Uncategorized
ಬಿಜೆಪಿಯ ದುರಾಡಳಿತ ಭ್ರಷ್ಟಾಚಾರ ಬೆಲೆಯೇರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ – ಇಲ್ಲಿನ ಶಾಸಕರು ಅಭಿವೃದ್ದಿ ಮಾಡದೇ ಮಜಾಮಾಡಿದ್ದಾರೆ – ಅಪಪ್ರಚಾರಕ್ಕೆ ತಲೆ ಕೆಡಿಸಕೊಳ್ಳುವುದಿಲ್ಲ : ಕಾಂಗ್ರೆಸ್ ಅಭ್ಯರ್ಥಿ ಆಶೋಕ್ ಕುಮಾರ್ ರೈ
ಬಿಜೆಪಿ ಸರ್ಕಾರದ ದುರಾಡಳಿತ ಭ್ರಷ್ಟಾಚಾರ ಬೆಲೆಯೇರಿಕೆಯಿಂದ ಜನರ ಬದುಕು ತತ್ತರಿಸಿ ಹೋಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಜನತೆ ಬಡವರ ವಿರೋಧಿ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಆಶೋಕ್ ಕುಮಾರ ರೈ ತಿಳಿಸಿದ್ದಾರೆ.
ಏ.24ರಂದು ಸೊರಕೆ ಪರಂಟೋನಿ ಮೈದಾನದಲ್ಲಿ ನಡೆದ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
40% ಲಂಚ ಇರುವ ಕಾರಣ ಒಂದಷ್ಟು ಕಡೆ ಜಲ್ಲಿ ಮತ್ತು ಸಿಮೆಂಟ್ ಹಾಕಿದ್ದು ಬಿಟ್ಟರೆ ಬಿಜೆಪಿಯವರಲ್ಲಿ ಅಭಿವೃದ್ಧಿ ಎನ್ನುವುದು ಇಲ್ಲವೇ ಇಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಜನರ ನೆಮ್ಮದಿ ಹಾಳಾಗಿದೆ, ಯುವಕರಿಗೆ ಉದ್ಯೋಗ ಇಲ್ಲ, ಲಂಚ, ಭ್ರಷ್ಟಾಚಾರ ಮಿತಿ ಮೀರಿದೆ. ಹಿಂದುತ್ವ ಎನ್ನುವ ಬಿಜೆಪಿಯವರು ಹಿಂದೂಗಳಿಗೆ ಮೋಸ ಮಾಡುತ್ತಿದ್ದಾರೆ. ಅನಿವಾರ್ಯವಾಗಿದೆ. ಸದಾ ಸಮಾಜ ಸೇವೆಯಲ್ಲಿರುವ ಅಶೋಕ್ ಕುಮಾರ್ ರೈ ಅವರನ್ನು ಬಿಜೆಪಿ, ಎಸ್ಡಿಪಿಐಯವರ ಅಪಪ್ರಚಾರಗಳಿಗೆ ಕಿವಿಗೊಡದೆ ಜನತೆ ಈ ಬಾರಿ ನನ್ನನ್ನು ಆಶೀರ್ವದಿಸಿ ಎಂದು ಆಶೋಕ್ ಕುಮಾರ ರೈ ಮನವಿ ಮಾಡಿದರು.
ನಾನು ಜೋರಾಗಿ ಮಾತನಾಡಿದರೆ ಬಿಜೆಪಿಯವರಿಗೆ ಟೆನ್ಷನ್ ಶುರುವಾಗುತ್ತದೆ. ನಾನು ಮಾತನಾಡಿರುವ ಭಾಷಣದ ತುಣುಕನ್ನು ಅರ್ಧ ಕಟ್ ಮಾಡಿ ಅಪಪ್ರಚಾರ ನಡೆಸುವ ಮೂಲಕ ಬಿಜೆಪಿಗರು ವಿಘ್ನ ಸಂತೋಷ ಪಡೆಯುತ್ತಾರೆ, ಬಿಜೆಪಿಯವರ ಅಪಪ್ರಚಾರಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ. ಇಲ್ಲಿನ ಶಾಸಕರು ಯಾವುದೇ ಅಭಿವೃದ್ಧಿ ಮಾಡದೇ ಮಜಾ ಮಾಡಿದ್ದಾರೆ. ಅದಕ್ಕಾಗಿ ಜನತೆ ಈ ಬಾರಿ ಬಿಜೆಪಿಗೆ ತಕ್ಕ ಪಾಠ ಕಲಿಸಿಯೇ ಕಲಿಸುತ್ತಾರೆ. ಇಲ್ಲಿ ಕಾಂಗ್ರೆಸ್ ಹೆಚ್ಚಿನ ಸಂಖ್ಯೆ ಯಲ್ಲಿ ಮಹಿಳೆಯರು ಸೇರಿರುವುದನ್ನು ನೋಡುವಾಗ ಕಾಂಗ್ರೆಸ್ ಗೆಲುವು ಖಚಿತ ಎಂಬಂತಾಗಿದೆ
ಬಿಜೆಪಿಗೆ ಅಭಿವೃದ್ದಿ ಮಾಡುವುದು ಗೊತ್ತಿಲ.
ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ಬಿಜೆಪಿಯವರಿಗೆ ಅಭಿವೃದ್ಧಿ ಅಂದರೆ ಏನೆಂದು ಗೊತ್ತಿಲ್ಲ, ಅವರ ಆಡಳಿತ ಹೇಗೆಂದು ಎಲ್ಲರಿಗೂ ಗೊತ್ತಾಗಿದೆ. ಜನತೆ ಬದಲಾವಣೆ ಬಯಸಿದ್ದು ಈ ಬಾರಿ ಪುತ್ತೂರಿನಲ್ಲಿ ಕಾಂಗ್ರೆಸ್ ಗೆಲ್ಲಬೇಕು, ಅದಕ್ಕಾಗಿ ಸಮರ್ಥ ಅಭ್ಯರ್ಥಿ ಅಶೋಕ್ ರೈಯವರನ್ನು ಗೆಲ್ಲಿಸಬೇಕು ಎಂದು ಹೇಳಿದರು.
ಬಿಜೆಪಿ ದುರಾಡಳಿತ ಕೊನೆಗೊಳಿಸಲು ಪ್ರಯತ್ನಿಸಿ : ಎಸ್.ಡಿ ವಸಂತ:
ಸರ್ವೆ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಡಿ ವಸಂತ ಮಾತನಾಡಿ “ ಬಿಜೆಪಿ ದುರಾಡಳಿತ ಕೊನೆಗಾಣಿಸಲು ಮತ್ತು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈಯವರನ್ನು ಬಹುಮತದಿಂದ ಚುನಾಯಿಸಲು ಕಾರ್ಯಕರ್ತರೆಲ್ಲರೂ ಶಕ್ತಿ ಮೀರಿ ಪ್ರಯತ್ನಿಸಬೇಕು” ಎಂದು ಹೇಳಿದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಪ್ರ.ಕಾರ್ಯದರ್ಶಿ ಅಮಳ ರಾಮಚಂದ್ರ, ಬ್ಲಾಕ್ ಉಸ್ತುವಾರಿ ಮುರಳೀಧರ ರೈ ಮಠಂತಬೆಟ್ಟು, ಪ್ರಚಾರ ಸಮಿತಿ ಅಧ್ಯಕ್ಷ ಭಾಸ್ಕರ ಗೌಡ ಕೋಡಿಂಬಾಳ, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್ ಮೊದಲಾದವರು ಮಾತನಾಡಿ ಕಾಂಗ್ರೆಸ್ ಪರ ಮತ ಯಾಚನೆ ಮಾಡಿದರು.
