ರಾಜಕೀಯ
ಬಿಜೆಪಿ ಪ್ರಣಾಳಿಕೆ ಬಿಡುಗಡೆ – ಅರ್ಧ ಲೀ ಹಾಲು, 3 ಸಿಲಿಂಡರ್ ಉಚಿತ
ಬೆಂಗಳೂರು, ಮೇ 1 : ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ಪಕ್ಷವು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಜಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಹಲವು ಜನಪ್ರಿಯ ಯೋಜನೆಯನ್ನು ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ ನೀಡಿದೆ.
*ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ಕಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ ಗಳನ್ನು ಉಚಿತವಾಗಿ ವಿತರಿಸುತ್ತೇವೆ. *’ಪೋಷಣೆ’- ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀಅನ್ನ ಸಿರಿಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ವಿತರಣೆ.
*ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆ – ಈ ಯೋಜನೆಯಡಿ ಎಸ್‌ಸಿ, ಎಸ್‌ಟಿ ಸಮುದಾಯದ ಮಹಿಳೆಯರು ಐದು ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ 210 ಸಾವಿರದವರೆಗೆ ತಾಳೆಯಾಗುವ ಠೇವಣಿ ನೀಡುತ್ತೇವೆ.
*ಆಟಲ್ ಆಹಾರ ಕೇಂದ್ರ’ – ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್ ಗಳಲ್ಲಿ ಸ್ಥಾಪನೆ
*ಏಕರೂಪ ನಾಗರಿಕ ಸಂಹಿತೆ (ಯುಸಿಸಿ) – ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಜಾರಿಗೊಳಿಸುತ್ತೇವೆ.
*’ಸರ್ವರಿಗೂ ಸೂರು ಯೋಜನೆ’ – ರಾಜ್ಯದಾದ್ಯಂತ ನಿವೇಶನ ರಹಿತ ವಸತಿ ರಹಿತ ನಿವಾಸಿಗಳಿಗೆ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುವ ಭರವಸೆ
*ಸಮನ್ವಯ ಯೋಜನೆ – ತ್ವರಿತಗತಿಯಲ್ಲಿ ಖಉ ಗಳು ಮತ್ತು ಐಖಐ ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.
ವಿಶ್ವೇಶ್ವರಯ್ಯ ವಿದ್ಯಾ ಯೋಜನೆ – ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ.
‘ಸುಲಲಿತ ಜೀವನ’ – ಬೆಂಗಳೂರಿನ ಅಪಾರ್ಟ್ ಮೆಂಟ್‌ಗಳಲ್ಲಿ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.
ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಅದರೊಂದಿಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್ ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್ ಗಳನ್ನು ಸ್ಥಾಪಿಸುತ್ತೇವೆ.
ಐಎಎಸ್/ಕೆಎಎಸ್/ಬ್ಯಾಂಕಿಂಗ್ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾಂಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.
ಮಿಷನ್ ಸ್ವಾಸ್ಥ್ಯ ಕರ್ನಾಟಕ’ದ ಅಡಿ ಸರ್ಕಾರಿ ಆಸ್ಪತ್ರೆ/ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್ ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ.
ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.
‘ರಾಜ್ಯ ರಾಜಧಾನಿ ಪ್ರದೇಶ’ – ನಮ್ಮಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ.
ಬೆಂಗಳೂರಿನ ಹೊರವಲಯದಲ್ಲಿ ಇವಿ ಸಿಟಿ ಅಭಿವೃದ್ಧಿ – ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 130,000 ಕೋಟಿ ಮೊತ್ತದ ‘ಕೆ ಫಂಡ್’ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ.
ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‌ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.
ಕರ್ನಾಟಕವನ್ನು ಎಲೆಕ್ಟಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‌ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್‌ಗಳನ್ನು ಎಲೆಕ್ಟಿಕ್ ಬಸ್‌ಗಳಾಗಿ ಪರಿವರ್ತಿಸುತ್ತೇವೆ.
ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒದಗಿಸಿ ಕರ್ನಾಟಕವನ್ನು ದೇಶದ ಅತ್ಯಂತ ಮೆಚ್ಚಿನ ಪ್ರವಾಸಿ ತಾಣವನ್ನಾಗಿ ರೂಪಿಸಲು ಕಲ್ಯಾಣ ಸರ್ಕ್ಯೂಟ್, ಬನವಾಸಿ ಸರ್ಕ್ಯೂಟ್, ಪರಶುರಾಮ್ ಸರ್ಕ್ಯೂಟ್ ಮತ್ತು ಕಾವೇರಿ ಸರ್ಕ್ಯೂಟ್, ಗಾಣಗಾಪುರ ಕಾರಿಡಾರ್ ಅನ್ನು ಅಭಿವೃದ್ಧಿಪಡಿಸಲು 7 1,500 ಕೋಟಿ ವಿನಿಯೋಗಿಸುತ್ತೇವೆ.
ಕರಾವಳಿಗೆ ಪ್ರಣಾಳಿಕೆಯಲ್ಲಿ ಏನಿದೆ :
ಕರಾವಳಿ ನವೋತಾನ ಯೋಜನೆ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯನ್ನು ಪ್ರಾರಂಭಿಸುತ್ತೇವೆ, ಈ ಮೂಲಕ ಕರ್ನಾಟಕವು ದೇಶದ ಕರಾವಳಿ ಪ್ರದೇಶಗಳ ಅಭಿವೃದ್ಧಿಯಲ್ಲಿ ಮುನ್ನಡೆ ಸಾಧಿಸುತ್ತದೆ.
ರಾಜ್ಯದಲ್ಲಿ ಬಂದರುಗಳ ನಿರ್ವಹಣೆ ಸಾಮರ್ಥ್ಯವನ್ನು ಹೆಚ್ಚಿಸಲು 2028ರ ವೇಳೆಗೆ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಎಲ್ಲಾ ಸಣ್ಣಬಂದರುಗಳನ್ನು ಬೇಕರಿಸುತ್ತೇವೆ.
ಕೇಣಿ ಮತ್ತು ಪಾಪಿನಕುರ್ವೆಯಲ್ಲಿ ಬಂದರುಗಳ ನಿರ್ಮಾಣವನ್ನು ಪೂರ್ಣಗೊಳಿಸುತ್ತೇವೆ. ಇದರಿಂದ ಕರ್ನಾಟಕ ಅಂತಾರಾಷ್ಟ್ರೀಯ ಕರಾವಳಿ ವ್ಯಾಪಾರದ ಕೇಂದ್ರವಾಗಿ ಗುರುತಿಸಿಕೊಳ್ಳಲಿದೆ.
ಸಾಗರಮಾಲಾ ಯೋಜನೆಯಡಿ ಕರಾವಳಿ ಪ್ರದೇಶದಲ್ಲಿ 18 ಅಭಿವೃದ್ಧಿ ಯೋಜನೆಗಳನ್ನು ಪೂರ್ಣಗೊಳಿಸಿದ್ದೇವೆ. ಜತೆಗೆ, * 950 ಕೋಟಿ ಮೊತ್ತದ 10 ಯೋಜನೆಗಳಿಗೆ ಅನುಮೋದನೆ ನೀಡಿದ್ದೇವೆ, ಮಂಗಳೂರು ಬಂದರಿನಲ್ಲಿ 3ನೇ ಹಂತದ ನವೀಕರಣ ಕಾಮಗಾರಿ, ಮಲ್ಪೆ ಬಂದರಿನ ವಿಸ್ತರಣೆ ಕಾರ್ಯ ನಡೆಯುತ್ತಿದೆ.
ಡಬಲ್ ಎಂಜಿನ್ ಬಿಜೆಪಿ ಸರ್ಕಾರವು ಮೀನುಗಾರರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಿದೆ.
*2022-23ರಲ್ಲಿ ಪ್ರಧಾನ ಮಂತ್ರಿ ಮತ್ತ ಸಂಪದ ಯೋಜನೆ ಮತ್ತು ಮತ್ಸ ಸಿರಿ ಯೋಜನೆಯಡಿ 100 ಅಳ ಸಮುದ್ರ ಮೀನುಗಾರಿಕೆ ದೋಣಿಗಳು, 7,568 ಮೀನುಗಾರರಿಗೆ ಮೀನುಗಾರಿಕೆ ದೋಣಿಗಳನ್ನು ಒದಗಿಸುವುದು. 3,532 ಯಾಂತ್ರೀಕೃತ ದೋಣಿಗಳಿಗೆ 1 ಲಕ್ಷ ಕಿಲೋ ಲೀಟರ್‌ಗೂ ಹೆಚ್ಚು ತೆರಿಗೆ ಮುಕ್ತ ಸಬ್ಸಿಡಿ ಡೀಸಲ್ > ಕೇಬಲ್ ನೆಟ್ ಮೂಲಕ ಮೀನುಗಾರಿಕೆ ನಡೆಸಲು 1,000
ಮೀನುಗಾರರಿಗೆ 7 3 ಬಟ್ಟೆ ಸಹಾಯಧನ ಆಶ್ರಯ ರಹಿತ ಮೀನುಗಾರರಿಗೆ ಆದ್ಯತೆಯ ಮೇರೆಗೆ 5,000 ಮನೆಗಳು, ಸಾಂಕ್ರಾಮಿಕದ ಸಮಯದಲ್ಲಿ ನೋಂದಾಯಿತ 19,746 ಮೀನುಗಾರರಿಗೆ 23,000 ಪರಿಹಾರ.
*ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದೇವೆ. ನಿಗಮಕ್ಕೆ ನೀಡಿದ ಹಣವನ್ನು ಬಿಲ್ಲವ, ಈಡಿಗ ಮತ್ತು ನಾಮಧಾರಿ ಸಮುದಾಯಗಳ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ಸ್ಥಾಪನೆ.
*2026ರ ವೇಳೆಗೆ ಡೀಸೆಲ್ ಚಾಲಿತ ಮೀನುಗಾರಿಕೆ ದೋಣಿಗಳನ್ನು ಎಲ್‌ಪಿಜಿ ಚಾಲಿತ ದೋಣಿಗಳಾಗಿ ಪರಿವರ್ತಿಸಲು ‘ಪರಿಸರ ಸ್ನೇಹಿ ದೋಣಿ ಯೋಜನೆ’ ಪ್ರಾರಂಭಿಸುತ್ತೇವೆ.
ಉತ್ತರ ಕನ್ನಡದಲ್ಲಿ ಏಮ್ ಮಾದರಿಯಲ್ಲಿ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಸ್ಥಾಪಿಸುತ್ತೇವೆ.
*ಪ್ರತಿ ಬಂದರಿಗೆ 100 ಕೋಟಿ ನೀಡುವ ಮೂಲಕ ರಾಜ್ಯದ 9 ಮೀನುಗಾರಿಕಾ ಪ್ರತಿ ಬಂದರಿಗೆ – 100 ಕೋಟಿ ನೀಡುವ ಬಂದರುಗಳನ್ನು ಮೇಲ್ದರ್ಜೆಗೆ ಏರಿಸಿ, ಅಧುನೀಕರಣಗೊಳಿಸುತ್ತೇವೆ. ಡ್ರೆಡ್ಡಿಂಗ್, ಬಯೋವಾಲ್‌ಗಳನ್ನು ಸ್ಥಾಪಿಸಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸುತ್ತೇವೆ.
*’ಮಿಷನ್ ಕನೆಕ್ಟ್ ಕರ್ನಾಟಕ ‘ – ಅಡಿಯಲ್ಲಿ ಬೆಂಗಳೂರು ಮತ್ತು ಮಂಗಳೂರನ್ನು ಸಂಪರ್ಕಿಸುವ ಅತ್ಯಾಧುನಿಕ ಎಕ್ಸ್‌ಪ್ರೆಸ್‌ವೇ ಆಗಿ ಪರಿವರ್ತಿಸುತ್ತೇವೆ.
ಮಿಷನ್ ಕನೆಕ್ಟ್ ಕರ್ನಾಟಕ ‘ – ಅಡಿಯಲ್ಲಿ ಬೆಂಗಳೂರು ಮತ್ತು ಮಂಗಳೂರನ್ನು ಸಂಪರ್ಕಿಸುವ ಅತ್ಯಾಧುನಿಕ ಎಕ್ಸ್‌ಪ್ರೆಸ್‌ವೇ ಆಗಿ ಪರಿವರ್ತಿಸುತ್ತೇವೆ.
