Connect with us

ಪುತ್ತೂರು

ಸೌಮ್ಯ ಭಟ್, ಕಾರ್ತಿಕ್ ಮೇರ್ಲ, ಪ್ರವೀಣ್ ನೆಟ್ಟಾರು ನೆನಪಿಸಿದ ಪಕ್ಷೇತರ ಅಭ್ಯರ್ಥಿ ಪುತ್ತಿಲ ಪ್ರಣಾಳಿಕೆಯಲ್ಲಿ ಏನೇನಿದೆ ಗೊತ್ತೇ?

Published

on

Ad Widget

Ad Widget

Ad Widget

Ad Widget

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಚಲನ ಮೂಡಿಸಿರುವ ಅರುಣ್ ಕುಮಾರ್ ಪುತ್ತಿಲರವರು ಪುತ್ತೂರಿನ ಸರ್ವಾಂಗೀಣ ಪ್ರಗತಿಗೆ ಹಲವು ಮಹತ್ವಕಾಂಕ್ಷಿ ಯೋಜನೆಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಎ .26 ರಂದು ದರ್ಬೆ ಸುಭದ್ರ ಕಲ್ಯಾಣ ಮಂಟಪದ ಬಳಿ ಬಿಡುಗಡೆ ಮಾಡಿದ್ದಾರೆ. ಒಟ್ಟು 31 ಅಂಶಗಳುಳ್ಳ ಪ್ರಣಾಳಿಕೆಯನ್ನು ಪುತ್ತೂರಿನ ಪ್ರಗತಿಪರ ಕೃಷಿಕ, ಮೋದಿ ಜತೆ ಕೃಷಿ ಸಂವಾದ ನಡೆಸಿದ ಖ್ಯಾತಿಯ ಸೇಡಿಯಾಪು ಜನಾರ್ಧನ ಭಟ್ ಬಿಡುಗಡೆ ಮಾಡಿದರು.
ಭ್ರಷ್ಟಚಾರ, ಲಂಚ ರಹಿತ ಜನಸ್ನೇಹಿ ಅಡಳಿತ ನೀಡುವ ಆಶಯವನ್ನು ಹೊಂದಿರುವ ಪ್ರಣಾಳಿಕೆಯಲ್ಲಿ ಧಾರ್ಮಿಕ ಶ್ರಧ್ದಾ ಕೇಂದ್ರಗಳ ಅಡಿಸ್ಥಳ ಮಂಜೂರತಿ ಹಾಗೂ ಅಭಿವೃದ್ದಿಯ ಚಿಂತನೆಯನ್ನು ಹಂಚಿಕೊಳ್ಳಲಾಗಿದೆ. ಪುತ್ತೂರು ಜಿಲ್ಲಾ ಕೇಂದ್ರವಾಗಿಸುವುದು, ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಅಶ್ವಾಸನೆಯನ್ನು ಪ್ರಣಾಳಿಕೆ ಹೊಂದಿದೆ.
ಕೋಟಿ ಚೆನ್ನಯ ಥೀಮ್ ಪಾರ್ಕ್, ದಿ. ಸೌಮ್ಯಭಟ್ ಸ್ಮರಣಾರ್ಥವಾಗಿ ಯುವತಿಯರಿಗೆ ಸ್ವ- ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆ, ದಿ, ಕಾರ್ತಿಕ್ ಮೇರ್ಲ ಸ್ಮರಣಾರ್ಥವಾಗಿ ಸರಕಾರಿ ಐಟಿಐ ಸ್ಥಾಪನೆ ಹಾಗೂ ದಿ. ಪ್ರವೀಣ್ ನೆಟ್ಟಾರ್ ಸ್ಮರಣಾರ್ಥವಾಗಿ ಯುವಕರಿಗೆ ಸ್ವ-ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು.
ಪ್ರಣಾಳಿಕೆಯಲ್ಲಿರುವ 31 ಅಂಶಗಳು