ಅಶೋಕ್ ರೈ ಗೆಲ್ಲಿಸಲು ಬೂತ್ ಮಟ್ಟದಲ್ಲೇ ಪರಿಶ್ರಮ
ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಕಾಂಗ್ರೆಸ್ ಗೆದ್ದರೆ 20 ಯುನಿಟ್ ವಿದ್ಯುತ್ ಉಚಿತವಾಗಿ ಸಿಗಲಿದ್ದು ಮನೆಯ ಯಜಮಾನಿಗೆ ಮಾಸಿಕ ರೂ.2000 ಹಣ ಸಿಗಲಿದೆ. ಪ್ರತಿಯೊಬ್ಬರಿಗೂ ತಲಾ 10 ಕೆಳ ಉಚಿತ ಅಕ್ಕಿ ಸಿಗಲಿದೆ. ಇದು ಕಾಂಗ್ರೆಸ್ ನೀಡಿದ ಭರವಸೆಯಾದ ಕಾರಣ ಇವೆಲ್ಲವೂ ಸಿಗುವದು ಗ್ಯಾರಂಟಿ, ಬಿಜೆಪಿಯವರ ಹಾಗೆ ಸುಳ್ಳು ಹೇಳಿ ನಾವು ಮತ ಪಡೆಯುವುದಿಲ್ಲ. ಏನೇ ಆದರೂ ಈ ಬಾರಿ ಅಶೋಕ್ ಕುಮಾರ್: ಕೈ ಅವರನ್ನು ನಾವು ಗೆಲ್ಲಿಸಲೇಬೇಕು, ಅದಕ್ಕಾಗಿ ಬೂತ್ ಮಟ್ಟದಿಂದಲೇ ಪರಿಶ್ರಮ ಪಡಬೇಕು ಎಂದು ಹೇಳಿದರು. ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಜನರನ್ನು ಒಡೆಯುತ್ತಿದ್ದು ದ್ವೇಷ, ವಿಭಜನೆ ಬಿಜೆಪಿಯ ಅಜೆಂಡಾ ಆಗಿದೆ. ಜನತೆಗೆ ಉಪಯೋಗಕ್ಕಿಲ್ಲದೆ, ಪರ ಕಾಳಜಯಿಲ್ಲದೆ ಭ್ರಷ್ಟ ಬಿಜೆಪಿಯನ್ನು ಈ ಬಾರಿ ಸೋಲಿಸುವುದು ನಮ್ಮೆಲ್ಲರ ಬಾಧ್ಯತೆಯಾಗಿದೆ. ಸರ್ವೆ ಕಾಂಗ್ರೆಸ್ನ ಪ್ರಬಲ ಕ್ಷೇತ್ರವಾಗಿದ್ದು ಇಲ್ಲಿ ಯಾವತ್ತೂ ಕಾಂಗ್ರೆಸ್ ಲೀಡ್ ಪಡೆಯುತ್ತದೆ ಎಂದು ಹೇಮನಾಥ ಶೆಟ್ಟಿ ಹೇಳಿದರು.
ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿ. ಎನ್ ಎನಕೂ ಹಾಜಿ, ಕೆಪಿ, ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ನ ಮಠ, ಜಿಲ್ಲಾ ಕಾಂಗ್ರೆ ಸ್ ವಕ್ತಾರ ಮಹದ್ಗುದ್ ಬಡಗನ್ನೂರು, ಮುಂಡೂರು ಸಿ.ಎ ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಸಹ ಸಂಚಾಲಕರಾದ ವೇದನಾಥ ಸುವರ್ಣ ನರಿಮೊಗರು, ಎಂ.ಪಿ ಆಬೂಬಕ್ಕರ್, ನಿರ್ದೇಶಕರಾದ ಆನಂದ ಪೂಜಾರಿ, ಕೊರಗಪ್ಪ ಸೊರಕೆ, ಕಾಂಗ್ರೆಸ್ ಬೂತ್ ಬಡವರ ಅಧ್ಯಕ್ಷರಾದ ಯತೀಶ್ ರೈ ಮೇಗಿನಗುತ್ತು, ಮಜೀದ್ ಬಾಳಾಯ, ಮುಂಡೂರು ಗ್ರಾಪಂ ಸದಸ್ಯ ಕಮಲೇಶ್ ಎಸ್.ಎ, ಕಮಲಾ ನೇರೋಲ್ಲಡ್ಕ, ವಿಜಯಾ ಕರ್ಮಿನಡ್ಕ, ತಾ.ಪಂ ಮಾಜಿ ಸದಸ್ಯ ಸುಮತಿ, ಎನ್ಎಸ್ಯುಐ ಮುಖಂಡ ಫಾರೂಕ್ ಬಾಯಬೆ, ನಗರಸಭೆ ಮಾಜಿ ಸದಸ್ಯ ಅನ್ವರ್ ಖಾಸಿ, ಲ್ಯಾನ್ಸಿ ಮಸ್ಕರೇನಸ್, ಇಸಾಕ್ ಸಾಲರ ಉಪಸ್ಥಿತರಿದ್ದರು, ಬ್ಲಾಕ್ ಕಾಂಗ್ರೆಸ್ ಸದ್ಯ ರಾಮಚಂದ್ರ ಸೊರಕೆ ವಂದಿಸಿದರು, ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಅಧ್ಯಕ್ಷ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ ಕಾರ್ಯಕ್ರಮ ನಿರೂಪಿಸಿದರು. ನೂರಾರು ಮಂದಿ ಭಾಗವಹಿಸಿದ್ದರು.
Uncategorized
Ambika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಬಹುಮಾನ
ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ.