ಇನ್ನಿತರ ಭರವಸೆಗಳು
*ಭಗೀರಥ ಶಪಥ ಯೋಜನೆಯಡಿ ಸಮಗ್ರ ನೀರಾವರಿ ವ್ಯವಸ್ಥೆ ಪ್ರತಿ ಲೀಟರ್ ಹಾಲಿಗೆ 5ರಿಂದ 7 ರೂ. ಪ್ರೋತ್ಸಾಹಧನ ಹೆಚ್ಚಳ ಪ್ರತಿ ತಾಲೂಕಿನಲ್ಲಿ ಮೊಬೈಲ್ ಪಶು ಆರೋಗ್ಯ ಕ್ಲಿನಿಕ್ ಆರಂಭ. ಉತ್ಪನ್ನ ಸಾಗಿಸುವ ರೈತರಿಗೆ ಉಚಿತ ಬಸ್ ಟಿಕೆಟ್ ಸೌಲಭ್ಯ. ಸೋಲಾರ್ ಪಂಪ್ಸೆಟ್ಗಳನ್ನು ಬಳಸುವ ರೈತರಿಗೆ 80% ಸಬ್ಸಿಡಿ
500 ಕೋಟಿ ರೂ. ಮೊತ್ತದ ‘ಸಾವಯವ ಕೃಷಿ ಮಿಷನ್’ ಜಾರಿ
ಪ್ರತಿ ಜಿಲ್ಲೆಯಲ್ಲಿ ಆಹಾರ ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ
ಒಂದು ಸಾವಿರ ಕೋಟಿ ಮೊತ್ತದ ಬೆಲೆ ಸ್ಥಿರೀಕರಣ ನಿಧಿ ಸ್ಥಾಪನೆ
ನೇಕಾರ ಸಮ್ಮಾನ ಯೋಜನೆಯಡಿ 1.5 ಲಕ್ಷ ನೇಕಾರರಿಗೆ ನೆರವು
ನೇಕಾರರಿಗೆ ನೀಡುವ ಧನಸಹಾಯ 2 ಸಾವಿರದಿಂದ 5 ಸಾವಿರಕ್ಕೆ ಹೆಚ್ಚಳ
ಉದ್ಯೋಗಸ್ಥ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಸಚಿವರಾದ ಆರ್. ಅಶೋಕ್, ಡಾ. ಸುಧಾಕರ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಜರಿದ್ದರು.
ಅಂತರ ರಾಜ್ಯ
Rahul Gandhi-‘45 FIR ನನಗೆ ಪದಕವಿದ್ದಂತೆ, 100 FIR ನನ್ನ ಗುರಿ’-ರಾಹುಲ್ ಗಾಂಧಿ
ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.
ಹೊಸದಿಲ್ಲಿ, ಅ.7: ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧವೂ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಅವರ ಕಾರ್ಯವೈಖರಿ ಹಾಗೂ ಅಧೀನ ಅಧಿಕಾರಿಗಳೊಂದಿಗಿನ ಭಿನ್ನಮತದ ಕುರಿತು ಪ್ರತಿಪಕ್ಷಗಳು ಪ್ರಶ್ನೆಗಳನ್ನು ಎತ್ತುತ್ತಿರುವ ಹಿನ್ನೆಲೆಯಲ್ಲಿ ರಾಹುಲ್, ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ದಿಢೀರ್ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ಅವರು, ಜ್ಞಾನೇಶ್ ಕುಮಾರ್ ಅವರನ್ನು ‘ಅಕ್ರಮ ಚುನಾವಣಾ ಆಯೋಗದ ಮುಖ್ಯಸ್ಥ’ ಎಂದು ಆರೋಪಿಸಿದರು.
“ನಾವು ಜಂತರ್ ಮಂತರ್‌ಗೆ ತೆರಳಿ ಒಟ್ಟಾಗಿ ಕುಳಿತು, ಕುಮಾರ್ ಈ ದೇಶದ ಕಾನೂನುಬದ್ಧ ಚುನಾವಣಾ ಆಯುಕ್ತರಲ್ಲ ಎಂಬುದನ್ನು ದೇಶಕ್ಕೆ ತಿಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧವೂ ಅವರು ಆರೋಪಗಳನ್ನು ಮಾಡಿದರು. ಈ ಮೂವರು ಜ್ಞಾನೇಶ್ ಕುಮಾರ್ ಅವರೊಂದಿಗೆ ಸೇರಿ ದೇಶದ ಪ್ರಜಾಪ್ರಭುತ್ವವನ್ನು ನಾಶಗೊಳಿಸಿದ್ದಾರೆ ಎಂದು ರಾಹುಲ್ ಗಾಂಧಿ ದೂರಿದರು.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಅವರು, “ನನ್ನ ವಿರುದ್ಧ 45 ಎಫ್‌ಐಆರ್‌ಗಳಿವೆ. 100 ಎಫ್‌ಐಆರ್‌ಗಳನ್ನು ಹೊಂದುವುದು ನನ್ನ ಗುರಿ. ಪ್ರತಿಯೊಂದು ಎಫ್‌ಐಆರ್ ನನಗೆ ಪದಕವಿದ್ದಂತೆ” ಎಂದು ಹೇಳಿದರು.
ಇದೇ ವೇಳೆ, ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಂಗಳವಾರ ಪ್ರತಿಪಕ್ಷಗಳ ನಾಯಕರು ದಿನವಿಡೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದರು. ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.
ಮತ್ತೊಂದೆಡೆ, ‘ಮತ ಕಳವು’ ಆರೋಪಕ್ಕೆ ಸಂಬಂಧಿಸಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲು ಮುಂದಾದ ಆಮ್ ಆದ್ಮಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ಗಳ ಮೂಲಕ ತಡೆದರು.
ಅಂತರ ರಾಜ್ಯ
Jnanesh kumar-ವಿಪಕ್ಷಗಳ ರಾಜೀನಾಮೆ ಒತ್ತಾಯದ ನಡುವೆ ಜ್ಞಾನೇಶ್ ಕುಮಾರ್ ಛತ್ತೀಸ್‌ಗಢ ಭೇಟಿ ಮುಂದೂಡಿಕೆ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಅಕ್ಟೋಬರ್ 7 ಮತ್ತು 8ರಂದು ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಆಕ್ರೋಶ
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹಾಗೂ ಅರ್ಜಿ ನಮೂನೆ-6ರಲ್ಲಿನ ಮಾರ್ಪಾಡು ಸೇರಿದಂತೆ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ.
ದೇವಾಲಯ, ಜಲಪಾತಗಳಿಗೆ ಭೇಟಿ ನೀಡಬೇಕಿತ್ತು
ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದ ವೇಳೆ ಜ್ಞಾನೇಶ್ ಕುಮಾರ್ ಅವರು ದಾಂತೇವಾಡದಲ್ಲಿರುವ ದಾಂತೇಶ್ವರಿ ದೇವಾಲಯ, ಬಸ್ತಾರ್‌ನ ಚಿತ್ರಕೋಟೆ ಜಲಪಾತ ಹಾಗೂ ಕಬೀರ್ ಧಾಮ್ ಜಿಲ್ಲೆಯ ಭೋರಂಡಿಯೊ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.
ಈ ಭೇಟಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಸರ್ಕಾರವು ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಅತಿಥಿಯ ಗೌರವ ನೀಡಲು ನಿರ್ಧರಿಸಿತ್ತು. ಅವರನ್ನು ಸ್ವಾಗತಿಸುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲು ರಾಯ್‌ಪುರ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರಾಧಿಕಾರಗಳು ಸಿದ್ಧತೆ ಆರಂಭಿಸಿದ್ದವು. ಇದೀಗ ಭೇಟಿಯನ್ನು ಮುಂದೂಡಲಾಗಿದೆ.
ರಾಜಕೀಯ
Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.
ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.
ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.
-
Uncategorized16 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized19 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು21 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ21 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ22 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್21 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ21 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
Uncategorized5 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ


