Ad Widget

Ad Widget

Ad Widget

Ad Widget
  1. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ ಲಂಚ ರಹಿತ ಜನಸ್ನೇಹಿ ಆಡಳಿತ ವ್ಯವಸ್ಥೆ ಜನ ವಿರೋಧಿ ಕಾನೂನುಗಳ ರದ್ದತಿಗೆ ಕ್ರಮ
  2. ಪುತ್ತೂರನ್ನು ಜಿಲ್ಲಾ ಕೇಂದ್ರವಾಗಿಸಲು ಹಾಗೂ ಸಂಬಂಧಿಸಿದ ಎಲ್ಲಾ ವ್ಯವಸ್ಥೆಗಳ ಸ್ಥಳಾಂತರಕ್ಕೆ ಕ್ರಮ
  3. ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಎಲ್ಲಾ ಕ್ರಮ.
  4. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ಕ್ರಮ
  5. ವಿಟ್ಲವನ್ನು ತಾಲೂಕು ಕೇಂದ್ರ ಮಾಡುವ ಸಂಕಲ್ಪ- ಶಾಸಕರ ಕಛೇರಿ ಪ್ರಾರಂಭ ಹಾಗೂ ವಾರದಲ್ಲಿ ಎರಡು ದಿನ ಈ ಕಛೇರಿಯಿಂದ ಕಾರ್ಯ ನಿರ್ವಹಣೆ
  6. 400KV ಉಡುಪಿ – ಕಾಸರಗೋಡು ವಿದ್ಯುತ್ ಮಾರ್ಗವು ರೈತರ ಜಮೀನಿನಲ್ಲಿ ಹಾದು ಹೋಗದಂತೆ ಕ್ರಮ,
  7. ಅಡಿಕೆ, ತಂಗು, ರಬ್ಬರ್, ಕೋಕೋ ಮುಂತಾದ ಬೆಳೆಗಳ ಮೌಲ್ಯವರ್ಧನೆ, ರೋಗ ನಿರ್ವಹಣೆ, ಸಂಶೋಧನೆಗೆ ಕ್ರಮ
  8. ವ್ಯವಸ್ಥಿತವಾಗಿ ಕ್ಷೇತ್ರದಾದ್ಯಂತ ಅಣೆಕಟ್ಟುಗಳ ನಿರ್ಮಾಣ, ನಿರ್ವಹಣೆಗೆ ಕ್ರಮ
    9, 11E ನಕ್ಷೆ ಶುಲ್ಕ ಕಡಿತ, ಅಕ್ರಮ ಸಕ್ರಮ ಪ್ಲಾಟಿಂಗ್ ಸಮಸ್ಯೆಗೆ ಪರಿಹಾರ, ಅಕ್ರಮ ಸಕ್ರಮ, ಕುಮ್ಮಿ ಹಕ್ಕು 944 94CC ಮಂಜೂರಾತಿಗೆ ಕ್ರಮ, ಭೂ ಪರಿವರ್ತನೆ ನಿಯಮ ಸರಳೀಕರಣ ಮತ್ತು ಶೀಘ್ರ ಅನುಮತಿಗೆ ವ್ಯವಸ್ಥೆ
  9. ನಗರ ಪ್ರದೇಶದಲ್ಲಿ ಕಟ್ ಕನ್ವರ್ಷನ್ ಸಮಸ್ಯೆ ಪರಿಹಾರ, ನಿವೇಶನ ರಹಿತರಿಗೆ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಆದ್ಯತೆ ಹಾಗೂ ಖಾಸಗಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಟ್ರಾಫಿಕ್ ಸಮಸ್ಯೆಗೆ ಪರಿಹಾರ
  10. ಪ್ರಾಕೃತಿಕ ಸಮತೋಲನಕ್ಕೆ ಪರಿಸರ ಸ್ನೇಹಿ ಸಸ್ಯಗಳ ನಾಟಿ ಬಗ್ಗೆ ಕ್ರಮ
  11. ನಗರ ಪ್ರದೇಶಕ್ಕೆ ಸೂಕ್ತ ಒಳಚರಂಡಿ ವ್ಯವಸ್ಥೆ
  12. ಕ್ಷೇತ್ರದಾದ್ಯಂತ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಕ್ರಮ
  13. ತುಳು ನಾಡಿನ ಕ್ರೀಡೆ, ಕಲೆ, ಸಂಸ್ಕೃತಿ ಪ್ರೋತ್ಸಾಹಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪನೆ, ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನ
  14. ಉಚಿತ ಶಿಕ್ಷಣ ಒದಗಿಸುವ ಸರಕಾರಿ ಶಾಲೆಗಳ ಮತ್ತು ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮ
  15. ಕ್ಷೇತ್ರದ ವ್ಯಾಪ್ತಿಯಲ್ಲಿ ಐಟಿ ಹಬ್ ಸ್ಥಾಪಿಸಿ, ತಾಲ್ಲೂಕು ಕೇಂದ್ರದಲ್ಲಿ ಉದ್ಯೋಗ ಮೇಳ ಯೋಜನೆಗೆ ಕ್ರಮ
  16. ಹೋಬಳಿಗೊಂದು ಕೈಗಾರಿಕಾ ವಲಯ ರಚಿಸಿ, ವಿವಿಧ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ
  17. ದೇಶೀಯ ಗೋ ತಳಿಗಳ ಸಂರಕ್ಷಣೆ, ಗೋಶಾಲೆಗಳ ಸ್ಥಾಪನೆ, ಪಶುಪಾಲನೆಗೆ ಪ್ರೋತ್ಸಾಹ
  18. ಎಂಡೋಸಲ್ಫಾನ್ ಸಂತ್ರಸ್ತರ ಆರೈಕೆ, ಕಲ್ಯಾಣಕ್ಕೆ ಸೂಕ್ತ ಯೋಜನೆ
    20.ರಿಕಾ/ಟ್ಯಾಕ್ಸಿ ವಾಹನಗಳ ಚಾಲಕ ಮಾಲಕರ ಸಮಸ್ಯೆಗಳಿಗೆ ಪರಿಹಾರ
  19. ಪುತ್ತೂರು ತಾಲೂಕು ಕೇಂದ್ರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ
  20. ಕೋಟಿ ಚೆನ್ನಯ ಥೀಮ್ ಪಾರ್ಕ್ ನಿರ್ಮಾಣ
    23.ವಿಟ್ಲ ಉಪ್ಪಿನಂಗಡಿಯಲ್ಲಿ ಅಗ್ನಿಶಾಮಕ ಠಾಣೆ ರಚನೆಗೆ ಕ್ರಮ
    24.ಸುಸಜ್ಜಿತ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಾಣ ಹಾಗೂ ಕ್ರೀಡಾಳುಗಳ ತರಬೇತಿಗೆ ಸಮರ್ಪಕ ವ್ಯವಸ್ಥೆ
    25.ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸೂಕ್ತ ವ್ಯವಸ್ಥೆ

26.ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಡಿಸ್ಥಳ ಮಂಜೂರಾತಿ, ಅಭಿವೃದ್ಧಿಗೆ ಸೂಕ್ತ ಕ್ರಮ

Ad Widget

Ad Widget alt="Ad Widget"/>

Ad Widget
  1. ದಿ. ಸೌಮ್ಯಭಟ್ ಸ್ಮರಣಾರ್ಥವಾಗಿ ಯುವತಿಯರಿಗೆ ಸ್ವ- ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆ
    28.ದಿ, ಕಾರ್ತಿಕ್ ಮೇರ್ಲ ಸ್ಮರಣಾರ್ಥವಾಗಿ ಸರಕಾರಿ ಐಟಿಐ ಸ್ಥಾಪನೆ
    29.ದಿ. ಪ್ರವೀಣ್ ನೆಟ್ಟಾರ್ ಸ್ಮರಣಾರ್ಥವಾಗಿ ಯುವಕರಿಗೆ ಸ್ವ-ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆ ಮತ್ತು ಸೈನ್ಯಕ್ಕೆ ಸೇರಲು ಬೇಕಾದ ತರಬೇತಿಗೆ ವ್ಯವಸ್ಥೆ
    30.ಸರಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ, ಶಿಕ್ಷಣ ಇಲಾಖೆಯಲ್ಲಿ ಅತಿಥಿ ಉಪನ್ಯಾಸಕರು, ಗ್ರಾಮ ಸಹಾಯಕರ ಖಾಯಾಮತಿ ಬಗ್ಗೆ ಕ್ರಮ
  2. ಯುವಕರ, ಯುವತಿಯರ, ಮಹಿಳೆಯರ, ಶ್ರಮಜೀವಿಗಳ, ರೈತರ, ಹಿರಿಯರ, ಎಲ್ಲಾ ಸಮಸ್ಯೆಗಳಿಗೆ ಸಹಾಯವಾಣಿ (Help Line) ಮೂಲಕ ದಿನದ 24 ಗಂಟೆಯೂ ಸ್ಪಂದನೆ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಹಿಂದಾರು,, ಸೇಡಿಯಾಪು ಜನಾರ್ದನ ಭಟ್, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ ಸತೀಶ್ ಕುಮಾರ್, ನಿವೃತ್ತ ತಹಸೀಲ್ದಾರ್ ಮೋನಪ್ಪ ಪುರುಷ, ನಿವೃತ್ತ ಸೇನಾನಿ ಚಂದಪ್ಪ ಮೂಲ್ಯ, ಕುಶಾಲಪ್ಪ ಗೌಡ ಬಳಕ, ರಾಜಶೇಖರ್ ಉದ್ಯಮಿ ಬನ್ನೂರು, ನಗರ ಯುವ ಮೋರ್ಚಾದ ಮಾಜಿ ಅಧ್ಯಕ್ಷ ಪ್ರವೀಣ್ ಭಂಡಾರಿ, ಮರದಮುತ್ತು ಕೌಡಿಚ್ಚಾರ್, ಪಡೂರು ಶ್ರೀರಾಮ ಯುವಕ ಮಂಡಲದ ಲೋಕೇಶ್, ಅರುಣ್ ಇಂಡಸ್ಟ್ರೀಸ್ ಅರುಣ್ ಕುಮಾರ್ ರೈ ಡಿಂಬ್ರಿ, ಸಾಯಿಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪ್ರಣಾಳಿಕೆ ಸಿದ್ಧಪಡಿಸುವಲ್ಲಿ ಸತೀಶ್ ರೈ ನೀರ್ಪಾಡಿ, ಪ್ರಮೋದ್ ರೈ, ಮನ್ನಥ ಶೆಟ್ಟಿ ಸಹಕರಿಸಿದರು
Ad Widget
Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!