14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪೆರ್ನೆಯ ನಿವಾಸಿ ಗಿರೀಶ ಗೌಡ ಮತ್ತು ಸುಮಿತ್ರ ದಂಪತಿಯ ಪುತ್ರಿ 8ನೇ ತರಗತಿಯ ಸಾನ್ವಿ ಜಿ, ದರ್ಬೆಯ ನಿವಾಸಿ ಕೆ ಜಿ ಮುರಳೀಧರ ಮತ್ತು ಕೆ ಉಷಾ ಮುರಳೀಧರ ದಂಪತಿಯ ಪುತ್ರಿ 8ನೇ ತರಗತಿಯ ಕೆ ಎಂ ಶಮಿತ ಭಟ್ ಹಾಗೂ ಪಡೀಲ್ ನ ನಿವಾಸಿ ಸಂಜೀವ ರಂಜನ್ ಮತ್ತು ಅರ್ಪಣಾ ಕುಮಾರಿ ದಂಪತಿಯ ಪುತ್ರಿ 8ನೇ ತರಗತಿಯ ಶಾಂಭವಿ ರಂಜನ್,
ಸಂಪ್ಯದ ನಿವಾಸಿ ರವಿಕುಮಾರ ಕೆ ಮತ್ತು ಸುಮಿತ್ರ ಕೆ ದಂಪತಿಯ ಪುತ್ರಿ 8ನೇ ತರಗತಿಯ ನೈನಿಕ ಎ ಆರ್ ಪ್ರಥಮ ಸ್ಥಾನವನ್ನು ಗಳಿಸಿ, ಮಧ್ಯ ಪ್ರದೇಶದಲ್ಲಿ ನಡೆಯಲಿರುವ ಎಸ್ ಜಿ ಎಫ್ ಐ ( ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ) ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
14ರ ವಯೋಮಾನದ ಬಾಲಕರ ವಿಭಾಗದಲ್ಲಿ ಉಪ್ಪಿನಂಗಡಿ ನೆಕ್ಕಿಲಾಡಿಯ ನಿವಾಸಿ ಡಾ.ಸುಪ್ರೀತ್ ಜೋಯಲ್ ಲೋಬೋ ಮತ್ತು ಡಾ. ಶೈನಿ ಪಾಯಸ್ ದಂಪತಿಯ ಪುತ್ರ 7ನೇ ತರಗತಿಯ ಸಂಹಿತ್ ಜೊಸ್ಸಿ ಲೋಬೋ, ಕಾಣಿಯೂರಿನ ನಿವಾಸಿ ಅರವಿಂದ ಕುಮಾರ್ ಕೆ ಮತ್ತು ಜ್ಯೋತಿ ಕುಮಾರಿ ಕೆ ದಂಪತಿಯ ಪುತ್ರ 7ನೇ ತರಗತಿಯ ರತುಲ್ ಅದ್ವೈತ್, ಕುಂಜುರ್ ಪಂಜದ ನಿವಾಸಿ ಶ್ರೀನಿವಾಸ ಮಯ್ಯ ಡಿ ಮತ್ತು ಜಯಲಕ್ಷ್ಮೀ ಎಸ್ ಮಯ್ಯ ದಂಪತಿಯ ಪುತ್ರ 7ನೇ ತರಗತಿಯ ಮಯೂರ್ ಎಸ್ ಮಯ್ಯ ಹಾಗೂ ಕಲ್ಲಾರೆಯ ನಿವಾಸಿ ಪ್ರವೀಣ್ ರೈ ಸಿ ಮತ್ತು ತೃಪ್ತಿ ರೈ ದಂಪತಿಯ ಪುತ್ರ 7ನೇ ತರಗತಿಯ ತ್ರಿನಯ್ ರೈ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.
Uncategorized
Kumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಹಾಗೂ ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಹಾಗೂ ಅವರ ಕುಟುಂಬಗಳನ್ನು ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸುವುದರ ಜೊತೆಗೆ ದೂರು ಸಲ್ಲಿಸುವುದಾಗಿಯೂ ಅವರು ತಿಳಿಸಿದ್ದಾರೆ.
ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸ್ಟಿಂಗ್ ಆಪರೇಷನ್ಗಳ ಹಿಂದೆ ಯಾರಿದ್ದಾರೆ, ಅವುಗಳನ್ನು ಯಾರು ನಡೆಸಿದ್ದಾರೆ ಮತ್ತು ಇದರಲ್ಲಿ ಯಾರ ಪಾತ್ರವಿದೆ ಎಂಬುದನ್ನು ತನಿಖೆಯ ಮೂಲಕ ಪತ್ತೆಹಚ್ಚಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಮೌನವಾಗಿರಬಾರದು: ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರಕ್ಕೆ ಹೆದರುವ ಅಗತ್ಯವಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ಹೋರಾಟದ ಮನೋಭಾವದೊಂದಿಗೆ ಮಾತನಾಡಬೇಕು. ಇಂತಹ ಬೆಳವಣಿಗೆಗಳ ಬಗ್ಗೆ ಮೌನ ವಹಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಹಿಂದೆ ಮಾಜಿ ಮುಖ್ಯಮಂತ್ರಿಯೊಬ್ಬರ ವಿರುದ್ಧ ಸ್ಟಿಂಗ್ ಆಪರೇಷನ್ ನಡೆಸಲಾಗಿತ್ತು. ಬಳಿಕ ರಮೇಶ್ ಜಾರಕಿಹೊಳಿ ಹಾಗೂ ಕೆ.ಎನ್. ರಾಜಣ್ಣ ಅವರ ವಿಚಾರಗಳೂ ಮುನ್ನೆಲೆಗೆ ಬಂದವು. ಇದೀಗ ಸಿದ್ದರಾಮಯ್ಯ ಅವರ ಸರದಿ ಬಂದಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ಸದಾಶಿವನಗರದಲ್ಲಿ ನಿಗಾ ವ್ಯವಸ್ಥೆ ಇದೆ ಎಂಬ ಆರೋಪ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ನೇಮಿಸಿಕೊಂಡು, ಅತ್ಯಾಧುನಿಕ ಉಪಕರಣಗಳ ಮೂಲಕ ಸಚಿವರು ಹಾಗೂ ಇತರರ ಮಾತುಕತೆಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂಬ ಮಾಹಿತಿ ತಮಗೆ ಲಭಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ರಾಜಕೀಯ ನಾಯಕರು ಹಾಗೂ ಸಚಿವರ ಫೋನ್ಗಳನ್ನು ಕದ್ದಾಲಿಸಲಾಗುತ್ತಿದೆ ಎಂಬ ಆರೋಪ ಗಂಭೀರವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಯಲ್ಲೂ ಚರ್ಚೆಯಾಗುತ್ತಿದೆ ಎಂಬ ಮಾಹಿತಿ ಬಂದಿದೆ ಎಂದು ಅವರು ಹೇಳಿದರು.
ಆದರೆ, ಮುಖ್ಯಮಂತ್ರಿ ಸ್ವತಃ ಇಂತಹ ಚಟುವಟಿಕೆಗಳಿಗೆ ಆದೇಶ ನೀಡಿದ್ದಾರೆ ಎಂದು ತಾನು ಹೇಳುತ್ತಿಲ್ಲ. ಇಲಾಖೆಯಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸಮಗ್ರ ತನಿಖೆಯ ಮೂಲಕ ಪರಿಶೀಲಿಸಬೇಕು ಎಂದು ಸ್ಪಷ್ಟಪಡಿಸಿದರು.
ಪೆನ್ಡ್ರೈವ್ ಪ್ರಕರಣದ ಬಗ್ಗೆಯೂ ಪ್ರಶ್ನೆ
2024ರ ಲೋಕಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಮಂಡ್ಯ ಮತ್ತು ಹಾಸನ ಭಾಗಗಳಲ್ಲಿ ವಿಡಿಯೊಗಳನ್ನು ಪೆನ್ಡ್ರೈವ್ಗಳಲ್ಲಿ ಹಂಚಲಾಗಿದೆ ಎಂದು ಹೇಳಿದ ಕುಮಾರಸ್ವಾಮಿ ಅವರು, ವಿಡಿಯೋಗಳಲ್ಲಿ ಇದ್ದ ಮಹಿಳೆಯರ ಮುಖಗಳನ್ನು ಮರೆಮಾಚಲಿಲ್ಲ. ಲೋಕಸಭೆಯ ಇವತ್ತಿನ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಆ ನಾನೂರು ಜನ ಮಹಿಳೆಯರಲ್ಲಿ ಎಷ್ಟು ಜನ ಬಂದು ಕೇಸು ದಾಖಲು ಮಾಡಿದ್ದಾರೆ? ಎಂದು ಪ್ರಶ್ನಿಸಿದರು.
ಆ ವಿಡಿಯೊಗಳನ್ನು ಸಿದ್ಧಪಡಿಸಿದವರು ಯಾರು, ಅವುಗಳನ್ನು ಯಾವ ಸ್ಥಳದಲ್ಲಿ ಸಿದ್ಧಪಡಿಸಲಾಯಿತು ಮತ್ತು ಹಂಚಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಉತ್ತರಿಸಬೇಕು ಎಂದು ಆಗ್ರಹಿಸಿದರು.
ತಮ್ಮ ಕುಟುಂಬದವರ ಬಗ್ಗೆಯೂ ಅವಹೇಳನಕಾರಿ ಸುದ್ದಿಗಳನ್ನು ಪ್ರಸಾರ ಮಾಡಲಾಗಿತ್ತು. ತಮ್ಮ ತಾಯಿಯ ವಿರುದ್ಧವೂ ಆರೋಪಗಳು ಮತ್ತು ಸುದ್ದಿಗಳನ್ನು ಹರಡಲಾಗಿತ್ತು. ಇಂತಹ ಸಂದರ್ಭಗಳಲ್ಲಿಯೂ ತಮ್ಮ ಕುಟುಂಬ ನ್ಯಾಯಾಲಯದ ಮೊರೆ ಹೋಗಿರಲಿಲ್ಲ ಎಂದು ಅವರು ಹೇಳಿದರು.
ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದಕ್ಕೆ ಆಕ್ಷೇಪ
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಯಾವುದೇ ಪ್ರಕರಣದಲ್ಲಿಯೂ ಸತ್ಯಾಸತ್ಯತೆ ನ್ಯಾಯಾಂಗದ ಮೂಲಕ ಹೊರಬರಬೇಕು. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂಬುದು ತಮ್ಮ ನಿಲುವು ಎಂದು ತಿಳಿಸಿದರು.
ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಸಿದ್ದರಾಮಯ್ಯ ಅವರು ನ್ಯಾಯಾಲಯದ ತಡೆಯಾಜ್ಞೆ ಪಡೆಯುವ ಬದಲು ದಿಟ್ಟವಾಗಿ ನಿಂತು ಇಂತಹ ಬೆಳವಣಿಗೆಗಳನ್ನು ಎದುರಿಸಬೇಕು ಎಂದು ಅವರು ಮನವಿ ಮಾಡಿದರು.
ಸಿಬಿಐ ತನಿಖೆಗೆ ಮತ್ತೆ ಒತ್ತಾಯ
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸಿರುವುದನ್ನು ತಾವು ವಿರೋಧಿಸಿಲ್ಲ ಎಂದ ಕುಮಾರಸ್ವಾಮಿ, ಇದೇ ರೀತಿಯ ಗಂಭೀರತೆಯನ್ನು ಇತರ ಪ್ರಕರಣಗಳಲ್ಲಿಯೂ ತೋರಿಸಬೇಕು ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ಗಳ ಹಿಂದೆ ಇರುವವರನ್ನು ಪತ್ತೆಹಚ್ಚಿ, ಆರೋಪಗಳ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಲು ಸಿಬಿಐ ತನಿಖೆ ಅಗತ್ಯವಿದೆ. ಈ ಕುರಿತು ಅಮಿತ್ ಶಾ ಅವರನ್ನು ಭೇಟಿಯಾಗಿ ದೂರು ಸಲ್ಲಿಸುವುದಾಗಿ ಪುನರುಚ್ಚರಿಸಿದರು.
Uncategorized
Lawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ. ಸಂತೋಷ್ ರಾವ್ ಅವರನ್ನು ತನಿಖೆಯಿಂದ ಹೊರಗಿಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಉಲ್ಲೇಖಿಸಿದ ಅಮೃತೇಶ್, ಅವರ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂದು ಹೇಳಿದರು.
ಬೆಂಗಳೂರು: ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ಸುಪ್ರೀಂ ಕೋರ್ಟ್ ಆದೇಶದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಆದರೆ ಈ ತನಿಖೆಯಿಂದ ಪ್ರಕರಣ ತಾರ್ಕಿಕ ಅಂತ್ಯ ಕಾಣುವುದು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಕೀಲ ಅಮೃತೇಶ್ ಅಭಿಪ್ರಾಯಪಟ್ಟಿದ್ದಾರೆ.
ಮಂಗಳವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ‘ವಾಯ್ಸ್ ಆಫ್ ಪಬ್ಲಿಕ್’ ಸಂಘಟನೆ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌಜನ್ಯಾ ಪ್ರಕರಣದ ಮರುತನಿಖೆ, ಸಂತೋಷ್ ರಾವ್ ಪಾತ್ರ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ವಿವಿಧ ಬೆಳವಣಿಗೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಸಂತೋಷ್ ರಾವ್ ಅವರನ್ನು ತನಿಖೆಯಿಂದ ಹೊರಗಿಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಉಲ್ಲೇಖಿಸಿದ ಅಮೃತೇಶ್, ಅವರ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂಬುದು ತಮ್ಮ ವಾದವಾಗಿದೆ ಎಂದು ಹೇಳಿದರು. ಸಿಬಿಐ ತನಿಖೆಯ ವೇಳೆ ಫೋರೆನ್ಸಿಕ್ ವರದಿಗಳಲ್ಲಿ ಸಂತೋಷ್ ರಾವ್ ಅವರ ದೇಹದಲ್ಲಿದ್ದ ಗಾಯಗಳ ಬಗ್ಗೆ ಉಲ್ಲೇಖವಾಗಿತ್ತು ಎಂದು ತಿಳಿಸಿದರು.
ಸಿಬಿಐನ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿದ್ದ ಬಿ.ಆರ್. ಶಿವಾನಂದ ಅವರು ಪ್ರಕರಣದ ವಿಚಾರದಲ್ಲಿ ನಿರ್ದಿಷ್ಟ ಸಂಘಟನೆಗಳ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಅಮೃತೇಶ್ ಆರೋಪಿಸಿದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಸ್ವತಂತ್ರವಾಗಿ ದೃಢೀಕರಿಸಿದ ಮಾಹಿತಿ ಲಭ್ಯವಿಲ್ಲ.
ಕ್ಷೇತ್ರದ ವಿರುದ್ಧ ಅಪಪ್ರಚಾರದ ಆರೋಪ
ಸೌಜನ್ಯಾ ಪ್ರಕರಣವನ್ನು ಮುಂದಿಟ್ಟುಕೊಂಡು ಕೆಲವರು ಹಣ ಸಂಪಾದಿಸಿದ್ದಾರೆ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುವ ಉದ್ದೇಶದಿಂದ ಷಡ್ಯಂತ್ರ ರೂಪಿಸಿದ್ದಾರೆ ಎಂದು ಅಮೃತೇಶ್ ಆರೋಪಿಸಿದರು. ಪ್ರಕರಣದ ಹಿಂದೆ ಎಡಪಂಥೀಯರು ಹಾಗೂ ನಗರ ನಕ್ಸಲರ ಕೈವಾಡವಿದೆ ಎಂಬ ಆರೋಪವನ್ನೂ ಅವರು ಮಾಡಿದರು.
ಬುರುಡೆ ಪ್ರಕರಣದ ಅಂತಿಮ ವರದಿ ಬಹಿರಂಗಪಡಿಸಲು ಆಗ್ರಹ
ಸೌಜನ್ಯಾ ಪ್ರಕರಣದಲ್ಲಿ ಹಿನ್ನಡೆಯಾದ ಬಳಿಕ ಕೆಲವು ಗುಂಪುಗಳು ಬುರುಡೆ ಪ್ರಕರಣವನ್ನು ಮುನ್ನೆಲೆಗೆ ತಂದವು ಎಂದು ಅಮೃತೇಶ್ ಹೇಳಿದರು. ಸರ್ಕಾರದ ವೆಚ್ಚದಲ್ಲಿ ನಡೆದಿದ್ದ ಅನಧಿಕೃತ ಶವಗಳ ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದ ತನಿಖೆಯ ಅಂತಿಮ ವರದಿ ಇನ್ನೂ ಬಹಿರಂಗವಾಗಿಲ್ಲ ಎಂದು ಅವರು ಆಕ್ಷೇಪಿಸಿದರು.
ಚಿನ್ನಯ್ಯ ಆರೋಪಿಸಿರುವ ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣವರ್ ಹಾಗೂ ಯೂಟ್ಯೂಬರ್ ಸಮೀರ್ ಸೇರಿದಂತೆ ಕೆಲವರ ವಿರುದ್ಧ ಪ್ರಕರಣ ದಾಖಲಾಗದಿರುವುದರ ಬಗ್ಗೆಯೂ ಅವರು ಪ್ರಶ್ನೆ ಎತ್ತಿದರು.
ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವುದು ಕಷ್ಟ
ಸೌಜನ್ಯಾ ತಾಯಿ ಕುಸುಮಾವತಿ ಹಾಗೂ ಕೆಲವು ಗ್ಯಾಂಗ್ ಹಣ ಮಾಡುವ ಉದ್ದೇಶದಿಂದ ಕ್ಷೇತ್ರದ ವಿರುದ್ಧ ಕುತಂತ್ರ ನಡೆಸುತ್ತಿದೆ. ಕೆಲವು ವಿಷಯ ಮುಚ್ಚಿಟ್ಟು ಅವರು ಸುಪ್ರೀಂಕೋರ್ಟ್ಗೆ ಹೋಗಿದ್ದಾರೆ. ಸುಪ್ರಿಂಕೋರ್ಟ್ ಸಂಪೂರ್ಣವಾಗಿ ಹೊಸದಾಗಿ ತನಿಖೆ ಮಾಡಲು ಎಸ್ಐಟಿ ರಚನೆ ಮಾಡಲು ಸೂಚಿಸಿದೆ. ಆದರೆ ಮೂರು ತಿಂಗಳಲ್ಲಿ ಪ್ರಕರಣದ ತೀರ್ಪು ಬರಲು ಸಾಧ್ಯವಿಲ್ಲ. 14 ವರ್ಷದ ಸಾಕ್ಷ್ಯಾಧಾರಗಳು ಈಗ ಸಿಗಲು ಸಾಧ್ಯವಿಲ್ಲ. ಈ ಗ್ಯಾಂಗ್ನ ನಿಜವಾದ ಟಾರ್ಗೆಟ್ ಮಲ್ಲಿಕ್ ಜೈನ್, ಧೀರಜ್ ಜೈನ್, ಉದಯ್ ಜೈನ್ ಅಲ್ಲ. ಬದಲಾಗಿ ಕ್ಷೇತ್ರವೇ ಆಗಿದೆ ಎಂದು ಅಮೃತೇಶ್ ತಿಳಿಸಿದ್ದಾರೆ.
ಹಿಂದಿನ ಹೇಳಿಕೆಗಳನ್ನು ಉಲ್ಲೇಖಿಸಿದ ವಕೀಲ
ಸೌಜನ್ಯಾ ಪ್ರಕರಣ ನಡೆದು 14 ವರ್ಷಗಳಾಗಿವೆ ಎಂದು ತಿಳಿಸಿದ ಅಮೃತೇಶ್, ಆರಂಭದಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಮೃತದೇಹ ಪತ್ತೆಯಾದ ನಂತರ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು. ನಂತರ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವರ್ಗಾಯಿಸಲಾಗಿತ್ತು ಎಂದು ವಿವರಿಸಿದರು.
ಘಟನೆಯ ಬಳಿಕ ಸೌಜನ್ಯಾ ಅವರ ಕುಟುಂಬದವರು ಬೆಳ್ತಂಗಡಿಯಲ್ಲಿ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಧರ್ಮಸ್ಥಳದಿಂದ ಯಾವುದೇ ಒತ್ತಡ ಅಥವಾ ಬೆದರಿಕೆ ಇರಲಿಲ್ಲ ಎಂದು ಹೇಳಿದ್ದರೆಂದು ಅಮೃತೇಶ್ ಉಲ್ಲೇಖಿಸಿದರು. ಬಳಿಕ ಕೆಲವು ಗುಂಪುಗಳು ಧಾರ್ಮಿಕ ಗುರುಗಳು ಹಾಗೂ ಮಠಾಧೀಶರನ್ನು ಗುರಿಯಾಗಿಸಿಕೊಂಡು ಕ್ಷೇತ್ರದ ವಿರುದ್ಧ ಆರೋಪಗಳನ್ನು ಹರಡಿವೆ ಎಂದು ದೂರಿದರು.
ಸಂತೋಷ್ ರಾವ್ ಅವರನ್ನು ಪ್ರಕರಣದಿಂದ ಬಿಡುಗಡೆಗೊಳಿಸಲು ಸಾಕಷ್ಟು ಹಣ ಖರ್ಚು ಮಾಡಿರುವುದಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರೇ ಹೇಳಿದ್ದಾರೆ ಎಂದೂ ಅಮೃತೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವಕೀಲ ಸದಾನಂದ ಗೌಡ ಉಪಸ್ಥಿತರಿದ್ದರು.
-
ದಕ್ಷಿಣ ಕನ್ನಡ15 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ13 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು7 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ14 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized13 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ಬಿಗ್ ನ್ಯೂಸ್14 hours agoG.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
-
ನಿಧನ ವಾರ್ತೆ13 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಕಾರ್ಯಕ್ರಮಗಳು6 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ


















