Connect with us

ಪುತ್ತೂರು

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಈ ಬಗ್ಗೆ ಯಾರಿಗೂ ಸಂಶಯ ಬೇಡ – ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ

Published

on

Ad Widget

Ad Widget

Ad Widget

Ad Widget

ವಿಟ್ಲ, ಎ 27 : ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಈ ಬಗ್ಗೆ ಯಾರಿಗೂ ಸಂಶಯ ಬೇಡ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ನಾಲ್ಕು ಗ್ಯಾರಂಟಿ ಯೋಜನೆಯು ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಯಾಗುತ್ತದೆ. ಈಗಾಗಲೇ ಕಾರ್ಯಕರ್ತರು ಎಲ್ಲಾ ಮನೆಗಳಿಗೂ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡು ವಿತರಣೆ ಮಾಡುತ್ತಿದ್ದು, ತಾರತಮ್ಯ ಮಾಡದೆ ಬಿಜೆಪಿಗರ ಮನೆಗಳಿಗೂ ಕಾರ್ಡ್ ವಿತರಿಸಿ. ನಮ್ಮ ತಳಮಟ್ಟದ ಕಾರ್ಯಕರ್ತರನ್ನು ಬಲಿಷ್ಟಗೊಳಿಸುವ ಕೆಲಸವಾಗಬೇಕು. ನಿಜ ವಿಚಾರ ಹೇಳಿ ಜನರ ಮನಸ್ಸು ಪರಿವರ್ತನೆ ಮಾಡುವ ಕೆಲಸವಾಗಬೇಕು. ಕಾರ್ಯಕರ್ತ ಪ್ರತಿಯೊಂದು ಮನೆಗಳಿಗೆ ತೆರಳಿ ಪಕ್ಷದ ಪ್ರಣಾಳಿಕೆ ಬಗ್ಗೆ ತಿಳಿಹೇಳುವ ಕಾರ್ಯವಾಗಬೇಕು. ಬೆಂಗಳೂರು ಬಿಟ್ಟರೆ ಅತಿ ಹೆಚ್ಚು ತೆರಿಗೆ ಪಾವತಿಸುವ ಪ್ರದೇಶವೆಂದರೆ ಅದು ಮಂಗಳೂರು. ಆದರೆ ನಮ್ಮಲ್ಲಿ ಹೇಳುವಂತಹ ಅಭಿವೃದ್ಧಿ ಏನು ಆಗಿಲ್ಲ. ಪುತ್ತೂರಿಗೆ ಅತಿ ಹೆಚ್ಚು ಅಗತ್ಯವಿರುವ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಕೆಲಸ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗಿಲ್ಲ. ನಮ್ಮ ಧರ್ಮವನ್ನು ಪ್ರೀತಿಸಿ ಅನ್ಯಧರ್ಮವನ್ನು ಗೌರವಿಸುವ ಮನಸ್ಸು ನಮ್ಮದಾಗಬೇಕು. ನಾನು ಯಾವತ್ತೂ ಜಾತಿ ಭೇದ ಮಾಡಿಲ್ಲ. ನಾನು ಧರ್ಮದ ಆಧಾರದಲ್ಲಿ ಕೆಲಸ ಮಾಡಿಲ್ಲ. ಮಾನವೀಯತೆಯ ಅಡಿಯಲ್ಲಿ ಕೆಲಸ ಮಾಡಿದ್ದೇನೆ. ಇದು ವರ್ಷದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿಯ ಸಾಧನೆ ಶೂನ್ಯವಾಗಿದೆ. ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಹಿಂದುತ್ವವನ್ನು ಹೇಳಿಕೊಂಡು ಮತ ಪಡೆಯುವ ಕೆಲಸ ಮಾಡುತ್ತಿದ್ದಾರೆ. ನಿಮ್ಮ ಘನತೆ ಗೌರವಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ. ವ್ಯತ್ಯಾಸಗಳು ಎಲ್ಲ ಕಡೆಯಲ್ಲಿದೆ ಅದನ್ನು ಸರಿಪಡಿಸಿಕೊಂಡು ಮುನ್ನಡಿಯೋಣ. ಕಾಂಗ್ರೆಸ್ ಗೆಲುವಿಗೆ ಎಲ್ಲರೂ ಸಹಕರಿಸಿ ಎಂದು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಶ್ರೀ ರಾಜಾರಾಮ್ ಕೆಬಿಯವರ ನೇತೃತ್ವದಲ್ಲಿ ನಡೆದ ಇಡ್ಕಿದು ವಲಯ ಕಾಂಗ್ರೆಸ್ ಸಮಿತಿ ಚುನಾವಣಾ ಪ್ರಚಾರ ಸಭೆಯಲ್ಲಿ ಇಡ್ಕಿದು ಸೇವಾ ಸಹಕಾರಿ ಉರಿಮಜಲ್ ನ ಬಳಿ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

Ad Widget

Ad Widget

Ad Widget

Ad Widget

ಪ್ರಾಸ್ತಾವಿಕ ಮಾತನಾಡಿದ ಬ್ಲಾಕ್ ಅಧ್ಯಕ್ಷರಾದ ರಾಜಾರಾಮ್ ಕೆಬಿ ಯವರು ಅಶೋಕ್ ಕುಮಾರ್ ರೈ ಓರ್ವ ಸಮರ್ಥ ಅಭ್ಯರ್ಥಿ. ಪ್ರತಿಯೋರ್ವ ಬಡವನ ಕಣ್ಣೀರು ಒರೆಸುವ ಮಹಾ ಕಾರ್ಯವನ್ನು ಮಾಡಿದ್ದಾರೆ. ನಾವು ಈಗಾಗಲೇ ಚುನಾವಣೆಗೆ ಸನ್ನದ್ಧರಾಗಿದ್ದೇವೆ. ಕಾಂಗ್ರೆಸ್ ಸರ್ಕಾರ ಜನರಿಗೆ ಅನಿವಾರ್ಯ. ಸಮಾನತೆ, ಸೌಹಾರ್ದತೆಯ ಸಂದೇಶ ಸಾರಿದ ಕಾಂಗ್ರೆಸ್ ಜನರಿಗೆ ಬೇಕಾಗಿದೆ. ಹಾಗಾಗಿ ಅಶೋಕ್ ಕುಮಾರ್ ರೈರನ್ನು ಪ್ರಚಂಡ ಮತದಿಂದ ಭರ್ಜರಿಯಾಗಿ ಗೆಲ್ಲಿಸೋಣ ಎಂದರು.

Ad Widget

Ad Widget alt="Ad Widget"/>

Ad Widget

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್ ಮಾತನಾಡಿ ನಮ್ಮ ಅಭ್ಯರ್ಥಿ ಅಶೋಕ್ ಕುಮಾರ್ ರೈ ರವರು ಬಿಜೆಪಿಯಲ್ಲಿ ಇದ್ದ ಸಂದರ್ಭದಲ್ಲಿ ಕೋಮುವಾದಿ, ಜಾತಿವಾದಿಯಾಗಿರಲಿಲ್ಲ. ತನ್ನ ಸಂಪಾದನೆಯ ಒಂದಂಶವನ್ನು ಬಡವರ್ಗಕ್ಕೆ ನೀಡುವ ಕೆಲಸ ಅವರ ಟ್ರಸ್ಟ್ ನ ಮುಖಾಂತರ ಮಾಡುತ್ತಿದ್ದಾರೆ, ಮನುಷ್ಯನಿಗೆ ಶ್ರೀಮಂತಿಕೆ ಜೊತೆಗೆ ಹೃದಯ ಶ್ರೀಮಂತಿಕೆ ಬೇಕು. ಅದು ಇರುವ ಮಹಾ ಮಾನವಾತವಾದಿ ಶ್ರೇಷ್ಠ ಅಭ್ಯರ್ಥಿ ಅಶೋಕ್ ರೈ. ಮೇ 10ರಂದು ನಮಗೆಲ್ಲರಿಗೊಂದು ಸುದಿನ. ನಮ್ಮ ಭವಿಷ್ಯ ನಿರ್ಧರಿಸುವ ದಿನವಾಗಿದೆ. ನಮ್ಮ ದುಃಖ ಯಾತನೆಗೆ ಉತ್ತರಕೊಡುವ ದಿನವಾಗಿದೆ. ಕಾಂಗ್ರೆಸ್ ಗೆಲುವಿಗೆ ಎಲ್ಲರೂ ಒಟ್ಟಾಗಿ ಸಹಕರಿಸಬೇಕು ಎಂದರು.

Ad Widget

Ad Widget <> Ad Widget

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಉಸ್ತುವಾರಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ ಮಾತನಾಡಿ ನಮ್ಮ ಅಭ್ಯರ್ಥಿ ಗೆಲುವಾದರೆ ಆಗ ನಮ್ಮ ತಳಪಟ್ಟದ ಕಾರ್ಯಕರ್ತ ನಾಯಕನಾದಂತೆ. ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸುವ ವ್ಯಕ್ತಿ ನಮ್ಮ ನಾಯಕನಾಗಬೇಕಾಗಿರೋದು ಬಹಳ ಅನಿವಾರ್ಯ. ಕಾರ್ಯಕರ್ತರಿಗೆ ಮಣ್ಣನೆ ಸಿಗಬೇಕಾದರೆ ನಮ್ಮ ಕ್ಷೇತ್ರದಲ್ಲಿ ನಮ್ಮ ಶಾಸಕರಿರಬೇಕು. ಎಲ್ಲರೂ ದೃಢಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ಗೆಲುವಿಗೆ ಪಣತೊಡಿ ಎಂದರು

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಉಮಾನಾಥ್ ಶೆಟ್ಟಿ ಮಾತನಾಡಿ ಬಲಿಷ್ಠ ನೆಲದಲ್ಲಿ ಧೈರ್ಯ ತೆಗೆದುಕೊಳ್ಳುವ ಕೆಲಸ ಎಲ್ಲರಿಂದ ಆಗಬೇಕು,ನುಡಿದಂತೆ ನಡೆದ ಸರಕಾರ ಇದ್ದರೆ ಅದು ಕಾಂಗ್ರೆಸ್ ಕಾಂಗ್ರೆಸ್, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಕಟ್ಟಿನ ತೆರಿಗೆ ಹಣವನ್ನು ಕೇಂದ್ರದಿಂದ ಮರಳಿ ತರುವ ಕೆಲಸ ಮಾಡಲಿದ್ದೇವೆ, ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿಯವರಿಗೆ ಯಾವುದೇ ಸಂಶಯ ಬೇಡ,ನೀವುಗಳು ಕೂಡ ಅರ್ಜಿ ಸಲ್ಲಿಸಲು ಸನ್ನದ್ಧರಾಗಿ ಎಂದರು

Ad Widget

Ad Widget

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯದರ್ಶಿಯಾದ ಎಂ ಎಸ್ ಮುಹಮ್ಮದ್ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಉಸ್ತುವಾರಿಯಾದ ಮಹೇಶ್ ಅಂಕೊತ್ತಿಮಾರ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಉಸ್ತುವಾರಿಯಾದ ನ್ಯಾಯವಾದಿ ನೂರುದ್ದೀನ್ ಸಾಲ್ಮರ,ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ್ ಶೆಟ್ಟಿ ಪೆರ್ನೆ,ಪ್ರವೀಣ್ ಚಂದ್ರ ಆಳ್ವ, ಬೇಬಿ ಗೌಡ ಸೂರ್ಯ,ಅಶ್ರಫ್ ಬಸ್ತಿಕರ್, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ರಮಾನಾಥ್ ವಿಟ್ಲ,ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಂಟಿ ಸಂಯೋಜಕರಾದ ವಿ ಕೆ ಎಂ ಅಶ್ರಫ್,ಹಿರಿಯ ಮುಖಂಡರಾದ ಕೃಷ್ಣರಾವ್,ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾದ ನಝೀರ್ ಮಠ,ಮುಖಂಡರುಗಳಾದ ಉಲ್ಲಾಸ್ ಕೋಟ್ಯಾನ್, ವೇದನಾಥ್ ಸುವರ್ಣ,ಕುಳ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಶೆಟ್ಟಿ ಅಳಕೆಮಜಲ್, ಇಡ್ಕಿದು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ನಾಸಿರ್ ಕೋಲ್ಪೆ, ಹಿರಿಯರಾದ ಹಾಜಿ ಮೊಹಿದ್ದೀನ್ ಶಾಫಿ,ಅಬ್ಬಾಸ್ ಕೋಲ್ಪೆ,ಹಾಜಿ ಅಬ್ದುಲ್ ಖಾದರ್ ಸುನ್ನಿ,ಶೇಕಬ್ಬ ಕೋಲ್ಪೆ,ಹಮೀದ್ ಕನ್ಯಾನ ಕೋಲ್ಪೆ, ಪಕ್ಷದ ಪ್ರಮುಖರಾದ ಮೋಹನ್ ಗುರ್ಜಿನಡ್ಕ, ವಿ ಎ ರಶೀದ್ ವಿಟ್ಲ, ಹಸೈನಾರ್ ನೆಲ್ಲಿಗುಡ್ಡೆ,ಇಕ್ಬಾಲ್ ಹೊನೆಸ್ಟ್,ಹನೀಫ್ ಬಗ್ಗುಮೂಲೆ,ಉಮ್ಮರ್ ಶಾಫಿ ಕಲಂದಡ್ಕ,ಮೊಹಮ್ಮದ್ ಖಂದಕ್, ಅಬೂಬಕ್ಕರ್ ಕೋಲ್ಪೆ, ಲತೀಫ್ ದಲ್ಕಾಜೆ, ಲಕ್ಷ್ಮಣ ಮಿತ್ತೂರು, ಭಾತಿಸ್ ಮಿತ್ತೂರು ಅಬ್ಬು ನವಗ್ರಾಮ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇಡ್ಕಿದು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸ್ವಾಗತಿಸಿ ಕಾರ್ಯಕ್ರಮ ನಿರೋಪಿಸಿದರು, ಲತೀಫ್ ದಲ್ಕಾಜೆ ಕೋಲ್ಪೆ ವಂದಿಸಿದರು.

Ad Widget
Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!