ದಕ್ಷಿಣ ಕನ್ನಡ
ಭ್ರಷ್ಟಚಾರ ಮಾಡಿದ ದುಡ್ಡಲ್ಲೇ ಶಾಸಕರಿಗೆ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜಿಗೆ ಫೌಂಡೇಷನ್ ಕಟ್ಟಬಹುದಿತ್ತು : ಅಶೋಕ್ ರೈ
ಪುತ್ತೂರು: ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಮಾಡುವುದಾಗಿ ಐದು ವರ್ಷದಿಂದ ಶಾಸಕರು ಹೇಳುತ್ತಿದ್ದಾರೆ. ಕಾಲೇಜು ಬಿಡಿ ಫೌಂಡೇಷನ್ ಕೂಡಾ ಹಾಕ್ಲಿಕ್ಕೆ ಸಾಧ್ಯವಾಗಿಲ್ಲ. ಶಾಸಕರಿಗೆ ಮನಸ್ಸು ಮಾಡಿದ್ದರೆ ಅವರು ಭೃಷ್ಟಾಚಾರ ಮಾಡಿದ ದುಡ್ಡಲ್ಲೇ ಪೌಂಡೇಷನ್ ಕಟ್ಟಬಹುದಿತ್ತು ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.
ಇದೇ ಕಾರಣಕ್ಕೆ ಅವರನ್ನು ಹೊರಗೆ ದಬ್ಬಲಾಗಿದೆ . ಪ್ರಸ್ತುತ ಬಿಜೆಪಿಗೆ ಪುತ್ತೂರಿನಲ್ಲಿ ಅಭ್ಯರ್ಥಿಯೇ ಇಲ್ಲದಂತ ಪರಿಸ್ಥಿತಿನಿರ್ಮಾಣವಾಗಿದೆ. ಹಿಂದುತ್ವ ಹಿಂದುತ್ವ ಎಂದು ಪದೇ ಪದೇ ಹೇಳುತ್ತಿರುವ ಬಿಜೆಪಿಗರು ದಾಖಲೆ ಸರಿ ಇಲ್ಲದ ದೇವಸ್ಥಾನ, ದೈವಸ್ಥಾನದ ಜಾಗವನ್ನು ರೆಕಾರ್ಡ್ ಯಾಕೆ ಸರಿಮಾಡಿಲ್ಲ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಜೊತೆ ಕೈಜೋಡಿಸುವಂತೆ ಬಿಜೆಪಿಗರಿಗೆ ಮನವಿ ಮಾಡಿದ ಅವರು ಆರ್ಯಾಪು ಗ್ರಾಪಂನ ಮೂವರು ಬಿಜೆಪಿ ಬೆಂಬಲಿತ ಸದಸ್ಯರು ಅಕ್ರಮ ಸಕ್ರಮದ ವ್ಯವಹಾರವನ್ನು ಬಯಲು ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಇದನ್ನು ಪ್ರಚಾರ ಮಾಡಿ. ಸಮಾಜದ ಕಟ್ಟ ಕಡೆಯ ವ್ಯಕ್ತಿ ಜೊತೆಗೂ ಸಂಪರ್ಕ ಇರಿಸಿಕೊಳ್ಳಿ ಎಂದು ಮನವಿ ಮಾಡಿದರು.
ಶಿಕ್ಷಣ
Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ
ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮಗಳು
Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಮಂಗಳೂರು
Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.
“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.
-
ಸ್ಥಳೀಯ16 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ರಾಜಕೀಯ9 hours agoH.D. Kumaraswamy-ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ : ಬಾಂಬ್ ಸಿಡಿಸಿದ ಎಚ್.ಡಿ. ಕುಮಾರಸ್ವಾಮಿ – ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಷಡ್ಯಂತ್ರದಲ್ಲಿ ಕೃಪಾ ಆಳ್ವ..! ಗಂಭೀರ ಆರೋಪ
-
ಅಪರಾಧ10 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ಅಪರಾಧ14 hours agoB.R. Shetty-ಬ್ಯಾಂಕ್ ಆಫ್ ಬರೋಡಾ ವಿರುದ್ಧ ಯುಎಇ ಎಕ್ಸ್ಚೇಂಜ್ ಸಂಸ್ಥೆಗಳ ಸ್ಥಾಪಕ ಬಿ.ಆರ್. ಶೆಟ್ಟಿ ಕಾನೂನು ಸಮರ; ₹1.25 ಲಕ್ಷ ಕೋಟಿ ಪರಿಹಾರ ಬೇಡಿಕೆ
-
ಮಂಗಳೂರು10 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
-
ಬಿಗ್ ನ್ಯೂಸ್16 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಅಂತರ ರಾಜ್ಯ16 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!
-
ರಾಜಕೀಯ14 hours agoAmal Ramachandra-ಒಳ್ಳೆಯ ರೀತಿಯಲ್ಲಿ ಬೆಳೆವಿಮೆ ಬಂದರೆ ಮೋದಿಯಿಂದಾಗಿ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಈಗ ಕಾಂಗ್ರೆಸ್ ನ್ನು ದೂರುತ್ತಿದೆ..! ಟರ್ಮ್ ಶೀಟ್ ಬದಲಾವಣೆ ಮಾಡಿದ್ದು ಬಿಜೆಪಿ ಈ ಬಗ್ಗೆ ದಾಖಲೆಯಿದೆ; ಅಶೋಕ್ ರೈ ಹುಟ್ಟಿಸಿದ ಲಿಸ್ಟ್ ಕೊಡ್ತೇನೆ 8 ವರ್ಷಗಳಲ್ಲಿ ಬೆಳ್ತಂಗಡಿಯಲ್ಲಿ ಪೂಂಜಾ ಹುಟ್ಟಿಸಿದ್ದೇನೂ..? ಪುಡಾ ಅಧ್ಯಕ್ಷ ಅಮಳ ರಾಮಚಂದ್ರ




















