Connect with us

ಸ್ಥಳೀಯ

ಹಿಂದೊಮ್ಮೆ ಶನಿಪೂಜೆಯಲ್ಲಿ ಪುತ್ತಿಲರ ‘ಶನಿʼ ಬಿಡಿಸಿದ್ದೇವೆ : ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪುತ್ತೂರು ; ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಅರುಣ್ ಕುಮಾರ್ ಪುತ್ತಿಲ ನಾನು ಶಾಸಕನಾಗಿದ್ದ ಅವಧಿಯಲ್ಲಿ ಮುಂಡೂರು ಭಾಗದಲ್ಲಿ ಕಾರ್ಯಕರ್ತನಾಗಿ ದುಡಿಯುತ್ತಿದ್ದರು. ಅವರೀಗ ಖಾಲಿಸ್ತಾನ್ ಮುಖಂಡ ನ ರೀತಿ ಸ್ವಯಂಘೋಷಿತ ಹಿಂದೂ ನಾಯಕನ ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಮತ್ತೊಮ್ಮೆ ಪುತ್ತೂರಿನಲ್ಲಿ ಗೂಂಡಾ ರಾಜ್ಯ ತರುವ ಪ್ರಯತ್ನದಲ್ಲಿದ್ದಾರೆ . ಹಿಂದೂಮ್ಮೆ ಶನಿಪೂಜೆಯಲ್ಲಿ ಅವರ ‘ಶನಿʼ ಬಿಡಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.
ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು “ ಒಂದಷ್ಟು ಮಂದಿ ವಿರೋಧಿಗಳು ನನಗೆ ಸವಾಲೆಸಯುವ ರೀತಿಯಲ್ಲಿ ನಾನು ಪುತ್ತೂರಿಗೆ ಪ್ರಚಾರಕ್ಕೆ ಬರುತ್ತೇನಾ? ಬಂದರೇ ಪಕ್ಷದ ಪರವಾಗಿ ಪ್ರಚಾರ ಮಾಡುತ್ತೇನಾ ? ಅಥಾವ ಆಪ್ತ ಮಿತ್ರನ ಪರವಾಗಿ ಕೆಲಸ ಮಾಡುತ್ತೇನೊ ಎಂದು ಟ್ವಿಟರ್ ನಲ್ಲಿ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ.ಕಾಂಗ್ರೇಸ್ ಅಭ್ಯರ್ಥಿ ಬಿಜೆಪಿಯಿಂದ ಹೊರಗೆ ಕಾಲಿಟ್ಟ ತಕ್ಷಣ ನನಗೆ ಆಪ್ತಮಿತ್ರನಲ್ಲ. ನನ್ನ ಪಾಲಿಗೆ ರಾಜಕೀಯ ಶತ್ರು. ಯಾರೆಲ್ಲಾ ಬಿಜೆಪಿಯಲ್ಲಿ ಇರ್ತಾರೋ ಅಲ್ಲಿ ತನಕ ಆಪ್ತಮಿತ್ರ, ಪಾಲುದಾರ. ಅವರ ಒಂದು ಕಂಪೆನಿಯಲ್ಲಿ ಚಿಕ್ಕ ಪಾಲುದಾರ ಮಾತ್ರ ನಾನಾಗಿದ್ದೇನೆ. ನನ್ನ ಬೇನಾಮಿ ಆಸ್ತಿ ಅಶೋಕ್ ರೈ ಜತೆಗಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಸರ್ಕಾರ ಐಟಿ-ಇಡಿಗಳ ಮೂಲಕ ರಹಸ್ಯ ತನಿಖೆ ನಡೆಸಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಿ ಎಂದು ಅವರು ಹೇಳಿದರು.
ಸಮುದ್ರ ಸೇರುವ 1300 ಟಿಎಂಸಿ ನೀರಿನಲ್ಲಿ 23 ಟಿಎಂಸಿ ಕುಡಿಯಲು ಕೊಡಲು ಯೋಗ್ಯತೆ ಇಲ್ಲದವ ಈರಾಜ್ಯದ ಮುಖ್ಯ ಮಂತ್ರಿ ಸ್ಥಾನದಲ್ಲಿ ನಾಲಾಯಕ್ಕು. ಮಳೆಗಾಲದ ಸಂದರ್ಭ ಕೇವಲ 100 ದಿನಗಳ ಕಾಲ ಮಾತ್ರ 23 ಟಿಎಂಸಿ ನೀರನ್ನು ಎತ್ತಿನ ಹೊಳೆ ಯೋಜನೆಯ ಮೂಲಕ ತೆಗೆದುಕೊಂಡು ಹೋಗಲಾಗುತ್ತದೆ. ಎತ್ತಿನಹೊಳೆ ಪ್ರಾರಂಭ ಆಯಿತಾ? ಅಲ್ಲಿಂದ ನೀರು ಎತ್ತಲಾಗುತ್ತಿದೆಯಾ? ಈಗ ನೇತ್ರಾವತಿ ಬತ್ತಿರುವುದಕ್ಕೆ ಸದಾನಂದ ಗೌಡ ಕಾರಣವಲ್ಲ ಎಂದು ಬೆಂಗಳೂರು ಉತ್ತರ ಸಂಸದ ಡಿ.ವಿ. ಸದಾನಂದ ಗೌಡ ರೇಗಾಡಿದರು.
23 ಟಿಎಂ ಸಿ ನೀರನ್ನು ನೀಡುವುದು ಅನ್ಯಾಯವೇ ಎಂಬುದನ್ನು ಕ್ರಿಕೆಟ್ ಆಡುವವರು ಅರ್ಥಮಾಡಿಕೊಳ್ಳಬೇಕಾಗಿದೆ. ಎತ್ತಿನ ಹೊಳೆ ಇನ್ನೂ ಪ್ರಾರಂಭವಾಗಿಲ್ಲ. ಕುಮಾರಧಾರೆ ಹಾಗೂ ಎತ್ತಿನಹೊಳೆಗೂ ಸಂಭಂದವೇ ಇಲ್ಲ. ಅದೂ ಬತ್ತಿಹೊಗಿದೆ. ಪಯಸ್ವಿನಿ ಬತ್ತಿ 15 ದಿನ ಕಳೆದುಹೋಗಿದೆ. ಆರೋಪಗಳನ್ನು ಮಾಡುವುದು ಮತ್ತು ಆರೋಪಗಳ ಹಿನ್ನಲೆಯನ್ನು ತಿಳಿದುಕೊಳ್ಳದಿರುವುದು ರಾಜಕೀಯದಲ್ಲಿ ಒಳ್ಳೆಯ ಸೂತ್ರವಲ್ಲ ಎಂದರು.
ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿ ನಡುವೆ ಒಳ ಒಪ್ಪಂದ ಆಗಿದೆ. ಇದು ಹೆಚ್ಚು ಅಪಾಯಕಾರಿ. ಹಿಂದೆ ಈಶ್ವರಮಂಗಲ ಮಿನಿ ಪಾಕಿಸ್ತಾನ ತರಹ ಇತ್ತು. ಇದೀಗ ಮತ್ತೆ ಪುತ್ತೂರಿನಲ್ಲಿ ಗೂಂಡಾ ರಾಜ್ಯ ಸ್ಥಾಪನೆಗೆ ಕಾಂಗ್ರೇಸ್ ಮತ್ತು ಸ್ವಯಂಘೋಷಿತ ಹಿಂದೂ ಮುಖಂಡ ಪಕ್ಷೇತರ ಅಭ್ಯರ್ಥಿ ಹೊರಟಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಪುತ್ತೂರನ್ನು ಗೂಂಡಾರಾಜ್ಯವಾಗಲು ಬಿಜೆಪಿ ಬಿಡುವುದಿಲ್ಲ ಎಂದರು.

