Connect with us

ಸ್ಥಳೀಯ

ಇಂದು ಪುತ್ತೂರಿಗೆ ಅಣ್ಣಾಮಲೈ

Published

on



Ad Widget

Ad Widget

Ad Widget

Ad Widget

ಮಂಗಳೂರು, ಎ 28 : ರಾಜ್ಯದಲ್ಲಿ ಚುನಾವಣಾ ಕಾವು ಏರುತ್ತಿದ್ದು, ಈ ನಿಟ್ಟಿನಲ್ಲಿ ಹಲವರು ತಮ್ಮ ಪ್ರಚಾರ ಕಾರ್ಯವನ್ನು ಭರದಿಂದ ನಡೆಸುತ್ತಿದ್ದಾರೆ. ಇದಕ್ಕಾಗಿ ಬಿಜೆಪಿಯ ಪ್ರಚಾರವು ನಡೆಯುತ್ತಿದೆ. ಐಪಿಸ್ ನಿವೃತ್ತ ಅಧಿಕಾರಿ ತಮಿಳುನಾಡಿನ ಬಿಜೆಪಿಯ ರಾಜ್ಯ ಅಧ್ಯಕ್ಷ ಅಣ್ಣಾಮಲೈ ರವರು ದಕ್ಷಿಣ ಕನ್ನಡ ಎರಡು ಪ್ರದೇಶಗಳಲ್ಲಿ ಪ್ರವಾಸ ಮಾಡಿ ಪಕ್ಷದ ಪರ ಪ್ರಚಾರ ಮಾಡಲು ಬರುತ್ತಿದ್ದಾರೆ.

Ad Widget

Ad Widget

Ad Widget

Ad Widget

ಇದರ ವೇಳಾಪಟ್ಟಿ ಬಿಡುಗಡೆಯಾಗಿದೆ. ಅಣ್ಣಾಮಲೈ ರವರು ವಿಟ್ಲ, ಪುತ್ತೂರಿನಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಈ ಮಾಹಿತಿಯನ್ನು ಬಿಜೆಪಿಯು ತನ್ನ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದಿನಾಂಕ 29 ರಂದು ವಿಟ್ಲ ಹಾಗೂ ಪುತ್ತೂರಿನ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಯಿಂದ 12:30 ರವರೆಗೆ ಮನೆ‌ಮನೆ ಭೇಟಿ ಮಾಡಲಿದ್ದಾರೆ. ಬಳಿಕ 3 ರಿಂದ 4:30 ರ ವರೆಗೆ ಪುತ್ತೂರಿನಲ್ಲಿರುವ ತಮಿಳು ಭಾಷಿಗರನ್ನು ಭೇಟಿ ಮಾಡಲಿದ್ದಾರೆ.

Ad Widget

Ad Widget <> Ad Widget

ಸಂಜೆ 6 ರಿಂದ 7:30 ರವರೆಗೆ ವಿಟ್ಲದಲ್ಲಿ ರೋಡ್ ಶೋ ನಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಪ್ರಚಾರ ನಡೆಸಲಿದ್ದಾರೆ.



Ad Widget
Ad Widget
Click to comment

Leave a Reply

ಶಿಕ್ಷಣ

Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget

Ad Widget

Ad Widget

Ad Widget

ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget

Ad Widget

Ad Widget alt="Ad Widget"/>

Ad Widget

ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ‌ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.

Ad Widget

Ad Widget <> Ad Widget

ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ‌ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.



Ad Widget

ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು‌ ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.

Continue Reading

ರಾಜಕೀಯ

H.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ

Published

on



Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಷಡ್ಯಂತ್ರದಲ್ಲಿ ಕರಾವಳಿ ಭಾಗದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಭಾಗಿಯಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮೊದಲ ಆಡಳಿತಾವಧಿಯಲ್ಲಿ ಕೃಪಾ ಆಳ್ವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು ಎಂದು ಹೇಳಿದರು. ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್‌ನಲ್ಲಿ ಅವರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಗೃಹ ಸಚಿವರ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಅಧಿಕಾರ ಇದೆ ಎಂಬ ಕಾರಣಕ್ಕೆ ಏನು ಬೇಕಾದರೂ ಮಾಡಬಹುದೇ ಎಂದು ಪ್ರಶ್ನಿಸಿದರು. “ಗೃಹ ಇಲಾಖೆ ನಿಮ್ಮಪ್ಪನದ್ದಾ? ನನ್ನ ಕಾರ್ಯಕರ್ತರನ್ನು ಬಂಧಿಸುತ್ತೀರಾ? ನಾನೇ ನಿಮ್ಮ ಕಚೇರಿಗೆ ಬರುತ್ತೇನೆ. ತಾಕತ್ತಿದ್ದರೆ ನನ್ನನ್ನೇ ಬಂಧಿಸಿ ನೋಡೋಣ” ಎಂದು ಸವಾಲು ಹಾಕಿದರು.



Ad Widget

ತಮ್ಮ ಮೇಲೆ ಅನುಮಾನ ಬಂದರೆ ಬಂಧಿಸುವುದಾಗಿ ಹೇಳುವವರು, ಮುಖ್ಯಮಂತ್ರಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಬಗ್ಗೆ ಏಕೆ ಅನುಮಾನ ವ್ಯಕ್ತಪಡಿಸಿಲ್ಲ ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿಯನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.

Ad Widget

Ad Widget

ತಮ್ಮ ಪುತ್ರನ ಪೋಸ್ಟರ್ ಅಂಟಿಸಿದ ಘಟನೆ ಉಲ್ಲೇಖಿಸಿದ ಕುಮಾರಸ್ವಾಮಿ, ಈ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು. ಹೆದರಿಕೆ, ಬೆದರಿಕೆಗಳಿಗೆ ತಾವು ಬಗ್ಗುವುದಿಲ್ಲ. ಬೇಕಾದರೆ ಕಮಿಷನರ್ ಕಚೇರಿಗೆ ಬರುತ್ತೇನೆ, ಬಂಧಿಸಿ ಎಂದು ಸವಾಲು ಹಾಕಿದರು.

ಜೆ.ಪಿ. ನಗರದ ಮನೆಯಲ್ಲಿ ತಾವು ಎಲೆಕ್ಟ್ರಾನಿಕ್ ಉಪಕರಣಗಳನ್ನು ಇಟ್ಟುಕೊಂಡಿದ್ದೇವೆಯೇ ಎಂದು ಪ್ರಶ್ನಿಸಿದ ಅವರು, ಅಧಿಕಾರವನ್ನು ನ್ಯಾಯಯುತವಾಗಿ ಬಳಸಬೇಕು ಎಂದರು. ಸ್ಟಿಂಗ್ ಆಪರೇಷನ್ ನಡೆಸಿದವರನ್ನು ಏಕೆ ಬಂಧಿಸಿಲ್ಲ? ಪೊಲೀಸ್ ಅಧಿಕಾರಿಯನ್ನು ಕೊಲೆ ಮಾಡುವುದಾಗಿ ಹೇಳಿದ ವ್ಯಕ್ತಿಯ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಇದೇ ವೇಳೆ, ತಾವು ಬಳಸಿದ ಪದಗಳ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ತಾವು ಈ ಮಟ್ಟದ ಪದಗಳನ್ನು ಬಳಸಿರಲಿಲ್ಲ. ಆದರೆ, ಮತ್ತೊಬ್ಬರು ಬಳಸಿದ ಪದಗಳಿಂದ ಆಕ್ರೋಶಗೊಂಡು ಪ್ರತಿಕ್ರಿಯಿಸಿದ್ದೇನೆ. ಇದಕ್ಕಾಗಿ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

Ad Widget
Continue Reading

ಕಾರ್ಯಕ್ರಮಗಳು

Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

Published

on



Ad Widget

Ad Widget

Ad Widget

Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.

Ad Widget

Ad Widget <> Ad Widget

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.



Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading