Connect with us

ಸ್ಥಳೀಯ

ಆಶಾ ತಿಮ್ಮಪ್ಪಗೌಡರಂತಹ ಮಹಿಳಾ ಅಭ್ಯರ್ಥಿಯನ್ನು ಕೊಡುವ ಮೂಲಕ ಬಿಜೆಪಿಯು ಮಹಿಳಾ ಸಶಕ್ತೀಕರಣವನ್ನು ಅರ್ಥಪೂರ್ಣವಾಗಿಸಿದೆ – ಸಚಿವೆ ಭಾರತಿ ಪವಾರ್

Published

on

Ad Widget

Ad Widget

Ad Widget

Ad Widget

ಪುತ್ತೂರು, ಎ 26 : ಆಶಾ ತಿಮ್ಮಪ್ಪಗೌಡರಂತಹ ಮಹಿಳಾ ಅಭ್ಯರ್ಥಿಯನ್ನು ಕೊಡುವ ಮೂಲಕ ಬಿಜೆಪಿಯು ಮಹಿಳಾ ಸಶಕ್ತೀಕರಣವನ್ನು ಅರ್ಥಪೂರ್ಣವಾಗಿಸಿದೆ. ಬಿಜೆಪಿಯು ಕೇವಲ ಭಾಷಣಗಳಿಗೆ ಸೀಮಿತವಾಗಿದೆ ಕೆಲಸ ಮಾಡಿತೋರಿಸುವ ಕಾರ್ಯವನ್ನು ಮಾಡುತ್ತಿದೆ. ಶಿಕ್ಷಣ, ಸಮಾಜಿಕ, ಆರ್ಥಿಕ ಹಾಗೂ ರಾಜಕೀಯ ರಂಗದಲ್ಲಿ ಮಹಿಳೆಯರ ಸಬಲೀಕರಣವಾಗಬೇಕಾಗಿದೆ. ಮಹಿಳೆಯರಿಗೆ ಸೇವೆ ನೀಡುವ ಅವಕಾಶ ಸಿಗುವಾಗ ಅದನ್ನು ಕಳೆದುಕೊಳ್ಳಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ. ಭಾರತಿ ಪವರ್ ಹೇಳಿದರು.
ಬುಧವಾರ ಪುತ್ತೂರು ಜೈನ ಭವನದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾಕ್ಷೇತ್ರದ ಮಹಿಳಾ ಸಮಾವೇಶದಲ್ಲಿ ಮಾತನಾಡಿದರು.

Ad Widget

Ad Widget

Ad Widget

Ad Widget

ಮೋದಿ ಸಂಪುಟದಲ್ಲಿ ಕರ್ನಾಟಕದ ಶೋಭಾ ಕರಂದ್ಲಾಜೆ ಸಹಿತ ಹನ್ನೊಂದು ಮಹಿಳೆಯರು ಮಂತ್ರಿಗಳಾಗಿರುವುದು ಮಹಿಳೆಯರಿಗೆ ಪ್ರಧಾನಿಗಳು ನೀಡಿದ ಗೌರವವಾಗಿದೆ. ಮೋದಿಯವರು ಮಹಿಳೆಯರ ಬದುಕು ಹಸನಾಗಿಸಲು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಆದಿವಾಸಿ ಮಹಿಳೆಯಾದ ದ್ರೌಪತಿ ಮುರ್ಮು ಅವರನ್ನು ಬಿಜೆಪಿಯು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿಸಿದಾಗ ಕಾಂಗ್ರೆಸ್ ವಿರೋಧಿಸುವ ಅಗತ್ಯವೇನಿತ್ತು? ಅದನ್ನು ಮಹಿಳೆಯರು ಕಾಂಗ್ರೆಸ್ ಪರ ಮತಯಾಚನೆಗೆ ಬರುವವರಲ್ಲಿ ಪ್ರಶ್ನಿಸಬೇಕಾಗಿದೆ ಎಂದು ತಿಳಿಸಿದರು.

Ad Widget

Ad Widget alt="Ad Widget"/>

Ad Widget

ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಮಾತನಾಡಿ ಬಿಜೆಪಿ ಸರ್ಕಾರ ಬಂದ ಮೇಲೆ ಮಹಿಳೆ ಹಾಗೂ ಮಕ್ಕಳು ನಿರ್ಭೀತವಾಗಿ ರಸ್ತೆಯಲ್ಲಿ ಓಡಾಡುವಂತಾಗಿದೆ. ಹಿಂದುತ್ವಕ್ಕೆ ಧೈರ್ಯ ತುಂಬುವ ಕಾರ್ಯವನ್ನು ಬಿಜೆಪಿ ಮಾಡುತ್ತಾ ಬಂದಿದೆ. ಬಿಜೆಪಿಯ ಜನಪ್ರತಿನಿಧಿಗಳು ಸರ್ವಸ್ವವನ್ನೂ ಸಮಾಜಕ್ಕಾಗಿ ಅರ್ಪಣೆ ಮಾಡಿ ಕೆಲಸ ಕಾರ್ಯ ಮಾಡುತ್ತಿದ್ದಾರೆ. ಮಹಿಳೆಯರು ಮನೆ ಮನೆಗೆ ತೆರಳಿ ಸರ್ಕಾರದ ಯೋಜನೆಯನ್ನು ತಿಳಿಸಿ ಮನಪರಿವರ್ತನೆ ಮಾಡುವ ಮೂಲಕ ಎಲ್ಲರೂ ಒಟ್ಟಾಗಿ ಪುತ್ತೂರನ್ನು ಗೆಲ್ಲಿಸುವ ಅಗತ್ಯವಿದೆ ಎಂದರು.

Ad Widget

Ad Widget <> Ad Widget

ವಿಧಾನ ಪರಿಷತ್ತು ಸದಸ್ಯ ಪ್ರತಾಪ ಸಿಂಹ ನಾಯಕ್ ಮಾತನಾಡಿ 2023ರ ವಿಧಾನ ಸಭೆ ಚುನಾವಣೆಯ ಗೆಲುವು 2024ರ ಲೋಕಸಭೆ ಚುನಾವಣೆಯ ಪಂಚಾಂಗವಾಗಲಿದೆ. ಮಹಿಳೆಯರಿಗೆ ಅತ್ಯಂತ ಹೆಚ್ಚಿನ ಸ್ಥಾನವನ್ನು ನೀಡುವ ಕಾರ್ಯ ಮಾಡಲಾಗಿದೆ. ಮಹಿಳೆಗೆ ಸ್ಥಾನಮಾನ ನೀಡಿದಾಗ ಅಪಹಾಸ್ಯ ಮಾಡುವ ಕಾರ್ಯ ಸರಿಯಲ್ಲ. ಜಿಲ್ಲೆಯ ಎರಡು ಕ್ಷೇತ್ರಕ್ಕೆ ಮಹಿಳಾ ಅಭ್ಯರ್ಥಿಯನ್ನು ನೀಡುವ ಮೂಲಕ ಮಹಿಳೆಯರಿಗೆ ಆಧ್ಯತೆ ನೀಡುವ ಕಾರ್ಯವನ್ನು ಮಾಡಲಾಗಿದೆ. ಸಾಮಾನ್ಯ ಕುಟುಂಬದಿಂದ ಬಂದ ಆಶಾ ತಿಮ್ಮಪ್ಪ ಗೌಡ ಅವರಿಗೆ ಈ ಬಾರಿ ಅವಕಾಶ ನೀಡಲಾಗಿದೆ. ಮಹಿಳೆಯರಿಗೆ ಸಮಾನ ಅವಕಾಶ ಸಿಗಬೇಕೆಂಬ ಭಾವನೆ ಬಿಜೆಪಿಯಲ್ಲಿ ಹಿಂದಿನಿಂದಲೂ ಗಟ್ಟಿಯಾಗಿದೆ ಎಂದು ತಿಳಿಸಿದರು.

ಪುತ್ತೂರು ಶಾಸಕ ಸಂಜೀವ ಮಠಂದೂರು, ರಾಷ್ಟ್ರೀಯ ಮಹಿಳಾ ಕಾರ್ಯಕಾರಿಣಿ ಸದಸ್ಯೆ ಬಿಂದು ಹರೀಶ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚಣಿಲ ತಿಮ್ಮಪ್ಪ ಶೆಟ್ಟಿ, ವಿಭಾಗ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಜಗನ್ನಿವಾಸ್ ರಾವ್, ಚುನಾವಣಾ ಸಂಚಾಲಕ ಅಪ್ಪಯ್ಯ ಮಣಿಯಾಣಿ, ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ರಾಮದಾಸ್ ಬಂಟ್ವಾಳ, ಧನಲಕ್ಷ್ಮೀ ಗಟ್ಟಿ, ಡಾ. ಮಂಜುಳಾ ರಾವ್, ಜೀವಂದರ್ ಜೈನ್, ಸೇವಂತಿ ಶ್ರೀಯಾನ್, ತ್ರಿವೇಣಿ ಪೆರ್ವೊಡಿ ಮತ್ತಿತರರು ಉಪಸ್ಥಿತರಿದ್ದರು.

Ad Widget

Ad Widget

ಯಶಸ್ಸಿನಿ ಶಾಸ್ತ್ರೀ ನೆಕ್ಕರೆ ಪ್ರಾರ್ಥಿಸಿದರು. ನಗರ ಮಹಿಳಾ ಮೋರ್ಚಾದ ಅಧ್ಯಕ್ಷೆ ಶರಾವತಿ ರವಿನಾರಾಯಣ ಸ್ವಾಗತಿಸಿದರು. ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಪ್ರಸ್ತಾವನೆಗೈದರು. ಗೌರಿ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಕ್ರೀಡೆ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!