Ad Widget

Ad Widget

Ad Widget alt="Ad Widget"/>

Ad Widget

ಗೂಂಡ ರಾಜಕೀಯ ವನ್ನು ನಿಲ್ಲಿಸಿದ್ದ ನಾವು. ನಾವು ಇನ್ನು ಶಸ್ತ್ರ ಬಿಡ್ಲಿಲ್ಲ . ಹಾವಿಗೆ ವಯಸ್ಸಾಗಿರಬಹುದು ಆದರೆ ವಿಷಕ್ಕೆ ವಯಸ್ಸಾಗಲಿಲ್ಲ. ಕಾಂಗ್ರೆಸ್ ನವರಿಗೆ ಎಚ್ಚರಿಕೆ ಕೊಟ್ಟು, ಗೂಂಡ ರಾಜಕೀಯ ಮಾಡಿದ್ರೆ ಅದಕ್ಕೆ ಉತ್ತರ ನೀಡಬೇಕಾಗ್ತದೆ. ಗೂಂಡಾ ರಾಜ್ಯದಿಂದ ಪುತ್ತೂರನ್ನು ಮುಕ್ತಿಗೊಳಿಸಿದ್ದು ಬಿಜೆಪಿ ಪಕ್ಷ. ನನ್ನ ಮೇಲೆ 101 ಕೇಸು ಇತ್ತು. ನಾನು ಶಾಸಕನಾಗಿರುವಾಗಲೂ ನನ್ನ ಮೇಲೆ 3 ಕೇಸು ಇತ್ತು. ಈಗ ಅಂಥಾ ವ್ಯವಸ್ಥೆಯನ್ನು ಬಿಜೆಪಿ ಬದಲಿಸಿದೆ. ಬಿಜೆಪಿ ಪಕ್ಷ ನನಗೆ ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷ ಸಹಿತ ಎಲ್ಲವನ್ನೂ ಕೊಟ್ಟಿದೆ. ಇಂತಹ ಪಕ್ಷದ ವಿರುದ್ಧ ಸಂತೃಪ್ತನಾಗದಿರಲು ನಾನು ಮನುಷ್ಯನೋ? ಪ್ರಾಣಿಯೋ ಎಂದವರು ಪ್ರಶ್ನೆ ಮಾಡಿದರು.
ಕೆಲವರಿಗೆ ಒಟ್ಟಿಗೆ ಇರುವಾಗ ಅವರು ದೇವರಾಗಿ ಕಾಣುತ್ತಾರೆ. ಅವರ ಸ್ವಾರ್ಥಕ್ಕಾಗಿ ಬೆಂಬಲ ನೀಡದಿದ್ದಾರೆ. ದೆವ್ವವಾಗಿ ಕಾಣುತ್ತಾರೆ. ಮೊದಲು ಪ್ರಸಾದ್ ಭಂಡಾರಿ ಹಾಗೂ ಪ್ರಭಾಕರ್ ಭಟ್ ಕಲ್ಲಡರು ನಡೆದಾಡುವ ದೇವರಾಗಿದ್ದಾರು. ಈ ದೆವ್ವ ದೆವ್ವ ಅಂತ ಹೇಳ್ತಾ ಇದ್ದಾರೆ. ಸ್ವಾರ್ಥಕ್ಕಾಗಿ ಪಾರ್ಟಿ ಸಮಾಜವನ್ನು ಬಲಿ ಕೊಡುತ್ತಿದ್ದಾರೆ. ಅರುಣ್ ಹಾಗೂ ಅಶೋಕ್ ಇಬ್ಬರಿಗೂ ಸ್ಥಾನ ಮಾನ ಸಿಕ್ಕಿತ್ತು ಆದರೂ ಪಾರ್ಟಿಗೆ ದ್ರೋಹ ಮಾಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 130 ಸ್ಥಾನಗಳನ್ನು ಪಡೆದುಕೊಳ್ಳುವುದು ಗ್ಯಾರಂಟಿ. ಇದರಲ್ಲಿ ಪುತ್ತೂರು ಕೂಡಾ ಒಂದಾಗಲಿದೆ. ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣದ ಗಾಳಿ ವೇಗವಾಗಿ ಬೀಸುತ್ತಿದೆ. ಬಿಜೆಪಿ ತನ್ನ ಆಡಳಿತದ8 ವರ್ಷದ ರಿಪೋರ್ಟ್ ಕಾರ್ಡನ್ನು ಜನರ ಮುಂದೆ ಇಡಲಿದೆ. ಕಾಂಗ್ರೇಸ್ ಮತ್ತು ಜೆಡಿಎಸ್ ಕೂಡಾ ಕೊಡಲಿ. ಆಗ ಜನತೆ ನಿರ್ಧಾರ ಮಾಡುತ್ತಾರೆ ಯಾರದ್ದು ಅಭಿವೃದ್ಧಿ ಧ್ಯೇಯವಾಗಿದೆ. ದೇಶದಲ್ಲಿ ಹೆದ್ದಾರಿ ಕಾಮಗಾರಿಗಳು ಶೇ.24 ರಷ್ಟು ವೇಗದಲ್ಲಿ ನಡೆಯುತ್ತಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಶಾಸಕ ಸಂಜೀವ ಮಠಂದೂರು, ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ, ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಪಿ.ಜಿ.ಜಗನ್ನೀವಾಸ ರಾವ್, ಶಶಿಕುಮಾರ್ ಬಾಲ್ಯೋಟ್ಟು, ಸಾಜ ರಾಧಾಕೃಷ್ಣ ಆಳ್ವ, ಮೊಗರೋಡಿ ಬಾಲಕೃಷ್ಣ ರೈ, ಕೇರಳದ ಬಿಜೆಪಿ ಮುಖಂಡ ನ್ಯಾಯವಾದಿ ಸುರೇಶ್, ಚಂದ್ರಶೇಖರ್ ರಾವ್ ಬಪ್ಪಳಿಗೆ ಇದ್ದರು.

Ad Widget

Ad Widget <> Ad Widget

Ad Widget
Click to comment

Leave a Reply

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್‌ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್‌ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading