ವಿಟ್ಲ
ವಿಟ್ಲ: ಕರ್ನಾಟಕ ಕಾಂಗ್ರೆಸ್ ಗೆ ಎಟಿಎಂ ತರಹ ಆಗಿದ್ದು, ಕಾಂಗ್ರೆಸ್ ಗೆ ಭ್ರಷ್ಟಾಚಾರ ಬಗ್ಗೆ ಮಾತನಾಡಲು ಅರ್ಹತೆಯಿಲ್ಲ – ಅಣ್ಣಾಮಲೈ
ವಿಟ್ಲ, ಎ 29 : ಕರ್ನಾಟಕ ಕಾಂಗ್ರೆಸ್ ಗೆ ಎಟಿಎಂ ತರಹ ಆಗಿದ್ದು, ಕಾಂಗ್ರೆಸ್ ಗೆ ಭ್ರಷ್ಟಾಚಾರ ಬಗ್ಗೆ ಮಾತನಾಡಲು ಅರ್ಹತೆಯಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದಕ್ಕೆ ಗ್ಯಾರೆಂಟಿಗಳನ್ನು ಕಾಗದದಲ್ಲಿ ಪ್ರಿಂಟ್ ಮಾಡಿ ಕೊಡುವ ದುಸ್ಥಿತಿ ನಿರ್ಮಾಣವಾಗಿದೆ. 1400ಕೋಟಿ ಇರುವ 2ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಇರುವರ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ ಗೆ 50ಸೀಟು ಬರುವುದು ಅನುಮಾನವಾಗಿದೆ. ಪ್ರಧಾನ ಮಂತ್ರಿಯವರನ್ನು ಅಪಮಾನಿಸುವ ಕಾಂಗ್ರೆಸ್ ಗೆ ಮತದಾನದ ಮೂಲಕ ಉತ್ತರ ನೀಡುವ ಕಾರ್ಯ ಮಾಡಬೇಕು. ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.
ಅವರು ವಿಟ್ಲ ಮುಖ್ಯ ರಸ್ತೆಯಲ್ಲಿ ರೋಡ್ ಶೋ ನಡೆಸಿ, ಜೈನ ಬಸದಿ ಸಮೀಪದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಭಾರತದಲ್ಲಿ ಕಾಂಗ್ರೆಸ್ ಬೇಡ ಎಂಬ ನಿರ್ಧಾರಕ್ಕೆ ಜನ ಬಂದಿದ್ದಾರೆ. ಕರ್ನಾಟಕದಲ್ಲಿ ಮಾಡಿದ ಕೆಲಸ ಕಾರ್ಯದ ಹಿನ್ನಲೆಯಲ್ಲಿ ಅದರ ಪ್ರಚಾರಕ್ಕೆ ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗಮಿಸಿದ್ದಾರೆ. ಕರ್ನಾಟಕ ಮೂರು ಮುಖ್ಯಮಂತ್ರಿಯನ್ನು ಯಾವತ್ತೂ ನೋಡಿಲ್ಲ. ಕಾಂಗ್ರೆಸ್ ರಿವರ್ಸ್ ಗೇರ್ ನಲ್ಲಿ ಹೋಗುತ್ತಿದ್ದು, ಬಿಜೆಪಿ ಡಬ್ಬಲ್ ಇಂಜಿನ್ ನಲ್ಲಿ ಮುಂದೆ ಸಾಗುತ್ತಿದೆ. ಎಂದರು.
ಶಾಸಕ ಸಂಜೀವ ಮಠಂದೂರು ಮಾತನಾಡಿ ಆತ್ಮನಿರ್ಭರ ಯೋಜನೆಯ ಮೂಲಕ ಪ್ರತಿಯೊಬ್ಬರಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯವಾಗಿದೆ. ಹಲವು ವ್ಯಕ್ತಿಗಳ ಹತ್ಯೆ, ಮಕ್ಕಳ ಅನ್ನಕ್ಕೆ ಕಲ್ಲು ಹಾಕಿದ ಕಾರ್ಯ ಕಾಂಗ್ರೆಸ್ಸ್ ನಿಂದ ನಡೆದಿದೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಡಬ್ಬಲ್ ಇಂಜಿನ್ ಸರ್ಕಾರವನ್ನು ಆಯ್ಕೆ ಮಾಡಬೇಕಾಗಿದೆ ಎಂದು ತಿಳಿಸಿದರು.
ವ್ಯಕ್ತಿ ನಗಣ್ಯವಾಗಿದ್ದು, ಅಪಪ್ರಚಾರಗಳಿಗೆ ಕವಿ ಕೊಡದೆ ಪಕ್ಷ ಮುಖ್ಯ ಎಂದು ಕೆಲಸ ನಿರ್ವಹಿಸಬೇಕು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಮಾತನಾಡಿ ಕಾರ್ಯಕರ್ತರ ಶ್ರಮದಿಂದ ಗೆಲವು ಸಾಧಿಸಲಾಗಿದೆ. ಮನಸ್ಸಿಗೆ ಯಾವಾಗಲೂ ವಯಸ್ಸು ಆಗುವುದಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಮೂಲೆ ಮೂಲೆಗೆ ತಲುಪಿಸುವ ಕಾರ್ಯ ಮಾಡಿದ್ದು, ಅದನ್ನು ಮತವಾಗಿ ಪರಿವರ್ತಿಸಬೇಕು ಎಂದು ಹೇಳಿದರು.
ವಿಟ್ಲ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ವಿಟ್ಲ ಸ್ವಾಗತಿಸಿದರು. ಮೋಹನದಾಸ ಉಕ್ಕುಡ ಕಾರ್ಯಕ್ರಮ ನಿರೂಪಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬುಡಿಯಾರು ರಾಧಾಕೃಷ್ಣ ರೈ, ರಾಷ್ಟೀಯ ಮಹಿಳಾ ಮೋರ್ಚಾದ ಸದಸ್ಯೆ ಬಿಂದು ಸರೇಶ್, ರೈತ ಮೋರ್ಚಾ ಕಾರ್ಯದರ್ಶಿ ರೇಣುಕಾ ಪ್ರಸಾದ್, ಸಹಜ್ ರೈ, ನವೀನ್ ಪಡ್ನೂರು, ಸುನಿಲ್ ದಡ್ಡ, ಕಿಶೋರ್ ಕೊಟ್ಯಾಡಿ, ಮೀನಾಕ್ಷೀ ಶಾಂತಿಗೋಡು, ಕೆ.ಟಿ. ಶೈಲಜಾ ಭಟ್, ಯಶನ್ವಿನಿ ಶಾಸ್ತ್ರೀ ಮತ್ತಿತರರು ಉಪಸ್ಥಿತರಿದ್ದರು.
ಅಪರಾಧ
Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ
ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.
ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅಪರಾಧ
Vitla-ವಿಟ್ಲ: ಅಕ್ರಮ ಜಾನುವಾರು ಸಾಗಾಟ: ಪಿಕಪ್ ವಾಹನ ವಶಕ್ಕೆ, ನಾಲ್ವರ ವಿರುದ್ಧ ಕೇಸ್
ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ .ಪಿ. ಅಬ್ದುಲ್ಲಾ, ಸುಬ್ರಹ್ಮಣ್ಯ, ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಟ್ಲ: ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ನ.10ರಂದು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ.
ವಿಟ್ಲ ಪೊಲೀಸರು ಪಾದೆಕಲ್ಲು ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆ ಮಾರ್ಗವಾಗಿ ಬಂದ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.
ವಾಹನದ ಚಾಲಕ ಬಂಟ್ವಾಳ ತಾಲೂಕಿನ ಕರೋಪಾಡಿ ನಿವಾಸಿ ಒ.ಪಿ. ಅಬ್ದುಲ್ಲಾ ಹಾಗೂ ವಾಹನದಲ್ಲಿದ್ದ ಸುಬ್ರಹ್ಮಣ್ಯ ಅವರನ್ನು ವಿಚಾರಿಸಿದಾಗ, ಜಾನುವಾರು ಸಾಗಾಟಕ್ಕೆ ಯಾವುದೇ ಪರವಾನಗಿ ಪಡೆದಿರಲಿಲ್ಲ ಎಂಬುದು ತಿಳಿದುಬಂದಿದೆ.
ಇದೇ ವೇಳೆ ಕಾರಿನಲ್ಲಿ ಸ್ಥಳಕ್ಕೆ ಆಗಮಿಸಿದ್ದ ಉಷಾ ಎಸ್. ಶೆಟ್ಟಿ ಹಾಗೂ ಗುರುತೇಜ ಅವರ ಸೂಚನೆಯ ಮೇರೆಗೆ ಜಾನುವಾರುಗಳನ್ನು ಸಾಗಿಸುತ್ತಿರುವುದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
ಮಂಗಳೂರು9 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್16 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ14 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ15 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ14 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ15 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ9 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ15 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















