ14 hours agoB.R. Shetty-ಬ್ಯಾಂಕ್ ಆಫ್ ಬರೋಡಾ ವಿರುದ್ಧ ಯುಎಇ ಎಕ್ಸ್ಚೇಂಜ್ ಸಂಸ್ಥೆಗಳ ಸ್ಥಾಪಕ ಬಿ.ಆರ್. ಶೆಟ್ಟಿ ಕಾನೂನು ಸಮರ; ₹1.25 ಲಕ್ಷ ಕೋಟಿ ಪರಿಹಾರ ಬೇಡಿಕೆ
-
ಮಂಗಳೂರು10 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
-
ಬಿಗ್ ನ್ಯೂಸ್16 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಅಂತರ ರಾಜ್ಯ16 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!
-
ರಾಜಕೀಯ14 hours agoAmal Ramachandra-ಒಳ್ಳೆಯ ರೀತಿಯಲ್ಲಿ ಬೆಳೆವಿಮೆ ಬಂದರೆ ಮೋದಿಯಿಂದಾಗಿ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಈಗ ಕಾಂಗ್ರೆಸ್ ನ್ನು ದೂರುತ್ತಿದೆ..! ಟರ್ಮ್ ಶೀಟ್ ಬದಲಾವಣೆ ಮಾಡಿದ್ದು ಬಿಜೆಪಿ ಈ ಬಗ್ಗೆ ದಾಖಲೆಯಿದೆ; ಅಶೋಕ್ ರೈ ಹುಟ್ಟಿಸಿದ ಲಿಸ್ಟ್ ಕೊಡ್ತೇನೆ 8 ವರ್ಷಗಳಲ್ಲಿ ಬೆಳ್ತಂಗಡಿಯಲ್ಲಿ ಪೂಂಜಾ ಹುಟ್ಟಿಸಿದ್ದೇನೂ..? ಪುಡಾ ಅಧ್ಯಕ್ಷ ಅಮಳ ರಾಮಚಂದ್ರ




















